Homeಮುಖಪುಟನೀಟ್-ಯುಜಿ ಮರು ಪರೀಕ್ಷೆ: 67 ರಿಂದ 61ಕ್ಕಿಳಿದ ಟಾಪರ್‌ಗಳ ಸಂಖ್ಯೆ

ನೀಟ್-ಯುಜಿ ಮರು ಪರೀಕ್ಷೆ: 67 ರಿಂದ 61ಕ್ಕಿಳಿದ ಟಾಪರ್‌ಗಳ ಸಂಖ್ಯೆ

- Advertisement -
- Advertisement -

ನೀಟ್-ಯುಜಿ ಮರು ಪರೀಕ್ಷೆಯ ಫಲಿತಾಂಶವನ್ನು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಇಂದು (ಜುಲೈ 1) ಪ್ರಕಟಿಸಿದ್ದು, ಟಾಪರ್‌ಗಳ ಸಂಖ್ಯೆ ಇಳಿಕೆಯಾಗಿದೆ.

ಒಟ್ಟು 1,563 ವಿದ್ಯಾರ್ಥಿಗಳಿಗೆ ಮರು ಪರೀಕ್ಷೆಗೆ ನಿಗದಿಪಡಿಸಲಾಗಿತ್ತು. ಆದರೆ, 813 ವಿದ್ಯಾರ್ಥಿಗಳು ಮಾತ್ರ ಪರೀಕ್ಷೆಗೆ ಹಾಜರಾಗಿದ್ದರು. ಅವರ ಫಲಿತಾಂಶ ಪ್ರಕಟಿಸಲಾಗಿದ್ದು, ಮೊದಲ ಫಲಿತಾಂಶದಲ್ಲಿ 67 ಇದ್ದ ಟಾಪರ್‌ಗಳ ಸಂಖ್ಯೆ 61ಕ್ಕೆ ಇಳಿಕೆಯಾಗಿದೆ.

ಜೂನ್ 4ರಂದು ಪ್ರಕಟಗೊಂಡ 2024ರ ನೀಟ್-ಯುಜಿ ಫಲಿತಾಂಶದಲ್ಲಿ 1,563 ವಿದ್ಯಾರ್ಥಿಗಳಿಗೆ ಕೃಪಾಂಕ ನೀಡಿರುವುದು ಮತ್ತು 67 ವಿದ್ಯಾರ್ಥಿಗಳು 720 ಪೂರ್ಣ ಅಂಕ ಗಳಿಸಿರುವುದು ಹಾಗೂ ಕೆಲ ವಿದ್ಯಾರ್ಥಿಗಳು 718, 719 ಅಂಕಗಳನ್ನು ಪಡೆದಿರುವುದು ವಿವಾದಕ್ಕೆ ಕಾರಣವಾಗಿತ್ತು. ಈ ಹಿನ್ನೆಲೆ ವಿದ್ಯಾರ್ಥಿಗಳ ಕೃಪಾಂಕ ರದ್ದುಗೊಳಿಸಿ ಮರು ಪರೀಕ್ಷೆ ನಡೆಸಲಾಗಿತ್ತು.

ಬರೋಬ್ಬರಿ 24 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಜರಾಗಿದ್ದ ಪರೀಕ್ಷೆ ಮೇ 5, 2024 ರಂದು ನಡೆದಿತ್ತು. ಜೂನ್ 4, 2024ರಂದು ಫಲಿತಾಂಶ ಪ್ರಕಟಗೊಂಡ ನಂತರ ಭಾರೀ ವಿವಾದಕ್ಕೆ ಕಾರಣವಾಗಿತ್ತು.

ಪರೀಕ್ಷೆ ಬರೆಯಲು ಸರಿಯಾಗಿ ಸಮಯ ಸಿಕ್ಕಿಲ್ಲ ಎಂಬ ಕಾರಣಕ್ಕೆ ವಿದ್ಯಾರ್ಥಿಗಳಿಗೆ ಕೃಪಾಂಕ ನೀಡಲಾಗಿದೆ. ಈ ಕಾರಣದಿಂದ 718, 719 ಅಂಕಗಳು ಲಭಿಸಿವೆ. ಕೆಲ ವಿದ್ಯಾರ್ಥಿಗಳಿಗೆ ಪ್ರಶ್ನೆ ಪತ್ರಿಕೆ ಸುಲಭವಾಗಿದ್ದುದೇ ಅವರು ಭಾರೀ ಅಂಕ ಪಡೆಯಲು ಕಾರಣ ಎಂದು ರಾಷ್ಟ್ರೀಯ ಪರಿಕ್ಷಾ ಸಂಸ್ಥೆ (ಎನ್‌ಟಿಎ) ಆರಂಭದಲ್ಲಿ ಹೇಳಿತ್ತು.

ಆದರೆ, ವಿದ್ಯಾರ್ಥಿಗಳು ಮತ್ತು ಇತರರಿಂದ ಆಕ್ರೋಶ ಹೆಚ್ಚಾಗುತ್ತಿದ್ದಂತೆ ಕೃಪಾಂಕ ಕುರಿತು ಮರು ಪರಿಶೀಲಿಸಲು ಕೇಂದ್ರ ಶಿಕ್ಷಣ ಸಚಿವಾಲಯ ನಾಲ್ವರ ಸಮಿತಿ ರಚಿಸಿದೆ ಎಂದು ಎನ್‌ಟಿಎ ಮಹಾನಿರ್ದೇಶಕ ಸುಬೋಧ್ ಕುಮಾರ್ ಸಿಂಗ್ ಜೂನ್ 8ರಂದು ಸುದ್ದಿಗೋಷ್ಟಿ ನಡೆಸಿ ತಿಳಿಸಿದ್ದರು.

ಈ ನಡುವೆ ನೀಟ್ ಮರು ಪರೀಕ್ಷೆ ನಡೆಸುವಂತೆ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿತ್ತು. ಅರ್ಜಿ ಸಂಬಂಧ ಪ್ರತಿಕ್ರಿಯೆ ಕೇಳಿ ಜೂನ್ 11ರಂದು ಸುಪ್ರೀಂ ಕೋರ್ಟ್ ಎನ್‌ಟಿಎಗೆ ನೋಟಿಸ್ ಜಾರಿ ಮಾಡಿತ್ತು. ಇದಕ್ಕೆ ಉತ್ತರಿಸಿದ್ದ ಎನ್‌ಟಿಎ 1,563 ವಿದ್ಯಾರ್ಥಿಗಳ ಗ್ರೇಸ್ ಅಂಕಗಳನ್ನು ರದ್ದುಗೊಳಿಸಲಾಗುವುದು. ಅವರು ಮತ್ತೆ ಪರೀಕ್ಷೆಗೆ ಹಾಜರಾಗಲು ಆಯ್ಕೆಯನ್ನು ಹೊಂದಿರುತ್ತಾರೆ ಎಂದು ತಿಳಿಸಿತ್ತು. ಅದರಂತೆ ಗ್ರೇಸ್ ಅಂಕ ರದ್ದುಪಡಿಸಿ ಮರು ಪರೀಕ್ಷೆ ನಡೆಸಿತ್ತು.

ವರದಿಗಳ ಪ್ರಕಾರ, ಮರು ಪರೀಕ್ಷೆಗೆ ಚಂಡೀಗಢದ ಇಬ್ಬರು ಅಭ್ಯರ್ಥಿಗಳಲ್ಲಿ ಯಾರೂ ಹಾಜರಾಗಲಿಲ್ಲ. ಛತ್ತೀಸ್‌ಗಢದಿಂದ ಒಟ್ಟು 602 ವಿದ್ಯಾರ್ಥಿಗಳಲ್ಲಿ 291, ಗುಜರಾತ್‌ನಿಂದ ಒಬ್ಬರು ವಿದ್ಯಾರ್ಥಿ, ಹರಿಯಾಣದಿಂದ 494 ರಲ್ಲಿ 287 ಮತ್ತು ಮೇಘಾಲಯದ ತುರಾದಿಂದ 234 ವಿದ್ಯಾರ್ಥಿಗಳು ಹಾಜರಾಗಿದ್ದರು.

ಇದನ್ನೂ ಓದಿ : ನೀಟ್-ಯುಜಿ ಮರು ಪರೀಕ್ಷೆ: ಪರಿಷ್ಕೃತ ಶ್ರೇಣಿಯ ಪಟ್ಟಿ ಪ್ರಕಟಿಸಿದ ಎನ್‌ಟಿಎ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...