Homeಮುಖಪುಟಗ್ಯಾನೇಶ್ ಕುಮಾರ್ ವಿರುದ್ಧ ಪ್ರತಿಭಟನೆ : ಬಾಂಡ್ ಸಲ್ಲಿಸುವಂತೆ ಪೊಲೀಸರಿಂದ ನೋಟಿಸ್; ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ...

ಗ್ಯಾನೇಶ್ ಕುಮಾರ್ ವಿರುದ್ಧ ಪ್ರತಿಭಟನೆ : ಬಾಂಡ್ ಸಲ್ಲಿಸುವಂತೆ ಪೊಲೀಸರಿಂದ ನೋಟಿಸ್; ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ನೇಹಾ ಬೋರಾ

- Advertisement -
- Advertisement -

ವಿಚಾರಣೆಯ ಅವಧಿಯಲ್ಲಿ ಶಾಂತಿ ಕಾಪಾಡುವ ಸಲುವಾಗಿ ಒಬ್ಬರ ಜಾಮೀನಿನೊಂದಿಗೆ (ಶ್ಯೂರಿಟಿ) 10,000 ರೂ. ಮೌಲ್ಯದ ಬಾಂಡ್ (ಮುಚ್ಚಳಿಕೆ ಪತ್ರ) ಸಲ್ಲಿಸುವಂತೆ ದೆಹಲಿ ಪೊಲೀಸರು ತಮಗೆ ನೀಡಿದ್ದ ನೋಟಿಸ್ ಅನ್ನು ಪ್ರಶ್ನಿಸಿ ವಿದ್ಯಾರ್ಥಿ ಸಂಘಟನೆ ಆಲ್‌ ಇಂಡಿಯಾ ಸ್ಟೂಡೆಂಟ್ ಅಸೋಸಿಯೇಷನ್ (ಎಐಎಸ್‌ಎ) ನಾಯಕಿ ನೇಹಾ ಬೋರಾ ದೆಹಲಿ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

ನೇಹಾ ಅವರ ಕಾನೂನು ತಂಡದ ಪ್ರಕಾರ, ರಜಾಕಾಲದ ಪೀಠದ ಮುಂದೆ ತುರ್ತು ವಿಚಾರಣೆಯನ್ನು ಕೋರಲಾಗಿದೆ ಎಂದು livelaw.in ವರದಿ ಮಾಡಿದೆ.

ಶುಕ್ರವಾರ (ಅ.16) ಸಂಜೆ ದೆಹಲಿಯ ಕನ್ನಾಟ್ ಪ್ಲೇಸ್‌ನಲ್ಲಿ ನಡೆದ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆಗೆ ಮುನ್ನ ಬೋರಾ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದರು. ಮರುದಿನ ಬೆಳಿಗ್ಗೆ ಅವರನ್ನು ಬಿಡುಗಡೆ ಮಾಡಲಾಯಿತು. ಮಂಡಿ ಹೌಸ್‌ನಲ್ಲಿ ನಡೆದ ಪ್ರತಿಭಟನಾ ಮೆರವಣಿಗೆಯಿಂದ ಆಕೆಯನ್ನು ವಶಕ್ಕೆ ತೆಗೆದುಕೊಳ್ಳಲಾಗಿತ್ತು.

ದೆಹಲಿ ಪೊಲೀಸರ ಪ್ರಕಾರ, ದೆಹಲಿ ಪೊಲೀಸ್ ಕಾಯಿದೆಯ ಸೆಕ್ಷನ್ 65ರ ಅಡಿಯಲ್ಲಿನ ನಿಯಮಾವಳಿಗಳು ಪೂರ್ಣಗೊಳಿಸಿದ ನಂತರ ನೇಹಾ ಅವರನ್ನು ಬಿಡುಗಡೆ ಮಾಡಲಾಗಿದೆ.

ಶಾಂತಿಭಂಗವಾಗುವ ಆತಂಕವಿದೆ ಎಂದು ಉಲ್ಲೇಖಿಸಿದ ಪೊಲೀಸರು, ‘ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ’ಯ (ಬಿಎನ್‌ಎಸ್‌ಎಸ್) 126 ಮತ್ತು 170ನೇ ಸೆಕ್ಷನ್‌ಗಳ ಅಡಿಯಲ್ಲಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರನ್ನು ಮುಂಜಾಗ್ರತಾ ಕ್ರಮವಾಗಿ ವಶಕ್ಕೆ ಪಡೆದಿದ್ದರು. ಭಾನುವಾರ (ಅ.18) ಸಂಜೆ ವಿಶೇಷ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ (ಎಸ್‌ಇಎಂ) ಅವರನ್ನು ಬಿಡುಗಡೆ ಮಾಡಿದ್ದಾರೆ.

ಪೊಲೀಸರ ನೋಟಿಸ್ ಮೇಲ್ನೋಟಕ್ಕೆ ಅಸ್ಪಷ್ಟವಾಗಿದೆ, ತಪ್ಪು ಮಾಹಿತಿಯಿಂದ ಕೂಡಿದೆ ಮತ್ತು ಸಂವಿಧಾನದ ವಿಧಿ 19 (ವಾಕ್ ಸ್ವಾತಂತ್ರ್ಯ ಮತ್ತು ಶಾಂತಿಯುತವಾಗಿ ಸಭೆ ಸೇರುವ ಹಕ್ಕು) ಹಾಗೂ ವಿಧಿ 21 (ವೈಯಕ್ತಿಕ ಸ್ವಾತಂತ್ರ್ಯದ ಹಕ್ಕು) ಅನ್ನು ಉಲ್ಲಂಘಿಸುತ್ತದೆ ಎಂದು ನೇಹಾ ನ್ಯಾಯಾಲಯಕ್ಕೆ ಸಲ್ಲಿಸಿದ ಅರ್ಜಿಯಲ್ಲಿ ವಾದಿಸಿದ್ದಾರೆ. 

ಪ್ರಸ್ತುತ ದೆಹಲಿ ಹೈಕೋರ್ಟ್‌ಗೆ ದಸರಾ ರಜೆ ಇರುವುದರಿಂದ ನ್ಯಾಯಾಲಯವು ಮುಚ್ಚಲ್ಪಟ್ಟಿದೆ (ಅಕ್ಟೋಬರ್ 26 ರಂದು ಪುನರಾರಂಭಗೊಳ್ಳಲಿದೆ). ಹೀಗಾಗಿ, ಈ ನೋಟಿಸ್‌ಗೆ ತಕ್ಷಣವೇ ತಡೆಯಾಜ್ಞೆ ನೀಡಬೇಕು ಮತ್ತು ಅದನ್ನು ಹಿಂಪಡೆಯಬೇಕು ಎಂದು ಕೋರಿ ರಜಾಕಾಲದ ಪೀಠದ ಮುಂದೆ ತುರ್ತು ವಿಚಾರಣೆ ನಡೆಸುವಂತೆ ನೇಹಾ ಪರ ವಕೀಲರು ವಿನಂತಿಸಿದ್ದಾರೆ.  

ಅರ್ಹ ಮತದಾರರನ್ನು ಮತದಾನದ ಹಕ್ಕಿನಿಂದ ವಂಚಿತರನ್ನಾಗಿಸುವ ಅಪಾಯವಿದೆ ಎಂದು ಪ್ರತಿಪಾದಿಸುತ್ತಿರುವ ವಿರೋಧ ಪಕ್ಷಗಳು, ವಿದ್ಯಾರ್ಥಿ ಸಂಘಟನೆಗಳು ಮತ್ತು ನಾಗರಿಕ ಸಮಾಜ ಸಂಘಟನೆಗಳು ‘ಎಸ್‌ಐಆರ್’ ವಿರುದ್ಧ ಪ್ರತಿಭಟನೆ ನಡೆಸುತ್ತಿರುವಾಗ ಈ ಬಂಧನಗಳು ನಡೆದಿವೆ.





ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೆಎನ್‌ಯು ವಿದ್ಯಾರ್ಥಿಗಳ ಉಪವಾಸ ಸತ್ಯಾಗ್ರಹ; ರಾಷ್ಟ್ರಪತಿಗಳಿಗೆ ಪತ್ರ ಬರೆದ ಸಿಪಿಐ(ಎಂ) ಸಂಸದ ಜಾನ್ ಬ್ರಿಟಾಸ್

ತಮ್ಮ ಪ್ರಮುಖ 13 ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ ವಿದ್ಯಾರ್ಥಿ ಒಕ್ಕೂಟದ (ಜೆಎನ್‌ಯುಎಸ್‌ಯು) ಪದಾಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ನಡೆಸುತ್ತಿರುವ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹದ ವಿಚಾರದಲ್ಲಿ ತುರ್ತು ಮಧ್ಯಪ್ರವೇಶ ಕೋರಿ ಕಮ್ಯೂನಿಸ್ಟ್...

ಟೈಗರ್ ಶ್ರಾಫ್ ಕಾರಿನ ಮೇಲೆ ಗುಂಡಿನ ದಾಳಿ: ರಾಜಸ್ಥಾನದ ಕೋಟಾದಲ್ಲಿ 17 ವರ್ಷದ ಅಪ್ರಾಪ್ತ ಸೇರಿದಂತೆ ಮೂವರು ವಶಕ್ಕೆ

ಮುಂಬೈ: ಬಾಲಿವುಡ್ ನಟ ಟೈಗರ್ ಶ್ರಾಫ್ ಅವರ ಕಾರಿನ ಮೇಲೆ ನಡೆದ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಸ್ಥಾನದ ಕೋಟಾದಲ್ಲಿ ಇಬ್ಬರು ಪುರುಷರು ಮತ್ತು 17 ವರ್ಷದ ಅಪ್ರಾಪ್ತ ವಯಸ್ಕನನ್ನು ಪೊಲೀಸರು ವಶಕ್ಕೆ...

“ನನ್ನ ಮೇಲೆ 45 ಮಾನನಷ್ಟ ಕೇಸ್ ಇವೆ, ಆದರೆ ವೋಟ್ ಚೋರಿ ಆರೋಪಕ್ಕೆ ಕೇಸ್ ಹಾಕಲ್ಲ” ನರೇಂದ್ರ ಮೋದಿ ಹಾಗೂ ಚುನಾವಣಾ ಆಯೋಗದ ವಿರುದ್ಧ ರಾಹುಲ್ ವಾಗ್ದಾಳಿ

"ನನ್ನ ವಿರುದ್ಧ ದೇಶಾದ್ಯಂತ ಮಾನನಷ್ಟ ಪ್ರಕರಣಗಳು ಸೇರಿದಂತೆ 45ಕ್ಕೂ ಹೆಚ್ಚು ಕೇಸ್‌ಗಳಿವೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಸಂಬಂಧಿಸಿದ ವಿಷಯಗಳ ಮೇಲೂ ಮೊಕದ್ದಮೆಗಳಿವೆ. ಆದರೆ,...

ದಲಿತ ವಿದ್ಯಾರ್ಥಿ ಸಾಹಿಲ್ ವಾಕೋಡೆ ಸಾವು : ಐಐಟಿ ಬಾಂಬೆ ಬಳಿಯ ಪ್ರತಿಭಟನಾ ಸ್ಥಳ ತೆರವು; ಪೋಷಕರನ್ನು ವಶಕ್ಕೆ ಪಡೆದ ಪೊಲೀಸರು

ಐಐಟಿ ಬಾಂಬೆ ಬಳಿಯ ಪ್ರತಿಭಟನಾ ಸ್ಥಳವನ್ನು ಪೊಲೀಸರು ಭಾನುವಾರ (ಅ.18) ಧ್ವಂಸಗೊಳಿಸಿದ್ದಾರೆ ಮತ್ತು ಅದೇ ಸಂಸ್ಥೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ವಿದ್ಯಾರ್ಥಿ ಸಾಹಿಲ್ ವಾಕೋಡೆ ಅವರ ಪೋಷಕರು ಮತ್ತು ಹಲವಾರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದ್ದಾರೆ....

‘ತಪ್ಪು ಮಾಡಿದ್ದಕ್ಕಾಗಿ ನಮಗೆ ಪಶ್ಚಾತಾಪವಿದೆ’ : 2023ರ ಚುನಾವಣಾ ಆಯುಕ್ತರ ಕಾಯ್ದೆ ಬೆಂಬಲಿಸಿದ್ದಕ್ಕೆ ಜಗನ್ ವಿಷಾದ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಪ್ರತಿಭಟನೆಗಳು ನಡೆಯುತ್ತಿರುವ ನಡುವೆಯೇ, ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ವೈ.ಎಸ್. ಜಗನ್ ಮೋಹನ್ ರೆಡ್ಡಿ ಅವರು...

ಫ್ರಾನ್ಸ್‌ನಲ್ಲಿ ಭುಗಿಲೆದ್ದ ಜನಾಕ್ರೋಶ: ಬೆಲೆ ಏರಿಕೆ ಹಾಗೂ ಸಾರ್ವಜನಿಕ ಸೇವೆಗಳ ಕಡಿತ ವಿರೋಧಿಸಿ ಬೃಹತ್ ಪ್ರತಿಭಟನೆ; ಹಿಂಸಾಚಾರದಲ್ಲಿ 1,800ಕ್ಕೂ ಅಧಿಕ ಮಂದಿ ವಶ!

ಜೀವನ ವೆಚ್ಚದ ಭಾರಿ ಏರಿಕೆ, ಕುಸಿದುಬೀಳುತ್ತಿರುವ ಶಾಲಾ-ಕಾಲೇಜುಗಳ ಮೂಲಸೌಕರ್ಯ ಹಾಗೂ ಸಾರ್ವಜನಿಕ ಸೇವೆಗಳ ಕಡಿತವನ್ನು ಖಂಡಿಸಿ ಫ್ರಾನ್ಸ್‌ನಾದ್ಯಂತ ಶನಿವಾರ ಲಕ್ಷಾಂತರ ಜನರು ರಸ್ತೆಗಿಳಿದು ನಡೆಸಿದ ಬೃಹತ್ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ವಿದ್ಯಾರ್ಥಿ...

ಪ.ಬಂಗಾಳ : ದುರ್ಗಾ ಪೂಜೆಗಳಲ್ಲಿ ಎಡಪಕ್ಷಗಳ ಪುಸ್ತಕ ಮಳಿಗೆಗಳ ಮೇಲೆ ದಾಳಿ

ಶನಿವಾರ (ಅಕ್ಟೋಬರ್ 17) ಸಂಜೆ ಕೋಲ್ಕತ್ತಾ ಮುನ್ಸಿಪಲ್ ಕಾರ್ಪೊರೇಶನ್‌ನ (ಕೆಎಂಸಿ) ತಂಡವೊಂದು ನಾಲ್ಕು ದಿನಗಳ ಹಿಂದೆ ಜಾದವ್‌ಪುರದಲ್ಲಿ ಸ್ಥಾಪಿಸಲಾಗಿದ್ದ ಪುಸ್ತಕ ಮಳಿಗೆಯನ್ನು ಧ್ವಂಸಗೊಳಿಸಲು ಆಗಮಿಸಿದಾಗ, ಕೇಂದ್ರ ಸಶಸ್ತ್ರ ಪಡೆಗಳು ಮತ್ತು ಪೊಲೀಸರು ಆ...

ಎಸ್‌ಐಆರ್ ಗೊಂದಲ: ರದ್ದಾಗಿರುವ ಮತದಾರರನ್ನು ಮರಳಿ ಸೇರಿಸಲು ‘ಫಾರ್ಮ್ 6’ ತಿದ್ದುಪಡಿಗೆ ಮಹಾರಾಷ್ಟ್ರ ಪ್ರಸ್ತಾಪ; ಜೈಲು ಶಿಕ್ಷೆಯ ಭೀತಿಯಲ್ಲಿ ಜನರು!

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ವೇಳೆ ಹೆಸರು ರದ್ದಾಗಿರುವ ಹಳೆಯ ಮತದಾರರನ್ನು ಮರಳಿ ಪಟ್ಟಿಗೆ ಸೇರ್ಪಡೆಗೊಳಿಸುವ ಪ್ರಕ್ರಿಯೆಯಲ್ಲಿ ಭಾರಿ ಆಡಳಿತಾತ್ಮಕ ಮತ್ತು ಕಾನೂನು ತೊಡಕು ಎದುರಾಗಿದೆ. ಎಸ್‌ಐಆರ್ ಪರಿಷ್ಕರಣೆಯಲ್ಲಿ...

ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ : ಬೆಂಗಳೂರಿನ ಟೌನ್‌ಹಾಲ್ ಬಳಿ ಪ್ರತಿಭಟಿಸಿದವರ ಬಂಧನ, ಬಿಡುಗಡೆ

ಶನಿವಾರ (ಅಕ್ಟೋಬರ್ 17) ಬೆಂಗಳೂರಿನ ಟೌನ್ ಹಾಲ್ ಬಳಿ ಮತದಾರರ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್) ಪ್ರಕ್ರಿಯೆಯ ವಿರುದ್ಧ ಪ್ರತಿಭಟನೆ ನಡೆಸಿದ ಹಾಗೂ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ...

ಆಂಧ್ರದಲ್ಲಿ ಮುಂದುವರಿದ ಟಿಡಿಪಿ-ವೈಎಸ್‌ಆರ್‌ಸಿಪಿ ಸಂಘರ್ಷ : ಪರಿಸ್ಥಿತಿ ಹತೋಟಿಗೆ ತರಲು ಗಾಳಿಯಲ್ಲಿ ಗುಂಡು ಹಾರಿಸಿದ ಕಡಪಾ ಪೊಲೀಸರು

ಸ್ಥಳೀಯ ಸಂಸ್ಥೆಗಳ ಚುನಾವಣೆಯ ನಾಮಪತ್ರ ಸಲ್ಲಿಕೆಯ ಎರಡನೇ ದಿನವಾದ ಶನಿವಾರ (ಅಕ್ಟೋಬರ್ 17) ಆಂಧ್ರ ಪ್ರದೇಶದಲ್ಲಿ ರಾಜಕೀಯ ಸಂಘರ್ಷಗಳು ಮುಂದುವರಿದಿವೆ. ವೈಎಸ್ಆರ್ ಕಾಂಗ್ರೆಸ್ ಪಕ್ಷದ (ವೈಎಸ್ಆರ್‌ಸಿಪಿ) ಭದ್ರಕೋಟೆಯಾಗಿರುವ ವೈಎಸ್ಆರ್ ಕಡಪ ಜಿಲ್ಲೆಯ ಪುಲಿವೆಂದುಲದಲ್ಲಿ...