Homeಮುಖಪುಟ'ನೆಲದ ಪದ': ನಾಳೆ ಬೆಂಗಳೂರಿನಲ್ಲಿ ದೇಸಿ ಯುವ ಸಾಂಸ್ಕೃತಿಕ ಉತ್ಸವ

‘ನೆಲದ ಪದ’: ನಾಳೆ ಬೆಂಗಳೂರಿನಲ್ಲಿ ದೇಸಿ ಯುವ ಸಾಂಸ್ಕೃತಿಕ ಉತ್ಸವ

ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ಸ್ಪೂರ್ತಿಧಾಮದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ನಾಡಿದ ಖ್ಯಾತ ಸಂಗೀತಗಾರ ಡಾ. ಹಂಸಲೇಖರವರು ಉದ್ಘಾಟಿಸಲಿದ್ದಾರೆ. 

- Advertisement -
- Advertisement -

ಡಿಸೆಂಬರ್ 29, ಜಾತಿ -ಧರ್ಮಗಳನ್ನು ಮೀರಿದ ವಿಶ್ವಮಾನವ ಸಂದೇಶವನ್ನು ನಾಡಿಗೆ ಸಾರಿದ ಕುವೆಂಪು ಅವರ ಜನ್ಮದಿನದಂದು, ಕರ್ನಾಟಕ ವಿದ್ಯಾರ್ಥಿ ಸಂಘಟನೆ (KVS)ಯು ವಿದ್ಯಾರ್ಥಿ- ಯುವಜನರಿಗಾಗಿ ‘ನೆಲದ ಪದ’ ದೇಸಿ ಯುವ ಸಾಂಸ್ಕೃತಿಕ ಉತ್ಸವವನ್ನು ಆಯೋಜಿಸಿದೆ. ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ಸ್ಪೂರ್ತಿಧಾಮದಲ್ಲಿ ಒಂದಿಡಿ ದಿನ ಕಾರ್ಯಕ್ರಮ ನಡೆಯಲಿದ್ದು, ನಾಡಿದ ಖ್ಯಾತ ಸಂಗೀತಗಾರ ಡಾ. ಹಂಸಲೇಖ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. 

ವಿವಿಧ ಜಾತಿ, ಧರ್ಮ,‌ ಭಾಷೆ, ಲಿಂಗ, ಪ್ರದೇಶಗಳಿಗೆ ಸೇರಿದ ಸಾಮಾನ್ಯ ಜನರ ಕೂಡಿಬಾಳುವ ಬದುಕಿನ ತತ್ವವನ್ನು ಸಾರುವ, ನಮ್ಮದೇ ನೆಲಮೂಲದ ಹಾಡು, ಕಥೆ, ಕಾವ್ಯ, ಕುಣಿತ, ವಾದ್ಯಗಳ ಲಯವನ್ನು ಮೈಗೂಡಿಸಿಕೊಂಡ ಯುವ ಸಮುದಾಯ ತನ್ನದೇ ಭಾಷೆಯಲ್ಲಿ ಮಾತಾಡಬೇಕು, ಹಾಡಬೇಕು, ಕುಣಿಯಬೇಕು. ಬಹುಆಯಾಮಗಳ ಸಾಂಸ್ಕೃತಿಕ ಪರಿಸರವನ್ನು ಕಟ್ಟಿಕೊಳ್ಳಲು ಮುಂದಡಿಯಿಡಬೇಕು ಎಂಬ ಉದ್ದೇಶದಿಂದ ನೆಲದ ಪದ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎನ್ನುತ್ತಾರೆ ಕೆವಿಎಸ್ ಸಂಚಾಲಕರಾದ ಸರೋವರ್ ಬೆಂಕಿಕೆರೆ.

ನೆಲದ ಪದ ಉತ್ಸವವು ಒಂದು ಕಾರ್ಯಕ್ರಮ ಮಾತ್ರವಲ್ಲದೆ, ತಳಸಮುದಾಯಗಳ ಅಸಲೀ ಸಂಸ್ಕೃತಿಯನ್ನು, ದಮನಿಸಲ್ಪಡುತ್ತಿರುವ ಭಾಷೆ-ಧರ್ಮಗಳ ಪ್ರತಿರೋಧದ ದನಿಗಳನ್ನು ಸಮಾಜದ ಎಲ್ಲ ಸ್ತರಗಳ ಯುವಜನರೂ ಒಗ್ಗೂಡಿ ಅಭಿವ್ಯಕ್ತಿಸುವ ಮತ್ತು ಸಂಭ್ರಮಿಸುವ ವಿಶಿಷ್ಟ ಹಬ್ಬವಾಗಿದೆ ಎಂದು ಅವರು ತಿಳಿಸಿದ್ದಾರೆ.

ಫ್ಯಾಸಿಸ್ಟ್‌ ಶಕ್ತಿಗಳು ತಮ್ಮ ರಾಜಕೀಯ ಹಿತಾಸಕ್ತಿಗಾಗಿ ಸಮಾಜವನ್ನು ಜಾತಿ-ಧರ್ಮಗಳಾಗಿ ಒಡೆದು, ಸಹಬಾಳ್ವೆಯ ತತ್ವಗಳನ್ನು ಕಳಚಿ ದ್ವೇಷ ಭಿತ್ತುವ ಮೂಲಕ ಬಹುಜನರ ವಿರೋಧಿ ಸಾಂಸ್ಕೃತಿಕ ರಾಜಕಾರಣವನ್ನು ಹೇರಲು ಪ್ರಯತ್ನಿಸುತ್ತಿದ್ದಾರೆ. ಬಹುತ್ವದ ತಾತ್ವಿಕತೆಯ ಬದಲು ಏಕರೂಪ ನಿರಂಕುಶತೆಯನ್ನೂ, ನೆಲಮೂಲದ ಸಂಸ್ಕೃತಿಯ ಬದಲು ಆಳುವವರ ಸಂಸ್ಕೃತಿಯನ್ನೂ ಜನರ ಬುದ್ಧಿಯೊಳಕ್ಕೆ ತೂರಿಸುತ್ತಿರುವ ಈ ಸಂದರ್ಭದಲ್ಲಿ ಬಹುಜನರ ಸಂಸ್ಕೃತಿಯನ್ನೂ-ಸಹಬಾಳ್ವೆಯ ತತ್ವವನ್ನು ಸಾಗುವ ಅಗತ್ಯವಿದೆ ಎಂದು ಅವರು ಹೇಳಿದ್ದಾರೆ.

ಕಾರ್ಯಕ್ರಮದಲ್ಲಿ ತಮಟೆ, ನಗಾರಿ, ಮೊಹರಂ ಅಲೈ ಕುಣಿತ ಸೇರಿದಂತೆ ವಿವಿಧ ವಾದ್ಯಗಳು, ರಾಜ್ಯದ ವಿವಿಧ ಪ್ರದೇಶಗಳ ವಿಶಿಷ್ಟ ಜನಪದ ಸಾಂಸ್ಕೃತಿ ಪ್ರಕಾರಗಳು, ತಳಸಮುದಾಯಗಳ ನೆಲಮೂಲದ ಹಾಡು-ಕುಣಿತ, ಸೌಹಾರ್ದತೆಯ ತತ್ವಗಳನ್ನು ಸಾರುವ ಹಾಡು, ಕವಿತೆ ನಾಟಕಗಳು ಪ್ರದರ್ಶನವಾಗಲಿವೆ.

ಕಾರ್ಯಕ್ರಮದಲ್ಲಿ ಖ್ಯಾತ ಗಾಯಕಿ ಎಂ.ಡಿ ಪಲ್ಲವಿ, ಯುವ ನಿರ್ದೇಶಕ ಮಂಸೋರೆ, ಸಾಹಿತಿ-ನಿರ್ದೇಶಕ ಯೋಗೇಶ್‌ ಮಾಸ್ಟರ್‌, ನಿರ್ದೇಶಕ ಬಿ.ಎಂ.ಗಿರಿರಾಜ್, ಯುವ ಗಾಯಕ ಚಿಂತನ್ ವಿಕಾಶ್, ಚಿಂತಕರಾದ ಜಾಪರ್ ಮೊಹಿಯುದ್ದೀನ್, ಜನಪ್ರಿಯ ಕಲಾವಿದ ಜಂಬೆ ಬಾಲು, ಗಾಯಕ ನಾದ ಮಣಿನಾಲ್ಕೂರು, ಗಾಯಕ ವಾಸು ದೀಕ್ಷಿತ್‌, ಕಲಾವಿದರಾದ ಹ.ರಾ.ಮಹೇಶ್‌, ಕವಯಿತ್ರಿ ಉಮಾ, ಯುವ ಕಲಾವಿದೆ ಸೌಮಿನಿ, ಕಲಾವಿದ ಸೌರಪಲ್ಲಿ ಚಂದ್ರು ಸೇರಿದಂತೆ ವಿವಿಧ ಕಲಾವಿದರು ಭಾಗಿಯಾಗಲಿದ್ದಾರೆ.

ಕಾರ್ಯಕ್ರಮವು ಡಿ.29ರ ಬುಧವಾರ ಬೆಳಗ್ಗೆ 10-30ರಿಂದ ಆರಂಭವಾಗಲಿದೆ. ಮಾಗಡಿ ರಸ್ತೆಯಲ್ಲಿರುವ ಅಂಜನಾನಗರದ ಬಳಿಯ ಸ್ಫೂರ್ತಿಧಾಮದ ವಿಶಾಲ ಸಾಂಸ್ಕೃತಿಕ ವಾತವಾರಣದಲ್ಲಿ ನೆಲಪ ಪದ ಮೇಳೈಸಲಿದೆ.


ಇದನ್ನೂ ಓದಿ: ಕುವೆಂಪು ಅವರ ಜನುಮದಿನದಂದು ‘ಕೊಲುವೆನೆಂಬ ಭಾಶೆ’ ಕೃತಿ ಬಿಡುಗಡೆ; ಸಂವಾದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...