Homeಮುಖಪುಟಎನ್ಇಪಿ, ಕ್ಷೇತ್ರ ಪುನರ್ವಿಂಗಡನೆ, ವಕ್ಫ್‌ ಕುರಿತು ಚರ್ಚಿಸಲು ಕಾಂಗ್ರೆಸ್ ಸಂಸದೀಯ ಕಾರ್ಯತಂತ್ರ ಸಭೆ

ಎನ್ಇಪಿ, ಕ್ಷೇತ್ರ ಪುನರ್ವಿಂಗಡನೆ, ವಕ್ಫ್‌ ಕುರಿತು ಚರ್ಚಿಸಲು ಕಾಂಗ್ರೆಸ್ ಸಂಸದೀಯ ಕಾರ್ಯತಂತ್ರ ಸಭೆ

- Advertisement -
- Advertisement -

ಕೇಂದ್ರ ಸಂಸತ್ತಿನ ಅಧಿವೇಶನಕ್ಕೂ ಮುನ್ನ, ಕಾಂಗ್ರೆಸ್ ಸಂಸದೀಯ ಕಾರ್ಯತಂತ್ರ ಸಮಿತಿ ಸೋಮವಾರ ಸಂಜೆ ಸಭೆ ಸೇರಿ ಹೊಸ ಶಿಕ್ಷಣ ನೀತಿ (ಎನ್ಇಪಿ) ಮತ್ತು ಕ್ಷೇತ್ರ ಪುನರ್ವಿಂಗಡಣೆಯಂತಹ ಪ್ರಮುಖ ವಿಷಯಗಳ ಕುರಿತು ಪಕ್ಷದ ಕಾರ್ಯತಂತ್ರವನ್ನು ರೂಪಿಸಲಿದೆ. ಕ್ಷೇತ್ರ ಪುನರ್ವಿಂಗಡಣೆಯ ಕುರಿತು ಕಾಂಗ್ರೆಸ್ ನಾಯಕತ್ವವು ಸಮಿತಿಯನ್ನು ರಚಿಸಲಿದೆ ಎಂದು ಮೂಲಗಳು ತಿಳಿಸಿವೆ.

ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ಕಾಂಗ್ರೆಸ್ ಅಧ್ಯಕ್ಷ, ರಾಜ್ಯಸಭೆ ವಿರೋಧ ಪಕ್ಷದ ನಾಯಕ (ಎಲ್‌ಒಪಿ) ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ಉಭಯ ಸದನಗಳ ಇತರ ಹಿರಿಯ ನಾಯಕರು ಸಭೆಯಲ್ಲಿ ಭಾಗವಹಿಸಲಿದ್ದಾರೆ. ಎನ್ಇಪಿ

ಹಿಂದಿ ಹೇರಿಕೆ ಮತ್ತು ಕ್ಷೇತ್ರ ಪುನರ್ವಿಂಗಡಣೆಯ ಆರೋಪದ ಮೇಲೆ ತಮಿಳುನಾಡು ಸರ್ಕಾರ ಕೇಂದ್ರದೊಂದಿಗೆ ನಡೆಸುತ್ತಿರುವ ಸಂಘರ್ಷಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಎಚ್ಚರಿಕೆಯ ನಿಲುವನ್ನು ತೆಗೆದುಕೊಂಡಿದೆ. ಡಿಎಂಕೆ ಸಂಸತ್ತಿನಲ್ಲಿ ಈ ವಿಷಯವನ್ನು ಎತ್ತುವ ನಿರೀಕ್ಷೆಯಿರುವುದರಿಂದ, ತಮಿಳುನಾಡಿನಲ್ಲಿ ಅದರ ಮಿತ್ರ ಪಕ್ಷವಾದ ಕಾಂಗ್ರೆಸ್ ಸ್ಪಷ್ಟವಾದ ನಿಲುವನ್ನು ಅಳವಡಿಸಿಕೊಳ್ಳಬೇಕಾಗುತ್ತದೆ ಎಂದು ನಾಯಕರೊಬ್ಬರು ತಿಳಿಸಿದ್ದಾರೆ.

ಈ ಮಧ್ಯೆ, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ, ಪಂಜಾಬ್‌ನ ಭಗವಂತ್ ಮಾನ್, ಕೇರಳದ ಪಿಣರಾಯಿ ವಿಜಯನ್, ಕರ್ನಾಟಕದ ಸಿದ್ದರಾಮಯ್ಯ, ತೆಲಂಗಾಣದ ರೇವಂತ್ ರೆಡ್ಡಿ, ಆಂಧ್ರಪ್ರದೇಶದ ಚಂದ್ರಬಾಬು ನಾಯ್ಡು ಮತ್ತು ಈ ಪ್ರತಿಯೊಂದು ರಾಜ್ಯಗಳ ಇತರ ಹಿರಿಯ ನಾಯಕರು ಸೇರಿದಂತೆ ಏಳು ಮುಖ್ಯಮಂತ್ರಿಗಳಿಗೆ ಮಾರ್ಚ್ 22 ರಂದು ಚೆನ್ನೈನಲ್ಲಿ ಸಭೆ ಸೇರಿ “ಸಾಮೂಹಿಕ ಮಾರ್ಗವನ್ನು ರೂಪಿಸಲು” ಶುಕ್ರವಾರ ಪತ್ರ ಬರೆದಿದ್ದಾರೆ.

ತ್ರಿಭಾಷಾ ನೀತಿ ಮತ್ತು ಕ್ಷೆತ್ರ ಪುರ್ನವಿಂಗಡನೆಯ ಬಗ್ಗೆ ಕಾಂಗ್ರೆಸ್ ನಾಯಕತ್ವ ಇನ್ನೂ ತನ್ನ ನಿಲುವನ್ನು ಸ್ಪಷ್ಟಪಡಿಸದಿದ್ದರೂ, ಕಾಂಗ್ರೆಸ್ ಆಡಳಿತವಿರುವ ಕರ್ನಾಟಕ ಮತ್ತು ತೆಲಂಗಾಣ ಈ ಕ್ರಮವನ್ನು ವಿರೋಧಿಸಿವೆ ಎಂದು ಪಕ್ಷದ ನಾಯಕರು ಹೇಳಿದ್ದಾರೆ. ಆದಾಗ್ಯೂ, ಉತ್ತರ ಭಾರತದ ರಾಜ್ಯಗಳಲ್ಲಿ ಇಂಡಿಯಾ ಮೈತ್ರಿಕೂಟದ ಇತರ ಪಕ್ಷಗಳಿಂದ ಡಿಎಂಕೆ ಬೆಂಬಲ ಪಡೆಯುವ ಸಾಧ್ಯತೆಯಿಲ್ಲ.

ಬಜೆಟ್ ಅಧಿವೇಶನದಲ್ಲಿ ಕಾಂಗ್ರೆಸ್ ಎತ್ತಲು ಪ್ರಯತ್ನಿಸುತ್ತಿರುವ ಮತ್ತೊಂದು ವಿಷಯವೆಂದರೆ ಮತದಾರರ ಗುರುತಿನ ಚೀಟಿಗಳ ನಕಲು, ವಕ್ಫ್ (ತಿದ್ದುಪಡಿ) ಮಸೂದೆಯನ್ನು ವಿರೋಧಿಸುವುದು ಎಂದು ಮೂಲಗಳು ತಿಳಿಸಿವೆ.

‘ವಕ್ಫ್ ಮಸೂದೆಯನ್ನು ವಿರೋಧಿಸಿ’

ವಕ್ಫ್ (ತಿದ್ದುಪಡಿ) ಮಸೂದೆ ಸಂಸತ್ತಿನಲ್ಲಿ ಅಂಗೀಕಾರಕ್ಕೆ ಬಂದಾಗ ಅದನ್ನು ವಿರೋಧಿಸಲು ತಮ್ಮ ಪಕ್ಷವು “ಎಲ್ಲಾ ಪ್ರಜಾಪ್ರಭುತ್ವ ಮಾರ್ಗಗಳನ್ನು” ಅನುಸರಿಸುತ್ತದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ.

ಪ್ರಸ್ತಾವಿತ ಕಾನೂನಿನ “ವಿಷಯ, ಉದ್ದೇಶ ಮತ್ತು ವ್ಯಾಪ್ತಿ”ಗೆ ವಿರೋಧ ಪಕ್ಷಗಳ ಇಂಡಿಯಾ ಮೈತ್ರಿಯು ವಿರುದ್ಧವಾಗಿದೆ ಎಂದು ಅವರು ಹೇಳಿದ್ದಾರೆ. ಉಭಯ ಸದನಗಳಲ್ಲಿ ಮಸೂದೆಯನ್ನು ಜಂಟಿಯಾಗಿ ವಿರೋಧಿಸಲು ಇಂಡಿಯಾ ಮೈತ್ರಿ ಪಕ್ಷಗಳೊಂದಿಗೆ ಸಮಾಲೋಚನೆ ನಡೆಸಲಾಗುವುದು ಎಂದು ಜೈರಾಮ್‌ ರಮೇಶ್ ಹೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  550 ದಲಿತರಿಗೆ ಶಿವ ದೇಗುಲಕ್ಕೆ ಪ್ರವೇಶ ನಿರ್ಬಂಧ; ಕ್ರಮ ತೆಗೆದುಕೊಳ್ಳದ ಮಮತಾ ಬ್ಯಾನರ್ಜಿ ಸರ್ಕಾರ

550 ದಲಿತರಿಗೆ ಶಿವ ದೇಗುಲಕ್ಕೆ ಪ್ರವೇಶ ನಿರ್ಬಂಧ; ಕ್ರಮ ತೆಗೆದುಕೊಳ್ಳದ ಮಮತಾ ಬ್ಯಾನರ್ಜಿ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...