Homeಮುಖಪುಟನೆಹರು ಮ್ಯೂಸಿಯಂ ಹೆಸರು ಬದಲಾವಣೆ: ಇತಿಹಾಸ ನಿರ್ಮಿಸಲು ಮೋದಿಗೆ ಸಾಧ್ಯವಿಲ್ಲ; ಪ್ರತಿಪಕ್ಷಗಳ ಟೀಕೆ

ನೆಹರು ಮ್ಯೂಸಿಯಂ ಹೆಸರು ಬದಲಾವಣೆ: ಇತಿಹಾಸ ನಿರ್ಮಿಸಲು ಮೋದಿಗೆ ಸಾಧ್ಯವಿಲ್ಲ; ಪ್ರತಿಪಕ್ಷಗಳ ಟೀಕೆ

- Advertisement -
- Advertisement -

ಕೇಂದ್ರ ಸರ್ಕಾರವು ನೆಹರು ಸ್ಮಾರಕ ವಸ್ತುಸಂಗ್ರಹಾಲಯ ಮತ್ತು ಗ್ರಂಥಾಲಯವನ್ನು(NMML) ಪ್ರಧಾನ ಮಂತ್ರಿಗಳ ವಸ್ತುಸಂಗ್ರಹಾಲಯ ಮತ್ತು ಗ್ರಂಥಾಲಯ (PMML) ಎಂದು ಮರುನಾಮಕರಣ ಮಾಡಿದ ನಂತರ ಪ್ರತಿಪಕ್ಷಗಳು ಟೀಕೆಗಳ ಸುರಿಮಳೆಗೈದಿವೆ.

”ಇತಿಹಾಸ ರಚಿಸುವ ಅಗತ್ಯವಿದೆ, ಪ್ರಧಾನಿ ನರೇಂದ್ರ ಮೋದಿಯವರಿಗೆ ಅದನ್ನು ರಚಿಸಲು ಸಾಧ್ಯವಾಗುತ್ತಿಲ್ಲ. ನೆಹರೂಗೆ ಸಮರ್ಪಿತವಾದ ಯಾವುದನ್ನಾದರೂ ಕೀಳಾಗಿ ನೋಡುವುದು ಅಥವಾ ಹೆಸರು ಬದಲಾಯಿಸುವ ರಾಜಕೀಯ ಮಾಡುವುದನ್ನು ಬಿಡಿ” ಎಂದು ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರೀನಾಥೆ ಪ್ರತಿಕ್ರಿಯಿಸಿದ್ದಾರೆ.

”ಪಂಡಿತ್ ಜವಾಹರ್‌ಲಾಲ್ ನೆಹರು ಆಧುನಿಕ ಭಾರತವನ್ನು ನಿರ್ಮಿಸಿದರು ಮತ್ತು ಅದಕ್ಕೆ ಅಡಿಪಾಯ ಹಾಕಿದರು. ಅವರು ಈ ದೇಶದಲ್ಲಿ ಉದಾರವಾದಿ ಪ್ರಜಾಪ್ರಭುತ್ವವನ್ನು ಜೀವಂತವಾಗಿಟ್ಟರು. ಐಐಎಂಗಳು, ಏಮ್ಸ್, ಐಐಟಿಗಳು, ಇಸ್ರೋ ಮತ್ತು ಸಂಸ್ಥೆಗಳನ್ನು ನಿರ್ಮಿಸಿದರು. ಆದರೆ ಪ್ರಧಾನಿ ಮೋದಿ ಇತಿಹಾಸದಲ್ಲಿ ಬಹಳ ನಕಾರಾತ್ಮಕವಾಗಿ ನೆನಪಿಸಿಕೊಳ್ಳುತ್ತಾರೆ” ಸುಪ್ರಿಯಾ ಹೇಳಿದ್ದಾರೆ.

ಜೂನ್‌ನಲ್ಲಿ ನಡೆದ ವಿಶೇಷ ಸಭೆಯಲ್ಲಿ NMML ಸೊಸೈಟಿ ತನ್ನ ಹೆಸರನ್ನು PMML ಸೊಸೈಟಿ ಎಂದು ಬದಲಾಯಿಸುವ ನಿರ್ಧಾರ ತೆಗೆದುಕೊಳ್ಳಲಾಗಿತ್ತು. ಇದಾದ ನಂತರ ವಸ್ತುಸಂಗ್ರಹಾಲಯವನ್ನು ಅಧಿಕೃತವಾಗಿ ಆಗಸ್ಟ್ 14ರಂದು ಮರುನಾಮಕರಣ ಮಾಡಲಾಯಿತು. ಈ ವಸ್ತುಸಂಗ್ರಹಾಲಯವು ತೀನ್ ಮೂರ್ತಿ ಭವನದಲ್ಲಿದೆ. ಇದು ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರ ಅಧಿಕೃತ ನಿವಾಸವಾಗಿದೆ.

ಕೇಂದ್ರ ಸರ್ಕಾರ ಮ್ಯೂಸಿಯಂ ಹೆಸರನ್ನು ಅಧಿಕೃತವಾಗಿ ಬದಲಾಯಿಸಿದ ನಂತರ ರಾಜಕೀಯ ಪಕ್ಷಗಳು, ವಿಶೇಷವಾಗಿ ಕಾಂಗ್ರೆಸ್, ಕೇಂದ್ರ ಸರ್ಕಾರದ ಕ್ರಮವನ್ನು ಟೀಕಿಸಿವೆ.

”ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ನೆಹರು ಪರಂಪರೆಯನ್ನು ನಿರಾಕರಿಸುವ, ವಿರೂಪಗೊಳಿಸುವ, ಮಾನಹಾನಿ ಮಾಡುವ ಮತ್ತು ನಾಶಪಡಿಸುವ ಕಾರ್ಯಸೂಚಿಯನ್ನು ಮಾತ್ರ ಹೊಂದಿದೆ” ಎಂದು ಕಾಂಗ್ರೆಸ್ ಹೇಳಿದೆ.

”ತೀನ್ ಮೂರ್ತಿ ಭವನದಲ್ಲಿ ಇತರ ಯಾವ ಪ್ರಧಾನಿಗಳ ನಿವಾಸವಾಗಿರಲಿಲ್ಲ. ಇದು ಒಂದು ಐತಿಹಾಸಿಕ ಸ್ಥಳವಾಗಿದ್ದು, ನೆಹರೂ ಅವರು ದೇಶ ವಿಭಜನೆಯಿಂದ ಅವರು ನಿಧನರಾಗುವವರೆಗೂ ಅಲ್ಲೇ ಇದ್ದರು. ಜವಾಹರಲಾಲ್ ನೆಹರು ಅವರು ದೇಶದ ಮಣ್ಣಿನಲ್ಲಿರುವುದರಿಂದ ಕೇಂದ್ರ ಸರ್ಕಾರಕ್ಕೆ ಅವರನ್ನು ಅಳಿಸಲು ಸಾಧ್ಯವಿಲ್ಲ” ಎಂದು ಆರ್‌ಜೆಡಿ ನಾಯಕ ಮನೋಜ್ ಝಾ ಹೇಳಿದ್ದಾರೆ.

ಇದನ್ನೂ ಓದಿ: ನೆಹರೂ ಸ್ಮಾರಕ ವಸ್ತು ಸಂಗ್ರಹಾಲಯ ಮತ್ತು ಗ್ರಂಥಾಲಯದ ಹೆಸರು ಬದಲಾವಣೆ: ಕಾಂಗ್ರೆಸ್ ಆಕ್ಷೇಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...