Homeಮುಖಪುಟನೀಟ್ ಪರೀಕ್ಷೆ ವಿವಾದ: ಡಿಲಿಮಿಟೇಶನ್ ವಿರುದ್ಧದ ನಿರ್ಣಯಕ್ಕೆ ಒಪ್ಪಿಗೆ ಕೊಟ್ಟ ಕ್ಯಾಬಿನೆಟ್

ನೀಟ್ ಪರೀಕ್ಷೆ ವಿವಾದ: ಡಿಲಿಮಿಟೇಶನ್ ವಿರುದ್ಧದ ನಿರ್ಣಯಕ್ಕೆ ಒಪ್ಪಿಗೆ ಕೊಟ್ಟ ಕ್ಯಾಬಿನೆಟ್

- Advertisement -
- Advertisement -

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸೋಮವಾರ ರಾತ್ರಿ ನಡೆದ ಕರ್ನಾಟಕ ಸಚಿವ ಸಂಪುಟವು ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (ನೀಟ್) ವಿರುದ್ಧದ ನಿರ್ಣಯ ಸೇರಿದಂತೆ ಮೂರು ನಿರ್ಣಯಗಳನ್ನು ಅಂಗೀಕರಿಸಲು ಅನುಮೋದನೆಯನ್ನು ನೀಡಿದೆ ಎಂದು ಮೂಲಗಳು ತಿಳಿಸಿವೆ.

ಇನ್ನೆರಡು ನಿರ್ಣಯಗಳಾದ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಮತ್ತು ಲೋಕಸಭೆ ಮತ್ತು ರಾಜ್ಯ ವಿಧಾನ ಸಭೆಗಳ ಕ್ಷೇತ್ರಗಳ ವಿಂಗಡಣೆಯ ವಿರುದ್ಧವಾಗಿವೆ ಎಂದು ಹೇಳಲಾಗಿದೆ. ಈ ನಿರ್ಣಯಗಳನ್ನು ನಡೆಯುತ್ತಿರುವ ವಿಧಾನಮಂಡಲ ಅಧಿವೇಶನದಲ್ಲಿ ಬಹುಶಃ ಮಂಗಳವಾರವೇ ಮಂಡಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಸಂಪುಟವು ‘ಬೃಹತ್ ಬೆಂಗಳೂರು ಆಡಳಿತ ಮಸೂದೆ 2024’ ಅನ್ನು ಸಹ ಅಂಗೀಕರಿಸಿದೆ ಎಂದು ಹೇಳಲಾಗಿದೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು ಪುನರ್‌ರಚಿಸಲು ರಚಿಸಲಾಗಿದ್ದ ಮಾಜಿ ಮುಖ್ಯ ಕಾರ್ಯದರ್ಶಿ ಬಿ ಎಸ್ ಪಾಟೀಲ್ ನೇತೃತ್ವದ ನಾಲ್ವರು ಸದಸ್ಯರ ಸಮಿತಿಯು ಈ ತಿಂಗಳ ಆರಂಭದಲ್ಲಿ ತನ್ನ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದೆ.

ಕರಡು ಮಸೂದೆಯಲ್ಲಿ, ನಗರ ಯೋಜನೆ ಮತ್ತು ಆರ್ಥಿಕ ಅಧಿಕಾರಗಳೊಂದಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ರಚಿಸುವುದನ್ನು ಸಮಿತಿಯು ಪ್ರಸ್ತಾಪಿಸಿದೆ ಎಂದು ಹೇಳಲಾಗುತ್ತದೆ.

ನೀಟ್ ಕುರಿತು ನಡೆಯುತ್ತಿರುವ ವಿವಾದದ ನಡುವೆ, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಇತ್ತೀಚೆಗೆ ರಾಷ್ಟ್ರೀಯ ಅರ್ಹತಾ-ಪ್ರವೇಶ ಪರೀಕ್ಷೆಯನ್ನು ರದ್ದುಗೊಳಿಸುವಂತೆ ಮತ್ತು ರಾಜ್ಯಗಳು ತಮ್ಮದೇ ಆದ ಪ್ರವೇಶ ಪರೀಕ್ಷೆಗಳನ್ನು ನಡೆಸಲು ಅವಕಾಶ ಮಾಡಿಕೊಡುವಂತೆ ಕೇಂದ್ರವನ್ನು ಒತ್ತಾಯಿಸಿದ್ದರು.

ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರ ಅಧ್ಯಕ್ಷತೆಯಲ್ಲಿ ರಚಿಸಲಾದ ಏಕಕಾಲಿಕ ಚುನಾವಣೆಯ ಉನ್ನತ ಮಟ್ಟದ ಸಮಿತಿಯು ‘ಒಂದು ರಾಷ್ಟ್ರ, ಒಂದು ಚುನಾವಣೆ’ ಕುರಿತು ತನ್ನ ವರದಿಯನ್ನು ಮಾರ್ಚ್‌ನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸಲ್ಲಿಸಿತ್ತು.

2024ರ ಲೋಕಸಭಾ ಚುನಾವಣೆಯ ನಂತರ ಜನಗಣತಿ ಮತ್ತು ಡಿಲಿಮಿಟೇಶನ್ ಪ್ರಕ್ರಿಯೆಗಳು ಶೀಘ್ರದಲ್ಲೇ ಪ್ರಾರಂಭವಾಗಲಿವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಈ ಹಿಂದೆ ಹೇಳಿದ್ದರು.

ಇದನ್ನೂ ಓದಿ; ವಾಲ್ಮೀಕಿ ನಿಗಮ ಹಗರಣ| ಸಿಎಂ ಹೆಸರೇಳುವಂತೆ ಒತ್ತಡ ಆರೋಪ: ಇಡಿ ಅಧಿಕಾರಿಗಳ ವಿರುದ್ಧ ಎಫ್‌ಐಆರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...