Homeಕರ್ನಾಟಕರಾಜ್ಯದ ಪೊಲೀಸ್ ಸಿಬ್ಬಂದಿಗೆ ಹೊಸ 'ಬ್ಲೂ ಪೀಕ್‌ ಕ್ಯಾಪ್‌' ವಿತರಣೆ

ರಾಜ್ಯದ ಪೊಲೀಸ್ ಸಿಬ್ಬಂದಿಗೆ ಹೊಸ ‘ಬ್ಲೂ ಪೀಕ್‌ ಕ್ಯಾಪ್‌’ ವಿತರಣೆ

- Advertisement -
- Advertisement -

ರಾಜ್ಯದ ಪೊಲೀಸ್ ಹೆಡ್ ಕಾನ್‌ಸ್ಟೆಬಲ್‌ಗಳು (ಹೆಚ್‌ಪಿಸಿ) ಕಾನ್‌ಸ್ಟೆಬಲ್‌ಗಳು (ಪಿಸಿ) ಧರಿಸುತ್ತಿರುವ ಸ್ಲೋಚ್‌ ಹ್ಯಾಟ್‌ (ಟೋಪಿ) ಬದಲಾಗಿ ‘ನೇವಿ ಬ್ಲೂ ಪೀಕ್ ಕ್ಯಾಪ್’ ಅನ್ನು ವಿತರಿಸುವ ಕಾರ್ಯಕ್ರಮಕ್ಕೆ ಇಂದು (ಅ.28) ಅಧಿಕೃತವಾಗಿ ಚಾಲನೆ ನೀಡಲಾಗಿದೆ.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ಪೊಲೀಸ್ ಸಿಬ್ಬಂದಿಗೆ ಸಾಂಕೇತಿಕವಾಗಿ ನೀಲಿ ಬಣ್ಣದ ಪೀಕ್ ಕ್ಯಾಪ್ ವಿತರಿಸಿದರು.

ಬಳಿಕ ಮಾತನಾಡಿದ ಸಿಎಂ ಸಿದ್ದಾರಾಮಯ್ಯ, “ಇಂದು ಬಿಡುಗಡೆ ಮಾಡಿದ ಪೀಕ್ ಕ್ಯಾಪ್ ಮಾದರಿಯನ್ನು ಆಯ್ಕೆ ಮಾಡಿದ್ದು ನಾನೇ. 1956ರಿಂದ, ಅಂದರೆ ಸುಮಾರು 70 ವರ್ಷಗಳಿಂದ ಇದ್ದ ಒಂದೇ ಮಾದರಿಯ ಕ್ಯಾಪ್ ಅನ್ನು ಇಂದು ಬದಲಾಯಿಸಿದ್ದೇವೆ. ಅಧಿಕಾರಿ ಮತ್ತು ಸಿಬ್ಬಂದಿಗೆ ಒಂದೇ ಮಾದರಿ ಕ್ಯಾಪ್ ಒದಗಿಸಲಾಗಿದ್ದು ಇದರಿಂದ ಪೊಲೀಸ್ ಸಿಬ್ಬಂದಿಯ ಆತ್ಮ ವಿಶ್ವಾಸ ಹೆಚ್ಚಾಗಲಿ ಎಂದು ಹೇಳಿದರು.

ಕೇವಲ ಕ್ಯಾಪ್ ಬದಲಾಗುವುದಲ್ಲ. ನಿಮ್ಮ ಕಾರ್ಯಕ್ಷಮತೆಯೂ ಬದಲಾಗಲಿ ಎಂದು ಪೊಲೀಸರಿಗೆ ಕರೆ ನೀಡಿದರು.

ಪೊಲೀಸ್ ಇಲಾಖೆಯ ದಕ್ಷತೆಯಿಂದ ಸರ್ಕಾರಕ್ಕೆ ಒಳ್ಳೆ ಹೆಸರು ಬರುತ್ತದೆ. ಇಂಡಿಯಾ ಜಸ್ಟೀಸ್ ವರದಿಯಲ್ಲಿ ಕರ್ನಾಟಕ ಪೊಲೀಸ್ ನಂಬರ್ ಒನ್ ಸ್ಥಾನದಲ್ಲಿದೆ ಎನ್ನುವ ವರದಿ ರಾಜ್ಯದ ಘನತೆ ಹೆಚ್ಚಿಸಿದೆ ಎಂದು ಸಿಎಂ ಮೆಚ್ಚುಗೆ ವ್ಯಕ್ತಪಡಿಸಿದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಘರ್ಷಣೆ, ಅನೈತಿಕ ಪೊಲೀಸ್ ಗಿರಿ ಹೆಚ್ಚಾಗಿತ್ತು. ಈ ಹಿಂದಿನ ಅಧಿಕಾರಿಗಳು ನಿಯಂತ್ರಣ ಮಾಡಿರಲಿಲ್ಲ. ನಾನು ಇಬ್ಬರು ಅಧಿಕಾರಿಗಳನ್ನು ಬದಲಾಯಿಸಿ ಆದೇಶ ಹೊರಡಿಸಿದೆ. ಈಗ ದಕ್ಷಿಣ ಕನ್ನಡ ಜಿಲ್ಲೆ ನಿಯಂತ್ರಣದಲ್ಲಿದೆ. ಈ ಸಾಧನೆ ಮಾಡಿದ್ದೂ ನಮ್ಮದೇ ಅಧಿಕಾರಿಗಳು ಮತ್ತು ಸಿಬ್ಬಂದಿ. ಇವರೇನು ಬೇರೆ ಗ್ರಹದಿಂದ ಬಂದವರಲ್ಲ, ನಮ್ಮವರೇ ಆಗಿದ್ದಾರೆ. ಆದ್ದರಿಂದ ನೀವು ಮನಸ್ಸು ಮಾಡಿದರೆ ಎಲ್ಲವೂ ಸಾಧ್ಯವಿದೆ. ಸಾಧಿಸಿ ತೋರಿಸಿ ಎಂದು ಪೊಲೀಸರಿಗೆ ಹೇಳಿದರು.

ಕೆಲವು ಪೊಲೀಸರು ರಿಯಲ್ ಎಸ್ಟೇಟ್ ಮಾಡುವವರ ಜೊತೆ, ಡ್ರಗ್ ಜಾಲದ ಜೊತೆ ಶಾಮೀಲಾಗಿರ್ತಾರೆ. ರೌಡಿಗಳನ್ನು ಮೊಳಕೆಯಲ್ಲೆ ಚಿವುಟಿ ಹಾಕುವುದು ನಿಮ್ಮಿಂದ ಸಾಧ್ಯವಿದೆ. ಪೊಲೀಸರ ಬಗ್ಗೆ ಅಪರಾಧ ಜಗತ್ತಿಗೆ ಭಯ ಕಡಿಮೆಯಾಗಿದೆ. ಯಾಕೆ ಹೀಗಾಯ್ತು ಎಂದು ನಿಮ್ಮನ್ನು ನೀವೇ ಪ್ರಶ್ನಿಸಿಕೊಂಡರೆ ಉತ್ತರ ನಿಮಗೇ ಗೊತ್ತಿರುತ್ತದೆ ಎಂದರು.

ಕಲಬುರಗಿ| ಚಿತ್ತಾಪುರ ಪಥಸಂಚಲನ ವಿವಾದ: ವಾಗ್ವಾದದಲ್ಲಿ ಕೊನೆಗೊಂಡ ಶಾಂತಿ ಸಭೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...