Homeಮುಖಪುಟನೀಟ್-ಯುಜಿ ಪರಿಷ್ಕೃತ ಫಲಿತಾಂಶ ಪ್ರಕಟ : ಟಾಪರ್‌ಗಳ ಸಂಖ್ಯೆ 61ರಿಂದ 17ಕ್ಕೆ ಇಳಿಕೆ

ನೀಟ್-ಯುಜಿ ಪರಿಷ್ಕೃತ ಫಲಿತಾಂಶ ಪ್ರಕಟ : ಟಾಪರ್‌ಗಳ ಸಂಖ್ಯೆ 61ರಿಂದ 17ಕ್ಕೆ ಇಳಿಕೆ

- Advertisement -
- Advertisement -

ಸುಪ್ರೀಂ ಕೋರ್ಟ್ ನಿರ್ದೇಶನದ ನಂತರ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಶುಕ್ರವಾರ ಪರಿಷ್ಕೃತ ನೀಟ್-ಯುಜಿ ಫಲಿತಾಂಶಗಳನ್ನು ಬಿಡುಗಡೆ ಮಾಡಿದ್ದು, ಟಾಪರ್‌ಗಳ ಸಂಖ್ಯೆ 61ರಿಂದ 17ಕ್ಕೆ ಇಳಿಕೆಯಾಗಿದೆ.

ಆರಂಭದಲ್ಲಿ ಟಾಪರ್‌ಗಳೆಂದು ಘೋಷಿಸಲ್ಪಟ್ಟಿದ್ದ 67 ಅಭ್ಯರ್ಥಿಗಳಲ್ಲಿ 44 ಮಂದಿ ಪೂರ್ಣ ಅಂಕ ಪಡೆದಿದ್ದರು. ಭೌತಶಾಸ್ತ್ರ ವಿಷಯಕ್ಕೆ ಗ್ರೇಸ್ ಅಂಕ ನೀಡಿದ್ದರಿಂದ ಪೂರ್ಣ ಅಂಕಗಳನ್ನು ಈ ಅಭ್ಯರ್ಥಿಗಳು ಗಳಿಸಿದ್ದರು.

ಬಳಿಕ ಕೆಲ ಕೇಂದ್ರಗಳಲ್ಲಿ ಸಮಯ ವ್ಯರ್ಥವಾಗಿದೆ ಎಂಬ ಕಾರಣಕ್ಕೆ ವಿದ್ಯಾರ್ಥಿಗಳಿಗೆ ನೀಡಲಾಗಿದ್ದ ಗ್ರೇಸ್‌ ಅಂಕಗಳನ್ನು ಹಿಂಪಡೆಯಲಾಗಿತ್ತು. ಇದರಿಂದ ಟಾಪರ್‌ಗಳ ಸಂಖ್ಯೆ 67ರಿಂದ 61ಕ್ಕೆ ಇಳಿಕೆಯಾಗಿತ್ತು. ಇದೀಗ ಪರಿಷ್ಕೃತ ನೀಟ್-ಯುಜಿ ಫಲಿತಾಂಶ ಪ್ರಕಟವಾದ ಬಳಿಕ ಟಾಪರ್‌ಗಳ ಸಂಖ್ಯೆ 61ರಿಂದ 17ಕ್ಕೆ ಇಳಿಕೆಯಾಗಿದೆ.

ಫಲಿತಾಂಶದ ಪ್ರಕಾರ ಟಾಪ್ ಸ್ಕೋರರ್‌ಗಳು 99.9992714 ಪ್ರತಿಶತದೊಂದಿಗೆ ಪರಿಪೂರ್ಣ 720 ಅಂಕಗಳನ್ನು ಪಡೆದಿದ್ದಾರೆ. ಪ್ರತಿ ಪ್ರಶ್ನೆಗೆ ಒಂದೇ ಒಂದು ನಿಖರವಾದ ಉತ್ತರವನ್ನು ಸ್ವೀಕರಿಸುವಂತೆ ಸುಪ್ರೀಂ ಕೋರ್ಟ್‌ ನೀಡಿದ ತೀರ್ಪಿನಿಂದಾಗಿ ಪರಿಷ್ಕೃತ ಫಲಿತಾಂಶದಲ್ಲಿ ಬದಲಾವಣೆ ಕಂಡುಬಂದಿದೆ.

ಮೇ 5ರಂದು ನಡೆದ ನೀಟ್‌-ಯುಜಿ ಪರೀಕ್ಷೆಯ ವೇಳೆ ಸಮಯದ ಕೊರತೆ ಎದುರಿಸಿದ 1,563 ಅಭ್ಯರ್ಥಿಗಳಿಗೆ ನೀಡಲಾಗಿದ್ದ ಗ್ರೇಸ್ ಅಂಕಗಳನ್ನು ರದ್ದುಪಡಿಸಿ ಅವರಿಗೆ ಜೂನ್ 23ರಂದು ಮರು-ಪರೀಕ್ಷೆ ನಡೆಸಲಾಗಿತ್ತು.

ಇದನ್ನೂ ಓದಿ : “ನನಗೆ ಮಾತನಾಡಲು ಬಿಟ್ಟಿಲ್ಲ”: ನೀತಿ ಆಯೋಗದ ಸಭೆಯಿಂದ ಹೊರ ನಡೆದ ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...