Homeಮುಖಪುಟನೀಟ್, ಜೆಇಇ ಪರೀಕ್ಷೆ: ವಿದ್ಯಾರ್ಥಿಗಳ ಬಗ್ಗೆ ಕೇಂದ್ರಕ್ಕೆ ಕಾಳಜಿಯಿಲ್ಲ ಎಂದ ಸೋನಿಯಾ ಗಾಂಧಿ

ನೀಟ್, ಜೆಇಇ ಪರೀಕ್ಷೆ: ವಿದ್ಯಾರ್ಥಿಗಳ ಬಗ್ಗೆ ಕೇಂದ್ರಕ್ಕೆ ಕಾಳಜಿಯಿಲ್ಲ ಎಂದ ಸೋನಿಯಾ ಗಾಂಧಿ

ಸೋನಿಯಾ ಗಾಂಧಿ ಮತ್ತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಜಂಟಿಯಾಗಿ ಕರೆದಿದ್ದ ಸಭೆಯಲ್ಲಿ ದೇಶದ 7 ರಾಜ್ಯ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಿದರು.

- Advertisement -
- Advertisement -

ಮುಂದಿನ ತಿಂಗಳು ನಡೆಯಲಿರುವ NEET ಮತ್ತು JEE ಪ್ರವೇಶ ಪರೀಕ್ಷೆಗಳನ್ನು ನಡೆಸುತ್ತಿರುವ ಕೇಂದ್ರ ಸರ್ಕಾರದ ಮೇಲೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ವಾಗ್ಧಾಳಿ ನಡೆಸಿ ಕೇಂದ್ರ ಸರ್ಕಾರಕ್ಕೆ ವಿದ್ಯಾರ್ಥಿಗಳ ಬಗ್ಗೆ ಕಾಳಜಿಯಿಲ್ಲ ಎಂದಿದ್ದಾರೆ.

ಕೊರೊನಾ ಸಂಕಷ್ಟದ ನಡುವೆ ವೈದ್ಯಕೀಯ ಮತ್ತು ಎಂಜಿನಿಯರಿಂಗ್ ಕೋರ್ಸ್‌ಗಳ ಪ್ರವೇಶ ಪರೀಕ್ಷೆ ನಡೆಸುತ್ತಿರುವ ಕುರಿತು ಇಂದು ಸೋನಿಯಾ ಗಾಂಧಿ ಮತ್ತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಜಂಟಿಯಾಗಿ ಕರೆದಿದ್ದ ಸಭೆಯಲ್ಲಿ 7 ರಾಜ್ಯ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಿದರು.

ವಿಡಿಯೋ ಸಂವಾದದಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ತಾವು ಪರೀಕ್ಷೆ ಮುಂದೂಡುವಂತೆ ಪ್ರಧಾನಿ ನರೇಂದ್ರ ಮೋದಿಯವರಿಗೆ 2 ಬಾರಿ ಪತ್ರ ಬರೆದಿದ್ದನ್ನು ತಿಳಿಸಿದರು. ಜೊತೆಗೆ ಪರೀಕ್ಷೆ ಮುಂದೂಡುವಂತೆ ಸುಪ್ರೀಂ ಕೋರ್ಟ್ ಕದ ತಟ್ಟುವ ಸಲಹೆ ನೀಡಿದರು. ಇದಕ್ಕೆ ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಬೆಂಬಲ ನೀಡಿದರು.

ಇದನ್ನೂ ಓದಿ: ದೇವನೂರರ ‘ಕುಸುಮಬಾಲೆ ವಾಚಿಕಾಭಿನಯ’: ಇಂದಿನಿಂದ ಯೂಟ್ಯೂಬ್, ಫೇಸ್‌ಬುಕ್‌ನಲ್ಲಿ ಪ್ರಸಾರ

ಕೊರೊನಾ ಪ್ರಕರಣಗಳು ಕಡಿಮೆ ಇದ್ದ ಜೂನ್‌ನಲ್ಲಿ ಶಾಲೆ ತೆರೆಯಲು ಸಾಧ್ಯವಿಲ್ಲವೆಂದ ದೇಶದಲ್ಲಿ ಈಗ ಪ್ರಕರಣಗಳು ಹೆಚ್ಚಾಗುತ್ತಿರುವಾಗ ಪರೀಕ್ಷೆ ನಡೆಸುವುದು ಎಷ್ಟು ಸರಿ ಎಂದು ಜಾರ್ಖಂಡ್ ಸಿಎಂ ಸೊರೆನ್ ಪ್ರಶ್ನಿಸಿದರು. ಅಭ್ಯರ್ಥಿಗಳ ಜೊತೆಗೆ ಅವರ ಪೋಷಕರು ಸಹ ಪರೀಕ್ಷಾ ಕೇಂದ್ರಕ್ಕೆ ಬರುತ್ತಾರೆ ಇದರಿಂದ ಜನಸಂದಣಿ ಹೆಚ್ಚಾಗುತ್ತದೆ, ಅದು ಅಪಾಯಕಾರಿ ಎಂದರು. ಅಮೆರಿಕಾದಲ್ಲಿ ಶಾಲೆ ತೆರೆದಾಗ ಅತೀ ಹೆಚ್ಚು ಸೋಂಕಿತರು ಪತ್ತೆಯಾದದನ್ನು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಉಲ್ಲೇಖಿಸಿದರು.

ಎನ್‌ಇಪಿ ಜಾರಿ ಕುರಿತು ಮಾತನಾಡಿದ ಸೋನಿಯಾ ಗಾಂಧಿ, ಹೊಸ ಶಿಕ್ಷಣ ನೀತಿಯ ಜಾರಿಯೂ ಜಾತ್ಯಾತೀತ, ಪ್ರಗತಿಪರ ಮತ್ತು ವೈಜ್ಞಾನಿಕ ಮೌಲ್ಯಗಳಿಗೆ ಹಿನ್ನಡೆಯಾಗಿದೆ ಎಂದು ಅಭಿಪ್ರಾಯಪಟ್ಟರು.

ಸಭೆಯಲ್ಲಿ ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಪಂಜಾಬ್ ಸಿಎಂ ಅಮರಿಂದರ್ ಸಿಂಗ್, ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್, ಛತ್ತಿಸ್ ಗಢ ಸಿಎಂ ಭೂಪೇಶ್ ಬಾಗೇಲ್ ಮತ್ತು ಪುದುಚೇರಿ ಸಿಎಂ ವಿ.ನಾರಾಯಣಸ್ವಾಮಿ ಸಭೆಯಲ್ಲಿದ್ದರು.


ಇದನ್ನೂ ಓದಿ: ಜೆಇಇ-ನೀಟ್ ಪರೀಕ್ಷೆ ಮುಂದೂಡಿ: ಗ್ರೇಟಾ ಥನ್‌ಬರ್ಗ್ ಸೇರಿ ಹಲವರ ಒತ್ತಾಯ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ವಿವರಿಸಲು ಸಮಯಾವಕಾಶ ಕೋರಿ ಪ್ರಧಾನಿಗೆ ಖರ್ಗೆ ಪತ್ರ

0
ಲೋಕಸಭೆ ಚುನಾವಣೆಯ ಕಾಂಗ್ರೆಸ್ ಪ್ರಣಾಳಿಕೆ 'ನ್ಯಾಯಪತ್ರ'ದ ಕುರಿತು ಪ್ರಧಾನಿ ಮೋದಿ ಸರಣಿ ಹೇಳಿಕೆಗಳನ್ನು ಕೊಡುತ್ತಿದ್ದು, ಈ ಹಿನ್ನೆಲೆ ಪ್ರಣಾಳಿಕೆಯ ಕುರಿತು ವಿವರಿಸಲು ಸಮಯ ಕೋರಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪತ್ರ ಬರೆದಿದ್ದಾರೆ. ಖರ್ಗೆ...