Homeಮುಖಪುಟಎವರೆಸ್ಟ್, ಎಂಡಿಹೆಚ್ ಮಸಾಲೆ ಪದಾರ್ಥಗಳನ್ನು ನಿಷೇಧಿಸಿದ ನೇಪಾಳ

ಎವರೆಸ್ಟ್, ಎಂಡಿಹೆಚ್ ಮಸಾಲೆ ಪದಾರ್ಥಗಳನ್ನು ನಿಷೇಧಿಸಿದ ನೇಪಾಳ

- Advertisement -
- Advertisement -

ನೇಪಾಳದ ಆಹಾರ ತಂತ್ರಜ್ಞಾನ ಮತ್ತು ಗುಣಮಟ್ಟ ನಿಯಂತ್ರಣ ಇಲಾಖೆಯು ಎರಡು ಭಾರತೀಯ ಮಸಾಲೆ ಬ್ರಾಂಡ್‌ಗಳಾದ ಎವರೆಸ್ಟ್ ಮತ್ತು ಎಂಡಿಎಂಹೆಚ್‌ಗಳ ಆಮದು, ಬಳಕೆ ಮತ್ತು ಮಾರಾಟವನ್ನು ನಿಷೇಧಿಸಿದೆ. ಅಲ್ಲದೆ ಈ ಮಸಾಲೆಗಳಲ್ಲಿನ ಎಥಿಲೀನ್ ಆಕ್ಸೈಡ್ ಮಟ್ಟವನ್ನು ಪರೀಕ್ಷಿಸಲು ಪ್ರಾರಂಭಿಸಿದೆ ಎಂದು ವರದಿಯಾಗಿದೆ.

ಉತ್ಪನ್ನಗಳಲ್ಲಿ ಹೆಚ್ಚಿನ ಮಟ್ಟದ ಎಥಿಲೀನ್ ಆಕ್ಸೈಡ್ ಕುರುಹುಗಳ ಬಗ್ಗೆ ಸುದ್ದಿಯಾದ ನಂತರ ನೇಪಾಳ ಈ ಎರಡು ಮಸಾಲೆ ಬ್ರಾಂಡ್‌ಗಳನ್ನು ನಿಷೇಧಿಸಿದೆ.

ಎವರೆಸ್ಟ್ ಮತ್ತು ಎಂಡಿಹೆಚ್ ಬ್ರಾಂಡ್ ಮಸಾಲೆಗಳಲ್ಲಿ ಹಾನಿಕಾರಕ ರಾಸಾಯನಿಕಗಳ ಕುರುಹುಗಳ ಬಗ್ಗೆ ಸುದ್ದಿ ಬಂದ ನಂತರ ಒಂದು ವಾರದ ಹಿಂದೆ ಅವುಗಳ ಆಮದು ಮತ್ತು ಮಾರಾಟವನ್ನು ನಿಷೇಧಿಸಿದ್ದೇವೆ ಎಂದು ನೇಪಾಳದ ಆಹಾರ ತಂತ್ರಜ್ಞಾನ ಮತ್ತು ಗುಣಮಟ್ಟ ನಿಯಂತ್ರಣ ಇಲಾಖೆಯ ವಕ್ತಾರ ಮೋಹನ್ ಕೃಷ್ಣ ಮಹಾರ್ಜನ್ ಅವರು ಎಎನ್‌ಐಗೆ ದೂರವಾಣಿಯಲ್ಲಿ ಹೇಳಿದ್ದಾಗಿ ವರದಿಯಾಗಿದೆ.

“ಈ ಎರಡು ನಿರ್ದಿಷ್ಟ ಬ್ರಾಂಡ್‌ಗಳ ಮಸಾಲೆಗಳ ರಾಸಾಯನಿಕಗಳ ಪರೀಕ್ಷೆಗಳು ನಡೆಯುತ್ತಿವೆ. ಅಂತಿಮ ವರದಿ ಬರುವವರೆಗೆ ನಿಷೇಧವು ಜಾರಿಯಲ್ಲಿರುತ್ತದೆ. ಹಾಂಗ್ ಕಾಂಗ್ ಮತ್ತು ಸಿಂಗಾಪುರವು ಈಗಾಗಲೇ ಈ ಮಸಾಲೆಗಳನ್ನು ನಿಷೇಧಿಸಿವೆ” ಎಂದು ಮಹಾರ್ಜನ್ ಹೇಳಿದ್ದಾರೆ.

ಎಥಿಲೀನ್ ಆಕ್ಸೈಡ್ ಬಳಕೆಯನ್ನು ವಿವಿಧ ದೇಶಗಳಲ್ಲಿ ಶೇಕಡಾ 0.73 ರಿಂದ ಶೇಕಡಾ 7 ರವರೆಗೆ ಅನುಮತಿಸಲಾಗಿದೆ ಎಂದು ಭಾರತ ಸರ್ಕಾರದ ಮೂಲಗಳನ್ನು ಉಲ್ಲೇಖಿಸಿ ಎಎನ್‌ಐ ಹೇಳಿದೆ.

ಎವರೆಸ್ಟ್ ಮತ್ತು ಎಂಡಿಹೆಚ್‌ ಮಸಾಲೆಗಳನ್ನು ನ್ಯೂಜಿಲೆಂಡ್, ಅಮೆರಿಕ, ಆಸ್ಟ್ರೇಲಿಯಾ ದೇಶಗಳಲ್ಲಿಯೂ ಪರಿಶೀಲನೆಗೆ ಒಳಪಡಿಸಲಾಗುತ್ತಿದೆ. ಮಧ್ಯ ಪೂರ್ವ ದೇಶಗಳು ಸೇರಿ ಹಲವು ದೇಶಗಳಿಗೆ ಭಾರತ ಮೂಲದ ಎಂಡಿಹೆಚ್‌ ಹಾಗೂ ಎವರೆಸ್ಟ್ ಪದಾರ್ಥಗಳನ್ನು ರಫ್ತು ಮಾಡಲಾಗುತ್ತಿದೆ. ಕಳೆದ ಏಪ್ರಿಲ್‌ನಲ್ಲಿ ಹಾಂಕಾಂಗ್‌ ಹಾಗೂ ಸಿಂಗಾಪುರ ದೇಶಗಳು ಈ ಉತ್ಪನ್ನಗಳನ್ನು ನಿಷೇಧಿಸಿದ್ದವು.

ಇದನ್ನೂ ಓದಿ : ಸಿಎಎ ಅಡಿ ಪೌರತ್ವ ನೀಡಿದ ಕೇಂದ್ರ ಸರ್ಕಾರ: ಸುಪ್ರೀಂ ಮೆಟ್ಟಿಲೇರಲು ನಿರ್ಧರಿಸಿದ ಮುಸ್ಲಿಂ ಲೀಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. MDH _MDH_ EVEREST_ EVEREST_ Beliggeyadare saku garlic _ ginger_ paste_ capsicum chicken masala_ bari ivugaladde havali yava hotel foot path hotel galu mobile hotel galu noorarastu balasuvude e Colour chemical mixed masala powder annu kalaberake halasida satta koligalindige hagu matte matte kareda enneyalli siddapadisida beedi badiya ahara galannu thindu chikka vsyasinalle halavaru khayilegalige tuttagi sayuva janare jasti modalu Ella spices powder galannu ban maduvudu olitu

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ದೌರ್ಜನ್ಯ: ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ದೂರು ದಾಖಲು

ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿ ಗರ್ಭಪಾತ ಮಾಡಿಸಲು ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ ನಂತರ ಕೇರಳ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ...

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....