Homeಅಂತರಾಷ್ಟ್ರೀಯನೇಪಾಳ ಪ್ರವಾಹ : 620 ದಾಟಿದ ಮೃತರ ಸಂಖ್ಯೆ; 3 ಸಾವಿರದಷ್ಟು ಜನರು ಇನ್ನೂ ನಾಪತ್ತೆ-ವರದಿ

ನೇಪಾಳ ಪ್ರವಾಹ : 620 ದಾಟಿದ ಮೃತರ ಸಂಖ್ಯೆ; 3 ಸಾವಿರದಷ್ಟು ಜನರು ಇನ್ನೂ ನಾಪತ್ತೆ-ವರದಿ

- Advertisement -
- Advertisement -

ನೇಪಾಳ-ಟಿಬೆಟ್ ಗಡಿ ಪ್ರದೇಶದಲ್ಲಿ ಉಂಟಾಗಿರುವ ಭೀಕರ ಪ್ರವಾಹದಿಂದಾಗಿ ಕನಿಷ್ಠ 616 ಜನರು ಸಾವನ್ನಪ್ಪಿದ್ದಾರೆ ಎಂದು ನೇಪಾಳ ಪೊಲೀಸರು ಶನಿವಾರ (ಆ.29) ತಿಳಿಸಿರುವುದಾಗಿ ಸುದ್ದಿ ಸಂಸ್ಥೆ ಎಎಫ್‌ಪಿ ವರದಿ ಮಾಡಿದೆ. ಶುಕ್ರವಾರ (ಆ.28) ಪೊಲೀಸರು ವರದಿ ಮಾಡಿದ್ದ 553 ಮರಣಗಳ ಸಂಖ್ಯೆಯು ಇದೀಗ ಮತ್ತಷ್ಟು ಏರಿಕೆಯಾಗಿದೆ.

ನೇಪಾಳದ ರಾಷ್ಟ್ರೀಯ ವಿಪತ್ತು ಅಪಾಯ ತಡೆ ಮತ್ತು ನಿರ್ವಹಣಾ ಪ್ರಾಧಿಕಾರವು ಎಕ್ಸ್‌ ಜಾಲತಾಣದಲ್ಲಿ ಹಂಚಿಕೊಂಡಿರುವ ಮಾಹಿತಿಯ ಪ್ರಕಾರ, ಭಾರತ, ಮಲೇಷ್ಯಾ, ಆಸ್ಟ್ರೇಲಿಯಾ ಮತ್ತು ಅಮೆರಿಕದಂತಹ ವಿವಿಧ ದೇಶಗಳ ನೂರಾರು ಪ್ರಜೆಗಳು ಸೇರಿ ಒಟ್ಟು 1,924 ಜನರು ಇನ್ನೂ ಪತ್ತೆಯಾಗಿಲ್ಲ. ಈ ಸಂಖ್ಯೆಯು ನಾಪತ್ತೆಯಾದವರ ಬಗ್ಗೆ ಈ ಹಿಂದೆ ನೀಡಲಾಗಿದ್ದ ಅಂದಾಜಿಗಿಂತ ದುಪ್ಪಟ್ಟಾಗಿದೆ.

ಚೀನಾದ ಸರ್ಕಾರಿ ಸ್ವಾಮ್ಯದ ಮಾಧ್ಯಮಗಳು ಏಳು ಜನರು ಸಾವನ್ನಪ್ಪಿರುವುದನ್ನು ಖಚಿತಪಡಿಸಿದ್ದು, ಇದರೊಂದಿಗೆ ಒಟ್ಟು ಮೃತರ ಸಂಖ್ಯೆ ಕನಿಷ್ಠ 623ಕ್ಕೆ ಏರಿಕೆಯಾಗಿದೆ ಎಂದು ಕೆಲ ಮಾಧ್ಯಮ ವರದಿಗಳು ಹೇಳಿವೆ. ಚೀನಾ ಭಾಗದಲ್ಲಿ 554 ಜನರು ನಾಪತ್ತೆಯಾಗಿದ್ದಾರೆ ಎಂದು ವರದಿಗಳು ತಿಳಿಸಿವೆ.

ಈ ನಡುವೆ ತುರ್ತು ರಕ್ಷಣಾ ತಂಡಗಳು 623 ಶವಗಳನ್ನು ಹೊರತೆಗೆದಿದ್ದು, ಮೃತರಲ್ಲಿ ಕೆಲವು ಜನರು ನದಿಯ ಹರಿವಿಗೆ ಭಾರತದವರೆಗೆ ಕೊಚ್ಚಿಹೋಗಿರುವ ಸಾಧ್ಯತೆಯಿದೆ ಎಂದು ಎಎಫ್‌ಪಿ ವರದಿ ಹೇಳಿದೆ. ಇದರಿಂದಾಗಿ ಶುಕ್ರವಾರದ ವೇಳೆಗೆ ನಾಪತ್ತೆಯಾದವರ ಸಂಖ್ಯೆ 2,400ಕ್ಕೂ ಅಧಿಕವಾಗಿದೆ ಎಂದು ಹೇಳಲಾಗಿದೆ. ಮತ್ತೊಂದೆಡೆ, ನೇಪಾಳದಲ್ಲಿ ಇದುವರೆಗೆ 3,700ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದೆ.

ನೇಪಾಳದ ಪುನರ್‌ನಿರ್ಮಾಣಕ್ಕೆ ಬೇಕಿದೆ ಕನಿಷ್ಠ 4 ಬಿಲಿಯನ್ ಡಾಲರ್

ವಿನಾಶಕಾರಿ ಪ್ರವಾಹಕ್ಕೆ ತುತ್ತಾಗಿರುವ ನೇಪಾಳದ ಪುನರ್‌ ನಿರ್ಮಾಣಕ್ಕೆ 4 ರಿಂದ 5 ಬಿಲಿಯನ್ ಡಾಲರ್ ಅಗತ್ಯವಿದೆ ಎಂದು ಹಣಕಾಸು ಅಲ್ಲಿನ ಸಚಿವ ಸ್ವರ್ಣಿಮ್ ವಾಗ್ಲೆ ಶನಿವಾರ (ಆ.29) ಹೇಳಿರುವುದಾಗಿ ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ.

ಇದು ಕೇವಲ ಒಂದು ಅಂದಾಜು ಮಾತ್ರ. ನಷ್ಟ ಮತ್ತು ಹಾನಿಯ ಮೌಲ್ಯಮಾಪನ ಇನ್ನೂ ನಡೆಯುತ್ತಿದೆ ಎಂದು ವಾಗ್ಲೆ ಅವರು ಎಎಫ್‌ಪಿ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

ಅಂತಾರಾಷ್ಟ್ರೀಯ ಸಮುದಾಯದಿಂದ ಯಾವುದೇ ಸಹಾಯವನ್ನು ನಿರಾಕರಿಸಿಲ್ಲ : ನೇಪಾಳ ಸ್ಪಷ್ಟನೆ

ಸ್ಥಳೀಯ ಪರಿಸರ ಪರಿಸ್ಥಿತಿಗಳು ಮತ್ತು ಕಠಿಣ ಭೂಪ್ರದೇಶಗಳ ಬಗ್ಗೆ ಉತ್ತಮ ಪರಿಚಯವಿರುವ ತನ್ನದೇ ಆದ ಭದ್ರತಾ ಪಡೆಗಳನ್ನು ಗರಿಷ್ಠ ಮಟ್ಟದಲ್ಲಿ ನಿಯೋಜಿಸಲು ಆದ್ಯತೆ ನೀಡಲು ಬಯಸುತ್ತಿರುವುದಾಗಿ ತಿಳಿಸಿರುವ ನೇಪಾಳವು, ತಾವು ಸ್ನೇಹಪರ ದೇಶಗಳು ಮತ್ತು ಅಂತಾರಾಷ್ಟ್ರೀಯ ಸಮುದಾಯದಿಂದ ಯಾವುದೇ ಸಹಾಯವನ್ನು ನಿರಾಕರಿಸಿಲ್ಲ ಎಂದು ಶುಕ್ರವಾರ ಸ್ಪಷ್ಟಪಡಿಸಿದೆ.

ರಾಷ್ಟ್ರೀಯ ಸುದ್ದಿ ಸಂಸ್ಥೆ (ಆರ್‌ಎಸ್‌ಎಸ್‌) ಜೊತೆ ಮಾತನಾಡಿದ ನೇಪಾಳದ ವಿದೇಶಾಂಗ ಸಚಿವ ಶಿಶಿರ್ ಖನಾಲ್, “ಅಂತಾರಾಷ್ಟ್ರೀಯ ನೆರವನ್ನು ತಿರಸ್ಕರಿಸಿಲ್ಲ. ಆದರೆ, ದೇಶದ ಸಾಮರ್ಥ್ಯ, ತಕ್ಷಣದ ಅಗತ್ಯತೆ ಮತ್ತು ನೇಪಾಳದ ವಿಶಿಷ್ಟ ಭೌಗೋಳಿಕ ಪರಿಸ್ಥಿತಿಯನ್ನು ಆಧರಿಸಿ ರಕ್ಷಣಾ ಕಾರ್ಯತಂತ್ರವನ್ನು ನಿರ್ಧರಿಸಲಾಗಿದೆ” ಎಂದು ಹೇಳಿದ್ದಾರೆ.

“ಅಪರಿಚಿತ ಭೂಪ್ರದೇಶದಲ್ಲಿ ವಿದೇಶಿ ರಕ್ಷಣಾ ತಂಡವನ್ನು ನಿಯೋಜಿಸುವುದರಿಂದ ಸಮನ್ವಯ ಮತ್ತು ತಾಂತ್ರಿಕ ನಿರ್ವಹಣೆಯಲ್ಲಿ ಜಟಿಲತೆ ಹೆಚ್ಚಾಗಬಹುದು ಹಾಗೂ ಅನಿರೀಕ್ಷಿತ ಅಪಾಯಗಳು ಎದುರಾಗಬಹುದು. ಈ ಕಾರಣದಿಂದಾಗಿ, ಲಭ್ಯವಿರುವ ರಾಷ್ಟ್ರೀಯ ಸಾಮರ್ಥ್ಯವನ್ನು ಬಳಸಿಕೊಂಡೇ ರಕ್ಷಣಾ ಕಾರ್ಯಾಚರಣೆಗಳನ್ನು ನಡೆಸಲಾಗುತ್ತಿದೆ” ಎಂದಿದ್ದಾರೆ.

“ಅತ್ಯಂತ ಸಂಕೀರ್ಣವಾದ ಭೌತಿಕ ರಚನೆಗಳಿರುವ ಕಾರಣಕ್ಕಾಗಿ ವಿಶೇಷ ತಾಂತ್ರಿಕ ಕೌಶಲ್ಯಗಳ ಅವಶ್ಯಕತೆಯಿರುವ ಕಠಿಣ ಸಂದರ್ಭಗಳಲ್ಲಿ, ಅಂತಾರಾಷ್ಟ್ರೀಯ ನೆರವನ್ನು ಪಡೆದುಕೊಳ್ಳಲು ಸರ್ಕಾರವು ಸಿದ್ಧವಿದೆ” ಎಂದು ಖನಾಲ್ ಒತ್ತಿಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...