Homeಕರ್ನಾಟಕಇಂದಿರಾ ಕ್ಯಾಂಟೀನ್ ಬಗ್ಗೆ ನಿರ್ಲಕ್ಷ್ಯತೆ; ಬಡವರ ಅನ್ನ ಕಸಿಯುತ್ತಿರುವ ಬಿಜೆಪಿ- ಆಮ್ ಆದ್ಮಿ ಪಕ್ಷ ಆಕ್ರೋಶ

ಇಂದಿರಾ ಕ್ಯಾಂಟೀನ್ ಬಗ್ಗೆ ನಿರ್ಲಕ್ಷ್ಯತೆ; ಬಡವರ ಅನ್ನ ಕಸಿಯುತ್ತಿರುವ ಬಿಜೆಪಿ- ಆಮ್ ಆದ್ಮಿ ಪಕ್ಷ ಆಕ್ರೋಶ

ಬೆಂಗಳೂರು ನಗರದಾದ್ಯಂತ ಇರುವ 174 ಕ್ಯಾಂಟೀನ್ ಹಾಗೂ 15 ಮೊಬೈಲ್ ಕ್ಯಾಂಟೀನ್‌ಗಳಿಗೆ ಮೂಲ ಸೌಕರ್ಯಗಳನ್ನು ಒದಗಿಸದೆ, ಗುತ್ತಿಗೆದಾರರಿಗೆ ಹಣ ಪಾವತಿ ಮಾಡದೆ ನಿರ್ಲಕ್ಷ್ಯ, ತಿರಸ್ಕಾರ ಭಾವದಿಂದ ನೋಡಲಾಗುತ್ತಿದೆ

- Advertisement -
- Advertisement -

ಸಮ್ಮಿಶ್ರ ಸರ್ಕಾರವನ್ನು ಬೀಳಿಸಿ ಅಧಿಕಾರಕ್ಕೆ ಬಂದ ದಿನದಿಂದ ಇಂದಿರಾ ಕ್ಯಾಂಟೀನ್ ಮುಚ್ಚಲು ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಹವಣಿಸುತ್ತಿದೆ. ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಇದಕ್ಕೆ ಇಂಬು ನೀಡುತ್ತಿದ್ದು, ಬಡವರ ಪಾಲಿನ ಅನ್ನ ಕಸಿಯುತ್ತಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ಮಾಧ್ಯಮ ಸಂಚಾಲಕ ಜಗದೀಶ್ ವಿ ಸದಂ ಆರೋಪಿಸಿದರು.

ಇಂದು ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ, “ಬೆಂಗಳೂರು ನಗರದಾದ್ಯಂತ ಇರುವ 174 ಕ್ಯಾಂಟೀನ್ ಹಾಗೂ 15 ಮೊಬೈಲ್ ಕ್ಯಾಂಟೀನ್‌ಗಳಿಗೆ ಮೂಲ ಸೌಕರ್ಯಗಳನ್ನು ಒದಗಿಸದೆ, ಗುತ್ತಿಗೆದಾರರಿಗೆ ಹಣ ಪಾವತಿ ಮಾಡದೆ ನಿರ್ಲಕ್ಷ್ಯ, ತಿರಸ್ಕಾರ ಭಾವದಿಂದ ನೋಡಲಾಗುತ್ತಿದೆ” ಎಂದರು.

ವಿಧಾನಸೌಧದಲ್ಲಿ ಸಿಎಂ ಯಡಿಯೂರಪ್ಪ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬಡವರಿಗಾಗಿ ಎಲ್ಲಾ ಇಂದಿರಾ ಕ್ಯಾಂಟೀನ್ ಇಡೀ ದಿವಸ ಊಟ ಸಿಗುವಂತೆ ವ್ಯವಸ್ಥೆ ಮಾಡಲಾಗಿದೆ ಎಂದಿದ್ದರು.

ಇದನ್ನೂ ಓದಿ: ಲಾಕ್‌ಡೌನ್‌ನಿಂದ ತೊಂದರೆಗೊಳಗಾಗುವವರಿಗೆ ಆಹಾರ ಒದಗಿಸಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಆದೇಶ

“ಲಾಕ್‌ಡೌನ್ ಸಂದರ್ಭದಲ್ಲಿ ಬಡವರಿಗೆ, ವಲಸೆ ಕಾರ್ಮಿಕರಿಗೆ ಊಟ ನೀಡಿ ಎಂದು ಆಮ್ ಆದ್ಮಿ ಪಕ್ಷ ಎಷ್ಟೇ ಒತ್ತಾಯಿಸಿದರೂ ಉಚಿತವಾಗಿ ಊಟ ನೀಡಲಿಲ್ಲ. ದೆಹಲಿಯಲ್ಲಿ ಇಷ್ಟು ಸುಸಜ್ಜಿತವಾದ ವ್ಯವಸ್ಥೆ ಇಲ್ಲದಿದ್ದರೂ ಪ್ರತಿದಿನ 13 ಲಕ್ಷ ಜನರಿಗೆ ಊಟ ನೀಡಲಾಗುತ್ತಿತ್ತು. ಆದರೆ ನಮ್ಮ ರಾಜ್ಯದಲ್ಲಿ ವ್ಯವಸ್ಥಿತವಾಗಿ ಇರುವ ಯೋಜನೆಯನ್ನು ಉಪಯೋಗಿಸಿಕೊಳ್ಳದೆ ಬಡವರನ್ನು ಹಸಿವಿನಲ್ಲಿ ಮಲಗಿಸಿದ್ದೇ ಬಿಜೆಪಿ ಸರ್ಕಾರದ ಸಾಧನೆ. ಮುಖ್ಯಮಂತ್ರಿಗಳಿಗೆ, ಸಚಿವ ಸುರೇಶ್ ಕುಮಾರ್ ಅವರಿಗೆ ನಾಚಿಕೆ ಆಗಬೇಕು” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇಂದಿರಾ ಕ್ಯಾಂಟಿನ್‍ ನಿರ್ವಹಣೆಯಲ್ಲಿ ಅಕ್ರಮ ನಡೆದಿದೆ. ಹಾಗಾಗಿ ತನಿಖೆ ನಡೆಸಲು ಆದೇಶ ನೀಡುವುದಾಗಿಯೂ, ಇಂದಿರಾ ಕ್ಯಾಂಟೀನ್ ಮುಚ್ಚುವುದಾಗಿಯೂ ಯಡಿಯೂರಪ್ಪನವರು ಪ್ರಸ್ತಾಪಿಸಿದ್ದರು

ಸಚಿವರಾದ ಸುರೇಶ್ ಕುಮಾರ್, ಅಶ್ವಥ್ ನಾರಾಯಣ ಅವರು ಮೊದಲಿನಿಂದಲೂ ಒಂದಲ್ಲ ಒಂದು ರೀತಿಯಲ್ಲಿ ಇಂದಿರಾ ಕ್ಯಾಂಟೀನ್ ಮುಚ್ಚಲು ಹುನ್ನಾರ ನಡೆಸುತ್ತಿದ್ದಾರೆ. ಇದಕ್ಕೆ ಸಾಕಷ್ಟು ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ವಾಮಮಾರ್ಗದ ಮೂಲಕ, ಮೂಲ ಸೌಕರ್ಯಗಳಿಗೆ ಕತ್ತರಿ ಹಾಕುವ ಮೂಲಕ ಹಾಗೂ ಸರಿಯಾಗಿ ಬಿಲ್‌ಗಳನ್ನು ಬಿಡುಗಡೆ ಮಾಡದೆ ಉಸಿರುಗಟ್ಟಿಸಲಾಗುತ್ತಿದೆ. ಬಡವರ ಅನ್ನ ಕಿತ್ತುಕೊಳ್ಳುವುದಕ್ಕೆ ನೇರ ಕಾರಣ ಸಚಿವ ಸುರೇಶ್ ಕುಮಾರ್ ಎಂದರು.

ಇದನ್ನೂ ಓದಿ: ಇಂದಿರಾ ಕ್ಯಾಂಟೀನ್‌ನಲ್ಲಿ ಇಡೀ ದಿನ ಬಡವರಿಗೆ ಉಚಿತ ಊಟ – ಯಡಿಯೂರಪ್ಪ

ಇಂದಿರಾ ಕ್ಯಾಂಟೀನ್‌ ಊಟದ ಗುತ್ತಿಗೆ ಪಡೆದಿರುವ ಚೆಫ್ ಟಾಕ್ ಮತ್ತು ರಿವಾಡ್ರ್ಸ್ ಎಂಬ ಸಂಸ್ಥೆಗಳ ವಿರುದ್ದ, ಇಲ್ಲಿ ಅವ್ಯವಹಾರ ನಡೆದಿದೆ ಎಂದು ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಬಿಬಿಎಂಪಿ ಹಣಕಾಸು ವಿಭಾಗದ ಜಂಟಿ ಆಯುಕ್ತ ವೆಂಕಟೇಶ್ ಅವರು ಸಾಕಷ್ಟು ಬಾರಿ ದೂರು ದಾಖಲಿಸಿದ್ದರು. ಈ ಬಗ್ಗೆಯೂ ತನಿಖೆ ನಡೆಸಿಲ್ಲ. ಗುತ್ತಿಗೆದಾರರನ್ನು ಬದಲಾಯಿಸಲಾಗುವುದು ಎಂದು ಹೇಳಿ ಆ ಕೆಲಸವನ್ನೂ ಮಾಡದೆ ಏಕೆ ವಿಳಂಬ ಮಾಡುತ್ತಿದ್ದೀರಿ? ಬಡವರ, ಕೂಲಿ ಕಾರ್ಮಿಕರ, ನಿರ್ಗತಿಕರ ಪಾಲಿನ ಅನ್ನಕ್ಕೂ ಕನ್ನ ಹಾಕುವ ಬಿಜೆಪಿಯ ಈ ನಡೆಯನ್ನು ತೀವ್ರವಾಗಿ ಖಂಡಿಸುತ್ತೇವೆ ಎಂದರು.

ಯಾವುದೇ ಜನಪರ ಯೋಚನೆಯಲ್ಲಿ ಅಕ್ರಮಗಳು ಅಥವಾ ಹಗರಣಗಳು ನಡೆದರೆ ಹಗರಣ, ಅಕ್ರಮಗಳ ಬಗೆಗೆ ತನಿಖೆ ನಡೆಸಬೇಕೆ ಹೊರತು ಯೋಜನೆಯನ್ನೇ ರದ್ದುಗೊಳಿಸಬಾರದು ಎಂಬ ಸಾಮಾನ್ಯ ಜ್ಞಾನವೂ ಇಲ್ಲದಂತಾಗಿದೆ

ಈ ಕೂಡಲೇ ಇಂದಿರಾ ಕ್ಯಾಂಟೀನ್‌ಗೆ ಬಾಕಿ ಉಳಿಸಿಕೊಂಡಿರುವ ಎಲ್ಲಾ ಬಿಲ್‌ಗಳನ್ನು ಹಾಗೂ ಮೂಲ ಸೌಕರ್ಯ ಅಭಿವೃದ್ಧಿಗೆ ಸರ್ಕಾರ ಗಮನ ಹರಿಸಬೇಕು ಎಂದು ಒತ್ತಾಯಿಸಿದರು. ಗೋಷ್ಠಿಯಲ್ಲಿ ವಸಂತ ನಗರ ವಾರ್ಡ್ ಅಧ್ಯಕ್ಷೆ ಜನನಿ ಭರತ್ ಇದ್ದರು.


ಇದನ್ನೂ ಓದಿ: ಇಂದಿರಾ ಕ್ಯಾಂಟೀನ್‌ದೊಳಗ ಊಟ ಮಾಡಿದಿವಿ ಅಂದರೆ ಕಮಲ ಪಕ್ಷಕ್ಕೆ ಆಗಿ ಬರೋದಿಲ್ಲ…!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...