Homeಕರ್ನಾಟಕಗ್ರಾಮೀಣ ಭಾರತದ ಪ್ರಗತಿಗಾಗಿ ನೆಹರು ಸಹಕಾರ ಕ್ಷೇತ್ರಕ್ಕೆ ಪ್ರೇರಣೆ ನೀಡಿದರು: ಸಿ.ಎಂ.ಸಿದ್ದರಾಮಯ್ಯ

ಗ್ರಾಮೀಣ ಭಾರತದ ಪ್ರಗತಿಗಾಗಿ ನೆಹರು ಸಹಕಾರ ಕ್ಷೇತ್ರಕ್ಕೆ ಪ್ರೇರಣೆ ನೀಡಿದರು: ಸಿ.ಎಂ.ಸಿದ್ದರಾಮಯ್ಯ

- Advertisement -
- Advertisement -

ಬೆಂಗಳೂರು: ಗ್ರಾಮೀಣ ಭಾರತದ ಪ್ರಗತಿಗಾಗಿ ನೆಹರು ಅವರು ಸಹಕಾರ ಕ್ಷೇತ್ರಕ್ಕೆ ಚೈತನ್ಯ ನೀಡಿದರು. ಹೀಗಾಗಿ ಸಹಕಾರಿ ಚಳವಳಿ ಲಕ್ಷಾಂತರ ಕುಟುಂಬಗಳ ಆರ್ಥಿಕ ಮೂಲವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ಪಟ್ಟರು. 

ನೆಹರು ಜನ್ಮದಿನದ ಪ್ರಯುಕ್ತ 72ನೇ ಅಖಿಲ ಭಾರತ ಸಹಕಾರ ಸಪ್ತಾಹವನ್ನು ಉದ್ಘಾಟಿಸಿ, ಸಹಕಾರಿ ಪುರಸ್ಕೃತರಿಗೆ ‘ಸಹಕಾರ ರತ್ನ’ ಪ್ರಶಸ್ತಿಯನ್ನು ವಿತರಿಸಿ ಅವರು ಮಾತನಾಡಿದರು.  

ಏಷ್ಯಾದಲ್ಲೇ ಮೊದಲ ಬಾರಿಗೆ ಸಹಕಾರಿ ಬ್ಯಾಂಕ್ ಸ್ಥಾಪನೆಯಾಗಿದ್ದು ನಮ್ಮ ರಾಜ್ಯದಲ್ಲಿ. ಹೀಗಾಗಿ ಕರ್ನಾಟಕವನ್ನು ಭಾರತದ ಸಹಕಾರ ಕ್ಷೇತ್ರದ ರಾಜಧಾನಿ ಎಂದು ಕರೆಯುತ್ತಾರೆ. 

ಯಾವುದೇ ಗ್ರಾಮ ಉದ್ಧಾರ ಆಗಬೇಕಾದರೆ ಆ ಗ್ರಾಮದಲ್ಲಿ ಒಂದು ಶಾಲೆ, ಒಂದು ಸಹಕಾರಿ ಸಂಘ, ಒಂದು ಆಸ್ಪತ್ರೆ ಇರಬೇಕು ಎನ್ನುವುದು ನೆಹರು ಅವರ ಸ್ಪಷ್ಟ ಕಲ್ಪನೆಯಾಗಿತ್ತು. ಈ ಕಲ್ಪನೆಯನ್ನು ಗುರಿಯಾಗಿಸಿಕೊಂಡು ಕೆಲಸ ಮಾಡಿ ಸಹಕಾರ ಚಳವಳಿಗೆ ನೆಹರು ಮತ್ತು ಮಹಾತ್ಮ ಗಾಂಧಿ ಅವರು ಶಕ್ತಿ ನೀಡಿದರು ಎಂದು ವಿವರಿಸಿದರು.

ರಾಜ್ಯದಲ್ಲಿ ವಾರ್ಷಿಕ ವಹಿವಾಟು 25000 ಕೋಟಿ, ಜೊತೆಗೆ ಪ್ರತೀ ದಿನ ಒಂದು ಕೋಟಿ ಲೀಟರ್ ಹಾಲು ಉತ್ಪಾದನೆ ಆಗುತ್ತಿದ್ದು ಇದು ಸಹಕಾರಿ ಚಳವಳಿ ಮೂಲಕ ಬೆಳೆದ ಹಾಲು ಮಹಾ ಮಂಡಳಿಗಳ ಮಹಾನ್ ಸಾಧನೆ. ಹಾಲು ಉತ್ಪಾದಕರ ಸಂಘಗಳು ಚಳವಳಿ ಸ್ವರೂಪದಲ್ಲಿ ನಡೆದು ಮಧ್ಯವರ್ತಿಗಳ ಹಾವಳಿ ಇಲ್ಲದೆ ರೈತರು ಹಾಲನ್ನು ನೇರವಾಗಿ ಉತ್ಪಾದಕರ ಸಂಘಗಳಿಗೆ ಸರಬರಾಜು ಮಾಡುವಂತಾಯಿತು ಎಂದು ತಿಳಿಸಿದರು. 

ನಾನು ಮೊದಲಿಗೆ ಮುಖ್ಯಮಂತ್ರಿಯಾಗಿ ಹಾಲಿನ ಪ್ರೋತ್ಸಾಹ ಮೊತ್ತವನ್ನು ಲೀಟರಿಗೆ 3ರೂ ಮಾಡಿದ್ದೆ. ಈಗ ಪ್ರೋತ್ಸಾಹ ಧನವನ್ನು ಲೀಟರಿಗೆ 5ರೂಗೆ ಹೆಚ್ಚಿಸಿ ಪ್ರತೀ ದಿನ ಸರ್ಕಾರದಿಂದ 5 ಕೋಟಿ ರೂಪಾಯಿ ಸಹಾಯಧನವನ್ನು ಹಾಲು ಉತ್ಪಾದಕರಿಗೆ ನೀಡಲಾಗುತ್ತಿದೆ. 40 ಲಕ್ಷ ರೈತರಿಗೆ ನೇರ ಅವರ ಬ್ಯಾಂಕ್ ಖಾತೆಗಳಿಗೆ ಸಹಾಯ ಧನ ಜಮೆ ಆಗುತ್ತಿದೆ. ಇದಕ್ಕೆಲ್ಲಾ ಹಾಲು ಮಹಾ ಮಂಡಳಿ ತಾಯಿಬೇರು ಇದ್ದ ಹಾಗೆ ಎಂದು ಶ್ಲಾಘಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...