Homeಮುಖಪುಟಮುಂದಿನ 6 ತಿಂಗಳಲ್ಲಿ ಮಾಧ್ಯಮದ ಮೇಲೆ ನಿಯಂತ್ರಣ: ಅಣ್ಣಾಮಲೈ ವಿವಾದಿತ ಹೇಳಿಕೆ

ಮುಂದಿನ 6 ತಿಂಗಳಲ್ಲಿ ಮಾಧ್ಯಮದ ಮೇಲೆ ನಿಯಂತ್ರಣ: ಅಣ್ಣಾಮಲೈ ವಿವಾದಿತ ಹೇಳಿಕೆ

- Advertisement -
- Advertisement -

ಮುಂದಿನ 6 ತಿಂಗಳಲ್ಲಿ ಮಾಧ್ಯಮಗಳ ಮೇಲೆ ನಿಯಂತ್ರಣ ತರುತ್ತೇವೆ ಎನ್ನುವ ಮೂಲಕ ತಮಿಳುನಾಡು ಬಿಜೆಪಿ ಅಧ್ಯಕ್ಷ, ಮಾಜಿ ಐಪಿಎಸ್ ಅಧಿಕಾರಿ ಕೆ.ಅಣ್ಣಾಮಲೈ ವಿವಾದಿತ ಹೇಳಿಕೆ ನೀಡಿದ್ದಾರೆ. ಕೊಯಮತ್ತೂರಿನಿಂದ ಚೆನ್ನೈವರೆಗೆ ನಡೆದ ರೋಡ್‌ ಶೋನಲ್ಲಿ ಇಂತಹ ಹೇಳಿಕೆ ನೀಡಿದ್ದಾರೆ.

ಶುಕ್ರವಾರ (ಜುಲೈ 16) ದಂದು ಚೆನ್ನೈನ ಪಕ್ಷದ ಪ್ರಧಾನ ಕಚೇರಿಯಲ್ಲಿ ತಮಿಳುನಾಡು ಬಿಜೆಪಿ ಅಧ್ಯಕ್ಷರಾಗಿ ಅಧಿಕೃತವಾಗಿ ಪ್ರಮಾಣ ವಚನ ಸ್ವೀಕರಿಸುವ ನಿರೀಕ್ಷೆಯಿದೆ.

“ಮಾಧ್ಯಮವು ನಮ್ಮ ಬಗ್ಗೆ ಸುಳ್ಳು ಸುದ್ದಿ ಹರಡುತ್ತಿದೆ ಎಂಬ ಚಿಂತೆಗಳನ್ನು ಮರೆತುಬಿಡಿ. ಮುಂದಿನ ಆರು ತಿಂಗಳಲ್ಲಿ ನಾವು ಮಾಧ್ಯಮದ ಮೇಲೆ ನಿಯಂತ್ರಣ ಮತ್ತು ಅವುಗಳನ್ನು ನಮ್ಮ ಅಡಿಯಲ್ಲಿ ಬರುವಂತೆ ಮಾಡುವುದನ್ನು ನೀವು ನೋಡುತ್ತೀರಿ ”ಎಂದು ಅಣ್ಣಾಮಲೈ ಹೇಳಿದ್ದಾರೆ.

“ಹಿಂದಿನ ಬಿಜೆಪಿ ಮುಖ್ಯಸ್ಥ ಎಲ್.ಮುರುಗನ್ ಈಗ ಮಾಹಿತಿ ಮತ್ತು ಪ್ರಸಾರ ಸಚಿವರಾಗಿದ್ದಾರೆ. ಎಲ್ಲಾ ಮಾಧ್ಯಮಗಳು ಈಗ ಅವರ ಅಡಿಯಲ್ಲಿ ಬರುತ್ತವೆ. ಆದ್ದರಿಂದ ಇನ್ನು ಮುಂದೆ, ಸುಳ್ಳು ಮಾಹಿತಿಯನ್ನು ರಾಜಕೀಯದ ಸುದ್ದಿಯಾಗಿ ಹರಡಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷನಾಗಿ ‘ಅಣ್ಣಾಮಲೈ’ ನೇಮಕ

ತಮಿಳುನಾಡು ರಾಜ್ಯ ಅಧ್ಯಕ್ಷರಾಗಿದ್ದ ಎಲ್. ಮುರುಗನ್ ಅವರಿಗೆ ಕೇಂದ್ರ ಸಚಿವಾಲಯದ ರಾಜ್ಯ ಸಚಿವರನ್ನಾಗಿ ನೇಮಿಸಲಾಗಿದೆ. ಅವರಿಗೆ ಮಾಹಿತಿ ಮತ್ತು ಪ್ರಸಾರ, ಮತ್ತು ಮೀನುಗಾರಿಕೆ, ಪಶುಸಂಗೋಪನಾ ಸಚಿವಾಲಯವನ್ನು ನೀಡಲಾಗಿದೆ.

ಅಣ್ಣಾ ಮಲೈ ಅವರು 2020 ರ ಆಗಸ್ಟ್‌ ತಿಂಗಳಲ್ಲಿ ಬಿಜೆಪಿ ಸೇರಿದ್ದರು. ಇತ್ತೀಚೆಗೆ ನಡೆದ ತಮಿಳುನಾಡು ವಿಧಾನಸಭಾ ಚುನಾವಣೆಯ ಸಮಯದಲ್ಲಿ ಅವರು ಕರೂರ್‌ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ, ಸೋಲನುಭವಿಸಿದ್ದರು. ಅವರ ವಿರುದ್ದ ಸ್ಪರ್ಧಿಸಿದ್ದ ಡಿಎಂಕೆಯ ಮೊಂಜನೂರು ಎಲಂಗೋ ಅವರು 24,816 ಮತಗಳ ಅಂತರದಲ್ಲಿ ಜಯಗಳಿಸಿದ್ದರು.

ಆಗಸ್ಟ್ 2020 ರಲ್ಲಿ, ಅಣ್ಣಾಮಲೈ ಬಿಜೆಪಿಗೆ ಸೇರಿದಾಗ, ಕೊಯಮತ್ತೂರು ಪೊಲೀಸರು ಅಣ್ಣಾಮಲೈ ಮತ್ತು ಹಲವಾರು ಬಿಜೆಪಿ ನಾಯಕರ ವಿರುದ್ಧ ಕೊರೊನಾ ಮಾರ್ಗಸೂಚಿ ಉಲ್ಲಂಘಿಸಿದಕ್ಕಾಗಿ, ಕಾನೂನುಬಾಹಿರ ಸಭೆ ನಡೆಸಿದ ಆರೋಪದ ಮೇಲೆ ಸಾಂಕ್ರಾಮಿಕ ರೋಗ ಕಾಯ್ದೆಯಡಿ  ಪ್ರಕರಣ ದಾಖಲಿಸಿದ್ದರು.

ಈ ಹಿಂದೆಯೂ ಕೃಷಿ ಕಾನೂನುಗಳ ಬಗ್ಗೆಯೂ ವಿವಾದಿತ ಹೇಳಿಕೆ ನೀಡಿದ್ದರು. “ಈ ಕೃಷಿ ಕಾಯ್ದೆಗಳಲ್ಲಿ ಗೊಂದಲ ಉಂಟುಮಾಡುವ ಯಾವುದೇ ಅಂಶಗಳಿಲ್ಲ. ಎಲ್ಲವೂ ಸ್ಪಷ್ಟವಾಗಿದೆ. ಆದರೂ ಕಾಯ್ದೆಯ ವಿರುದ್ಧ ಪ್ರತಿಭಟನೆ ನಡೆಸಲು ದೆಹಲಿಯ ಗಡಿ ಭಾಗದಲ್ಲಿ 7 ರಿಂದ 8 ಲಕ್ಷ ರೈತರನ್ನು ಸೇರಿಸಲಾಗಿದೆ. ಕೇಂದ್ರ ಸರ್ಕಾರ ಮತ್ತು ರೈತರ ನಡುವೆ ಸಂಘರ್ಷ ಉಂಟುಮಾಡುವುದು ಇದರ ಉದ್ದೇಶ” ಎಂದು ಹೇಳಿದ್ದರು.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನಾನು ಹಿಂದೂ ಅಲ್ಲ, ಮನುಷ್ಯ’: ಎಸ್‌ಪಿ ನಾಯಕ ಶಿವರಾಜ್ ಸಿಂಗ್ ಯಾದವ್ ಹೇಳಿಕೆ ತಿರುಚಿ ವಿವಾದ ಸೃಷ್ಟಿಸಿದ ಬಿಜೆಪಿ ಬೆಂಬಲಿಗರು

ಸಮಾಜವಾದಿ ಪಕ್ಷದ ನಾಯಕ, ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರ ಆಪ್ತ ಸಹಾಯಕ ಹಾಗೂ ಉತ್ತರ ಪ್ರದೇಶದ ಫಿರೋಜಾಬಾದ್‌ನ ಸಮಾಜವಾದಿ ಪಕ್ಷದ ಜಿಲ್ಲಾಧ್ಯಕ್ಷ ಶಿವರಾಜ್ ಸಿಂಗ್ ಯಾದವ್ ‘ನಾನು ಹಿಂದೂ ಅಲ್ಲ, ನಾನು...

ಛತ್ತೀಸ್‌ಗಢ : ಎಂಟು ಮಂದಿ ಬಂಗಾಳಿ ಮುಸ್ಲಿಂ ವಲಸೆ ಕಾರ್ಮಿಕರ ಮೇಲೆ ಬಜರಂಗದಳ ಕಾರ್ಯಕರ್ತರಿಂದ ಹಲ್ಲೆ; ವರದಿ

ಛತ್ತೀಸ್‌ಗಢದ ರಾಯ್‌ಪುರದಲ್ಲಿ ಭಾನುವಾರ (ಜ.4) ಬಜರಂಗದಳ ಕಾರ್ಯಕರ್ತರು ಎಂಟು ಮಂದಿ ಬಂಗಾಳಿ ಮಾತನಾಡುವ ಮುಸ್ಲಿಂ ವಲಸೆ ಕಾರ್ಮಿಕರ ಮೇಲೆ ಹಲ್ಲೆ ನಡೆಸಿದ್ದು, ಒಬ್ಬ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ರಾಯ್‌ಪುರ ಜಿಲ್ಲೆಯ ಕಟೋವಾಲಿ...

‘ಉಮರ್ ಮತ್ತು ಶಾರ್ಜಿಲ್ ಜಾಮೀನು ನಿರಾಕರಣೆ’: ಶಾಸಕಾಂಗ, ನ್ಯಾಯಾಂಗದ ಕಾರ್ಯವೈಖರಿಯಲ್ಲಿನ ವೈರುಧ್ಯಗಳಿಗೆ ಉದಾಹರಣೆ: ಶ್ರೀಪಾದ್ ಭಟ್

ಇಂಡಿಯನ್ ಎಕ್ಸ್ಪ್ರೆಸ್ ನಲ್ಲಿನ ವರದಿಯ ಪ್ರಕಾರ ಈ ಪ್ರಕರಣದ ವಿಚಾರಣೆಯಲ್ಲಿರುವ ಮುಖ್ಯ ಪ್ರಶ್ನೆ: ಬಂಧನವಾಗಿ ಐದು ವರ್ಷಗಳಾದರೂ ಸಹ ಇನ್ನೂ ವಿಚಾರಣೆ ಆರಂಭವಾಗಿಲ್ಲ. ದೀರ್ಘಕಾಲದ ಜೈಲುವಾಸವನ್ನು ಭಯೋತ್ಪಾದಕ ವಿರೋಧಿ ಕಾನೂನಿನ ಅಡಿಯಲ್ಲಿ ಸಮರ್ಥಿಸಬಹುದೇ?...

ಉತ್ತರ ಪ್ರದೇಶ SIR : ಮತದಾರರ ಪಟ್ಟಿಯಿಂದ 2.89 ಕೋಟಿ ಹೆಸರು ಡಿಲೀಟ್

ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐರ್‌) ಬಳಿಕ ಸುಮಾರು 2.89 ಕೋಟಿ ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂದು ಉತ್ತರ ಪ್ರದೇಶದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ) ನವದೀಪ್ ರಿನ್ವಾ...

ಕರೂರ್ ಕಾಲ್ತುಳಿತ ಪ್ರಕರಣ: ಟಿವಿಕೆ ನಾಯಕ ವಿಜಯ್‌ಗೆ ವಿಚಾರಣೆಗೆ ಹಾಜರಾಗುವಂತೆ ಸಿಬಿಐ ನೋಟಿಸ್

ಕರೂರ್ ಕಾಲ್ತುಳಿತ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಟಿವಿಕೆ ನಾಯಕ ವಿಜಯ್ ಅವರಿಗೆ ಸಿಬಿಐ ನೋಟಿಸ್ ಜಾರಿ ಮಾಡಿದೆ ಎಂದು ಪಿಟಿಐ ಮಂಗಳವಾರ ವರದಿ ಮಾಡಿದೆ. ಸೆಪ್ಟೆಂಬರ್ 27 ರಂದು ನಟ-ರಾಜಕಾರಣಿ ವಿಜಯ್ ಅವರ ತಮಿಳಗ...

ಲಂಡನ್‌ನಲ್ಲಿ ಪ್ಯಾಲೆಸ್ತೀನ್ ರಾಯಭಾರ ಕಚೇರಿ ಉದ್ಘಾಟನೆ : ‘ಐತಿಹಾಸಿಕ ಕ್ಷಣ’ ಎಂದ ರಾಯಭಾರಿ ಹುಸಾಮ್ ಝೊಮ್ಲೋಟ್

ಲಂಡನ್‌ನಲ್ಲಿ ಪ್ಯಾಲೆಸ್ತೀನ್ ದೇಶದ ರಾಯಭಾರಿ ಕಚೇರಿ ಅಧಿಕೃತವಾಗಿ ಉದ್ಘಾಟನೆಯಾಗಿದ್ದು, ಯುಕೆಯ ಪ್ಯಾಲೆಸ್ತೀನ್‌ ರಾಯಭಾರಿ ಇದನ್ನು 'ಐತಿಹಾಸಿಕ ಕ್ಷಣ' ಎಂದು ಬಣ್ಣಿಸಿದ್ದಾರೆ. ಸೋಮವಾರ (ಜ.5) ಪಶ್ಚಿಮ ಲಂಡನ್‌ನ ಹ್ಯಾಮರ್‌ಸ್ಮಿತ್‌ನಲ್ಲಿ ನಡೆದ ರಾಯಭಾರ ಕಚೇರಿ ಉದ್ಘಾಟನಾ ಸಮಾರಂಭದಲ್ಲಿ...

ಬಾಂಗ್ಲಾದೇಶದಲ್ಲಿ ಹಿಂದೂ ಉದ್ಯಮಿ ಮತ್ತು ಪತ್ರಕರ್ತನಾಗಿದ್ದ ರಾಣಾ ಪ್ರತಾಪ್ ಬೈರಾಗಿ ತಲೆಗೆ ಗುಂಡಿಕ್ಕಿ ಹತ್ಯೆ 

ಬಾಂಗ್ಲಾದೇಶದ ಜೆಸ್ಸೋರ್ ಜಿಲ್ಲೆಯಲ್ಲಿ ಸೋಮವಾರ 38 ವರ್ಷದ ರಾಣಾ ಪ್ರತಾಪ್ ಬೈರಾಗಿ ಅವರ ತಲೆಗೆ ಅಪರಿಚಿತ ವ್ಯಕ್ತಿಗಳು ಗುಂಡು ಹಾರಿಸಿದ್ದಾರೆ ಎಂದು ಹಲವು ಮಾಧ್ಯಮಗಳಲ್ಲಿ ವರದಿ ಪ್ರಕಟವಾಗಿದೆ.  ಬೈರಾಗಿ ಒಬ್ಬ ಹಿಂದೂ ಉದ್ಯಮಿ ಮತ್ತು...

ತಿರುಪರನ್‌ಕುಂದ್ರಂ ಬೆಟ್ಟದ ಮೇಲೆ ದೀಪ ಬೆಳಗಿಸುವ ಆದೇಶ ಎತ್ತಿ ಹಿಡಿದ ಮದ್ರಾಸ್ ಹೈಕೋರ್ಟ್

ಮಧುರೈನ ತಿರುಪರನ್‌ಕುಂದ್ರಂ ಬೆಟ್ಟದ ಮೇಲಿರುವ ಕಲ್ಲಿನ ಕಂಬದಲ್ಲಿ ದೀಪ ಬೆಳಗಿಸಲು ಅನುಮತಿ ನೀಡಿ ಮದ್ರಾಸ್‌ ಹೈಕೋರ್ಟ್‌ನ ಮಧುರೈ ಪೀಠದ ಏಕ ಸದಸ್ಯ ನ್ಯಾಯಾಧೀಶರು ನೀಡಿದ ಆದೇಶವನ್ನು ವಿಭಾಗೀಯ ಪೀಠ ಎತ್ತಿಹಿಡಿದಿದೆ. ನ್ಯಾಯಮೂರ್ತಿ ಜಿ. ಜಯಚಂದ್ರನ್...

ಕರ್ನಾಟಕದ ದೀರ್ಘಾವಧಿಯ ಮುಖ್ಯಮಂತ್ರಿಯಾಗಿ ದಾಖಲೆ ಸೃಷ್ಟಿಸಿದ ಸಿದ್ದರಾಮಯ್ಯ

ಬೆಂಗಳೂರು: ಕರ್ನಾಟಕದ ಅತಿ ಹೆಚ್ಚು ಕಾಲ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ದಿವಂಗತ ಡಿ.ದೇವರಾಜ್ ಅರಸ್ ಅವರ ದಾಖಲೆಯನ್ನು (7 ವರ್ಷ 239 ದಿನಗಳು) ಸಿದ್ದರಾಮಯ್ಯ ಮುರಿದಿದ್ದಾರೆ.  ದೇವರಾಜು ಅರಸು ಮತ್ತು ಸಿದ್ದರಾಮಯ್ಯ ಅವರು ಸಾಮಾಜಿಕ...

ಅಜ್ಮೀರ್ ದರ್ಗಾಕ್ಕೆ ಪ್ರಧಾನಿ ಚಾದರ್ ಅರ್ಪಿಸುವುದನ್ನು ತಡೆಯುವಂತೆ ಅರ್ಜಿ : ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಉರೂಸ್ ಪ್ರಯುಕ್ತ ಅಜ್ಮೀರ್‌ನ ಸೂಫಿ ಸಂತ ಖ್ವಾಜಾ ಮುಯೀನುದ್ದೀನ್ ಹಸನ್ ಚಿಸ್ತಿ ಅವರ ದರ್ಗಾಕ್ಕೆ ಪ್ರಧಾನಿ ಚಾದರ್ ಅರ್ಪಿಸುವುದನ್ನು ಮತ್ತು ದರ್ಗಾಕ್ಕೆ ಸರ್ಕಾರದ ವತಿಯಿಂದ ನೀಡಲಾಗುವ ಗೌರವಗಳನ್ನು ತಡೆಯುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು...