Homeಮುಖಪುಟಮುಂದುವರಿದ NEET ವಿದ್ಯಾರ್ಥಿಗಳ ಆತ್ಮಹತ್ಯೆ: ಸಾವಿನ ಸಂಖ್ಯೆ 25ಕ್ಕೆ ಏರಿಕೆ

ಮುಂದುವರಿದ NEET ವಿದ್ಯಾರ್ಥಿಗಳ ಆತ್ಮಹತ್ಯೆ: ಸಾವಿನ ಸಂಖ್ಯೆ 25ಕ್ಕೆ ಏರಿಕೆ

- Advertisement -
- Advertisement -

ರಾಜಸ್ಥಾನದ ಕೋಟಾದಲ್ಲಿ ನೀಟ್ ಆಕಾಂಕ್ಷಿ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣ ದಿನೇ ದಿನೇ ಹೆಚ್ಚಳವಾಗುತ್ತಿದ್ದು, 20 ವರ್ಷದ ನೀಟ್ ಆಕಾಂಕ್ಷಿ ಪಶ್ಚಿಮ ಬಂಗಾಳ ಮೂಲದ ವಿದ್ಯಾರ್ಥಿಯೋರ್ವ ಆತ್ಮಹತ್ಯೆಯನ್ನು ಮಾಡಿಕೊಂಡಿದ್ದಾರೆ. ಇದರಿಂದಾಗಿ ಕಳೆದ ಒಂದು ವರ್ಷದಲ್ಲಿ ನೀಟ್‌ ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ದತೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಆತ್ಮಹತ್ಯೆ ಸಂಖ್ಯೆ 25ಕ್ಕೆ ಏರಿಕೆಯಾಗಿದೆ.

ಪಶ್ಚಿಮ ಬಂಗಾಳದ ಬಿರ್ಹಮ್ ಜಿಲ್ಲೆಯವರಾದ ಫೌರೀದ್ ಹುಸೇನ್ (20) ಆತ್ಮಹತ್ಯೆ ಮಾಡಿಕೊಂಡವರು. ಇವರು ಕೋಟಾದ ವೌಫ್ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಕೋಟಾದ ಕೋಚಿಂಗ್ ಇನ್‌ಸ್ಟಿಟ್ಯೂಟ್‌ನಲ್ಲಿ ವೈದ್ಯಕೀಯ ಕೋರ್ಸ್‌ ಪ್ರವೇಶಾತಿಗಾಗಿ ನೀಟ್‌ ಪರೀಕ್ಷೆಗೆ ಕಳೆದ ಒಂದು ವರ್ಷದಿಂದ  ಸಿದ್ಧತೆಯನ್ನು ನಡೆಸುತ್ತಿದ್ದರು.

ಸೋಮವಾರ ಮಧ್ಯಾಹ್ನ ಪೌರೀದ್‌ ಹುಸೇನ್ ರೂಂಗೆ ಹೋಗಿದ್ದರು. ರಾತ್ರಿ 8 ಗಂಟೆಯಾದರೂ ಕೊಠಡಿಯಿಂದ ಹೊರಗೆ ಬಾರದಿದ್ದಾಗ ಪರೀದ್‌ಗೆ ಸ್ನೇಹಿತರು ಕರೆ ಮಾಡಿದ್ದಾರೆ. ಆದರೆ ಅವರು ಯಾವುದೇ ಪ್ರತಿಕ್ರಿಯೆಯನ್ನು ನೀಡದಿದ್ದಾಗ ಮನೆ ಮಾಲಕರಿಗೆ ಮಾಹಿತಿಯನ್ನು ನೀಡಲಾಗಿದೆ. ಬಳಿಕ ಮನೆ ಮಾಲಕ ಪೊಲೀಸರ ಜೊತೆ ಬಂದು ಪರಿಶೀಲನೆ ನಡೆಸಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿದೆ.

ದಾದಾಬರಿ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್‌ಪೆಕ್ಟರ್ ರಾಜೇಶ್ ಪಾಠಕ್ ಈ ಕುರಿತು ಪ್ರತಿಕ್ರಿಯಿಸಿದ್ದು, ಪೌರೀದ್‌ ಹುಸೇನ್ ಆತ್ಮಹತ್ಯೆ ಮಾಡಿಕೊಂಡ ಸ್ಥಳದಲ್ಲಿ ಯಾವುದೆ ಆತ್ಮಹತ್ಯಾ ಟಿಪ್ಪಣಿ ಕಂಡುಬಂದಿಲ್ಲ. ಆತ್ಮಹತ್ಯೆಗೆ ನಿಖರ ಕಾರಣ ತನಿಖೆಯಿಂದಲೆ ತಿಳಿದು ಬರಬೇಕಿದೆ ಎಂದು ಹೇಳಿದ್ದಾರೆ.

ಇದೇ ಸೆ.18ರಂದು ಕೋಟಾದಲ್ಲಿ ನೀಟ್‌ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಉತ್ತರಪ್ರದೇಶದ 16 ವರ್ಷದ ಬಾಲಕಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಸೆಪ್ಟಂಬರ್‌ನಲ್ಲಿ ಕೋಟಾದಲ್ಲಿ ನಡೆದ 2ನೇ ಆತ್ಮಹತ್ಯೆ ಪ್ರಕರಣ ಇದಾಗಿತ್ತು. ಆಗಸ್ಟ್‌ನಲ್ಲಿ 6 ಕೋಚಿಂಗ್ ವಿದ್ಯಾರ್ಥಿಗಳು ಕೋಟಾದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು.

ಜೆಇಇ,  ನೀಟ್, ಯುಪಿಎಸ್ಸಿಯಂತಹ  ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಾಗಲು ವಾರ್ಷಿಕ  2.5 ಲಕ್ಷ ವಿದ್ಯಾರ್ಥಿಗಳು ಕೋಟಕ್ಕೆ  ಬಂದು  ತರಬೇತಿ  ಕೇಂದ್ರಗಳಿಗೆ ದಾಖಲಾಗುತ್ತಾರೆ. ಕಳೆದ ಕೆಲ ವರ್ಷಗಳಲ್ಲಿ ವಿದ್ಯಾರ್ಥಿಗಳು ಇದೇ ಪ್ರದೇಶಗಳಲ್ಲಿ ಹೆಚ್ಚು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿದೆ.

ಇನ್ನು ರಾಜಸ್ಥಾನದಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣ ಹೆಚ್ಚಳವಾಗುತ್ತಿದ್ದಂತೆ ವಿದ್ಯಾರ್ಥಿಗಳು ಖಿನ್ನತೆ, ಒತ್ತಡಕ್ಕೆ ಒಳಗಾಗಿದ್ದಾರೆಯೇ ಎಂಬುವುದನ್ನು ಪತ್ತೆ ಹಚ್ಚಲು ವಾರ್ಡನ್‌ಗಳು, ಮೆಸ್ ಕೆಲಸಗಾರರು ಮತ್ತು  ಆಹಾರ ಪೂರೈಕೆದಾರರನ್ನು ನಿಯೋಜಿಸಲಾಗಿತ್ತು. ವಿದ್ಯಾರ್ಥಿಗಳ ಮೇಲೆ ನಿಗಾವಹಿಸುವುದು, ಅವರ ಚಟುವಟಿಕೆಗಳನ್ನು ಗಮನಿಸುವುದು, ವಿದ್ಯಾರ್ಥಿಗಳಿಗೆ ಕೌನ್ಸಿಲಿಂಗ್‌ಗೆ ವ್ಯವಸ್ಥೆ ಮಾಡಲಾಗಿತ್ತು. ಆದರೆ ಈ ಮಧ್ಯೆ ಆತ್ಮಹತ್ಯೆ ಪ್ರಕರಣಗಳ ಹೆಚ್ಚಳ ಆತಂಕಕ್ಕೆ ಕಾರಣವಾಗಿದೆ.

ತಮಿಳುನಾಡಿನಲ್ಲಿ ಇತ್ತೀಚೆಗೆ 19 ವರ್ಷದ ಮೆಡಿಕಲ್ ಸೀಟ್‌ಗಾಗಿ ನೀಟ್‌ ಆಕಾಂಕ್ಷಿ ವಿದ್ಯಾರ್ಥಿ ಜಗದೀಶ್ವರನ್ ನೀಟ್‌ನಲ್ಲಿ ಎರಡು ಬಾರಿ ಅನುತ್ತೀರ್ಣಗೊಂಡ ಬಳಿಕ ಚೆನ್ನೈನ ಕ್ರೋಮ್‌ಪೇಟ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಮಗನ ಆತ್ಮಹತ್ಯೆಯಿಂದ ನೊಂದು ಜಗದೀಶ್ವರನ್ ತಂದೆ ಸೆಲ್ವಶೇಖರ್ ನೀಟ್ ಕುರಿತು ಆಕ್ರೋಶವನ್ನು ವ್ಯಕ್ತಪಡಿಸಿ ಅವರು ಕೂಡ ಆತ್ಮಹತ್ಯೆಯನ್ನು ಮಾಡಿಕೊಂಡಿದ್ದರು.

ಘಟನೆ ತಮಿಳುನಾಡಿನಲ್ಲಿ ಭಾರೀ ಸಂಚಲನವನ್ನು ಮೂಡಿಸಿತ್ತು. ತಮಿಳುನಾಡಿನಲ್ಲಿ ನೀಟ್‌ ರದ್ಧತಿಗೆ ಆಕ್ರೋಶ ಕೇಳಿ ಬಂದಿತ್ತು. ತಮಿಳುನಾಡಿನ ಸಚಿವ ಉದಯನಿಧಿ ಸ್ಟಾಲಿನ್, ಇದು ಆತ್ಮಹತ್ಯೆಯಲ್ಲ, ಕೊಲೆ. ಇದಕ್ಕೆ ಕೇಂದ್ರ ಸರ್ಕಾರವೇ ಹೊಣೆ ಎಂದು ಆರೋಪಿಸಿದ್ದರು. ರಾಜ್ಯದಲ್ಲಿ ನೀಟ್ ಪರೀಕ್ಷೆಯನ್ನು ನಿಷೇಧಿಸಲು ನಿರಾಕರಿಸಿರುವ ರಾಜ್ಯಪಾಲ ಆರ್.ಎನ್.ರವಿ ವಿರುದ್ಧ ವಾಗ್ದಾಳಿ ನಡೆಸಿದ್ದರು.

ಇದನ್ನು ಓದಿ: ಮಂಗಳೂರಿನಲ್ಲಿ ಮತೀಯ ಗೂಂಡಾಗಿರಿ: ಇಬ್ಬರ ಬಂಧನ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...