Homeಕರ್ನಾಟಕNEP ಎಂದರೆ ‘ನಾಗ್ಪುರ ಶಿಕ್ಷಣ ನೀತಿ’ - ಡಿ.ಕೆ. ಶಿವಕುಮಾರ್ ಆಕ್ರೋಶ

NEP ಎಂದರೆ ‘ನಾಗ್ಪುರ ಶಿಕ್ಷಣ ನೀತಿ’ – ಡಿ.ಕೆ. ಶಿವಕುಮಾರ್ ಆಕ್ರೋಶ

- Advertisement -
- Advertisement -

‘ಬಿಜೆಪಿ ಸರ್ಕಾರ ತರಾತುರಿಯಲ್ಲಿ ಜಾರಿಗೆ ತರಲು ಮುಂದಾಗಿರುವ NEP ರಾಷ್ಟ್ರೀಯ ಶಿಕ್ಷಣ ನೀತಿ ಅಲ್ಲ, ಅದು ನಾಗ್ಪುರ ಶಿಕ್ಷಣ ನೀತಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಂಸತ್ತಿನಲ್ಲಿ ಚರ್ಚೆ ಆಗದೇ ಇರುವ ನೀತಿಯನ್ನು ರಾಜ್ಯದಲ್ಲಿ ತರಾತುರಿಯಲ್ಲಿ ಜಾರಿಗೆ ತರಲು ಹೊರಟಿರುವುದರ ವಿರುದ್ಧ ಕಾಂಗ್ರೆಸ್ ಪಕ್ಷ ಹೋರಾಟ ಮಾಡಲಿದೆ. ನೀವು ಏನೇ ತಿಪ್ಪರಲಾಗ ಹಾಕಿದರೂ ವಿಧಾನಮಂಡಲ ಅಧಿವೇಶನದಲ್ಲಿ ಚರ್ಚೆಯಾಗದೇ ಇದನ್ನು ಜಾರಿಗೊಳಿಸಲು ಅವಕಾಶ ನೀಡುವುದಿಲ್ಲ ಎಂದು ಅವರು ಹೇಳಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಶನಿವಾರ ಜಿಲ್ಲಾವಾರು ಮುಖಂಡರ ಸಭೆ ನಡೆಸಿದ ಶಿವಕುಮಾರ್ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ರಾಷ್ಟ್ರೀಯ ಶಿಕ್ಷಣ ನೀತಿ ವಿಚಾರವಾಗಿ ಪಕ್ಷದ ನಿಲುವು ಹಾಗೂ ಪಕ್ಷದ ಸಂಘಟನೆ ಬಗ್ಗೆ ಮಾಹಿತಿ ನೀಡಿದರು. “ರಾಷ್ಟ್ರೀಯ ಶಿಕ್ಷಣ ನೀತಿ ಎಂದರೆ ಅದರ ಬಗ್ಗೆ ರಾಷ್ಟ್ರಾದ್ಯಂತ ವ್ಯಾಪಕ ಚರ್ಚೆ ಆಗಬೇಕು. ಸಂಸತ್ತು, ವಿಧಾನಸಭೆ, ವಿಧಾನ ಪರಿಷತ್ ನಲ್ಲಿ ಚರ್ಚಿಸಬೇಕು. ಆದರೆ ಅದ್ಯಾವುದು ನಡೆದಿಲ್ಲ. ಸದನ ಸಮಿತಿ ರಚಿಸಿ, ರಾಜ್ಯದುದ್ದಗಲಕ್ಕೂ ಜನರ ಜತೆ ಚರ್ಚಿಸಿ, ಅಭಿಪ್ರಾಯ ಪಡೆಯುವವರೆಗೂ ರಾಜ್ಯದಲ್ಲಿ ಇದರ ಜಾರಿಗೆ ನಾವು ಅವಕಾಶ ನೀಡುವುದಿಲ್ಲ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸುದ್ದಿಯಲ್ಲಿರಬೇಕು ಎಂಬ ಕಾರಣಕ್ಕೆ ಹುಚ್ಚರು ಕಾಂಗ್ರೆಸ್ ನಾಯಕರ ಬಗ್ಗೆ ಮಾತನಾಡುತ್ತಾರೆ: ಡಿ.ಕೆ. ಶಿವಕುಮಾರ್

“ನಾನು ಕೂಡ ಶಿಕ್ಷಣ ಕ್ಷೇತ್ರದಲ್ಲಿ ಬಹಳ ಆಸಕ್ತಿ ಹೊಂದಿದ್ದು, ವಿದ್ಯಾಸಂಸ್ಥೆಗಳನ್ನು ನಡೆಸುತ್ತಾ ಬಂದಿದ್ದೇನೆ. ಹಲವು ಶಿಕ್ಷಣ ಸಂಸ್ಥೆಗಳಲ್ಲಿ ಟ್ರಸ್ಟಿಯಾಗಿದ್ದೇನೆ. ಈ ನೂತನ ಶಿಕ್ಷಣ ನೀತಿ ಏನು, ಅದರಿಂದ ಆಗುವ ಪ್ರಯೋಜನೆಗಳೇನು? ಎಂಬುದನ್ನು ಅರ್ಥ ಮಾಡಿಕೊಳ್ಳಲು ನನ್ನಿಂದಲೇ ಸಾಧ್ಯವಾಗುತ್ತಿಲ್ಲ. ಇದನ್ನು ಅರ್ಥ ಮಾಡಿಕೊಳ್ಳಲು ಹಲವು ಬಾರಿ ವಿದ್ಯಾರ್ಥಿಗಳು, ಶಿಕ್ಷಕರು, ತಜ್ಞರ ಜತೆ ಚರ್ಚೆ ಮಾಡಿ ಪ್ರಯತ್ನಪಟ್ಟರೂ ಇದರ ಒಳಗುಟ್ಟು ಏನು ಎಂಬುದೇ ಅರ್ಥವಾಗುತ್ತಿಲ್ಲ. ರಾಜ್ಯ ಬಿಜೆಪಿ ಸರ್ಕಾರ ಯಾಕಿಷ್ಟು ಆತುರದಲ್ಲಿ ಇದನ್ನು ಜಾರಿ ತರಲು ಮುಂದಾಗಿದೆಯೋ ತಿಳಿಯುತ್ತಿಲ್ಲ” ಎಂದು ಸಂಶಯ ವ್ಯಕ್ತಪಡಿಸಿದರು.

“ಶಿಕ್ಷಕರು ಇಲ್ಲ, ವಿದ್ಯಾರ್ಥಿಗಳು ಶಾಲೆ ಸೇರಲು ಸಾಧ್ಯವಾಗಿಲ್ಲ. ಇಂಥ ಪರಿಸ್ಥಿತಿಯಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಪಟ್ಟ ಯಾರ ಜತೆಗೂ ಸರ್ಕಾರ ಈ ನೂತನ ಶಿಕ್ಷಣ ನೀತಿ ಬಗ್ಗೆ ಚರ್ಚೆ ಮಾಡಿಲ್ಲ. ಸಂಸತ್ತಿನಿಂದ ಹಿಡಿದು, ವಿಧಾನ ಮಂಡಲದ ಉಭಯ ಸದನಗಳವರೆಗೂ ಎಲ್ಲೂ ಚರ್ಚೆ ಆಗಿಲ್ಲ” ಎಂದು ಅವರು ಹೇಳಿದ್ದಾರೆ.

“ಶಿಕ್ಷಣ ರಾಜ್ಯಗಳಿಗೆ ಸಂಬಂಧಿಸಿದ ವಿಚಾರ. ರಾಷ್ಟ್ರ ಮಟ್ಟದಲ್ಲಿ ನೀತಿ ನಿರೂಪಿಸಬೇಕು ನಿಜ. ಆದರೆ ಅದರ ಬಗ್ಗೆ ಎಲ್ಲ ಕಡೆಗಳಲ್ಲೂ ವ್ಯಾಪಕ ಚರ್ಚೆ ಆಗಬೇಕಲ್ಲವೇ? ಚರ್ಚೆಯೇ ನಡೆಯದೇ, ಏಕಾಏಕಿ ಈ ನೀತಿ ಜಾರಿಗೊಳಿಸುತ್ತೇವೆ ಎಂದು ಶಿಕ್ಷಣ ಸಚಿವರು ಹೇಳಿಕೆ ನೀಡಿರುವುದರಿಂದ ಪೋಷಕರು, ಶಿಕ್ಷಕರು, ವಿದ್ಯಾರ್ಥಿಗಳು ಎಲ್ಲರೂ ಗಾಬರಿ ಬಿದ್ದಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ಈ ನೀತಿ ಬಗ್ಗೆ ವಿಧಾನಸಭೆ, ವಿಧಾನ ಪರಿಷತ್, ಶಿಕ್ಷಣ ಸಂಸ್ಥೆಗಳು, ಪೋಷಕರು, ಶಿಕ್ಷಕರ ಮಟ್ಟದಲ್ಲಿ ಸಂಪೂರ್ಣವಾಗಿ ಚರ್ಚೆಯಾಗುವವರೆಗೂ ಈ ನೀತಿ ಜಾರಿಯನ್ನು ತಡೆ ಹಿಡಿಯಬೇಕು. ಅಲ್ಲಿಯವರೆಗೂ ನಾವು ಕೂಡ ಇದನ್ನು ವಿರೋಧಿಸುತ್ತೇವೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ದೇಶಕ್ಕೆ ಸ್ವಾತಂತ್ರ್ಯ ಬಂದದ್ದೇ ಸಿ.ಟಿ. ರವಿ ಅವರಿಂದ: ಡಿ.ಕೆ. ಶಿವಕುಮಾರ್ ಲೇವಡಿ

“ಇದು ಮಕ್ಕಳು, ರಾಜ್ಯ, ದೇಶದ ಭವಿಷ್ಯದ ವಿಚಾರ. ಈ ನೀತಿಯಲ್ಲಿ ತ್ರಿಭಾಷಾ ಸೂತ್ರ ಪರಿಚಯಿಸುವ ಮೂಲಕ ಹಿಂಬಾಗಿಲಿನಿಂದ ಹಿಂದಿ ಭಾಷೆ ಹೇರಿಕೆಗೆ ಪ್ರಯತ್ನಿಸಲಾಗುತ್ತಿದೆ. ಈ ವಿಚಾರವಾಗಿ ಕನ್ನಡಪರ ಸಂಘಟನೆಗಳು ನನ್ನನ್ನು ಸಂಪರ್ಕಿಸುತ್ತಿದ್ದಾರೆ. ಇದೇ ನೀತಿಯನ್ನು ಬಿಜೆಪಿ ಸರ್ಕಾರ ಅಧಿಕಾರದಲ್ಲಿರುವ ಮಧ್ಯಪ್ರದೇಶ, ಉತ್ತರ ಪ್ರದೇಶ, ಗುಜರಾತ್ ನಲ್ಲಿ ಯಾಕೆ ಜಾರಿತರಲು ಪ್ರಯತ್ನಿಸುತ್ತಿಲ್ಲ. ಕೇರಳ ಹಾಗೂ ತಮಿಳುನಾಡಿನಲ್ಲಿ ಇದರ ವಿಚಾರದಲ್ಲಿ ಮಾತು ಕೂಡ ಆಡುವ ಸ್ಥಿತಿ ಇಲ್ಲ. ಮಾತನಾಡಿದರೆ, ಅಲ್ಲಿನ ಜನ ಬಡಿಯುತ್ತಾರೆ” ಎಂದು ಅವರು ಹೇಳಿದ್ದಾರೆ.

“ಶಿಕ್ಷಣ ಸಚಿವರಿಗೆ ಸಾಮಾನ್ಯ ಪ್ರಜ್ಞೆಯೇ ಇಲ್ಲ ಎಂದು ಕಾಣುತ್ತದೆ. ಮುಖ್ಯಮಂತ್ರಿಗಳು ಅವರದೇ ಜಂಜಾಟದಲ್ಲಿ ಮುಳುಗಿರಬೇಕು! ಹೀಗಾಗಿ ಸಭೆಗಳ ಮೇಲೆ ಸಭೆ ನಡೆಯುತ್ತಿದ್ದರೂ ಈ ಬಗ್ಗೆ ಅವರು ಗಮನ ಹರಿಸಿಲ್ಲ. ಈ ನೀತಿಯಲ್ಲಿ ವಿದ್ಯಾರ್ಥಿ ಪದವಿ ಅವಧಿಯಲ್ಲಿ ಎರಡು ಮೂರು ವಿಷಯಗಳನ್ನು ವಿದ್ಯಾಭ್ಯಾಸ ಮಾಡಬಹುದಂತೆ. ಇದು ಹೇಗೆ ಸಾಧ್ಯ? ಇದಕ್ಕೆ ಮೂಲಭೂತ ಸೌಕರ್ಯ ಕಲ್ಪಿಸಲಾಗಿದೆಯೇ? ಸರ್ಕಾರ ವಿದ್ಯಾರ್ಥಿಗಳಿಗೆ ಕಂಪ್ಯೂಟರ್, ಟ್ಯಾಬ್ ಒದಗಿಸಿದೆಯೇ? ಆನ್ಲೈನ್ ಶಿಕ್ಷಣಕ್ಕೆ ಒತ್ತು ನೀಡಲು ರಾಜ್ಯಾದ್ಯಂತ ಇಂಟರ್ ನೆಟ್ ವ್ಯವಸ್ಥೆ ಕಲ್ಪಿಸಿದೆಯೇ? ಈ ಶಿಕ್ಷಣ ನೀತಿ ಕೇವಲ ನಗರದ ವಿದ್ಯಾರ್ಥಿಗಳಿಗೆ ಅನುಕೂಲಕರವಾಗಿದೆಯೇ ಹೊರತು, ಗ್ರಾಮೀಣ ಪ್ರದೇಶದ ಮಕ್ಕಳಿಗೆ ಯಾವುದೇ ಲಾಭವಿಲ್ಲ, ಅನುಕೂಲವೂ ಇಲ್ಲ” ಎಂದು ಅವರು ತಿಳಿಸಿದ್ದಾರೆ.

“ನಮ್ಮಲ್ಲಿ ಎಲ್ಲ ವರ್ಗದ ಜನ ಆತಂಕಕ್ಕೆ ಒಳಗಾಗಿದ್ದು, ಈ ನೀತಿ ಜಾರಿಗೊಳಿಸುವುದನ್ನು ನಿಲ್ಲಿಸಬೇಕು. ಅಧಿವೇಶನದಲ್ಲಿ ಈ ಬಗ್ಗೆ ಚರ್ಚೆ ಮಾಡಬೇಕು ಎಂದು ಮುಖ್ಯಮಂತ್ರಿಗಳಿಗೆ ಆಗ್ರಹಿಸುತ್ತಿದ್ದೇನೆ. ಈ ವಿಚಾರವಾಗಿ ನಾವು ಶಿಕ್ಷಣ ತಜ್ಞರ ಜತೆ ಚರ್ಚೆ ಮಾಡಿ ಅಧಿವೇಶನದಲ್ಲಿ ನಮ್ಮ ಪಕ್ಷದ ಅಭಿಪ್ರಾಯ ಮಂಡಿಸುತ್ತೇವೆ” ಎಂದು ಶಿವಕುಮಾರ್‌ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ‘ಚಾಮರಾಜನಗರ ಆಕ್ಸಿಜನ್ ದುರಂತ’ದಲ್ಲಿ ಮೃತಪಟ್ಟವರಿಗೆ ಕೊರೊನಾ ಸಾವು ಮರಣಪ್ರಮಾಣ ಪತ್ರ ನೀಡದ ರಾಜ್ಯ ಸರ್ಕಾರ: ಡಿಕೆ ಶಿವಕುಮಾರ್‌‌ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಡಿ.ಕೆ.ಶಿ. ಅವರ ಅಭಿಪ್ರಾಯ ಸರಿಯಾಗಿದೆ. ಆದರೆ ಮನುವಾದಿಗಳು ಅಧಿಕಾರದಲ್ಲಿ ತಳವೂರಿರುವುದಕ್ಕೆ, ಕಾಂಗ್ರೆಸ್ ಆಡಳಿತದಲ್ಲಿನ ವೈಪಲ್ಯಗಳು ಸಹ ಕಾರಣ. ಮನುವಾದಿಗಳ ವಿರುದ್ದ ಕಾಂಗ್ರೆಸ್ ಎಲ್ಲಾ ವಿರೋಧ ಪಕ್ಷಗಳನ್ನು ಒಗ್ಗೂಡಿಸುವ ಕೆಲಸ ಮಾಡಬೇಕು. ಏಕಾಂಗಿ ಹೋರಾಟದಿಂದ ಮನುವಾದಿಗಳನ್ನು ಅಧಿಕಾರದಿಂದ ತೊಲಗಿಸುವುದು ಸಾದ್ಯವಿಲ್ಲ.

LEAVE A REPLY

Please enter your comment!
Please enter your name here

- Advertisment -

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...