Homeಮುಖಪುಟ'ಅನ್ನಪೂರಣಿ' ಸಿನಿಮಾವನ್ನು ತೆಗೆದುಹಾಕಿದ ನೆಟ್‌ಫ್ಲಿಕ್ಸ್ , ವಿಹೆಚ್‌ಪಿಗೆ ಕ್ಷಮಾಪನಾ ಪತ್ರ ಬರೆದ ಝೀ ಸ್ಟುಡಿಯೋ!

‘ಅನ್ನಪೂರಣಿ’ ಸಿನಿಮಾವನ್ನು ತೆಗೆದುಹಾಕಿದ ನೆಟ್‌ಫ್ಲಿಕ್ಸ್ , ವಿಹೆಚ್‌ಪಿಗೆ ಕ್ಷಮಾಪನಾ ಪತ್ರ ಬರೆದ ಝೀ ಸ್ಟುಡಿಯೋ!

- Advertisement -
- Advertisement -

‘ಅನ್ನಪೂರಣಿ’ ತಮಿಳು ಚಲನಚಿತ್ರ ಧಾರ್ಮಿಕ ಭಾವನೆಗಳಿಗೆ ನೋವುಂಟುಮಾಡಿದೆ ಎಂದು ಹಿಂದೂ ಬಲಪಂಥೀಯ ಗುಂಪುಗಳು ವಿವಾದ ಸೃಷ್ಟಿಸಿದ ಬೆನ್ನಲ್ಲಿ ನಯನತಾರಾ ಅವರ  ‘ಅನ್ನಪೂರಣಿ’ ಚಲನ ಚಿತ್ರವನ್ನು ನೆಟ್‌ಫ್ಲಿಕ್ಸ್ ತೆಗೆದು ಹಾಕಿದ್ದು, ‘ಅನ್ನಪೂರಣಿ’ ಚಲನಚಿತ್ರದ ನಿರ್ಮಾಪಕರು ಮತ್ತು ಝೀ ಸ್ಟುಡಿಯೊ ಕ್ಷಮೆಯಾಚಿಸಿ ವಿಹೆಚ್‌ಪಿಗೆ ಪತ್ರವನ್ನು ಬರೆದಿದೆ.

ಪತ್ರದಲ್ಲಿ Zee ಸ್ಟುಡಿಯೋ, ನಾವು ಹಿಂದೂ ಮತ್ತು ಬ್ರಾಹ್ಮಣ ಸಮುದಾಯಗಳಿಗೆ ಉಂಟಾದ ಅನಾನುಕೂಲತೆ ಮತ್ತು ನೋವಿಗೆ ಈ ಮೂಲಕ ಕ್ಷಮೆಯಾಚಿಸಲು ಬಯಸುತ್ತೇವೆ ಎಂದು ಹೇಳಿದೆ. ಝೀ ಸ್ಟುಡಿಯೋ ಸಹ-ನಿರ್ಮಾಪಕರಾದ ಟ್ರೈಡೆಂಟ್ ಆರ್ಟ್ಸ್‌ನೊಂದಿಗೆ ಚಲನಚಿತ್ರವನ್ನು ಎಡಿಟ್ ಮಾಡುವವರೆಗೆ ನೆಟ್‌ಫ್ಲಿಕ್ಸ್‌ನಿಂದ ತೆಗೆದುಹಾಕಲು ಕೆಲಸ ಮಾಡುತ್ತಿದೆ ಎಂದು ಪತ್ರದಲ್ಲಿ ತಿಳಿಸಿತ್ತು.

ಚಿತ್ರದ ವಿವಾದಾತ್ಮಕ ಅಂಶಗಳನ್ನು ತಕ್ಷಣವೇ ತೆಗೆದುಹಾಕಲು ಸಹ-ನಿರ್ಮಾಪಕರಾದ ಟ್ರೈಡೆಂಟ್ ಆರ್ಟ್ಸ್‌ಗೆ Zee ಸ್ಟುಡಿಯೋಸ್ ಮನವಿ ಮಾಡಿದೆ ಎಂದು ಪತ್ರವು ಬಹಿರಂಗಪಡಿಸಿದೆ. ಹೆಚ್ಚುವರಿಯಾಗಿ ಅಗತ್ಯ ಬದಲಾವಣೆಗಳನ್ನು ಮಾಡುವವರೆಗೆ ತನ್ನ OTT ಪ್ಲಾಟ್‌ಫಾರ್ಮ್‌ನಿಂದ ‘ಅನ್ನಪೂರಣಿ’ ಯನ್ನು ತಾತ್ಕಾಲಿಕವಾಗಿ ತೆಗೆದುಹಾಕುವಂತೆ ಸ್ಟುಡಿಯೋ ನೆಟ್‌ಫ್ಲಿಕ್ಸ್‌ಗೆ ಒತ್ತಾಯಿಸಿತ್ತು.

ಇಂದು ನೆಟ್‌ಫ್ಲಿಕ್ಸ್ ಚಲನಚಿತ್ರವನ್ನು ತೆಗೆದುಹಾಕಿದೆ, ಚಲನಚಿತ್ರವನ್ನು ಆವರಿಸಿರುವ ವಿವಾದವನ್ನು  ಗಂಭೀರವಾಗಿ ಪರಿಗಣಿಸಿದೆ. ಕಳೆದ ವರ್ಷ ಡಿಸೆಂಬರ್‌ನಲ್ಲಿ ತಮಿಳುನಾಡಿನಲ್ಲಿ ಚಿತ್ರವು ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಿದೆ. ಅಂದರೆ ಅದು ಈಗಾಗಲೇ ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಶನ್ (CBFC) ನಿಂದ ಅನುಮತಿ ಪಡೆದಿದೆ.

ಜನವರಿ 8 ರಂದು ಶಿವಸೇನೆಯ ಮಾಜಿ ಕಾರ್ಯಕರ್ತ ರಮೇಶ್ ಸೋಲಂಕಿ ಮುಂಬೈನಲ್ಲಿ ‘ಅನ್ನಪೂರಣಿ’ ತಮಿಳು ಚಲನ ಚಿತ್ರದ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಚಲನಚಿತ್ರವು ಲವ್ ಜಿಹಾದ್‌ನ್ನು ಉತ್ತೇಜಿಸುತ್ತದೆ ಮತ್ತು ಅದರ ಒಂದು ಪಾತ್ರವು ವಾಲ್ಮೀಕಿ ರಾಮಾಯಣವನ್ನು ತಪ್ಪಾಗಿ ಅರ್ಥೈಸುತ್ತದೆ, ಭಗವಾನ್ ರಾಮನನ್ನು ‘ಮಾಂಸ ಭಕ್ಷಕ’ ಎಂದು ಚಿತ್ರಿಸುತ್ತದೆ ಎಂದು ಆರೋಪಿಸಿ ಮುಂಬೈನ ಎಲ್‌ಟಿ ಮಾರ್ಗ್ ಪೊಲೀಸ್ ಠಾಣೆಯಲ್ಲಿ ಈ ಎಫ್‌ಐಆರ್ ದಾಖಲಿಸಿದ್ದಾರೆ.

ಅನ್ನಪೂರಣಿ’ ನಯನತಾರಾ ಅಭಿನಯಿಸುತ್ತಿರುವ 75ನೇ ಸಿನಿಮಾ. ಈ ಚಿತ್ರಕ್ಕೆ ನಿಲೇಶ್ ಕೃಷ್ಣ ಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಯುವತಿಯೊಬ್ಬಳು ಸಮಾಜದ ವಿರೋಧದ ನಡುವೆ ಹೇಗೆ ಶೆಫ್ ಆಗುವ ಕನಸನ್ನು ನನಸಾಗಿಸಿಕೊಳ್ಳಲು ಪ್ರಯತ್ನಿಸುತ್ತಾಳೆ ಎನ್ನುವುದರ ಸುತ್ತ ಕಥೆ ಸಾಗುತ್ತದೆ. ಬ್ರಾಹ್ಮಣರ ಮನೆತನದ ಯುವತಿ ಮಾಂಸಾಹಾರ ತಯಾರಿಸುವ ಸವಾಲನ್ನು ಹೇಗೆ ನಿಭಾಯಿಸುತ್ತಾಳೆ ಎನ್ನುವುದು ಸಿನಿಮಾದ ಕಥೆಯಾಗಿದೆ.

ನಟಿ ನಯನತಾರಾ, ನಿರ್ದೇಶಕರಾದ ನೀಲೇಶ್ ಕೃಷ್ಣ ಮತ್ತು ನಿರ್ಮಾಪಕರಾದ ಜತಿನ್ ಸೇಥಿ, ಆರ್ ರವೀಂದ್ರನ್ ಮತ್ತು ಪುನಿತ್ ಗೋಯೆಂಕಾ, ಜೀ ಸ್ಟುಡಿಯೋಸ್, ಶಾರಿಕ್ ಪಟೇಲ್ ಮತ್ತು ನೆಟ್‌ಫ್ಲಿಕ್ಸ್ ಇಂಡಿಯಾದ ಮುಖ್ಯಸ್ಥೆ ಮೋನಿಕಾ ಶೆರ್ಗಿಲ್ ವಿರುದ್ಧ ದೂರು ದಾಖಲಿಸಲಾಗಿತ್ತು.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದ ರಮೇಶ್‌ ಸೋಲಂಕಿ, ನಾನು AntiHinduZee ಮತ್ತು #AntiHinduNetflix ವಿರುದ್ಧ ದೂರು ದಾಖಲಿಸಿದ್ದೇನೆ. ಭಗವಾನ್ ಶ್ರೀರಾಮ ಮಂದಿರದ ಪ್ರಾಣ ಪ್ರತಿಷ್ಠೆಯ ನಿರೀಕ್ಷೆಯಲ್ಲಿ ಇಡೀ ವಿಶ್ವವೇ ಸಂಭ್ರಮಿಸುತ್ತಿರುವ ಈ ಹೊತ್ತಿನಲ್ಲಿ ಝೀ ಸ್ಟುಡಿಯೋಸ್, ನಾಡ್ ಸ್ಟುಡಿಯೋಸ್ ಮತ್ತು ಟ್ರೈಡೆಂಟ್ ಆರ್ಟ್ಸ್ ನಿರ್ಮಾಣದ ಈ ಹಿಂದೂ ವಿರೋಧಿ ಸಿನಿಮಾ ಅನ್ನಪೂರಣಿ ನೆಟ್‌ಫ್ಲಿಕ್ಸ್‌ನಲ್ಲಿ ಬಿಡುಗಡೆಯಾದೆ. ಹಿಂದೂ ಪೂಜಾರಿಯ ಮಗಳು ಬಿರಿಯಾನಿ ಅಡುಗೆ ಮಾಡಲು ನಮಾಜ್ ಮಾಡುತ್ತಾಳೆ, ಈ ಚಿತ್ರದಲ್ಲಿ ಲವ್ ಜಿಹಾದ್‌ ಪರ ಪ್ರಚಾರ ಮಾಡಲಾಗಿದೆ. ಫರ್ಹಾನ್ (ನಟ) ಭಗವಾನ್ ಶ್ರೀ ರಾಮ್ ಕೂಡ ಮಾಂಸಾಹಾರಿ ಎಂದು ನಟಿಯನ್ನು ಮಾಂಸ ತಿನ್ನಲು ಮನವೊಲಿಸುವುದು ಚಿತ್ರದಲ್ಲಿದೆ. @NetflixIndia
ಮತ್ತು @ZeeStudios_ ಹಿಂದೂ ಭಾವನೆಗಳಿಗೆ ಧಕ್ಕೆ ತರಲು ಉದ್ದೇಶಪೂರ್ವಕವಾಗಿ ಈ ಸಿನಿಮಾ ಮಾಡಿ    ಮಂದಿರದ ಪ್ರಾಣ ಪ್ರತಿಷ್ಠೆಯ ವೇಳೆ ಬಿಡುಗಡೆ ಮಾಡಿದೆ ಎಂದು ಆರೋಪಿಸಿದ್ದರು.

ಇದನ್ನು ಓದಿ: ‘ಎಲ್ಲಾ ಮಹಿಳೆಯರ ಗೆಲುವು’: ಬಿಲ್ಕಿಸ್ ಬಾನು ತೀರ್ಪಿನ ಬಗ್ಗೆ ಕುಸ್ತಿಪಟು ವಿನೇಶ್ ಫೋಗಟ್ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...