Homeಮುಖಪುಟಎನ್‌ಇಪಿ 2020ಯನ್ನು 'ಸಂಕುಚಿತ ದೃಷ್ಟಿಕೋನ'ದಿಂದ ನೋಡದಿರಿ - ತಮಿಳುನಾಡು ಸಿಎಂಗೆ ಕೇಂದ್ರ ಶಿಕ್ಷಣ ಸಚಿವ

ಎನ್‌ಇಪಿ 2020ಯನ್ನು ‘ಸಂಕುಚಿತ ದೃಷ್ಟಿಕೋನ’ದಿಂದ ನೋಡದಿರಿ – ತಮಿಳುನಾಡು ಸಿಎಂಗೆ ಕೇಂದ್ರ ಶಿಕ್ಷಣ ಸಚಿವ

- Advertisement -
- Advertisement -

2020ರ ರಾಷ್ಟ್ರೀಯ ಶಿಕ್ಷಣ ನೀತಿ(ಎನ್‌ಇಪಿ)ಯನ್ನು “ಸಂಕುಚಿತ ದೃಷ್ಟಿಕೋನ”ದಿಂದ ನೋಡುವುದು ಸೂಕ್ತವಲ್ಲ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಶುಕ್ರವಾರ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರಿಗೆ ತಿಳಿಸಿದ್ದಾರೆ. ಎನ್‌ಇಪಿ ಯಾವುದೇ ಭಾಷೆಯನ್ನು ಹೇರುವುದಿಲ್ಲ, ತಮಿಳುನಾಡು ಸರ್ಕಾರ ಅದನ್ನು ಬೆದರಿಕೆ ಎಂಬಂತೆ ಬಿಂಬಿಸಬಾರದು ಎಂದು ಅವರು ಕೇಳಿಕೊಂಡಿದ್ದಾರೆ. ಎನ್‌ಇಪಿ 2020ಯನ್ನು

ದ್ರಾವಿಡ ಮುನ್ನೇತ್ರ ಕಳಗಂ ಮುಖ್ಯಸ್ಥರೂ ಆಗಿರುವ ಸ್ಟಾಲಿನ್ ಅವರಿಗೆ ಸಚಿವ ಧರ್ಮೇಂದ್ರ ಅವರು ಬರೆದ ಪತ್ರದಲ್ಲಿ, ರಾಷ್ಟ್ರೀಯ ಶಿಕ್ಷಣ ನೀತಿಯು ಯಾವುದೇ ಭಾಷೆಯನ್ನು ಹೇರುವುದನ್ನು ಪ್ರತಿಪಾದಿಸುವುದಿಲ್ಲ ಎಂದು ಹೇಳಿದ್ದಾರೆ. ಬಿಜೆಪಿ ಸರ್ಕಾರಗಳಿಲ್ಲದ ಹಲವಾರು ರಾಜ್ಯಗಳು ರಾಜಕೀಯ ಭಿನ್ನಾಭಿಪ್ರಾಯಗಳ ಹೊರತಾಗಿಯೂ ಅದನ್ನು ಜಾರಿಗೆ ತಂದಿವೆ ಎಂದು ಅವರು ಹೇಳಿದ್ದಾರೆ.

ರಾಷ್ಟ್ರೀಯ ಶಿಕ್ಷಣ ನೀತಿಯ ಅನುಷ್ಠಾನಕ್ಕೆ ಸಂಬಂಧಿಸದೆ ‘ಸಮಗ್ರ ಶಿಕ್ಷಾ ಯೋಜನೆ’ಯಡಿ ತಮಿಳುನಾಡಿಗೆ ಬಿಡುಗಡೆಯಾದ 2,152 ಕೋಟಿ ರೂ.ಗಳ ಬಾಕಿ ಹಣವನ್ನು ಪಡೆಯುವಲ್ಲಿ ಮಧ್ಯಪ್ರವೇಶಿಸುವಂತೆ ಕೋರಿ ಸಿಎಂ ಸ್ಟಾಲಿನ್ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದ ಒಂದು ದಿನದ ನಂತರ ಕೇಂದ್ರ ಸಚಿವ ಧರ್ಮೇಂದ್ರ ಈ ಪತ್ರ ಬರೆದಿದ್ದಾರೆ.

2018 ರಲ್ಲಿ ಜಾರಿಗೆ ತರಲಾದ ಸಮಗ್ರ ಶಿಕ್ಷಾ ಯೋಜನೆಯು ಕೇಂದ್ರ ಸರ್ಕಾರ ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲಾ ಶಿಕ್ಷಣಕ್ಕೆ ಬೆಂಬಲ ನೀಡುವ ಯೋಜನೆಯಾಗಿದೆ. ಎನ್‌ಇಪಿ 2020ಯನ್ನು

ತಾನು ಆದೇಶಿಸಿದ ಕಾರ್ಯಕ್ರಮಗಳನ್ನು ಅಳವಡಿಸಿಕೊಳ್ಳಲು ರಾಜ್ಯಗಳನ್ನು ಒತ್ತಾಯಿಸುವ ತಂತ್ರವಾಗಿ ಕೇಂದ್ರ ಸರ್ಕಾರವು ಹಣವನ್ನು ತಡೆಹಿಡಿಯುತ್ತಿದೆ ಎಂದು ಸ್ಟಾಲಿನ್ ಆರೋಪಿಸಿದ್ದಾರೆ. ತಮಿಳುನಾಡು ರಾಜ್ಯವು ಎರಡು ಭಾಷಾ ನೀತಿಯನ್ನು ಹೊಂದಿದ್ದು, ಅದರ ಅಡಿಯಲ್ಲಿ ವಿದ್ಯಾರ್ಥಿಗಳಿಗೆ ಇಂಗ್ಲಿಷ್ ಮತ್ತು ತಮಿಳು ಭಾಷೆಯನ್ನು ಕಲಿಸುವುದನ್ನು ಒಳಗೊಂಡಿತ್ತು ಎಂದು ಅವರು ಹೇಳಿದ್ದಾರೆ.

ತಮಿಳುನಾಡಿನ ರಾಜಕೀಯ ಪಕ್ಷಗಳು ಹಿಂದಿಯನ್ನು ಮೂರನೇ ಭಾಷೆಯಾಗಿ ಹೇರುವ ಪ್ರಯತ್ನಗಳನ್ನು ಬಹಳ ಹಿಂದಿನಿಂದಲೂ ವಿರೋಧಿಸುತ್ತಿವೆ.

ತಮಿಳುನಾಡು ಸರ್ಕಾರವು ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಸಂಪೂರ್ಣವಾಗಿ ಜಾರಿಗೆ ತರುವವರೆಗೆ ಮತ್ತು ತ್ರಿಭಾಷಾ ನೀತಿಯನ್ನು ಅಳವಡಿಸಿಕೊಳ್ಳುವವರೆಗೆ ಸಮಗ್ರ ಶಿಕ್ಷಾ ಅಡಿಯಲ್ಲಿ ಹಣವನ್ನು ಬಿಡುಗಡೆ ಮಾಡುವುದಿಲ್ಲ  ಎಂದು ಧರ್ಮೇಂದ್ರ ಪ್ರಧಾನ್ ಅವರು ಈ ಹಿಂದೆ ಮಾಡಿದ್ದ ಹೇಳಿಕೆಗಳಿಗೆ ಸ್ಟಾಲಿನ್ ಪ್ರತಿಕ್ರಿಯಿಸುತ್ತಿದ್ದರು.

ತ್ರಿಭಾಷಾ ನೀತಿಯು ವಿದ್ಯಾರ್ಥಿಗಳಿಗೆ ಇಂಗ್ಲಿಷ್, ಹಿಂದಿ ಮತ್ತು ರಾಜ್ಯದ ಸ್ಥಳೀಯ ಭಾಷೆಯನ್ನು ಕಲಿಸುವುದನ್ನು ಸೂಚಿಸುತ್ತದೆ.

ಶುಕ್ರವಾರ ಸಿಎಂ ಸ್ಟಾಲಿನ್ ಅವರಿಗೆ ಧರ್ಮೇಂದ್ರ ಪ್ರಧಾನ್ ಬರೆದ ಪತ್ರದಲ್ಲಿ, ತಮಿಳುನಾಡು ಯಾವಾಗಲೂ ಸಾಮಾಜಿಕ ಮತ್ತು ಶೈಕ್ಷಣಿಕ ಪ್ರಗತಿಯ ಜ್ಯೋತಿಯಾಗಿದ್ದು, ದೇಶದಲ್ಲಿ ಕೆಲವು ಅತ್ಯಂತ ಪರಿವರ್ತನಾತ್ಮಕ ಸುಧಾರಣೆಗಳಲ್ಲಿ ಪ್ರವರ್ತಕವಾಗಿದೆ ಎಂದು ಹೇಳಿದ್ದಾರೆ.

“ಆದಾಗ್ಯೂ, ರಾಜಕೀಯ ಕಾರಣಗಳಿಗಾಗಿ NEP 2020 [ರಾಷ್ಟ್ರೀಯ ಶಿಕ್ಷಣ ನೀತಿ]ಯನ್ನು ನಿರಂತರ ವಿರೋಧಿಸುವುದು ತಮಿಳುನಾಡಿನ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಶಿಕ್ಷಣ ಸಂಸ್ಥೆಗಳನ್ನು ಈ ನೀತಿ ನೀಡುವ ಅಪಾರ ಅವಕಾಶಗಳು ಮತ್ತು ಸಂಪನ್ಮೂಲಗಳಿಂದ ವಂಚಿತಗೊಳಿಸುತ್ತದೆ” ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  121 ಜನರು ಬಲಿಯಾಗಿದ್ದ ಹತ್ರಾಸ್ ಕಾಲ್ತುಳಿತ ಪ್ರಕರಣದಲ್ಲಿ ಭೋಲೆ ಬಾಬಾಗೆ ಕ್ಲೀನ್ ಚಿಟ್ : ವರದಿ

121 ಜನರು ಬಲಿಯಾಗಿದ್ದ ಹತ್ರಾಸ್ ಕಾಲ್ತುಳಿತ ಪ್ರಕರಣದಲ್ಲಿ ಭೋಲೆ ಬಾಬಾಗೆ ಕ್ಲೀನ್ ಚಿಟ್ : ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕ, ಇಸ್ರೇಲ್, ಇರಾನ್ ದಾಳಿ-ಪ್ರತಿ ದಾಳಿ : ಈವರೆಗೆ ಕನಿಷ್ಠ 8 ಸಾವು

ಶನಿವಾರ (ಫೆ.28) ಇಸ್ರೇಲ್ ಮತ್ತು ಅಮೆರಿಕ ಜಂಟಿಯಾಗಿ ಇರಾನ್ ಮೇಲೆ ನಡೆಸಿದ ದಾಳಿ ಹಾಗೂ ಅದಕ್ಕೆ ಪ್ರತಿಯಾಗಿ ಇರಾನ್ ನಡೆಸಿದ ಪ್ರತಿ-ದಾಳಿಗಳಲ್ಲಿ ಹಲವು ಸಾವು-ನೋವುಗಳು ಸಂಭವಿಸಿದ ಬಗ್ಗೆ ವರದಿಯಾಗಿದೆ. ದಕ್ಷಿಣ ಇರಾನ್‌ನ ಮಿನಾಬ್‌ನಲ್ಲಿರುವ ಹೆಣ್ಣು...

ಮಧ್ಯಪ್ರಾಚ್ಯ ಉದ್ವಿಗ್ನ : ಯುಎಇ, ಬಹ್ರೇನ್‌, ಕತಾರ್, ಕುವೈತ್‌ನ ಅಮೆರಿಕ ಸೇನಾ ನೆಲೆಗಳ ಮೇಲೆ ಇರಾನ್ ಪ್ರತಿ ದಾಳಿ!

ಶನಿವಾರ (ಫೆ.28) ಇಸ್ರೇಲ್ ಮತ್ತು ಅಮೆರಿಕ ನಡೆಸಿದ ಜಂಟಿ ದಾಳಿಗೆ ಪ್ರತಿಯಾಗಿ, ಇರಾನ್ ಅಮೆರಿಕದ ಮಿಲಿಟರಿ ನೆಲೆಗಳಿರುವ ಹಲವು ಅರಬ್ ರಾಷ್ಟ್ರಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದೆ ಎಂದು ವರದಿಯಾಗಿದೆ. ಇರಾನ್ ಉಡಾಯಿಸಿದ ಬ್ಯಾಲಿಸ್ಟಿಕ್...

ರಾಜ್ಯಸಭೆಗೆ ಮೇನಕಾ ಗುರುಸ್ವಾಮಿ : ದೇಶದ ಮೊದಲ LGBTQ+ ಸಂಸದೆಯಾಗಲು ಅಣಿಯಾದ ಹಿರಿಯ ವಕೀಲೆ

ರಾಜ್ಯಸಭಾ ಚುನಾವಣೆಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಶುಕ್ರವಾರ (ಫೆ.27) ವಕೀಲೆ ಮೇನಕಾ ಗುರುಸ್ವಾಮಿ, ಪಶ್ಚಿಮ ಬಂಗಾಳದ ಮಾಜಿ ಪೊಲೀಸ್ ಮುಖ್ಯಸ್ಥ ರಾಜೀವ್ ಕುಮಾರ್, ರಾಜ್ಯ ಸಂಪುಟ ಸಚಿವ ಬಾಬುಲ್ ಸುಪ್ರಿಯೋ ಮತ್ತು ನಟಿ...

ದಾಳಿ ಮುಂದುವರಿಸುವ ಸೂಚನೆ ನೀಡಿದ ಟ್ರಂಪ್ : ಇರಾನ್‌ನಿಂದ ತೀವ್ರ ಪ್ರತಿದಾಳಿಯ ಎಚ್ಚರಿಕೆ

ಅಮೆರಿಕದ ಸಹಯೋಗದೊಂದಿಗೆ ಇಸ್ರೇಲ್ ಶನಿವಾರ (ಫೆ.28) ಇರಾನ್‌ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಇದರಿಂದ ಮಧ್ಯಪ್ರಾಚ್ಯದಲ್ಲಿ ಯುದ್ಧ ಪ್ರಾರಂಭವಾಗುವಾಗ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಇಸ್ರೇಲ್‌ ಇರಾನ್‌ನ ರಾಜಧಾನಿ ಟೆಹ್ರಾನ್‌ ಸೇರಿದಂತೆ ದೇಶದ ಹಲವು ಸ್ಥಳಗಳ...

ಅಮೆರಿಕ ಅಣತಿಯಂತೆ ಇರಾನ್ ಮೇಲೆ ಇಸ್ರೇಲ್ ದಾಳಿ : ಟೆಹ್ರಾನ್‌ನ ಹಲವೆಡೆ ಭಾರೀ ಸ್ಪೋಟ

ಇರಾನ್ ಮೇಲೆ ಇಸ್ರೇಲ್ ಶನಿವಾರ (ಫೆ.28) ವೈಮಾನಿಕ ದಾಳಿ ನಡೆಸಿರುವುದಾಗಿ ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಈ ದಾಳಿಯನ್ನು ಇಸ್ರೇಲ್ 'ಪೂರ್ವಭಾವಿ ದಾಳಿ' ಎಂದು ಕರೆದಿದೆ. ಇಂದು ಬೆಳಿಗ್ಗಿನ ಹೇಳಿಕೆಯೊಂದರಲ್ಲಿ, ಇಸ್ರೇಲ್ ರಕ್ಷಣಾ ಸಚಿವ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ನಟ ದಿಲೀಪ್, ಇತರರ ಖುಲಾಸೆ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ ಕೇರಳ ಸರ್ಕಾರ

ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ (2017ರ ಪ್ರಕರಣ) ಮಲಯಾಳಂನ ಪ್ರಮುಖ ನಟ ದಿಲೀಪ್ ಅವರನ್ನು ಎಲ್ಲಾ ಆರೋಪಗಳಿಂದ ಮುಕ್ತಗೊಳಿಸಿದ ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಕೇರಳ ಸರ್ಕಾರ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಪ್ರಕರಣದ...

‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ವಿಧಿಸಿದ್ದ ತಡೆಯಾಜ್ಞೆ ತೆರವು

'ದಿ ಕೇರಳ ಸ್ಟೋರಿ-2 : ಗೋಸ್ ಬಿಯಾಂಡ್' ಚಿತ್ರದ ಬಿಡುಗಡೆಗೆ ವಿಧಿಸಲಾಗಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಕೇರಳ ಹೈಕೋರ್ಟ್ ವಿಭಾಗೀಯ ಪೀಠ ಶುಕ್ರವಾರ (ಫೆ.27) ತೆರವುಗೊಳಿಸಿದೆ. 'ಕೋಮು ಸಾಮರಸ್ಯ ಕದಡುವ ಸಾಧ್ಯತೆ'ಯನ್ನು ಉಲ್ಲೇಖಿಸಿ ನ್ಯಾಯಮೂರ್ತಿ ಬೆಚು...

‘ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ; ಬಿಜೆಪಿ 10ಕ್ಕಿಂತ ಹೆಚ್ಚು ಸ್ಥಾನ ಗೆದ್ದರೆ ರಾಜಕೀಯ ತ್ಯಜಿಸುತ್ತೇನೆ’: ಕೇಜ್ರಿವಾಲ್ ಸವಾಲು

"ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ, ಬಿಜೆಪಿ ಹತ್ತಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆದ್ದರೆ ನಾನು ರಾಜಕೀಯ ತ್ಯಜಿಸುತ್ತೇನೆ" ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಆಮ್‌ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ....

ಚನ್ನರಾಯಪಟ್ಟಣ| ಭೂಸ್ವಾಧೀನ ವಿರುದ್ಧ ಗೆದ್ದ ರೈತರಿಂದ ‘ಭೂಮಿ ಹಬ್ಬ’ ಸಂಭ್ರಮ: ಹೋರಾಟದ ಒಡನಾಡಿಗಳಿಗೆ ಗೌರವ ಸಮರ್ಪಣೆ

ದೇವನಹಳ್ಳಿಯ ಚನ್ನರಾಯಪಟ್ಟಣದ ಹೋಬಳಿಯ 13 ಹಳ್ಳಿಗಳ 1,777 ಎಕರೆ ಕೃಷಿ ಭೂಮಿಯನ್ನು ಉಳಿಸಿಕೊಳ್ಳಲು ರೈತರು ನಡೆಸಿದ ಸುದೀರ್ಘ ನಾಲ್ಕು ವರ್ಷಗಳ ಸತ್ಯಾಗ್ರಹಕ್ಕೆ ಐತಿಹಾಸಿಕ ಜಯ ಲಭಿಸಿದ ಹಿನ್ನಲೆಯಲ್ಲಿ, ಭೂಸ್ವಾದೀನ ವಿರೋಧಿ ಹೋರಾಟ ಸಮಿತಿಯು...

ಅಬಕಾರಿ ಹಗರಣದಲ್ಲಿ ಕೇಜ್ರಿವಾಲ್ ಮತ್ತು ಇತರರು ಖುಲಾಸೆ: ದೆಹಲಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಸಿಬಿಐ

ಮದ್ಯ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರರನ್ನು ಖುಲಾಸೆಗೊಳಿಸಿದ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಿಬಿಐ ದೆಹಲಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದೆ ಎಂದು...