Homeಕರ್ನಾಟಕ‌ನೆಟ್‌ವರ್ಕ್ ಸಮಸ್ಯೆ: ಆನ್‌ಲೈನ್ ತರಗತಿಗಾಗಿ 5 ಕಿಮೀ ನಡೆಯುವ ವಿದ್ಯಾರ್ಥಿಗಳು!

‌ನೆಟ್‌ವರ್ಕ್ ಸಮಸ್ಯೆ: ಆನ್‌ಲೈನ್ ತರಗತಿಗಾಗಿ 5 ಕಿಮೀ ನಡೆಯುವ ವಿದ್ಯಾರ್ಥಿಗಳು!

ನೆಟ್‌ವರ್ಕ್ ಸಿಗುವ ದೇವಳಮಕ್ಕಿ ಗ್ರಾಮದ ಸಾರ್ವಜನಿಕ ಬಸ್ ನಿಲ್ದಾಣದ ತಂಗುದಾಣ, ಅಂಗಡಿಗಳು, ತಮ್ಮ ಸ್ನೇಹಿತರ ಮನೆಯಲ್ಲಿ ಕುಳಿತು ವಿದ್ಯಾರ್ಥಿಗಳು ಪಾಠ ಕೇಳಿಸಿಕೊಳ್ಳುತ್ತಾರೆ.

- Advertisement -
- Advertisement -

ಕೊರೊನಾ ಸಾಂಕ್ರಾಮಿಕದಿಂದಾಗಿ ವಿದ್ಯಾರ್ಥಿಗಳಿಗೆ ಶಾಲಾ-ಕಾಲೇಜುಗಳಿಗೆ ಹೋಗಲು ನಿರ್ಬಂಧವಿರುವ ಕಾರಣ ಆನ್‌ಲೈನ್ ತರಗತಿಗಳನ್ನು ಜಾರಿ ಮಾಡಲಾಗಿದೆ. ನಗರ ಪ್ರದೇಶಗಳಿಂದ ಅನತಿ ದೂರದಲ್ಲಿರುವ ವಿದ್ಯಾರ್ಥಿಗಳಿಗೆ ಇದು ಉಪಯೋಗವಾದರೂ, ಹಳ್ಳಿಗಳಲ್ಲಿ ವಾಸಿಸುವವರಿಗೆ, ಆರ್ಥಿಕ ಪರಿಸ್ಥಿತಿ ಸರಿಯಿಲ್ಲದಿರುವವರಿಗೆ, ‌ನೆಟ್‌ವರ್ಕ್‌ ಸಿಗದ ಪ್ರದೇಶಗಳಲ್ಲಿ ವಾಸಿಸುವವರಿಗೆ ಶಾಪವಾಗಿ ಪರಿಣಮಿಸಿದೆ.

ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲ್ಲೂಕಿನ ದೇವಳಮಕ್ಕಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಗೆ, ಶಿರ್ವೆ, ಹಾಗೂ ಕೋವೆ ಗ್ರಾಮಗಳ ವಿದ್ಯಾರ್ಥಿಗಳು ನಿತ್ಯವೂ ಆನ್‌ಲೈನ್ ತರಗತಿಗಳಿ ಹಾಜರಾಗಲು 5 ಕಿಲೋಮೀಟರ್‌ ನಡೆಯಬೇಕಾಗಿದೆ.

ಈ ಹಳ್ಳಿಗಳಲ್ಲಿ ಮೊಬೈಲ್ ನೆಟ್‌ವರ್ಕ್ ಸಿಗದ ಕಾರಣ ಇಲ್ಲಿನ ವಿದ್ಯಾರ್ಥಿಗಳು ತಮ್ಮ ಊರಿನಿಂದ ಐದಾರು ಕಿ.ಮೀ ನಡೆದುಕೊಂಡು ಬರುತ್ತಾರೆ. ಕೆಲವರು ಸೈಕಲ್‌ನಲ್ಲಿ ಬರುತ್ತಾರೆ. ‌ನೆಟ್‌ವರ್ಕ್ ಸಿಗುವ ದೇವಳಮಕ್ಕಿ ಗ್ರಾಮದ ಸಾರ್ವಜನಿಕ ಬಸ್ ನಿಲ್ದಾಣದ ತಂಗುದಾಣ, ಅಂಗಡಿ, ತಮ್ಮ ಸ್ನೇಹಿತರ ಮನೆಯಲ್ಲಿ ಕುಳಿತು ಪಾಠ ಕೇಳಿಸಿಕೊಳ್ಳುತ್ತಾರೆ.

ಇದನ್ನೂ ಓದಿ: ಆನ್‌ಲೈನ್‌ ತರಗತಿಗೆ ಹಾಜರಾಗಲು ಅಸಾಧ್ಯ: 10 ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ

ಕಾರವಾರದಲ್ಲಿರುವ ಕಾಮಧೇನು ಕಾಲೇಜಿನಲ್ಲಿ ಬಿಸಿಎ (ಬ್ಯಾಚುಲರ್ ಆಫ್ ಕಂಪ್ಯೂಟರ್ ಅಪ್ಲಿಕೇಷನ್ಸ್) ಓದುತ್ತಿರುವ ಪವಿತ್ರಾ ಹೇಳುವಂತೆ, ’ಕಾಲೇಜು ಆಡಳಿತ ಮಂಡಳಿ ಆನ್‌ಲೈನ್ ತರಗತಿಗಳಿಗೆ ಹಾಜರಾಗುವಂತೆ ಹೇಳಿದಾಗ ನಾವು ಗೊಂದಲಕ್ಕೆ ಒಳಗಾದೆವು. ಏಕೆಂದರೆ ನಮ್ಮ ಊರಿನಲ್ಲಿ ಯಾವುದೇ ಮೋಬೈಲ್ ‌ನೆಟ್‌ವರ್ಕ್ ಇಲ್ಲ. ನಂತರ ನಾವು ದೇವಳಮಕ್ಕಿ ಬಸ್ ನಿಲ್ದಾಣದಲ್ಲಿ ಕುಳಿತು ಆನ್‌ಲೈನ್ ತರಗತಿಗಳಿಗೆ ಹಾಜರಾಗುತ್ತೇವೆ. ಅಲ್ಲಿ ಬೇರೆ ಸ್ಥಳಗಳಿಗಿಂತ ನೆಟ್‌ವರ್ಕ್ ಉತ್ತಮವಾಗಿದೆ ಮತ್ತು ನಮಗೆ ಕುಳಿತುಕೊಳ್ಳಲು ಸ್ಥಳವಿದೆ’ ಎನ್ನುತ್ತಾರೆ.

“ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 3 ರವರೆಗೆ ಅಧ್ಯಯನ ಮಾಡುತ್ತೇವೆ ಮತ್ತು ಉಪನ್ಯಾಸಕರು ಟಿಪ್ಪಣಿಗಳನ್ನು ಕಳುಹಿಸಿದ್ದರೆ, ಅದನ್ನು ಅಲ್ಲಿ ಡೌನ್‌ಲೋಡ್ ಮಾಡಿಕೊಂಡು ನಂತರ ಮನೆಗೆ ಹಿಂತಿರುಗುತ್ತೆವೆ” ಎಂದು ವಿದ್ಯಾರ್ಥಿನಿ ಪವಿತ್ರಾ ಹೇಳಿದ್ದಾರೆ.

In Uttara Kannada, students travel miles for cell signal to take online classes | The News Minute
PC: The News Minute

ಈ ಮೂರು ಗ್ರಾಮಗಳಲ್ಲಿ 1,500 ಕ್ಕೂ ಹೆಚ್ಚು ಜನರು ವಾಸಿಸುತ್ತಿದ್ದಾರೆ. ಇಲ್ಲಿ ಪ್ರಸ್ತುತ ಆನ್‌ಲೈನ್ ತರಗತಿಗಳಿಗೆ ಹಾಜರಾಗುತ್ತಿರುವ 15 ವಿದ್ಯಾರ್ಥಿಗಳಿದ್ದಾರೆ.

ದೇವಳಮಕ್ಕಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಎಂಟು ಗ್ರಾಮಗಳಿದ್ದು, ಅವುಗಳಲ್ಲಿ ಐದು ಗ್ರಾಮಗಳಿಗೆ ನೆಟ್‌ವರ್ಕ್ ಸಂಪರ್ಕವಿದೆ. ಆದರೆ, ದೇವಳಮಕ್ಕಿ ಸಮೀಪವೇ ಇರುವ ನಗೆ, ಶಿರ್ವೆ, ಕೋವೆ ಗ್ರಾಮಗಳಿಗೆ ಈವರೆಗೆ ನೆಟ್‌ವರ್ಕ್ ಸಂಪರ್ಕ ಏರ್ಪಟ್ಟಿಲ್ಲ. ದೇವಳಮಕ್ಕಿಯಲ್ಲಿ ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (ಬಿಎಸ್‌ಎನ್‌ಎಲ್) ನ ಒಂದೇ ಒಂದು ಮೊಬೈಲ್ ಟವರ್ ಇದೆ.

ಇದನ್ನೂ ಓದಿ: LKG ಯಿಂದ 7 ನೇ ತರಗತಿಯವರೆಗೆ ಆನ್‌ಲೈನ್‌ ಕ್ಲಾಸ್‌ ರದ್ದು: ಸಚಿವ ಸಂಪುಟ ತೀರ್ಮಾನ

ಕಠಿಣ ತುರ್ತು ಪರಿಸ್ಥಿತಿಯಲ್ಲಿಯೂ ಸಹ, ನಾವು ಮೊಬೈಲ್ ಸಿಗ್ನಲ್‌ಗಾಗಿ ಕಿಲೋಮೀಟರ್‌ಗಟ್ಟಲೆ  ಪ್ರಯಾಣಿಸಬೇಕಾಗಿದೆ. ಇಲ್ಲೂ ಬಿಎಸ್ಎನ್ಎಲ್ ನೆಟ್ವರ್ಕ್ ಮಾತ್ರ ಲಭ್ಯವಿದೆ. ಪವರ್ ಕಟ್ ಇದ್ದಾಗ ಯಾವುದೇ ನೆಟ್ವರ್ಕ್ ದೊರೆಯುವುದಿಲ್ಲ ಎಂದು ಗ್ರಾಮಸ್ಥರು ಹೇಳುತ್ತಾರೆ.

ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಅಭ್ಯಸಿಸುತ್ತಿರುವ ದೇವಳಮಕ್ಕಿ ಗ್ರಾಮದ ವಿದ್ಯಾರ್ಥಿ ಪ್ರಜ್ವಲ್ ಹೇಳುವಂತೆ ’ ನನಗೆ ಆನ್‌ಲೈನ್ ತರಗತಿಗಳಿಲ್ಲ. ಆದರೆ ನೆಟ್ವರ್ಕ್ ಸಿಗದೆ ಸಮಸ್ಯೆ ಅನುಭವಿಸುತ್ತಯಿರುವ ವಿದ್ಯಾರ್ಥಿಗಳನ್ನು ನೋಡುತ್ತಿದ್ದೇನೆ. ಆನ್‌ಲೈನ್ ತರಗತಿಗಳು ನಡೆಯಲೇಬೇಕೆಂಬ ನಿಯಮಗಳಿದ್ದರೇ, ನಮ್ಮ ಹಳ್ಳಿಗಳಲ್ಲಿ ಸಂಪರ್ಕವು ಸುಧಾರಿಸಬೇಕು’ ಎಂದಿದ್ದಾರೆ ಎಂದು ಟಿಎನ್‌ಎಂ ವರದಿ ಮಾಡಿದೆ.

PC: The News Minute

ಶಿಕ್ಷಣದ 2017-18ರ ರಾಷ್ಟ್ರೀಯ ಮಾದರಿ ಸಮೀಕ್ಷೆಯ ವರದಿಯ ಪ್ರಕಾರ, ಕೇವಲ 24% ಭಾರತೀಯ ಕುಟುಂಬಗಳು ಮಾತ್ರ ಇಂಟರ್ನೆಟ್ ಸೌಲಭ್ಯವನ್ನು ಹೊಂದಿದ್ದರೆ, ಕೇವಲ 15% ರಷ್ಟು ಗ್ರಾಮೀಣ ಕುಟುಂಬಗಳು ಮಾತ್ರ ಇಂಟರ್ನೆಟ್ ಸೇವೆಗಳನ್ನು ಹೊಂದಿದ್ದಾರೆ. ಖಾಸಗಿ ನೆಟ್‌ವರ್ಕ್ ಪೂರೈಕೆದಾರರು ಚಂದಾದಾರರಿಗೆ, ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಸಂಪರ್ಕವನ್ನು ಖಾತರಿಪಡಿಸಿಲ್ಲ ಎಂದು ಶಿಕ್ಷಣ ಸಂಸ್ಥೆಗಳಿಗೆ ಜಾಗತಿಕ ಶ್ರೇಯಾಂಕವನ್ನು ಪ್ರಕಟಿಸುವ ಕ್ಯೂಎಸ್(Quacquarelli Symonds) ವರದಿ ಮಾಡಿದೆ.

ರಾಜ್ಯದ ವಿದ್ಯಾರ್ಥಿಗಳಿಗೆ ಶಾಲೆಗಳನ್ನು ಪುನರಾರಂಭಿಸುವ ಬಗ್ಗೆ ಕರ್ನಾಟಕ ಸರ್ಕಾರ ಇನ್ನೂ ನಿರ್ಧಾರ ತೆಗೆದುಕೊಳ್ಳಬೇಕಾಗಿದೆ. ಶಾಲೆ ತೆರೆಯುವ ಬಗ್ಗೆ ಪರ-ವಿರೋಧ ಚರ್ಚೆಗಳು ನಡೆಯುತ್ತಿವೆ.


ಇದನ್ನೂ ಓದಿ: ಮಕ್ಕಳಿರುವಲ್ಲೇ ಶಾಲೆ!: ಛತ್ತಿಸ್‌ಘಡ ಶಿಕ್ಷಕನ ಮನಮೆಚ್ಚುವ ಕಾರ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...