Homeಮುಖಪುಟಮ್ಯಾಗಿ ಸೇರಿದಂತೆ ನೆಸ್ಲೆಯ 60% ಉತ್ಪನ್ನಗಳು ಆರೋಗ್ಯಕರವಲ್ಲ: ಸಂಸ್ಥೆಯ ಆಂತರಿಕ ವರದಿ

ಮ್ಯಾಗಿ ಸೇರಿದಂತೆ ನೆಸ್ಲೆಯ 60% ಉತ್ಪನ್ನಗಳು ಆರೋಗ್ಯಕರವಲ್ಲ: ಸಂಸ್ಥೆಯ ಆಂತರಿಕ ವರದಿ

- Advertisement -
- Advertisement -

ಅತಿದೊಡ್ಡ ಆಹಾರ ಮತ್ತು ಪಾನೀಯ ಕಂಪನಿಯಾದ ನೆಸ್ಲೆ ಮತ್ತೊಮ್ಮೆ ಸುದ್ದಿಯಲ್ಲಿದೆ. ಮ್ಯಾಗಿ ತಯಾರಿಸುವ ನೆಸ್ಲೆ ಕಂಪನಿಯ ಉತ್ಪನ್ನಗಳಲ್ಲಿ ಶೇಕಡಾ 60 ರಷ್ಟು ಆರೋಗ್ಯಕರವಲ್ಲ ಎಂದು ಸಂಸ್ಥೆಯ ಆಂತರಿಕ ವರದಿಯೊಂದು ತಿಳಿಸಿದೆ.

ನೆಸ್ಲೆ ಸಂಸ್ಥೆಯೇ ತನ್ನ ಉತ್ಪನ್ನಗಳು ಶೇಕಡಾ 60 ರಷ್ಟು ಆರೋಗ್ಯಕರವಲ್ಲ ಎಂದಿದೆ. ಈ ಬಗ್ಗೆ ದಿ ಫೈನಾನ್ಷಿಯಲ್ ಟೈಮ್ಸ್ ವರದಿ ಮಾಡಿದ್ದು, ನೆಸ್ಲೆ ಕಂಪನಿಯ ಉತ್ಪನ್ನಗಳು ಆರೋಗ್ಯಕರ ವಿಭಾಗದಲ್ಲಿ ಬರುವುದಿಲ್ಲ ಎಂದು ಹೇಳಿದೆ.

ಮ್ಯಾಗಿ ತಯಾರಕ ಕಂಪನಿಯು ತಮ್ಮ ಕೆಲವು ಆಹಾರ ಪದಾರ್ಥಗಳನ್ನು ಎಷ್ಟೇ ನವೀಕರಿಸಿದರೂ “ಎಂದಿಗೂ ಆರೋಗ್ಯಕರವಾಗಿರುವುದಿಲ್ಲ” ಎಂಬ ಅಂಶವನ್ನು ಹೇಳಿದ್ದಾರೆ. ಅದರಲ್ಲಿಯೂ ಅವರ ಚಾಕೊಲೇಟ್. ಇದು ಹೆಚ್ಚಿನ ಸಕ್ಕರೆ ಅಂಶವನ್ನು ಹೊಂದಿರುತ್ತದೆ.  ಈ ಸಮಸ್ಯೆಯನ್ನು ಸರಿದೂಗಿಸಲು ಪ್ರಯತ್ನಿಸಲಾಗುತ್ತಿದೆ ಎಂದು ನೆಸ್ಲೆ ತಿಳಿಸಿದೆ.

ಇದನ್ನೂ ಓದಿ: ವೈದ್ಯರ ಮೇಲೆ ಮಾರಣಾಂತಿಕ ಹಲ್ಲೆ, ಕಠಿಣ ಕಾಯ್ದೆ ರೂಪಿಸಲು IMA ಆಗ್ರಹ 

ಫೈನಾನ್ಷಿಯಲ್ ಟೈಮ್ಸ್ ವರದಿಯ ಪ್ರಕಾರ, ಆಸ್ಟ್ರೇಲಿಯಾದ ಹೆಲ್ತ್ ಸ್ಟಾರ್ ರೇಟಿಂಗ್ ವ್ಯವಸ್ಥೆಯಲ್ಲಿ ನೆಸ್ಲೆಯ ಆಹಾರ ಮತ್ತು ಪಾನೀಯ ಉತ್ಪನ್ನಗಳಲ್ಲಿ, ಸಾಕು ಪ್ರಾಣಿಗಳ ಆಹಾರ ಮತ್ತು ವೈದ್ಯಕೀಯ ನ್ಯೂಟ್ರಿಷಿಯನ್ ಉತ್ಪನ್ನಗಳು ಮಾತ್ರ 5 ರಲ್ಲಿ 3.5 ರೇಟಿಂಗ್ ಪಡೆದಿದೆ. ಇವುಗಳನ್ನು ಬಿಟ್ಟು ಮಿಕ್ಕ ಉತ್ಪನ್ನಗಳು ರೇಟಿಂಗ್‌ನಲ್ಲಿ ಹಿಂದಿವೆ ಎಂದು ಹೇಳಲಾಗಿದೆ.

ಈ ವರದಿ ಪ್ರತಿಕ್ರಿಯಿಸಿರುವ ನೆಸ್ಲೆ, ಇದು ಆಂತರಿಕ ವರದಿಯಾಗಿದೆ. ಪೌಷ್ಠಿಕ ಉತ್ಪನ್ನಗಳನ್ನು ಮಾತ್ರ ಗ್ರಾಹಕರಿಗೆ ನೀಡಲು ಪ್ರಯತ್ನಿಸುವುದಾಗಿ ಹೇಳಿದೆ. ಕಳೆದ ಏಳು ವರ್ಷಗಳಲ್ಲಿ ನೆಸ್ಲೆ ತಮ್ಮ ಉತ್ಪನ್ನಗಳಲ್ಲಿನ ಸಕ್ಕರೆ ಮತ್ತು ಸೋಡಿಯಂ ಅನ್ನು ಸುಮಾರು 14 ರಿಂದ 15% ರಷ್ಟು ಕಡಿಮೆ ಮಾಡಲಾಗಿದೆ. ಜೊತೆಗೆ ಅನೇಕ ಪೋಷಕಾಂಶಯುಕ್ತ ತಿನಿಸುಗಳನ್ನು ಬಿಡುಗಡೆ ಮಾಡಿದ್ದೇವೆ ಎಂದಿದೆ.

2015 ರಲ್ಲಿ ನೆಸ್ಲೆಯ ಮ್ಯಾಗಿ ಬಗ್ಗೆ ಬಂದ ಅನಾರೋಗ್ಯಕರ ಸುದ್ದಿಗಳು ಕಂಪನಿಗೆ ದೊಡ್ಡ ಹೊಡೆತ ನೀಡಿತ್ತು. ಇದರಿಂದ ಚೇತರಿಸಿಕೊಳ್ಳುವ ಮುನ್ನವೇ ಈ ವರದಿ ಬಂದಿದೆ. ಆದರೆ ಇದು ಆಂತರಿಕ ವರದಿ. ನಮ್ಮ ಉತ್ಪನ್ನಗಳನ್ನು ಮತ್ತಷ್ಟು ಅಭಿವೃದ್ಧಿ ಪಡಿಸುತ್ತೇವೆ ಎಂದಿದೆ. ಕಂಪನಿಯು ತನ್ನ ಭಾರತದ ಮಾರುಕಟ್ಟೆ ಪರಿಸ್ಥಿತಿಯನ್ನು ಕಾಪಾಡಲು ಇನ್ನೂ ಪೂರ್ವಭಾವಿ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ತಿಳಿಸಿದೆ.


ಇದನ್ನೂ ಓದಿ: ಉಚಿತ ಸಾರ್ವತ್ರಿಕ ವ್ಯಾಕ್ಸಿನೇಷನ್‌ಗೆ ಕೇಂದ್ರವನ್ನು ಒತ್ತಾಯಿಸಿ ಕೇರಳ ವಿಧಾನಸಭೆ ನಿರ್ಣಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...