Homeಕರ್ನಾಟಕನೇಜಾರು ಕೊಲೆ ಪ್ರಕರಣ: ಪ್ರಚೋದನಕಾರಿ ಪೋಸ್ಟ್ ಆರೋಪ; ಸುಮೋಟೋ ಕೇಸ್ ದಾಖಲು

ನೇಜಾರು ಕೊಲೆ ಪ್ರಕರಣ: ಪ್ರಚೋದನಕಾರಿ ಪೋಸ್ಟ್ ಆರೋಪ; ಸುಮೋಟೋ ಕೇಸ್ ದಾಖಲು

- Advertisement -
- Advertisement -

ಉಡುಪಿಯ ನೇಜಾರಿನಲ್ಲಿ ನಡೆದ ತಾಯಿ-ಮಕ್ಕಳ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕಿದ ಆರೋಪದಲ್ಲಿ ವ್ಯಕ್ತಿಯೋರ್ವನ ವಿರುದ್ಧ ಉಡುಪಿ ನಗರ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

ಶಿವಮೊಗ್ಗ ನಿವಾಸಿ ಹಫೀಝ್ ಮುಹಮ್ಮದ್ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ.

ಹಫೀಝ್ ತನ್ನ ಫೇಸ್ಬುಕ್ ಖಾತೆಯಲ್ಲಿ ನೇಜಾರಿನಲ್ಲಿ ಹತ್ಯೆ ಮಾಡಿದ ಆರೋಪಿಯ ಬಗ್ಗೆ ಪೋಸ್ಟ್‌ ಮಾಡಿದ್ದು, ಅದರಲ್ಲಿ ಪ್ರಿಪ್ರೇಶನ್ ಇಲ್ಲದೆ ಪ್ರವೀಣ್ ಚೌಗಲೆಯನ್ನು ಕೊಲ್ಲುವ ಒಂದು ಸುಲಭದ ದಾರಿಯನ್ನು ನೇಜಾರಿನವರು ಕಳೆದುಕೊಂಡರು ಎಂದು ಬರೆದುಕೊಂಡಿದ್ದರು ಎಂದು ಆರೋಪಿಸಲಾಗಿದೆ. ಈ ಪೋಸ್ಟ್‌ ಸಾಮಾಜಿಕ ಜಾಲತಾಣದಲ್ಲಿ ದ್ವೇಷ ಸಂದೇಶ ಹರಿಬಿಟ್ಟು ವಿವಿಧ ವರ್ಗಗಳ ನಡುವೆ ದ್ವೇಷ ಸೃಷ್ಟಿಸುವ ಉದ್ದೇಶ ಹೊಂದಿರುವುದಾಗಿ ಆರೋಪಿಸಿ ಉಡುಪಿ ನಗರ ಠಾಣೆ ಪೊಲೀಸರು ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಉಡುಪಿಯ ನೇಜಾರಿನಲ್ಲಿ ನಡೆದ ತಾಯಿ ಮಕ್ಕಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ತನಿಖೆಯ ಭಾಗವಾಗಿ ಪೊಲೀಸರು ಆರೋಪಿಯನ್ನು ಸ್ಥಳಕ್ಕೆ ಮಹಜರಿಗೆ ಕರೆದುಕೊಂಡು ಹೋದಾಗ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ಎದುರಾಗಿತ್ತು. ಈ ವೇಳೆ ಪೊಲೀಸರು ಲಾಠಿಚಾರ್ಜ್‌ ನಡೆಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದರು.

ಕೊಲೆ ಕೃತ್ಯದ ಆರೋಪಿ ಪ್ರವೀಣ್ ಅರುಣ್ ಚೌಗುಲೆಯನ್ನು ಪೊಲೀಸರು ಸ್ಥಳ ಮಹಜರು ನಡೆಸಲು ತೃಪ್ತಿ ಲೇಔಟ್‌ಗೆ ಕರೆದುಕೊಂಡು ಬಂದಿದ್ದಾರೆ. ಈ ವೇಳೆ ಸ್ಥಳದಲ್ಲಿ ಸೇರಿದ್ದ ಆಕ್ರೋಶಿತರ ಗುಂಪು ಆರೋಪಿಗೆ ಹಲ್ಲೆ ನಡೆಸಲು ಮುಂದಾಗಿದ್ದರು. ಆರೋಪಿಯನ್ನು ತಮ್ಮ ಕೈಗೆ ಒಪ್ಪಿಸುವಂತೆ ಒತ್ತಾಯಿಸಿದ್ದರು.

ಭಾನುವಾರ ಉಡುಪಿ ಸಮೀಪದ ನೇಜಾರು ಬಳಿಯ ತೃಪ್ತಿ ಲೇಜೌಟ್‌ನಲ್ಲಿ ಹಸೀನಾ ಹಾಗೂ ಅವರ ಮೂವರು ಮಕ್ಕಳಾದ ಅಫ್ನಾನ್ (23), ಅಯ್ನಾಝ್ (21), ಆಸೀಮ್‌ನ್ನು (12) ಬರ್ಬರವಾಗಿ ಇರಿದು ಹತ್ಯೆ ಮಾಡಲಾಗಿತ್ತು. ಈ ಘಟನೆ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದು ಆರೋಪಿ ಪರಾರಿಯಾಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು.

ಪ್ರಕರಣಕ್ಕೆ ಸಂಬಂಧಿಸಿ ಬೆಳಗಾವಿಯ ಜಿಲ್ಲೆಯ ರಾಯಭಾಗ ತಾಲೂಕಿನ ಕುಡಚಿಯಲ್ಲಿ ಪ್ರವೀಣ್ ಅರುಣ್ ಚೌಗಲೆ(35)ಯನ್ನು ಮೊಬೈಲ್ ಟವರ್ ಆಧರಿಸಿ ಕುಡಚಿಯಲ್ಲಿ ಬಂಧಿಸಲಾಗಿತ್ತು. ಆರೋಪಿಯನ್ನು ವಿಚಾರಣೆ ನಡೆಸಿದಾಗ ಆತ ಕೃತ್ಯವನ್ನು ಒಪ್ಪಿಕೊಂಡಿದ್ದಾನೆ. ಆರೋಪಿಯನ್ನು ಉಡುಪಿಯ 1ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಆರೋಪಿಗೆ ನ್ಯಾಯಾಲಯ 14 ದಿನಗಳ ಪೊಲೀಸ್‌ ಕಸ್ಟಡಿ ವಿಧಿಸಿದೆ.

ಇದನ್ನು ಓದಿ; ಕೇರಳ: ಪೊಲೀಸ್‌ ದೌರ್ಜನ್ಯದಿಂದ ಹಾಸಿಗೆ ಹಿಡಿದ ಬಾಲಕ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿ ‘ಸಂವಿಧಾನ ಮತ್ತು ಮೀಸಲಾತಿ’ಯನ್ನು ರದ್ದುಗೊಳಿಸಲು ಬಯಸುತ್ತಿದೆ: ಲಾಲು ಪ್ರಸಾದ್ ಯಾದವ್

0
ಬಿಜೆಪಿ ಸಂವಿಧಾನ ಮತ್ತು ಮೀಸಲಾತಿಯನ್ನು ರದ್ದುಗೊಳಿಸಲು ಬಯಸುತ್ತಿದೆ, ಸರ್ಕಾರಿ ಉದ್ಯೋಗ ಮತ್ತು ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಮುಸ್ಲಿಮರು ಕೂಡ ಮೀಸಲಾತಿಯನ್ನು ಪಡೆಯಬೇಕು, ಅವರ ಮೀಸಲಾತಿ ಪರವಾಗಿ ನಾನಿದ್ದೇನೆ ಎಂದು ರಾಷ್ಟ್ರೀಯ ಜನತಾ ದಳ(ಆರ್‌ಜೆಡಿ)...