Homeಅಂತರಾಷ್ಟ್ರೀಯ'ನೆತನ್ಯಾಹು ಆಡಳಿತದಿಂದ ಗಾಝಾದಲ್ಲಿ ನರಮೇಧ..'; ಇಸ್ರೇಲ್‌ನ ಪ್ರಮುಖ ಮಾನವ ಹಕ್ಕುಗಳ ಸಂಸ್ಥೆಯಿಂದ ವರದಿ ಬಿಡುಗಡೆ

‘ನೆತನ್ಯಾಹು ಆಡಳಿತದಿಂದ ಗಾಝಾದಲ್ಲಿ ನರಮೇಧ..’; ಇಸ್ರೇಲ್‌ನ ಪ್ರಮುಖ ಮಾನವ ಹಕ್ಕುಗಳ ಸಂಸ್ಥೆಯಿಂದ ವರದಿ ಬಿಡುಗಡೆ

- Advertisement -
- Advertisement -

ಇಸ್ರೇಲ್‌ನ ಎರಡು ಪ್ರಮುಖ ಮಾನವ ಹಕ್ಕುಗಳ ಗುಂಪುಗಳಾದ ಬಿಟ್ಸೆಲೆಮ್ ಮತ್ತು ಫಿಸಿಶಿಯನ್ಸ್ ಫಾರ್ ಹ್ಯೂಮನ್ ರೈಟ್ಸ್ ಸಂಸ್ಥೆಗಳು, ಗಾಝಾದಲ್ಲಿ ಇಸ್ರೇಲ್‌ನ ಕ್ರಮಗಳು ನರಮೇಧಕ್ಕೆ ಕಾರಣವೆಂದು ಹೇಳುವ ಹೊಸ ವರದಿಯನ್ನು ಪ್ರಕಟಿಸಿವೆ.

ಈ ವರದಿಯು ಇಸ್ರೇಲ್‌ನ ನಡೆಯುತ್ತಿರುವ ಮಿಲಿಟರಿ ಕಾರ್ಯಾಚರಣೆಯನ್ನು ವಿವರಿಸಲು ‘ನರಮೇಧ’ ಎಂಬ ಪದವನ್ನು ಮೊದಲ ಬಾರಿಗೆ ಬಳಸಿದೆ ಎನ್ನಲಾಗುತ್ತಿ. ಇದಕ್ಕೂ ಮೊದಲು, ಅಮ್ನೆಸ್ಟಿ ಇಂಟರ್‌ನ್ಯಾಷನಲ್, ಹ್ಯೂಮನ್ ರೈಟ್ಸ್ ವಾಚ್ ಮತ್ತು ವಿಶ್ವಸಂಸ್ಥೆಯ ವಿಶೇಷ ಸಮಿತಿ ಸೇರಿದಂತೆ ಅನೇಕ ಪ್ರಮುಖ ಅಂತರರಾಷ್ಟ್ರೀಯ ಎನ್‌ಜಿಒಗಳು ಹಲವಾರು ತಿಂಗಳುಗಳಿಂದ ಈ ಪದವನ್ನು ಬಳಸುತ್ತಿವೆ.

ಈ ಬಗ್ಗೆ ಬಿಟ್ಸೆಲೆಮ್ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿ, ಗಾಝಾದ ಮೇಲಿನ ಇಸ್ರೇಲ್‌ನ ಯುದ್ಧವನ್ನು “ಗಾಝಾದ ಜನಸಂಖ್ಯೆಯನ್ನು ನಾಶಮಾಡುವ ಮತ್ತು ಪ್ಯಾಲೆಸ್ತೀನಿಯನ್ ಸಮಾಜವು ಅಲ್ಲಿ ಅಸ್ತಿತ್ವದಲ್ಲಿರಲು ಸಾಧ್ಯವಾಗದಷ್ಟು ದುರಂತದ ಜೀವನ ಪರಿಸ್ಥಿತಿಗಳನ್ನು ಹೇರುವ ಸ್ಪಷ್ಟ ಪ್ರಯತ್ನ” ಎಂದು ವಿವರಿಸಿದ್ದಾರೆ.

“ಇಸ್ರೇಲ್ ಆಡಳಿತದ ಜನಾಂಗೀಯ ಹತ್ಯಾಕಾಂಡದಲ್ಲಿ ಯಾವುದೇ ಪ್ಯಾಲೆಸ್ತೀನಿಯನ್ ಸುರಕ್ಷಿತವಾಗಿಲ್ಲ. ನರಮೇಧಕ್ಕೆ ಯಾವುದೇ ಸಮರ್ಥನೆ ಇಲ್ಲ, ಸ್ವರಕ್ಷಣೆ ಅಲ್ಲ, ಭದ್ರತೆ ಅಲ್ಲ, ಅಕ್ಟೋಬರ್ 7, 2023 ರಂದು ಹಮಾಸ್ ಮಾಡಿದ ಘೋರ ಕೃತ್ಯಗಳು ಇಸ್ರೇಲಿಗಳಲ್ಲಿ ಆಳವಾದ ಅಸ್ತಿತ್ವದ ಭಯವನ್ನು ಹುಟ್ಟುಹಾಕಿದವು. ಅಂತರರಾಷ್ಟ್ರೀಯ ಸಮುದಾಯವು ದೌರ್ಜನ್ಯಗಳನ್ನು ತಡೆಯುವ ಕರ್ತವ್ಯದಲ್ಲಿ ವಿಫಲವಾಗಿದೆ. ಆದರೆ, ಪಾಶ್ಚಿಮಾತ್ಯ ಜಗತ್ತಿನ ನಾಯಕರು, ವಿಶೇಷವಾಗಿ ಯುನೈಟೆಡ್ ಸ್ಟೇಟ್ಸ್ ಮತ್ತು ಯುರೋಪ್, ಇಸ್ರೇಲ್‌ನ ವಿನಾಶಕಾರಿ ಕೃತ್ಯಗಳಿಗೆ ಅನುವು ಮಾಡಿಕೊಡುವ ಬೆಂಬಲವನ್ನು ನೀಡುವ ಮೂಲಕ ಜವಾಬ್ದಾರಿಯನ್ನು ಹಂಚಿಕೊಂಡಿದ್ದಾರೆ. ಇಸ್ರೇಲ್ ಗಾಝಾದಲ್ಲಿ ನಡೆಸುತ್ತಿರುವ ನರಮೇಧವನ್ನು ನಿಲ್ಲಿಸುವುದು ಅಂತರರಾಷ್ಟ್ರೀಯ ಸಮುದಾಯದ ಕರ್ತವ್ಯವಾಗಿದೆ” ಎಂದು ಹೇಳಿದೆ.

“ಸಾಮಾಜಿಕ ಮಾಧ್ಯಮಗಳಲ್ಲಿ, ಬಾಂಬ್ ದಾಳಿಯಿಂದ ನಾಶವಾದ ಕಟ್ಟಡಗಳ ಅಡಿಯಲ್ಲಿ ಜನರು ಹೂತುಹೋಗಿರುವುದು, ಸ್ಥಳಾಂತರಗೊಂಡವರ ಶಿಬಿರಗಳು ಬೆಂಕಿಯಲ್ಲಿ ಬಿದ್ದಿರುವುದು, ಹಸಿವಿನಿಂದ ಬಳಲುತ್ತಿರುವ ಮಕ್ಕಳು, ನೀರಿಗಾಗಿ ಹತಾಶರಾಗಿರುವ ಜನರು, ಗಾಯಗೊಂಡವರಿಗೆ ಮತ್ತು ರೋಗಿಗಳಿಗೆ ಚಿಕಿತ್ಸೆ ನೀಡಲು ಸಾಧ್ಯವಾಗದೆ ಉಳಿದಿರುವ ಆಸ್ಪತ್ರೆಗಳ ದೃಶ್ಯಗಳನ್ನು ನಾವು ನೋಡುತ್ತಿದ್ದೇವೆ. ಮಾನವ ಹಕ್ಕುಗಳ ಸಂಘಟನೆಯಾಗಿ ಸತ್ಯವನ್ನು ಹೇಳುವುದು ನಮ್ಮ ಕರ್ತವ್ಯ ಮತ್ತು ಜವಾಬ್ದಾರಿಯಾಗಿದೆ; ನರಮೇಧ ಇಲ್ಲಿಯೇ ಮತ್ತು ಇದೀಗ ನಡೆಯುತ್ತಿದೆ. ಇದು ನಮ್ಮ ನರಮೇಧ, ನಾವು ಇದನ್ನು ನಿಲ್ಲಿಸಬೇಕಾಗಿದೆ” ಎಂದು ಸಂಸ್ಥೆ ಪ್ರತಿಪಾದಿಸಿದೆ.

ಸೌದಿ ಅರೇಬಿಯಾ: ಮಕ್ಕಾದ ಗ್ರ್ಯಾಂಡ್ ಮಸೀದಿಯಲ್ಲಿ ಪ್ಯಾಲೆಸ್ತೀನಿಯನ್ ಧ್ವಜ ಹಾರಿಸಿದ ಯಾತ್ರಿಕನ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...