Homeಮುಖಪುಟನೆಟ್‌ಫ್ಲಿಕ್ಸ್‌ನ 'ದೋ ಪಟ್ಟಿ' ವಿರುದ್ಧ ಬಹಿಷ್ಕಾರಕ್ಕೆ ಹೂಡಾ ಖಾಪ್ ಪಂಚಾಯತ್ ನಿರ್ಧಾರ

ನೆಟ್‌ಫ್ಲಿಕ್ಸ್‌ನ ‘ದೋ ಪಟ್ಟಿ’ ವಿರುದ್ಧ ಬಹಿಷ್ಕಾರಕ್ಕೆ ಹೂಡಾ ಖಾಪ್ ಪಂಚಾಯತ್ ನಿರ್ಧಾರ

- Advertisement -
- Advertisement -

ನೆಟ್‌ಫ್ಲಿಕ್ಸ್‌ನಲ್ಲಿ ಬಿಡುಗಡೆಯಾದ ‘ದೋ ಪಟ್ಟಿ’ ಸಿನಿಮಾದ ವಿರುದ್ಧ ಹರಿಯಾಣದ ಪ್ರಭಾವಿ ‘ಹೂಡಾ’ ಸಮುದಾಯ ಸಾಮಾಜಿಕ ಬಹಿಷ್ಕಾರಕ್ಕೆ ತಮ್ಮ ಖಾಪ್‌ ಪಂಚಾಯತ್‌ನಲ್ಲಿ ಈ ನಿರ್ಧಾರ ಕೈಗೊಂಡಿದೆ. ಸಿನಿಮಾದ ನಿರ್ಮಾಪಕರು, ಪಾತ್ರವರ್ಗ ಮತ್ತು ನೆಟ್‌ಫ್ಲಿಕ್ಸ್‌ ಇಂಡಿಯಾ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಅವರು ರಾಜ್ಯದ ಬಿಜೆಪಿ ಸರ್ಕಾರಕ್ಕೆ ಅರ್ಜಿ ಸಲ್ಲಿಸಿದ್ದಾರೆ.

ಚಿತ್ರದ ವಿರುದ್ಧ ಕ್ರಮ ಕೈಗೊಳ್ಳಲು ಬಿಜೆಪಿ ನೇತೃತ್ವದ ಹರಿಯಾಣ ಸರ್ಕಾರಕ್ಕೆ ಒಂದು ತಿಂಗಳ ಕಾಲಾವಕಾಶ ನೀಡಿರುವ ಹೂಡಾ ಖಾಪ್ ಪಂಚಾಯತ್, ಚಿತ್ರದಿಂದ `ಹೂಡಾ’ ಪದವನ್ನು ಅಳಿಸಿ ಕ್ಷಮೆ ಯಾಚಿಸಬೇಕು ಎಂದು ಒತ್ತಾಯಿಸಿದೆ. ಈ ಬೇಡಿಕೆಗಳನ್ನು ಈಡೇರಿಸದಿದ್ದರೆ ಸಮುದಾಯವು ಸಭೆ ಕರೆದು ‘ತೀವ್ರ ಕ್ರಮ’ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಹರಿಯಾಣದ ರೋಹ್ಟಕ್ ಜಿಲ್ಲೆಯ ಬಸಂತ್‌ಪುರದಲ್ಲಿರುವ ಸರ್ವ್ ಹೂಡಾ ಖಾಪ್‌ನ ವೇದಿಕೆಯಲ್ಲಿ ಭಾನುವಾರ ಹೂಡಾ ಖಾಪ್ ಸಭೆಯನ್ನು ಕರೆದಿದ್ದಾರೆ. ನಟ ಶಾಹೀರ್ ಶೇಖ್ ಅವರ ಅವಹೇಳನಕಾರಿ ಸಂಭಾಷಣೆಯಿಂದ ‘ಹೂಡಾ’ ಪದವನ್ನು ತೆಗೆದುಹಾಕುವಂತೆ ಅವರು ಒತ್ತಾಯಿಸಿದ್ದು, ತಮ್ಮ ಈಡೇರರಿದ್ದರೆ ದೋ ಪಟ್ಟಿ ಮತ್ತು ನೆಟ್‌ಫ್ಲಿಕ್ಸ್ ಇಂಡಿಯಾ ವಿರುದ್ಧ ಕೈಗೊಳ್ಳುವ ಕ್ರಮಗಳ ಬಗ್ಗೆ ಹಲವಾರು ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ.

ಈ ಕುರಿತು ಮಾತನಾಡಿದ ಹೂಡಾ ಖಾಪ್‌ನ ಮುಖ್ಯಸ್ಥ ಓಂ ಪ್ರಕಾಶ್ ಹೂಡಾ ಮತ್ತು ಸಾಮಾಜಿಕ ಕಾರ್ಯಕರ್ತ ಸುರೇಂದರ್ ಸಿಂಗ್ ಹೂಡಾ, “ದೋ ಪಟ್ಟಿ ಮತ್ತು ನೆಟ್‌ಫ್ಲಿಕ್ಸ್‌ ಇಂಡಿಯಾ, ನಿರ್ಮಾಪಕರು, ನಟರು, ನಿರ್ದೇಶಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಸಭೆಯಲ್ಲಿ ನಿರ್ಧರಿಸಲಾಯಿತು. ಎಲ್ಲಿಯವರೆಗೆ ಅವರು ಸಾರ್ವಜನಿಕವಾಗಿ ಕ್ಷಮೆಯಾಚಿಸುವುದಿಲ್ಲವೊ ಮತ್ತು ತಮ್ಮ ಚಲನಚಿತ್ರದಿಂದ `ಹೂಡಾ’ ಪದವನ್ನು ಅಳಿಸುವುದಿಲ್ಲವೋ ಅಲ್ಲಿಯವರೆಗೆ ಚಿತ್ರದ ನಿರ್ಮಾಪಕರು, ನಟರು, ನಿರ್ದೇಶಕರು ಮತ್ತು ನೆಕ್ಸ್ಟ್‌ಫ್ಲಿಕ್ಸ್ ಸಾಮಾಜಿಕ ಬಹಿಷ್ಕಾರ ಮುಂದುವರಿಯುತ್ತದೆ” ಎಂದು ಹೇಳಿದ್ದಾರೆ.

ಅಲ್ಲದೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಹಾಗೂ ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಅವರಿಗೆ ಪತ್ರ ಬರೆದು ಸೂಕ್ತ ಕ್ರಮ ಕೈಗೊಳ್ಳುವಂತೆ ಖಾಪ್ ಪಂಚಾಯತ್ ಒತ್ತಾಯಿಸಿದ್ದು, ಅವರು ಕ್ರಮ ಕೈಗೊಳ್ಳದಿದ್ದಲ್ಲಿ ಹೂಡಾ ಖಾಪ್ ಮಾತ್ರವಲ್ಲದೆ ಜಾಟ್ ಸಮುದಾಯವೂ “ತೀವ್ರ ಕ್ರಮ ಕೈಗೊಳ್ಳಲು ಒತ್ತಾಯಿಸಲಾಗುವುದು. ” ಎಂದು ಹೇಳಿದ್ದಾರೆ.

“ಅಲ್ಲದೆ, ಎಲ್ಲಾ ಖಾಪ್‌ಗಳು ಮತ್ತು ಜಾಟ್ ಸಮುದಾಯಗಳಿಗೆ ವಿರುದ್ಧವಾದ ಎಲ್ಲಾ ರೀತಿಯ ಅವಹೇಳನಕಾರಿ ವಿಷಯಗಳನ್ನು ತೆಗೆದುಹಾಕಬೇಕು ಮತ್ತು ನಿಲ್ಲಿಸಬೇಕು. ಇಲ್ಲದಿದ್ದರೆ ಅದು ಗಂಭೀರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಎಚ್ಚರಿಕೆ ನೀಡಲಾಗಿದೆ. ರೋಹ್ಟಕ್ ಸಂಸತ್ ಸದಸ್ಯ ದೀಪಿಂದರ್ ಸಿಂಗ್ ಹೂಡಾ ಮತ್ತು ಸ್ಥಳೀಯ ಶಾಸಕ ಮತ್ತು ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ ಅವರು ಕ್ರಮವಾಗಿ ಸಂಸತ್ತು ಮತ್ತು ರಾಜ್ಯ ವಿಧಾನಸಭೆಯಲ್ಲಿ ಈ ಬಗ್ಗೆ ಮಾತನಾಡಲಿದ್ದಾರೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ‘ಕೆಫಿಯಹ್’ ಧರಿಸಿ ಫುಟ್ಬಾಲ್ ವೀಕ್ಷಿಸಲು ತೆರಳಿದ್ದಕ್ಕೆ ಬಂಧಿಸಿದ ಕೇರಳ ಪೊಲೀಸರು!

‘ಕೆಫಿಯಹ್’ ಧರಿಸಿ ಫುಟ್ಬಾಲ್ ವೀಕ್ಷಿಸಲು ತೆರಳಿದ್ದಕ್ಕೆ ಬಂಧಿಸಿದ ಕೇರಳ ಪೊಲೀಸರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...