Homeಮುಖಪುಟಕೋಟಾ: ನೀಟ್ ಆಕಾಂಕ್ಷಿ ವಿದ್ಯಾರ್ಥಿನಿ ಆತ್ಮಹತ್ಯೆ; ಒಂದೇ ವಾರದಲ್ಲಿ ನಡೆದ 2ನೇ ಪ್ರಕರಣ

ಕೋಟಾ: ನೀಟ್ ಆಕಾಂಕ್ಷಿ ವಿದ್ಯಾರ್ಥಿನಿ ಆತ್ಮಹತ್ಯೆ; ಒಂದೇ ವಾರದಲ್ಲಿ ನಡೆದ 2ನೇ ಪ್ರಕರಣ

- Advertisement -
- Advertisement -

ರಾಜಸ್ಥಾನದ ಕೋಟಾದಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣ ಮತ್ತೆ ಮುಂದುವರಿದಿದ್ದು, ಕೋಟಾದ ವಿಜ್ಞಾನನಗರದ ಪ್ರದೇಶದಲ್ಲಿ ಮೆಡಿಕಲ್‌ ಪ್ರವೇಶಾತಿಗಾಗಿ ನೀಟ್‌ ಆಕಾಂಕ್ಷಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದರಿಂದ ಈ ಬಾರಿ ಕೋಟಾದಲ್ಲಿ ನೀಟ್‌ ಆಕಾಂಕ್ಷಿ ವಿದ್ಯಾರ್ಥಿಗಳ ಆತ್ಮಹತ್ಯೆ ಸಂಖ್ಯೆ 26ಕ್ಕೆ ಏರಿಕೆಯಾಗಿದೆ.

ಉತ್ತರಪ್ರದೇಶದ ಮಹುವಾ ಏರಿಯಾದ 16 ವರ್ಷದ ಅಪ್ರಾಪ್ತ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ 1ವಾರದಲ್ಲಿ ನಡೆದ ಇದು ಎರಡನೇ ಪ್ರಕರಣವಾಗಿದೆ. ಸೆಪ್ಟೆಂಬರ್ 13ರಂದು  ಜಾರ್ಖಂಡ್ ಮೂಲದ 16 ವರ್ಷದ ವಿದ್ಯಾರ್ಥಿನಿ ವಿಜ್ಞಾನ ನಗರದಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದರು.

ಪ್ರಾಥಮಿಕ ತನಿಖೆಯಲ್ಲಿ ಬಾಲಕಿಯ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ವಿಷವನ್ನು ಸೇವಿಸಿದ್ದ ಬಾಲಕಿಯನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಅಲ್ಲಿ ಮೃತಪಟ್ಟಿದ್ದಾರೆ.

ಹೆಚ್ಚುವರಿ ಪೊಲೀಸ್‌ ಅದೀಕ್ಷಕರಾದ ಭಗವತ್‌ ಸಿಂಗ್‌ ಅವರು ಈ ಕುರಿತು ಮಾತನಾಡಿದ್ದು, ಹಾಸ್ಟೆಲ್‌ ರೂಂನಲ್ಲಿ ಅಸ್ವಸ್ಥಳಾಗಿದ್ದ ಬಾಲಕಿಯನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎಂದು ಹೇಳಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಹೇಳಿದ್ದಾರೆ.

ಪ್ರಾಥಮಿಕ ತನಿಖೆಯ ಪ್ರಕಾರ, ವಿದ್ಯಾರ್ಥಿನಿ ಕಳೆದ ಕೆಲವು ತಿಂಗಳುಗಳಿಂದ  ಹಲವಾರು ತರಗತಿಗಳಿಗೆ ಹಾಜರಾಗುತ್ತಿರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಅವರ ಆತ್ಮಹತ್ಯೆಗೆ  ಕಾರಣವನ್ನು ಇನ್ನೂ ಕಂಡುಹಿಡಿಯಲಾಗಿಲ್ಲ ಎಂದು ವಿಜ್ಞಾನನಗರದ ಸ್ಟೇಷನ್ ಹೌಸ್ ಅಧಿಕಾರಿ ಕೌಶಲ್ಯ ಗಲೌರ್ ಹೇಳಿದ್ದಾರೆ.

ಆತ್ಮಹತ್ಯೆ ಮಾಡಿಕೊಂಡ ಕೊಠಡಿಯಲ್ಲಿ ಯಾವುದೇ ಆತ್ಮಹತ್ಯೆ ಪತ್ರ ಪತ್ತೆಯಾಗಿಲ್ಲ. ಆಕೆಯ ಪೋಷಕರು ನಗರಕ್ಕೆ ಬಂದ ನಂತರ ನಾವು ಅವರ ಹಾಸ್ಟೆಲ್‌ ಕೋಣೆಯನ್ನು ಪರಿಶೀಲಿಸಲಿದ್ದೇವೆ. ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಗಲೌರ್ ತಿಳಿಸಿದ್ದಾರೆ.

ರಾಜಸ್ಥಾನದ ಕೋಟಾ, ನೀಟ್‌, ಯುಪಿಎಸ್ಸಿ ಆಕಾಂಕ್ಷಿಗಳಿಗೆ ತರಬೇತಿ ನೀಡುವ ಪ್ರಮುಖ ಶೈಕ್ಷಣಿಕ ಕೇಂದ್ರವಾಗಿದ್ದು, ಪ್ರತಿವರ್ಷ ಅಲ್ಲಿಗೆ ಲಕ್ಷಾಂತರ ವಿದ್ಯಾರ್ಥಿಗಳು ತರಬೇತಿಗೆ ಬರುತ್ತಾರೆ. ಆದರೆ ದುರದೃಷ್ಟ ಎಂದರೆ ಇತ್ತೀಚಿನ ದಿನಗಳಲ್ಲಿ ಕೋಟಾ ಪ್ರದೇಶದಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣ ಹೆಚ್ಚಳವಾಗಿದೆ.

ಇದನ್ನು ಓದಿ: ಮಹಿಳಾ ಮೀಸಲಾತಿ ಮಸೂದೆ ‘ನಮ್ಮದು, ಅಪ್ನಾ ಹೈ’: ಸೋನಿಯಾ ಗಾಂಧಿ ಪ್ರತಿಕ್ರಿಯೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೇಂದ್ರ ಬಜೆಟ್‌ನಲ್ಲಿ ತಮಿಳುನಾಡಿಗೆ ತಾರತಮ್ಯ; ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಕರೆಕೊಟ್ಟ ಡಿಎಂಕೆ

0
ಇತ್ತೀಚಿನ ಕೇಂದ್ರ ಬಜೆಟ್‌ನಲ್ಲಿ ತಮಿಳುನಾಡಿಗೆ ದ್ರೋಹ ಬಗೆಯಲಾಗಿದೆ ಎಂದು ಆರೋಪಿಸಿ, ಕೇಂದ್ರ ಸರ್ಕಾರದ ನಡೆ ಖಂಡಿಸಿ ಆಡಳಿತಾರೂಢ ಡಿಎಂಕೆ ಶನಿವಾರ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿದೆ. ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್...