Homeಮುಖಪುಟನೀಟ್‌ ಯುಜಿ ಪರೀಕ್ಷೆಯಲ್ಲಿ ವಂಚನೆ | ಬಿಹಾರದಲ್ಲಿ ವೈದ್ಯ ಸೇರಿ ಇಬ್ಬರ ಬಂಧನ

ನೀಟ್‌ ಯುಜಿ ಪರೀಕ್ಷೆಯಲ್ಲಿ ವಂಚನೆ | ಬಿಹಾರದಲ್ಲಿ ವೈದ್ಯ ಸೇರಿ ಇಬ್ಬರ ಬಂಧನ

- Advertisement -
- Advertisement -

ಭಾನುವಾರ ನಡೆದ ನೀಟ್‌ ಯುಜಿ ಪರೀಕ್ಷೆಯ ಸಂದರ್ಭದಲ್ಲಿ ಅಭ್ಯರ್ಥಿಯಂತೆ ನಟಿಸಿ ಪರೀಕ್ಷೆ ಬರೆಯಲು ಬಂದಿದ್ದ ಎಂಬಿಬಿಎಸ್ ವೈದ್ಯ ಸೇರಿದಂತೆ ವಂಚನೆ ಆರೋಪದ ಮೇಲೆ ಬಿಹಾರದ ಸಮಸ್ತಿಪುರ ಪೊಲೀಸರು ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಆರೋಪಿಗಳ ಬಳಿಯಿಂದ ಮೂರು ಮೊಬೈಲ್ ಫೋನ್‌ಗಳು, ಒಂದು ಕಾರು ಮತ್ತು 50,000 ರೂ. ನಗದು ವಶಪಡಿಸಿಕೊಳ್ಳಲಾಗಿದೆ.

ಬಂಧಿತರು ನೀಟ್-ಯುಜಿ 2024 ಪರೀಕ್ಷಾ ಪತ್ರಿಕೆ ಸೋರಿಕೆಯ ಕಿಂಗ್‌ಪಿನ್ ಸಂಜೀವ್ ಮುಖಿಯಾ ಅವರೊಂದಿಗೆ ಸಂಪರ್ಕ ಹೊಂದಿದ್ದಾರೆಯೇ ಎಂದು ತನಿಖಾ ಅಧಿಕಾರಿಗಳು ಖಚಿತಪಡಿಸಿಕೊಳ್ಳುತ್ತಿದ್ದಾರೆ, ಪ್ರಸ್ತುತ ಪಾಟ್ನಾ ಬಳಿಯ ಬೇವೂರ್ ಕೇಂದ್ರ ಜೈಲಿನಲ್ಲಿ ಅವರು ಇರಿಸಲಾಗಿದೆ. ಸುಳಿವು ನೀಡಿದರೆ 3 ಲಕ್ಷ ರೂ. ಬಹುಮಾನ ಹೊಂದಿದ್ದ ಮುಖಿಯಾ ಅವರನ್ನು ಕಳೆದ ತಿಂಗಳು ಪಾಟ್ನಾದಿಂದ ಬಂಧಿಸಲಾಯಿತು.

ಮೋಹನ್‌ಪುರದ ಪರೀಕ್ಷಾ ಕೇಂದ್ರದ ಹೊರಗೆ ನಿಲ್ಲಿಸಿದ್ದ ಕಾರಿನಲ್ಲಿ ಕುಳಿತಿದ್ದ ಇಬ್ಬರು ವ್ಯಕ್ತಿಗಳನ್ನು ಪೊಲೀಸ್ ತಂಡ ಬಂಧಿಸಿದೆ ಎಂದು ಸಮಸ್ತಿಪುರದ ಎಎಸ್ಪಿ ಸಂಜಯ್ ಕುಮಾರ್ ಪಾಂಡೆ ತಿಳಿಸಿದ್ದಾರೆ. ಅವರ ಮೊಬೈಲ್ ಫೋನ್‌ಗಳಲ್ಲಿ ವಿವಿಧ ಅಭ್ಯರ್ಥಿಗಳ ಪ್ರವೇಶ ಪತ್ರಗಳು ಇರುವುದನ್ನು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

ವಿಚಾರಣೆಯ ಸಮಯದಲ್ಲಿ, ಸಮಸ್ತಿಪುರ ಮತ್ತು ಇತರ ಸ್ಥಳಗಳಲ್ಲಿನ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ದುರ್ಬಲ ಅಭ್ಯರ್ಥಿಗಳ ಬದಲಿಗೆ ತಾವು ಪರೀಕ್ಷೆ ಬರೆಯಲು ಬಂದಿರುವುದಾಗಿ ಇಬ್ಬರೂ ಒಪ್ಪಿಕೊಂಡಿದ್ದಾರೆ ಎಂದು ವರದಿ ಉಲ್ಲೇಖಿಸಿದೆ. ಈ ಆರೋಪಿಗಳು ಅಭ್ಯರ್ಥಿಗಳಿಗೆ 2.5 ಲಕ್ಷದಿಂದ 5 ಲಕ್ಷ ರೂ.ಗಳವರೆಗೆ ಶುಲ್ಕ ವಿಧಿಸುತ್ತಿದ್ದರು ಎಂದು ವರದಿಯಾಗಿದೆ.

ಬಂಧಿತರಲ್ಲಿ ಒಬ್ಬ ಬೇಗುಸರಾಯ್ ವಿಭಾಗೀಯ ಜೈಲಿನಲ್ಲಿ ನಿಯೋಜಿತರಾಗಿರುವ ಸರ್ಕಾರಿ ವೈದ್ಯ ಡಾ. ರಂಜೀತ್ ಕುಮಾರ್ ಎಂದು ಗುರುತಿಸಲಾಗಿದ್ದು, ಮತ್ತೊಬ್ಬ ಅವರ ಸಹಚರ ದರ್ಭಂಗಾ ಮೂಲದ ರಾಂಬಾಬು ಮಲಿಕ್ ಎಂದು ಗುರುತಿಸಲಾಗಿದೆ.

“ನೀಟ್-ಯುಜಿ 2025 ಪತ್ರಿಕೆ ಸೋರಿಕೆಯ ಕಿಂಗ್‌ಪಿನ್ ಸಂಜೀವ್ ಮುಖಿಯಾ ಅವರೊಂದಿಗಿನ ಅವರ ಸಂಪರ್ಕವನ್ನು ಖಚಿತಪಡಿಸಿಕೊಳ್ಳಲಾಗುತ್ತಿದೆ” ಎಂದು ಎಎಸ್ಪಿ ಪಾಂಡೆ ಹೇಳಿದ್ದಾರೆ. ಬಿಹಾರ ಪೊಲೀಸರ ಆರ್ಥಿಕ ಅಪರಾಧಗಳ ಘಟಕವು ಎಲ್ಲಾ ಡಿಎಂಗಳು ಮತ್ತು ಎಸ್‌ಪಿಗಳಿಗೆ ಪರೀಕ್ಷಾ ಕೇಂದ್ರಗಳಲ್ಲಿ ಜಾಗರೂಕರಾಗಿರಲು ಎಚ್ಚರಿಕೆ ನೀಡಿದೆ.

2024 ರ ನೀಟ್ ಹಗರಣದ ಪ್ರಮುಖ ವ್ಯಕ್ತಿ ಎಂದು ಪೊಲೀಸರು ಗುರುತಿಸಿರುವ ಸಂಜೀವ್ ಮುಖಿಯಾ ಅವರನ್ನು ಆರ್ಥಿಕ ಅಪರಾಧ ಘಟಕ (ಇಒಯು) ತಂಡವು ಏಪ್ರಿಲ್ 25, 2025 ರಂದು ಪಾಟ್ನಾದಲ್ಲಿ ಬಂಧಿಸಿತು. ಪಾಟ್ನಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಿಂದ (ಪಿಎಂಸಿಎಚ್) ಎಂಬಿಬಿಎಸ್ ಪದವೀಧರರಾಗಿರುವ ಅವರ ಮಗ ಡಾ. ಶಿವಕುಮಾರ್ ಅವರನ್ನು ಇದೇ ಪ್ರಕರಣದಲ್ಲಿ ಮೊದಲೇ ಬಂಧಿಸಲಾಗಿತ್ತು. ಅವರು ಪ್ರಸ್ತುತ ಜಾಮೀನಿನ ಮೇಲೆ ಹೊರಗಿದ್ದಾರೆ.

ಭಾರತದಾದ್ಯಂತ ವೈದ್ಯಕೀಯ ಸಂಸ್ಥೆಗಳಲ್ಲಿ ಎಂಬಿಬಿಎಸ್ ಮತ್ತು ಬಿಡಿಎಸ್ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾದ ಪ್ರತಿಷ್ಠಿತ ಪರೀಕ್ಷೆಯಾದ ನೀಟ್‌ ಯುಜಿ 2025 ಸೋಮವಾರ ಮಧ್ಯಾಹ್ನ 2 ರಿಂದ ಸಂಜೆ 5 ರವರೆಗೆ ನಡೆಯಿತು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಪಾಕ್ ನಟನ ‘ಅಬೀರ್ ಗುಲಾಲ್’ ಚಿತ್ರ ನಿಷೇಧ: ‘ದಿ ಕಾಶ್ಮೀರ್ ಫೈಲ್ಸ್’ ತೊಂದರೆಯಿಲ್ಲದೆ ಬಿಡುಗಡೆಯಾಗುತ್ತೆ ಎಂದ ಪ್ರಕಾಶ್ ರಾಜ್

ಪಾಕ್ ನಟನ ‘ಅಬೀರ್ ಗುಲಾಲ್’ ಚಿತ್ರ ನಿಷೇಧ: ‘ದಿ ಕಾಶ್ಮೀರ್ ಫೈಲ್ಸ್’ ತೊಂದರೆಯಿಲ್ಲದೆ ಬಿಡುಗಡೆಯಾಗುತ್ತೆ ಎಂದ ಪ್ರಕಾಶ್ ರಾಜ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...