Homeಮುಖಪುಟನೇಪಾಳದಲ್ಲಿ ಸಲಿಂಗ ವಿವಾಹದ ಮೊದಲ ನೋಂದಣಿ

ನೇಪಾಳದಲ್ಲಿ ಸಲಿಂಗ ವಿವಾಹದ ಮೊದಲ ನೋಂದಣಿ

- Advertisement -
- Advertisement -

ನೇಪಾಳದ ಸುಪ್ರೀಂ ಕೋರ್ಟ್‌ ಸಲಿಂಗ ವಿವಾಹವನ್ನು ಕಾನೂನು ಬದ್ಧಗೊಳಿಸಿದ ಐದು ತಿಂಗಳ ಬಳಿಕ ಬುಧವಾರ ಮೊದಲ ಸಲಿಂಗ ವಿವಾಹ ನೋಂದಣಿಯಾಗಿದೆ. ಈ ಮೂಲಕ ನೇಪಾಳ ಸಲಿಂಗ ವಿವಾಹ ಅಧಿಕೃತಗೊಳಿಸಿದ ದಕ್ಷಿಣ ಏಷ್ಯಾದ ಮೊದಲ ದೇಶ ಎನಿಸಿಕೊಂಡಿದೆ.

ಲಿಂಗ ಪರಿವರ್ತಿತ ಮಹಿಳೆ ಮಾಯಾ ಗುರುಂಗ್ (35) ಮತ್ತು ಸುರೇಂದ್ರ ಪಾಂಡೆ (27) ಕಾನೂನುಬದ್ಧವಾಗಿ ವಿವಾಹವಾಗಿದ್ದಾರೆ. ನೇಪಾಳದ ಲಾಮ್‌ಜಂಗ್ ಜಿಲ್ಲೆಯ ಡೋರ್ಡಿ ಗ್ರಾಮೀಣ ಪುರಸಭೆಯಲ್ಲಿ ಈ ವಿಶೇಷ ವಿವಾಹ ನೋಂದಾಯಿಸಲಾಗಿದೆ ಎಂದು ನೇಪಾಳದಲ್ಲಿ ಲೈಂಗಿಕ ಅಲ್ಪಸಂಖ್ಯಾತರ ಹಕ್ಕುಗಳು ಮತ್ತು ಕಲ್ಯಾಣಕ್ಕಾಗಿ ಕೆಲಸ ಮಾಡುತ್ತಿರುವ ಬ್ಲೂ ಡೈಮಂಡ್ ಸೊಸೈಟಿಯ ಅಧ್ಯಕ್ಷ ಸಂಜಿಬ್ ಗುರುಂಗ್ (ಪಿಂಕಿ) ತಿಳಿಸಿದ್ದಾರೆ.

2007ರಲ್ಲಿ ನೇಪಾಳದ ಸುಪ್ರೀಂ ಕೋರ್ಟ್ ಸಲಿಂಗ ವಿವಾಹಕ್ಕೆ ಅನುಮತಿ ನೀಡಿತ್ತು. 2015 ರಲ್ಲಿ ಅಂಗೀಕರಿಸಲ್ಪಟ್ಟ ಕಾಯ್ದೆಯು ಲೈಂಗಿಕ ದೃಷ್ಟಿಕೋನದ ಆಧಾರದ ಮೇಲೆ ಯಾವುದೇ ತಾರತಮ್ಯ ಮಾಡುವಂತಿಲ್ಲ ಎಂದು ಸ್ಪಷ್ಟವಾಗಿ ಹೇಳುತ್ತದೆ.

ಜೂನ್ 27, 2023 ರಂದು, ಗುರುಂಗ್ ಸೇರಿದಂತೆ ಅನೇಕ ಜನರು ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿ ನೇಪಾಳದಲ್ಲಿ ಸಲಿಂಗ ವಿವಾಹವನ್ನು ಕಾನೂನುಬದ್ಧಗೊಳಿಸಲು ಸುಪ್ರೀಂ ಕೋರ್ಟ್ ಮಧ್ಯಂತರ ಆದೇಶವನ್ನು ನೀಡಿತ್ತು. ಆದರೆ ಸಲಿಂಗ ವಿವಾಹವನ್ನು ತಾತ್ಕಾಲಿಕವಾಗಿ ನೋಂದಾಯಿಸುವ ಐತಿಹಾಸಿಕ ಆದೇಶದ ಹೊರತಾಗಿಯೂ, ನಾಲ್ಕು ತಿಂಗಳ ಹಿಂದೆ ಕಠ್ಮಂಡು ಜಿಲ್ಲಾ ನ್ಯಾಯಾಲಯವು ಅಗತ್ಯ ಕಾನೂನುಗಳ ಕೊರತೆಯನ್ನು ಉಲ್ಲೇಖಿಸಿ ಈ ಕ್ರಮವನ್ನು ತಿರಸ್ಕರಿಸಿತ್ತು. ಆ ಸಮಯದಲ್ಲಿ ಸುರೇಂದ್ರ ಪಾಂಡೆ ಮತ್ತು ಮಾಯಾ ಅವರ ವಿವಾಹದ ಅರ್ಜಿಯನ್ನು ತಿರಸ್ಕರಿಸಲಾಗಿತ್ತು. ಆದರೆ, ಅವರು ಬುಧವಾರ ವಿವಾಹ ನೋಂದಾಯಿಸಿದ್ದಾರೆ.

” ಸಲಿಂಗ ವಿವಾಹದ ನೋಂದಣಿ ಬಗ್ಗೆ ತಿಳಿದು ತುಂಬಾ ಸಂತೋಷವಾಯಿತು. ಇದು ನೇಪಾಳದ ಲೈಂಗಿಕ ಅಲ್ಪಸಂಖ್ಯಾತ ಸಮುದಾಯದ ದೊಡ್ಡ ಸಾಧನೆ. ಇದು ನೇಪಾಳದಲ್ಲಿ ಮಾತ್ರವಲ್ಲದೆ ಇಡೀ ದಕ್ಷಿಣ ಏಷ್ಯಾದಲ್ಲೇ ಮೊದಲ ಪ್ರಕರಣವಾಗಿದೆ. ನಾವು ಈ ನಿರ್ಧಾರವನ್ನು ಸ್ವಾಗತಿಸುತ್ತೇವೆ” ಎಂದು ಲೈಂಗಿಕ ಅಲ್ಪಸಂಖ್ಯಾತರಾದ ಪಿಂಕಿ ಹೇಳಿದ್ದಾರೆ.

ಭಾರತದಲ್ಲಿ ಸಲಿಂಗ ವಿವಾಹಕ್ಕಿಲ್ಲ ಕಾನೂನು ಮಾನ್ಯತೆ :

ಭಾರತದ ಸುಪ್ರೀಂಕೋರ್ಟ್‌ ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ನೀಡಲು ನಿರಾಕರಿಸಿದೆ. 2023 ಅಕ್ಟೋಬರ್ 17ರಂದು ಈ ಸಂಬಂಧ ತೀರ್ಪು ನೀಡಿರುವ ಸುಪ್ರೀಂ ಕೋರ್ಟ್‌ನ ಸಂವಿಧಾನ ಪೀಠ, ಸಲಿಂಗ ವಿವಾಹಗಳಿಗೆ ಕಾನೂನು ಮಾನ್ಯತೆ ನೀಡಲಾಗುವುದಿಲ್ಲ. ಇದು ಶಾಸಕಾಂಗದ ವ್ಯಾಪ್ತಿಗೆ ಬರುತ್ತದೆ ಮತ್ತು ನ್ಯಾಯಾಲಯವು ಈ ವಿಚಾರದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದಿದೆ.

ನ್ಯಾಯಾಲಯದ ಈ ತೀರ್ಪು ಮರು ಪರಿಶೀಲಿಸುವಂತೆ ಕೋರಿರುವ ಅರ್ಜಿಯನ್ನು ನವೆಂಬರ್ 28ರಂದು ವಿಚಾರಣೆ ನಡೆಸುವುದಾಗಿ ಹೇಳಿತ್ತು. ಆದರೆ, ವಿಚಾರಣೆ ನಡೆಸಿದೆಯಾ? ಎಂಬ ಬಗ್ಗೆ ಮಾಹಿತಿ ದೊರೆತಿಲ್ಲ.

ಇದನ್ನೂ ಓದಿ :ಅಮೆರಿಕದಲ್ಲಿ ಪನ್ನುನ್ ಕೊಲೆಗೆ ಸಂಚು ಆರೋಪ: ತನಿಖೆಗೆ ಸಮಿತಿ ರಚಿಸಿದ ಭಾರತ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪಪುವಾ ನ್ಯೂಗಿನಿಯಾ ಭೂಕುಸಿತ: 670ಕ್ಕೂ ಹೆಚ್ಚು ಜನರು ಸಾವು

0
ಪಪುವಾ ನ್ಯೂಗಿನಿಯಾದಲ್ಲಿ ಸಂಭವಿಸಿದ ಭಾರೀ ಭೂಕುಸಿತದಿಂದ ಸಾವನ್ನಪ್ಪಿದವರ ಸಂಖ್ಯೆ 670ಕ್ಕೂ ಹೆಚ್ಚು ಎಂದು ವಿಶ್ವಸಂಸ್ಥೆಯ ವಲಸಿಗ ಸಂಸ್ಥೆ ಭಾನುವಾರ ಅಂದಾಜಿಸಿದೆ. ವಿಶ್ವಸಂಸ್ಥೆಯ ವಲಸಿಗ ಸಂಸ್ಥೆ ಯೋಜನೆಯ ಮುಖ್ಯಸ್ಥ ಸೆರಾನ್‌ ಅಕ್ಟೋಪ್ರಾಕ್‌, ಯಂಬಾಲಿ ಮತ್ತು ಎಂಗಾ...