Homeಕರ್ನಾಟಕಎನ್‌‌ಇಪಿ: ಅವೈಜ್ಞಾನಿವಾಗಿ ಪಠ್ಯಕ್ರಮ ದಿಢೀರ್ ಬದಲು, ಮಹಾರಾಜ ವಿದ್ಯಾರ್ಥಿಗಳಿಂದ ಭಾರೀ ಪ್ರತಿಭಟನೆ

ಎನ್‌‌ಇಪಿ: ಅವೈಜ್ಞಾನಿವಾಗಿ ಪಠ್ಯಕ್ರಮ ದಿಢೀರ್ ಬದಲು, ಮಹಾರಾಜ ವಿದ್ಯಾರ್ಥಿಗಳಿಂದ ಭಾರೀ ಪ್ರತಿಭಟನೆ

- Advertisement -
- Advertisement -

ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಪರಿಚಯಿಸಲಾಗುತ್ತಿದೆ. ತರಗತಿಗಳು ಆರಂಭವಾಗಿ ಸುಮಾರು ಒಂದು ತಿಂಗಳ ಬಳಿಕ ಸರ್ಕಾರ ಎನ್‌ಇಪಿಯ ಪಠ್ಯಕ್ರಮವನ್ನು ಬದಲಾಯಿಸಿದೆ ಎಂದು ಮೈಸೂರು ಮಹಾರಾಜ ಕಾಲೇಜು ವಿದ್ಯಾರ್ಥಿಗಳು ಕಾಲೇಜು ಕ್ಯಾಂಪಸ್‌ನಲ್ಲಿ ಪ್ರತಿಭಟನೆ ನಡೆಸಿದರು.

ಆಲ್‌ ಇಂಡಿಯಾ ಡೆಮಾಕ್ರಟಿಕ್ ಸ್ಟುಡೆಂಟ್ ಆರ್ಗನೈಸೇಷನ್‌ (ಎಐಡಿಎಸ್‌ಒ) ನೇತೃತ್ವದಲ್ಲಿ ಕಾಲೇಜು ಕ್ಯಾಂಪಸ್‌ನಲ್ಲಿ ಸೇರಿದ ವಿದ್ಯಾರ್ಥಿಗಳು ಸರ್ಕಾರ ಹಾಗೂ ಮೈಸೂರು ವಿವಿಯ ನೂತನ ಸುತ್ತೋಲೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಏನಿದು ಹೊಸ ಸುತ್ತೋಲೆ? ವಿದ್ಯಾರ್ಥಿಗಳ ವಿರೋಧವೇಕೆ?

‘ಓಪನ್‌ ಎಲೆಕ್ಟಿವ್‌’ (ಮುಕ್ತ ಐಚ್ಛಿಕ) ವಿಷಯದ ಕುರಿತು ಮಾಡಿರುವ ಸುತ್ತೋಲೆ ಆತಂಕ ಸೃಷ್ಟಿಸಿದೆ. “ಕಲಾ ವಿದ್ಯಾರ್ಥಿಗಳು- ‘ಓಪನ್ ಎಲೆಕ್ಟಿವ್‌’ ವಿಷಯವನ್ನು ‘ವಾಣಿಜ್ಯ’ ಅಥವಾ ‘ವಿಜ್ಞಾನ’ ವಿಷಯಕ್ಕೆ ಸಂಬಂಧಿಸಿದಂತೆ ಆಯ್ಕೆ ಮಾಡಿಕೊಳ್ಳಬೇಕು. ವಾಣಿಜ್ಯ ವಿದ್ಯಾರ್ಥಿಗಳು- ಕಲಾ ಅಥವಾ ವಿಜ್ಞಾನ ವಿಷಯವನ್ನು ಆಯ್ಕೆ ಮಾಡಿಕೊಳ್ಳಬೇಕು. ವಿಜ್ಞಾನ ವಿದ್ಯಾರ್ಥಿಗಳು- ಕಲಾ ಅಥವಾ ವಾಣಿಜ್ಯ ವಿಷಯವನ್ನು ಆಯ್ಕೆ ಮಾಡಿಕೊಳ್ಳಬೇಕು” ಎಂದು ಸರ್ಕಾರ ಸೂಚಿಸಿದೆ. ಅದರನ್ವಯ ಮೈಸೂರು ವಿಶ್ವವಿದ್ಯಾನಿಲಯ ನೀಡಿರುವ ಹೊಸ ಸುತ್ತೋಲೆ ಹೊರಡಿಸಿದ್ದು, ವಿದ್ಯಾರ್ಥಿಗಳು ಆತಂಕ ಹೊರಹಾಕಿದ್ದಾರೆ.

ಇಲ್ಲಿಯವರೆಗೆ ವಿದ್ಯಾರ್ಥಿಗಳು ಬಹುಶಿಸ್ತೀಯ ಪಠ್ಯಕ್ರಮದಲ್ಲಿ ಅಧ್ಯಯನ ಮಾಡಿದವರಲ್ಲ. ಪಿಯುಸಿಯಲ್ಲಿ ಕಲಾ ವಿಷಯವೆಂದರೆ ಕಲಾ ವಿಷಯವನ್ನಷ್ಟೇ ಓದಿಕೊಂಡು ಬಂದಿದ್ದೇವೆ. ವಿಜ್ಞಾನ, ವಾಣಿಜ್ಯ ವಿಷಯದ ವಿದ್ಯಾರ್ಥಿಗಳೂ ತಮ್ಮ ಆಯ್ಕೆಗಳಿಗೆ ಸೀಮಿತವಾಗಿದ್ದಾರೆ. ಎನ್‌ಇಪಿಯಿಂದಾಗಿ ಏಕಾಏಕಿ ಬಹುಶಿಸ್ತೀಯ ಪಠ್ಯಕ್ರಮಕ್ಕೆ ಹೋಗಬೇಕಾಗಿದೆ. ವಾಣಿಜ್ಯ ಹಾಗೂ ಸೈನ್ಸ್ ವಿದ್ಯಾರ್ಥಿಗಳು ಸುಲಭವಾಗಿ ಆರ್ಟ್ಸ್ ತೆಗೆದುಕೊಂಡು ತಮ್ಮ ಅಂಕಗಳನ್ನು ಹೆಚ್ಚಿಸಿಕೊಳ್ಳಲು ಅವಕಾಶಗಳಿವೆ. ಆದರೆ ಕಲಾ ವಿದ್ಯಾರ್ಥಿಗಳು ವಿಜ್ಞಾನ ಅಥವಾ ವಾಣಿಜ್ಯ ವಿಷಯವನ್ನು ತೆಗೆದುಕೊಂಡು ಓದುವುದು ಕಷ್ಟವಾಗುತ್ತದೆ ಎಂಬುದು ಪ್ರತಿಭಟನೆಗೆ ಕಾರಣ.

ಎಐಡಿಎಸ್‌ಒ ಸಂಘಟನೆಯ ಉಪಾಧ್ಯಕ್ಷರಾದ ಆಸಿಯಾ ಮಾತನಾಡಿ, “ಐಚ್ಛಿಕ ವಿಷಯ ಎಂದರೆ ಏನು? ವಿದ್ಯಾರ್ಥಿಗಳು ಆಯ್ಕೆ ಮಾಡಿಕೊಳ್ಳುವಂತಹದ್ದು. ಓಪನ್ ಎಲೆಕ್ಟಿವ್‌ ಅಂದ ಮೇಲೆ ಇವರು ಕಡ್ಡಾಯವೆಂದು ಬೇರೆ ವಿಷಯ ತೆಗೆದುಕೊಳ್ಳಿ ಎನ್ನುವುದು ಸರಿಯೇ? ವಿದ್ಯಾರ್ಥಿಗಳಿಗೆ ಹೇಳೋದೊಂದು ಮಾಡೋದೊಂದು ಆಗುವುದಿಲ್ಲವೆ? ಇವರು ವಿದ್ಯಾರ್ಥಿಗಳ ಪರವೋ? ಪಾಲಿಸಿಗಳನ್ನು ಮಾಡುವುದಕ್ಕಾಗಿಯೇ ಬಂದಿದ್ದಾರೋ? ಇಂತಹ ಪಾಲಿಸಿಗಳನ್ನು ಏತಕ್ಕಾಗಿ ತರುತ್ತಿದ್ದಾರೆ ಎಂಬುದನ್ನು ಸ್ಪಷ್ಟಪಡಿಸಬೇಕು” ಎಂದು ಆಗ್ರಹಿಸಿದರು.

“ಬೆಳಿಗ್ಗೆಯಿಂದ ಪ್ರತಿಭಟನೆ ನಡೆಸಲಾಗುತ್ತಿದೆ. ವಿದ್ಯಾರ್ಥಿಗಳ ಸಮಸ್ಯೆಯನ್ನು ಕುಲಪತಿಯವರು ಕೇಳಲು ಬಂದಿಲ್ಲ. ವಿದ್ಯಾರ್ಥಿಗಳು ತರಗತಿ ಬಿಟ್ಟು ಕುಳಿತ್ತಿದ್ದಾರೆ. ವಿದ್ಯಾರ್ಥಿಗಳ ಪರ ಇರಬೇಕಾದ ಸರ್ಕಾರಗಳು, ಕುಲಪತಿಗಳು ಕಿವಿಮುಚ್ಚಿ ಕುಳಿತ್ತಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮಹಾರಾಜ ಕಾಲೇಜಿನ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಇದನ್ನೂ ಓದಿರಿ: ರಾಶ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) 2020: ಹಿಂದು-ಮುಂದು


ಸರ್ಕಾರದ ಸೂಚನೆಯನ್ವಯ ಮೈಸೂರು ವಿಶ್ವವಿದ್ಯಾನಿಲಯ ಸುತ್ತೋಲೆ ಹೊರಡಿಸಿರುವುದು…
ಮುಕ್ತ ಐಚ್ಛಿಕ (ಓಪನ್‌ ಎಲೆಕ್ಟಿವ್) ಸಂಬಂಧಿಸಿದಂತೆ ವಿವಿ ಹೊಸ ಪಠ್ಯಕ್ರಮಕ್ಕೆ ಸುತ್ತೋಲೆ ಹೊರಡಿಸಿರುವುದು.

ಓಪನ್‌ ಎಲೆಕ್ಟಿವ್‌ (ಮುಕ್ತ ಐಚ್ಛಿಕ) ವಿಷಯವು ವಿದ್ಯಾರ್ಥಿಗಳ ಆಯ್ಕೆಗೆ ಬಿಟ್ಟಿದ್ದು. ವಿದ್ಯಾರ್ಥಿಗಳೇ ಆಯ್ಕೆ ಮಾಡಿಕೊಳ್ಳಬೇಕಲ್ಲವೇ? ಆದರೆ ಸರ್ಕಾರ ಮುಕ್ತ ಐಚ್ಛಿಕ ವಿಷಯವನ್ನು ವಿದ್ಯಾರ್ಥಿಗಳ ಮೇಲೆ ಹೇರುತ್ತಿದೆ. ಮುಖ್ಯವಾಗಿ ಎನ್‌ಇಪಿ ಜಾರಿಯಾಗುತ್ತಿರುವುದು ಕೊರೊನಾದಿಂದಾಗಿ ಸುಮಾರು ಒಂದೂವರೆ ವರ್ಷ ಮನೆಯಲ್ಲಿದ್ದ ವಿದ್ಯಾರ್ಥಿಗಳ ಮೇಲೆ ಎಂಬುದು ತಜ್ಞರ ಅಭಿಪ್ರಾಯ.

ಎನ್‌ಇಪಿ ವಿದ್ಯಾರ್ಥಿ ಸ್ನೇಹಿ ಎಂಬುದಕ್ಕೆ ಅರ್ಥವಿಲ್ಲ. ಈಗಾಗಲೇ ಪ್ರವೇಶಾತಿ ಪಡೆದಿರುವ ವಿದ್ಯಾರ್ಥಿಗಳು ಐಚ್ಛಿಕ ವಿಷಯಗಳನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಕೆಲವು ಕಡೆ ಬಿ.ಎ. ವಿದ್ಯಾರ್ಥಿಗಳು ಬಿ.ಕಾಂ.ನಿಂದ ಓಪನ್ ಎಲೆಕ್ಟಿವ್‌ ಅಥವಾ ವಿಜ್ಞಾನದ ಓಪನ್ ಎಲೆಕ್ಟಿವ್ ತೆಗೆದುಕೊಂಡಿದ್ದಾರೆ. ಆದರೆ ಕಡ್ಡಾಯವಾಗಿ ತೆಗೆದುಕೊಳ್ಳಬೇಕೆಂಬ ಒತ್ತಾಯವಿರಲಿಲ್ಲ. ದುರಂತವೆಂದರೆ ಹೀಗೆ ಒತ್ತಾಯಪೂರ್ವಕವಾಗಿ ಹೇರಿದಾಗ ಹೈರಾಣುಗುತ್ತೇವೆ ಎಂಬುದು ತಜ್ಞರ ಆತಂಕ.

ಮಹಾರಾಜ ಕಾಲೇಜಿನ ವಿದ್ಯಾರ್ಥಿಗಳ ಜೊತೆಗೆ ಎಐಡಿಎಸ್‌ಒ ಜಿಲ್ಲಾಧ್ಯಕ್ಷ ಸುಭಾಷ್‌, ಉಪಾಧ್ಯಕ್ಷರಾದ ಆಸಿಯಾ, ಕಾರ್ಯದರ್ಶಿ ಚಂದ್ರಕಲಾ ಹಾಜರಿದ್ದರು.


ಇದನ್ನೂ ಓದಿರಿ: ಈ ಎನ್‌ಇಪಿ ಅಂದ್ರೆ ಏನು? ಅದರೊಳಗ ಏನೈತಿ, ಏನಿಲ್ಲ?


ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್‌ಕುಮಾರ್‌ ಹೇಳುವುದೇನು?

ಎನ್‌ಇಪಿ ಜಾರಿಯಲ್ಲಿ ಹೆಚ್ಚು ಧಾವಂತದಲ್ಲಿರುವ ವಿವಿಗಳಲ್ಲಿ ಮೈಸೂರು ವಿವಿಯೂ ಒಂದು. ಸರ್ಕಾರದ ಹೊಸ ನಿಯಮವನ್ನು ಜಾರಿಗೊಳಿಸುವಂತೆ ಮೈಸೂರು ವಿವಿ ಸುತ್ತೋಲೆ ಹೊರಡಿಸಿರುವ ಕುರಿತು ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯಿಸಿದ ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್‌ಕುಮಾರ್‌, “ಪ್ರಥಮ ವರ್ಷದ ಪ್ರವೇಶಾತಿ ಡಿ.2ರಂದು ಆರಂಭವಾಗಿದೆ. ಈವರೆಗೆ ಕಾಲೇಜುಗಳು ಆರಂಭವಾಗಿರಲಿಲ್ಲ. ಹೀಗಾಗಿ ಈ ಸುತ್ತೋಲೆಯಿಂದ ತೊಂದರೆಯಾಗದು” ಎಂದರು.

‘ಗ್ರಾಮಾಂತರ ವಿದ್ಯಾರ್ಥಿಗಳ ಕಷ್ಟಕ್ಕೆ ಪರಿಹಾರವೇನು?’ ಎಂದು ಕೇಳಿದಾಗ, “ಎಲ್ಲಿಲ್ಲಿ ಇದು ಜಾರಿಗೆ ಸಾಧ್ಯವಿಲ್ಲವೋ ಅಲ್ಲಿ ಬಿಟ್ಟುಬಿಡಿ ಎಂದು ಸರ್ಕಾರ ಹೇಳಿದೆ. ಆರ್ಟ್ಸ್‌ ಇರುವ ಕಡೆ ಕಾಮರ್ಸ್ ಇದ್ದೇ ಇರುತ್ತದೆ. ಕಾಮರ್ಸ್ ವಿದ್ಯಾರ್ಥಿಗಳು ಆರ್ಟ್ಸ್ ವಿಷಯವನ್ನು, ಆರ್ಟ್ಸ್ ವಿದ್ಯಾರ್ಥಿಗಳು ಕಾಮರ್ಸ್ ತೆಗೆದುಕೊಳ್ಳಬಹುದು. ಎನ್‌ಇಪಿಯ ಮುಖ್ಯ ಉದ್ದೇಶ ಬಹುಶಿಸ್ತೀಯ ಪಠ್ಯಕ್ರಮ. ಕಲಾ ವಿದ್ಯಾರ್ಥಿ ವಾಣಿಜ್ಯದ ಒಂದು ವಿಷಯವನ್ನು, ವಿಜ್ಞಾನದ ಒಂದು ವಿಷಯವನ್ನು ತೆಗೆದುಕೊಂಡರೆ ಕೌಶಲ ವೃದ್ಧಿಯಾಗುತ್ತದೆ” ಎಂದು ತಿಳಿಸಿದರು.

‘ವಿದ್ಯಾರ್ಥಿಗಳಿಗೆ ಕಷ್ಟವಾಗುವಂತೆ ಐಚ್ಛಿಕ ವಿಷಯವನ್ನು ಹೇರುವುದು ಸರಿಯೇ?’ ಎಂದು ಪ್ರಶ್ನಿಸಿದಾಗ, “ಐಚ್ಛಿಕ ವಿಷಯಗಳು ಕಷ್ಟವಾಗಿರುವುದಿಲ್ಲ. ಪ್ರಾಥಮಿಕ ವಿಷಯಗಳನ್ನಷ್ಟೇ ಪರಿಚಯಿಸಲಾಗುತ್ತದೆ. ಉದ್ಯೋಗ ಕೇಂದ್ರಿತ ವಿಷಯಕ್ಕೆ ಐಚ್ಛಿಕ ಆಯ್ಕೆ ಆದ್ಯತೆ ನೀಡುತ್ತದೆ” ಎಂದರು. ಐಚ್ಛಿಕ ವಿಷಯ ಕಷ್ಟವಾಗಿರುವುದಿಲ್ಲ ಆದರೆ ಉದ್ಯೋಗ ದೊರಕಿಸಿಕೊಡುತ್ತದೆ ಎಂಬುದು ಕುಲಪತಿಯವರ ಅಭಿಪ್ರಾಯ. ಆದರೆ ಬೋಧಕರ ಪ್ರಕಾರ, ಈ ಐಚ್ಛಿಕ ವಿಷಯಗಳು ವಿದ್ಯಾರ್ಥಿಗಳಿಗೆ ತಲೆಬಿಸಿಯಾಗುವಂತಿವೆ.

ಈ ವಿಚಾರವಾಗಿ ಮೈಸೂರು ವಿವಿ ಕುಲಪತಿಯವರು ಅರ್ಧಸತ್ಯಗಳನ್ನು ಹೇಳುತ್ತಿದ್ದಾರೆ ಎಂಬುದನ್ನು ‘ನಾನುಗೌರಿ.ಕಾಂ’ ವರದಿ ಮಾಡಿದೆ (ಪೂರ್ಣ ವಿವರಗಳಿಗೆ ‘ದಿಢೀರ್‌ ಪಠ್ಯ ಬದಲಾವಣೆ ಸುತ್ತೋಲೆ: ಎನ್‌ಇಪಿಯಿಂದ ವಿದ್ಯಾರ್ಥಿಗಳು ಹೈರಾಣು’ ವರದಿ ಓದಿರಿ)


ಇದನ್ನೂ ಓದಿರಿ: ದಿಢೀರ್‌ ಪಠ್ಯ ಬದಲಾವಣೆ ಸುತ್ತೋಲೆ: ಎನ್‌ಇಪಿಯಿಂದ ವಿದ್ಯಾರ್ಥಿಗಳು ಹೈರಾಣು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...