Homeಕರ್ನಾಟಕಗೋಹತ್ಯೆ ನಿಷೇಧ: ವಯಸ್ಸಾದ ದನಗಳನ್ನು ಸರ್ಕಾರವೇ ಖರೀದಿಸಲಿ - ಸಿದ್ದರಾಮಯ್ಯ ಸಲಹೆ

ಗೋಹತ್ಯೆ ನಿಷೇಧ: ವಯಸ್ಸಾದ ದನಗಳನ್ನು ಸರ್ಕಾರವೇ ಖರೀದಿಸಲಿ – ಸಿದ್ದರಾಮಯ್ಯ ಸಲಹೆ

ರಾಜ್ಯ ಸರ್ಕಾರದ ಈ ನಡೆಯನ್ನು ಕುಮಾರಸ್ವಾಮಿ ಕೂಡ ಖಂಡಿಸಿದ್ದು, ಸರಣಿ ಟ್ವೀಟ್ ಮಾಡುವ ಮೂಲಕ ಮಸೂದೆಯಲ್ಲಿರುವ ಗೊಂದಲಗಳನ್ನು ಪರಾಮರ್ಶಿಸಿದ್ದಾರೆ.

- Advertisement -
- Advertisement -

ವಿರೋಧ ಪಕ್ಷಗಳ ಒಪ್ಪಿಗೆ ಪಡೆಯದೆಯೇ ವಿಧಾನಸಭೆಯಲ್ಲಿ ಗೋಹತ್ಯೆ ನಿಷೇಧ ಮಸೂದೆಯನ್ನು ಅಂಗೀಕರಿಸಲಾಗಿದ್ದು, ಬಿಜೆಪಿಯ ಈ ನಡಗೆ ಮುನಿಸಿಕೊಂಡಿರುವ ಕಾಂಗ್ರೆಸ್ ವಿಧಾನಸಭೆಯನ್ನು ಬಾಯ್ಕಾಟ್ ಮಾಡಿದೆ. ಈ ಮಸೂದೆಯ ಕುರಿತು ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, “ವಯಸ್ಸಾದ ದನಗಳನ್ನು ಸರ್ಕಾರವೇ ಖರೀದಿಸಲಿ” ಎಂದು ಸಲಹೆ ನೀಡಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಯನ್ನು ಎಎನ್‌ಐ ಟ್ವೀಟ್ ಮಾಡಿದ್ದು, “ಒಂದು ನಿಗದಿತ ಅವಧಿಯ ನಂತರ ದನಗಳು ನಿಷ್ಪ್ರಯೋಜಕವಾಗಿ ರೈತರ ಮೇಲೆ ಹೊರೆಯಾಗುತ್ತದೆ. ಹಾಗಾಗಿ ವಯಸ್ಸಾದ ದನಗಳನ್ನು ಸರ್ಕಾರವೇ ಖರೀದಿಸಲಿ ಎಂಬ ಸಲಹೆಯನ್ನು ನೀಡುತ್ತೇನೆ” ಎಂದು ವರದಿ ಮಾಡಿದೆ.

ಇದನ್ನೂ ಓದಿ: ಗೋಹತ್ಯೆ ನಿಷೇಧ ಮಸೂದೆ: ಆತಂಕ ವ್ಯಕ್ತಪಡಿಸಿದ ಮೃಗಾಲಯದ ಅಧಿಕಾರಿಗಳು!

 

ರಾಜ್ಯ ಬಿಜೆಪಿಯ ಬಹುದಿನದ ಬಯಕೆಯಾಗಿದ್ದ ‘ಗೋಹತ್ಯೆ ನಿಷೇದ ಮಸೂದೆ’ ಬುಧವಾರ ವಿಧಾನಸಭೆಯಲ್ಲಿ ಪ್ರತಿಪಕ್ಷಗಳ ವಿರೋಧದ ನಡುವೆಯೂ ಅಂಗೀಕಾರ ಪಡೆದುಕೊಂಡಿದೆ.

ಇದನ್ನೂ ಓದಿ: ಗೋಹತ್ಯೆ ನಿಷೇಧ ಕಾಯ್ದೆ, ಲವ್ ಜಿಹಾದ್ ತಡೆ ಕಾಯ್ದೆ ತರುವುದು ನೀತಿಸಂಹಿತೆಯ ಉಲ್ಲಂಘನೆ: ಸಿದ್ದರಾಮಯ್ಯ

ವಿಧಾನಸಭೆಯಲ್ಲಿ ಅಂಗೀಕಾರ ಪಡೆದುಕೊಂಡಿರುವ 2020ನೆ ಸಾಲಿನ ಕರ್ನಾಟಕ ಗೋ ಹತ್ಯೆ ನಿಯಂತ್ರಣ ಮತ್ತು ಜಾನುವಾರು ಸಂರಕ್ಷಣಾ ವಿಧೇಯಕದ ಪ್ರಕಾರ, “13 ವರ್ಷದೊಳಗಿನ ಹಸು, ಹಸುವಿನ ಕರು ಮತ್ತು ಗೂಳಿ, ಎತ್ತು, ಎಮ್ಮೆ ಅಥವಾ ಕೋಣವನ್ನು ಹತ್ಯೆ ಮಾಡುವಂತಿಲ್ಲ. ಆದರೆ, ಸಾರ್ವಜನಿಕ ಹಿತಾಸಕ್ತಿಯಿಂದ ಅಥವಾ ಗುಣಪಡಿಸಲಾಗದಂತಹ ಕಾಯಿಲೆಯಿಂದ ಬಳಲುತ್ತಿರುವ 13 ವರ್ಷ ವಯಸ್ಸಿನ ಮೇಲ್ಪಟ್ಟ ಎಮ್ಮೆಯನ್ನು ಮಾತ್ರ ರಾಜ್ಯ ಸರಕಾರವು ಅಧಿಕೃತಗೊಳಿಸಿದ ಪಶುವೈದ್ಯಾಧಿಕಾರಿಯ ಪ್ರಮಾಣೀಕರಣದೊಂದಿಗೆ ವಧಿಸಲು ಅವಕಾಶ ಕಲ್ಪಿಸಬಹುದು.”

ಯಾರಾದರೂ ಗೋಹತ್ಯೆ ಮಾಡಿದರೆ ಕನಿಷ್ಠ 3 ರಿಂದ 7 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಬಹುದಾಗಿದೆ. ಒಂದು ಜಾನುವಾರು ಹತ್ಯೆ ಮಾಡಿದರೆ ಕನಿಷ್ಠ 50 ಸಾವಿರ ರೂ.ಗಳಿಂದ ಗರಿಷ್ಠ 5 ಲಕ್ಷ ರೂ.ಗಳವರಗೆ ದಂಡ ವಿಧಿಸಬಹುದು. ಪುನರಾವರ್ತಿತ ಅಪರಾಧಕ್ಕೆ 1 ಲಕ್ಷ ರೂ.ಗಳಿಂದ 10 ಲಕ್ಷ ರೂ.ಗಳವರೆಗೆ ದಂಡದ ಜೊತೆಗೆ 7 ವರ್ಷ ಜೈಲು ಶಿಕ್ಷೆ ವಿಧಿಸಲು ಅವಕಾಶ ಕಲ್ಪಿಸಲಾಗಿದೆ.

ಇದನ್ನೂ ಓದಿ: ಗೋಹತ್ಯೆ ನಿಷೇಧ ಕಾಯ್ದೆ ದುರ್ಬಳಕೆ ಎಂದ ಹೈಕೋರ್ಟ್: ಮ‌ತ್ತೊಮ್ಮೆ ಗೋಹತ್ಯೆಗೆ ಜೈಲುಶಿಕ್ಷೆ ಎಂದ ಯೋಗಿ!

ಇದಕ್ಕೆ ಸದನದಲ್ಲಿಯೇ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, “ಚರ್ಚೆಯಲ್ಲಿ ಪಾಲ್ಗೊಳ್ಳಲು ನಾವು ಸಿದ್ಧವಾಗಿದ್ದೇವೆ. ಆದುದರಿಂದ, ನಾಳೆ ಬೆಳಗ್ಗೆ ಈ ವಿಧೇಯಕದ ಬಗ್ಗೆ ಚರ್ಚೆ ನಡೆಸೋಣ. ಬಿಜೆಪಿ ಶಾಸಕರು ಕೇಸರಿ ಶಾಲು ಹಾಕಿಕೊಂಡು ಬಂದ ತಕ್ಷಣ ದೇಶದಲ್ಲಿ ಏನು ಪ್ರಳಯ ಆಗುವುದಿಲ್ಲ. ವಿಧೇಯಕದ ಬಗ್ಗೆ ಚರ್ಚೆಗೆ ನಾವು ಸಿದ್ಧವಿದ್ದೇವೆ ಎಂದು ಹೇಳಿದರೂ ಅವಕಾಶ ನೀಡದೆ ಹೋದರೆ ಈ ಸದನದ ಪಾವಿತ್ರ್ಯತೆ ಹೋಗುತ್ತದೆ. ಸದನ ಕಲಾಪ ಸಲಹಾ ಸಮಿತಿ ಸಭೆಯನ್ನು ನಿಮ್ಮ ಅಧ್ಯಕ್ಷತೆ(ಸ್ಪೀಕರ್)ಯಲ್ಲಿ ಕರೆಯುವುದು ಏಕೆ? ನಮ್ಮನ್ನು ಆ ಸಭೆಗೆ ಆಹ್ವಾನಿಸುವುದು ಏಕೆ? ನಿನ್ನೆ ನಡೆದ ಸಭೆಯಲ್ಲಿ ಸಂಸದೀಯ ಕಾರ್ಯದರ್ಶಿಗಳ ನೇಮಕದ ವಿಧೇಯಕ ಹಿಂಪಡೆಯುವುದು ಹಾಗೂ ವಿಶ್ವವಿದ್ಯಾಲಯಗಳ ವಿಧೇಯಕ ಮಂಡನೆ ಮತ್ತು ಆಧ್ಯಾದೇಶಗಳಿಗೆ ಸಂಬಂಧಿಸಿದ ವಿಧೇಯಕಗಳನ್ನು ತರುವುದಷ್ಟೇ ಚರ್ಚೆಯಾಗಿದ್ದು” ಎಂದು ಸಿದ್ದರಾಮಯ್ಯ ಹೇಳಿದ್ದರು.

ಇದನ್ನೂ ಓದಿ: ಉತ್ತರಪ್ರದೇಶ ಗೋಹತ್ಯೆ ನಿಷೇಧ ಕಾಯ್ದೆ ಅಮಾಯಕರನ್ನು ಸಿಲುಕಿಸಲು ಬಳಸಲಾಗುತ್ತಿದೆ: ಹೈಕೋರ್ಟ್

“ಅಜೆಂಡಾದಲ್ಲಿ ಇರದಿದ್ದರೂ ತರಾತುರಿಯಲ್ಲಿ ಈ ವಿಧೇಯಕವನ್ನು ತಂದಿದ್ದು ಏಕೆ? ಪಶುಸಂಗೋಪನೆ ಸಚಿವ ಪ್ರಭು ಚೌಹಾಣ್ ಈ ವಿಧೇಯಕವನ್ನು ಮಂಡನೆ ಮಾಡುವ ವೇಳೆ ಅವರ ಬಳಿ ವಿಧೇಯಕದ ಪ್ರತಿಯೂ ಇರಲಿಲ್ಲ. ಈ ವಿಧೇಯಕ ತರದಂತೆ ನಾವೇನಾದರೂ ಸರಕಾರದ ಅಡ್ಡ ನಿಂತಿದ್ದೇವಾ? ಚರ್ಚೆ ಮಾಡಲ್ಲ ಎಂದು ಹೇಳಿದ್ದೇವಾ? ಆದರೂ ಕಳ್ಳತನದಿಂದ, ಹಿಂಬಾಗಿಲ ಮೂಲಕ ಈ ವಿಧೇಯಕ ಜಾರಿಗೆ ತರಲು ಮುಂದಾಗಿರುವುದು ಏಕೆ? ಗ್ರಾಮಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ದುರುದ್ದೇಶದಿಂದ ಈ ವಿಧೇಯಕ ತರಲಾಗಿದೆ. ನೀವು ಗೋಮಾತೆಯ ಮೇಲೆ ಪ್ರಮಾಣ ಮಾಡಿ ಹೇಳಿ ಸಚಿವರ ಬಳಿ ಆ ವಿಧೇಯಕದ ಪ್ರತಿ ಇತ್ತೇ” ಎಂದು ಸಿದ್ದರಾಮಯ್ಯ ಗುಡುಗಿದ್ದರು.

ಇದನ್ನೂ ಓದಿ: ದೇಶ ಮುನ್ನಡೆಸುವ ಎಲ್ಲಾ ಅರ್ಹತೆ ಶರದ್ ಪವಾರ್ ಅವರಿಗಿದೆ: ಸಂಜಯ್ ರಾವತ್

ರಾಜ್ಯ ಸರ್ಕಾರದ ಈ ನಡೆಯನ್ನು ಕುಮಾರಸ್ವಾಮಿ ಕೂಡ ಖಂಡಿಸಿದ್ದು, ಸರಣಿ ಟ್ವೀಟ್ ಮಾಡುವ ಮೂಲಕ ಮಸೂದೆಯಲ್ಲಿರುವ ಗೊಂದಲಗಳನ್ನು ಪರಾಮರ್ಶಿಸಿದ್ದಾರೆ.

1. ಗೋಹತ್ಯೆ ನಿಷೇಧ ಕಾಯ್ದೆಯಲ್ಲಿ ಕಾಂಗ್ರೆಸ್‌-ಬಿಜೆಪಿಗೆ ಮತಬ್ಯಾಂಕ್‌ನದ್ದೇ ಆದ್ಯತೆ. ಆದರೆ, ಹಾಲು ಉತ್ಪಾದನೆಯಲ್ಲಿ ತೊಡಗಿರುವ 24 ಲಕ್ಷ ರೈತ ಕುಟುಂಬಗಳಿಗೆ ಕಾಯ್ದೆ ವಿಚಾರವಾಗಿ ಇರುವ ಅನುಮಾನ, ಆತಂಕಗಳನ್ನು ಜೆಡಿಎಸ್‌ ನಿಷ್ಪಕ್ಷಪಾತವಾಗಿ ವಿಮರ್ಶಿಸಲು ಬಯಸುತ್ತದೆ. ಈ ಹಿಂದೆಯೇ ಹೇಳಿದಂತೆ ಜೆಡಿಎಸ್‌ ಒಂದು ಪಕ್ಷವಾಗಿ ಮಾತ್ರವಲ್ಲ, ರೈತ ಸಂಘವಾಗಿ, ರೈತ ಪ್ರತಿನಿಧಿಯಾಗಿ ಕೆಲಸ ಮಾಡಲಿಚ್ಚಿಸುತ್ತದೆ.

ಇದನ್ನೂ ಓದಿ: ಗೋಮಾತೆಯ ಮೇಲೆ ಪ್ರಮಾಣ ಮಾಡಿ, ಸಚಿವರ ಬಳಿ ಆ ವಿಧೇಯಕದ ಪ್ರತಿ ಇತ್ತೇ – ಸಿದ್ದರಾಮಯ್ಯ

2. ಸರ್ಕಾರ ಗೋಹತ್ಯೆ ನಿಷೇಧಿಸುವ ಕಾಯ್ದೆಯನ್ನು ರೂಪಿಸಿದೆ. ಆದರೆ, ಗೋಹತ್ಯೆ ನಿಷೇಧದ ಜೊತೆಗೆ ಗೋಮಾತೆಯನ್ನು ರಕ್ಷಿಸುವ, ಗೋಮಾತೆಯನ್ನೇ ನಂಬಿದ ರೈತರನ್ನು ರಕ್ಷಿಸುವ ಕಾನೂನಾಗಿಯೂ ಇವತ್ತಿನ ಈ ಕಾಯ್ದೆ ವರ್ತಿಸಬೇಕು ಎಂಬುದು ರೈತರ ಪ್ರತಿನಿಧಿಯಾದ ಜೆಡಿಎಸ್‌ನ ಒತ್ತಾಯ. ಈ ವಿಚಾರವಾಗಿ ಯಾರದ್ದೂ ತಕರಾರು ಇಲ್ಲ ಎಂದು ನಾವು ಭಾವಿಸುತ್ತೇವೆ.

3. ನಾವೆಲ್ಲರೂ ಹಸುಗಳನ್ನು ಪೂಜಿಸುತ್ತೇವೆ. ಆದರೆ, ರೈತ ಮಾತ್ರ ಅದನ್ನು ಪೋಷಿಸುವ ಹೊಣೆ ಹೊತ್ತಿದ್ದಾನೆ. ಮತ್ತು, ಅದರ ಮೇಲೆಯೇ ಅವನ ಜೀವನ ನಿರ್ವಹಣೆಯೂ ಅವಲಂಬಿತವಾಗಿದೆ. ಗೋವಿನ ಪೋಷಣೆ ಎಂಬುದೇ ಆರ್ಥಿಕ ಹೊರೆಗೆ ಕಾರಣವಾದರೆ, ಆತನ ನೆರವಿಗೆ ನಿಲ್ಲುವವರು ಯಾರು? ಇದು ಸಾಮಾನ್ಯ ರೈತನಿಗೆ ಇರುವ ಪ್ರಶ್ನೆ. ಸರ್ಕಾರ ಇದಕ್ಕೆ ಪರಿಹಾರ ಹುಡುಕಬೇಕು.

ಇದನ್ನೂ ಓದಿ: ಅಲ್ಪಸಂಖ್ಯಾತರ ಅನುದಾನ, ವಿದ್ಯಾರ್ಥಿ ವೇತನದಲ್ಲಿ ಅರ್ಧದಷ್ಟು ಕಡಿತಗೊಳಿಸಿದ ಬಿಎಸ್‌ವೈ ಸರ್ಕಾರ!

4. ರೈತ ತಾನು ಪೂಜಿಸುವ, ಪೋಷಿಸುವ, ಜೀವನಾಧಾರವನ್ನಾಗಿ ನಂಬಿರುವ ಗೋವು ಈ ಕಾಯ್ದೆ ಮೂಲಕ ಆತನಿಗೆ ಹೇಗೆ ಹೊರೆಯಾಗುತ್ತದೆ? ತಾನು ಸಾಕಿದ ಹಸು ಗಂಡು ಕರು ಹಾಕಿದಾಗ, ಹಸುವಿಗೆ ವಯಸ್ಸಾದಾಗ, ಕಾಯಿಲೆ ಬಿದ್ದಾಗ ಅದರ ನಿರ್ವಹಣೆ ಕಷ್ಟ. ಈಗಾಗಲೇ ಸಂಕಷ್ಟದಲ್ಲಿರುವ ರೈತನಿಗೆ ಈ ಹೊರೆ ಜೀವನ್ಮರಣದ ಪ್ರಶ್ನೆಯಾಗಲೂಬಹುದು ಎಂಬುದನ್ನು ಸರ್ಕಾರ ಮರೆತಂತಿದೆ.

5. ರೈತರು ಈಗ ಹಾಲು ಉತ್ಪಾದನೆಗಾಗಿ ಪೋಷಿಸುತ್ತಿರುವ ಹಸುಗಳ ಗಂಡು ಕರುಗಳನ್ನು ಸಾಕುವುದು ಆರ್ಥಿಕವಾಗಿ ಹೊರೆ. ಅದು ಬೆಳೆದರೂ ಕೃಷಿ ಕಾರ್ಯಗಳಿಗೆ ಬಳಕೆಗೆ ಯೋಗ್ಯವಲ್ಲ. ಹೀಗಾದಾಗ ಹೈನುಗಾರಿಕೆಗೆ ಹೊಡೆತ ಬೀಳುತ್ತದೆ. ಕ್ರಮೇಣ ರೈತರು ಹೈನುಗಾರಿಕೆಯಿಂದಲೇ ವಿಮುಖವಾಗಬಹುದು. ಅದು ಮತ್ತೊಂದು ಸಮಸ್ಯೆಗೆ ಕಾರಣವಾಗಬಹುದು ಎಂಬುದನ್ನು ಗಮನಿಸಲೇಬೇಕು.

ಇದನ್ನೂ ಓದಿ: ಮೋದಿ ಅಧಿಕಾರಕ್ಕೆ ಬಂದ ನಂತರ ಗೋಮಾಂಸ ರಫ್ತು ಹೆಚ್ಚಾಗಿದೆ: ಸಿದ್ದರಾಮಯ್ಯ

6. ಸದ್ಯ ಸರ್ಕಾರ ತಂದಿರುವ ಕಾಯ್ದೆಯು ರೈತರು ಗಂಡು ಕರುಗಳನ್ನು, ವಯಸ್ಸಾದ ರಾಸುಗಳನ್ನು, ರೋಗಕ್ಕೀಡಾದ ಹಸುಗಳನ್ನು ಪೋಷಿಸಲೇಬೇಕಾದ ಷರತ್ತಿಗೆ ದೂಡುತ್ತದೆ. ಪ್ರಾಯೋಗಿಕವಲ್ಲದ ಷರತ್ತುಗಳ ಮೂಲಕ ಸರ್ಕಾರ ರೈತರ ಮೇಲೆ ಹೆಚ್ಚಿನ ಒತ್ತಡ ಹೇರಲು ಪ್ರಯತ್ನಿಸಿದರೆ, ರೈತರು ಹೈನುಗಾರಿಕೆಯಿಂದ ದೂರ ಸರಿಯಬಹುದು. ಆಗ ಹಾಲು ಉತ್ಪಾದನೆಗೆ ಹೊಡೆತ ಬೀಳಲಿದೆ.

7. ಜಾನುವಾರುಗಳನ್ನು ಸೂಕ್ತ ಪ್ರಾಧಿಕಾರದ ಪರವಾನಗಿ ಪಡೆದು ವಧೆ ಮಾಡಬಹುದು. ಇದಕ್ಕೆ ಪಶು ವೈದ್ಯಾಧಿಕಾರಿಯ ಪ್ರಮಾಣ ಪತ್ರ ಬೇಕು ಎಂದು ಹೇಳಲಾಗಿದೆ. ಚಿಕಿತ್ಸೆಗೇ ಈಗ ಪಶುವೈದ್ಯರ ಲಭ್ಯತೆ ಇಲ್ಲ. ಇನ್ನು ಪ್ರಮಾಣ ಪತ್ರಕ್ಕೆ ಲಭ್ಯರಾಗುವರೇ? ಪ್ರಮಾಣ ಪತ್ರ, ಅನುಮತಿ ಪಡೆಯುವ ಪ್ರಕ್ರಿಯೆ ದಂಧೆಯ ರೂಪ ತಾಳದೇ? ರೈತರ ಶೋಷಣೆ ನಡೆಯುವುದಿಲ್ಲವೇ?

ಇದನ್ನೂ ಓದಿ: ಹುಲಿಗಳಿಗೆ ಗೋಮಾಂಸ ನೀಡುವುದಕ್ಕೆ ಬಿಜೆಪಿ ಪ್ರತಿಭಟನೆ: ಹಾಗಾದರೆ ಇಡ್ಲಿ-ಸಾಂಬಾರ್ ಕೊಡಿ ಎಂದ ನೆಟ್ಟಿಗರು!

8. ಪೊಲೀಸರು, ಅಧಿಕಾರಿಗಳಿಗೆ ರೈತರ ಡೈರಿ ಪರಿಶೀಲನೆಯ ಅವಕಾಶ ನೀಡಲಾಗಿದೆ. ಇದರಿಂದ ಅಧಿಕಾರಿಗಳು ರೈತರಿಗೆ ಕಿರುಕುಳ ನೀಡುವ ಸಾಧ್ಯತೆಗಳು ಸೃಷ್ಟಿಯಾಗುವ ಆತಂಕವಿದೆ. ರೈತರಲ್ಲಿ ಭಯದ ವಾತಾವರಣವೂ ಮೂಡುತ್ತದೆ. ಈ ನಿಯಮವನ್ನು ರಾಜಕೀಯವಾಗಿ ದುರುಪಯೋಗಪಡಿಸಿಕೊಳ್ಳುವ ಸಾಧ್ಯತೆಯಿದೆ. ಇದು ಹಳ್ಳಿಗಳ ಸೌಹಾರ್ದ ವಾತಾವರಣವನ್ನೇ ಹಾಳುಮಾಡಬಹುದಲ್ಲವೇ?

9. ಜಾನುವಾರುಗಳನ್ನು ಸಾಗಿಸಲು ಪಶುಸಂಗೋಪನಾ ಇಲಾಖೆಯ ಅನುಮತಿ ಪಡೆಯಬೇಕು ಎಂದು ಹೇಳಲಾಗಿದೆ. ಇದು ಮುಂದೊಂದು ದಿನ ಲೈಸನ್ಸ್‌ ರಾಜ್‌ ಪದ್ಧತಿಗೆ ಕಾರಣವಾಗದೇ? ಅಧಿಕಾರಿಗಳು ಇದರಲ್ಲಿ ಭ್ರಷ್ಟಾಚಾರ ನಡೆಸದೇ ಇರಲಾರರು ಎಂದು ಹೇಳಲು ಸಾಧ್ಯವೇ? ಒಂದು ವೇಳೆ ಇಂಥ ಪರವಾನಗಿಗೆ ರೈತರಿಂದ ಲಂಚ ಪಡೆಯುವ ಪರಿಸ್ಥಿತಿ ಸೃಷ್ಟಿಯಾದರೆ ಅದು ರೈತರ ಶೋಷಣೆಯಾಗದೇ?

ಇದನ್ನೂ ಓದಿ: ಡೇರಿ ಫಾರಂ, ಗೋಶಾಲೆಗಳಿಗೆ ಅನುಮತಿ ಕಡ್ಡಾಯ: ಮಾಲಿನ್ಯ ನಿಯಂತ್ರಣದ ಹೆಸರಿನಲ್ಲಿ ರೈತರ ಬದುಕಿಗೆ ಕೊಳ್ಳಿ!

10. ಜಾನುವಾರಿನ ವಧೆಯಾದ ಪ್ರಕರಣದಲ್ಲಿ ಮಾರಾಟ ಮಾಡಿದ ರೈತನನ್ನೂ ಹೊಣೆಗಾರನನ್ನಾಗಿಸುವ ನಿಯಮವಿದೆ. ರೈತ ತಾನು ಮಾರಾಟ ಮಾಡಿದ ಜಾನುವಾರು ವಧಾಸ್ಥಳಕ್ಕೆ ಹೋಗುತ್ತದೆ ಎಂಬುದನ್ನು ಅಂದಾಜಿಸಲು ಹೇಗೆ ಸಾಧ್ಯ? ಈ ನಿಯಮಗಳು ರೈತ ಸರ್ಕಾರ ಕಚೇರಿಗಳಿಗೆ ಅಲೆಯುವಂತೆ ಮಾಡುವುದರಲ್ಲಿ ಅನುಮಾನವಿಲ್ಲ. ಕೊನೆಗೆ ಇದು ಹೈನುಗಾರಿಕೆಗೆ ಪೆಟ್ಟು ಕೊಡುತ್ತದೆ.

11. ಗೋಹತ್ಯೆ ನಿಷೇಧ ಕಾಯ್ದೆಯು ಗೋವಿನ ಹತ್ಯೆಯನ್ನು ತಡೆಯುವ ಸ್ವರೂಪದ್ದಾಗಿದೆಯಾದರೂ, ರೈತರನ್ನು ಸರ್ಕಾರಿ ಕಚೇರಿಗಳಿಗೆ ಅಲೆದಾಡಿಸುವ ಸಾಕಷ್ಟು ಸನ್ನಿವೇಶಗಳನ್ನೂ ಬಲವಂತವಾಗಿ ಸೃಷ್ಟಿ ಮಾಡುತ್ತಿದೆ ಎಂಬುದನ್ನು ಎಲ್ಲರೂ ಗಮನಿಸಲೇಬೇಕು. ಇದಕ್ಕೆ ಸರ್ಕಾರ ಸೂಕ್ತ ಪರಿಹಾರ, ಮಾರ್ಗೋಪಾಯಗಳನ್ನು ಸೂಚಿಸಬೇಕು. ಇಲ್ಲವಾದರೆ, ಇದು ರೈತ ವಿರೋಧಿಯಾಗಲಿದೆ.

ಇದನ್ನೂ ಓದಿ: ವಿ.ಎಂ ಮಂಜುನಾಥ್ ಹೊಸ ಕಾದಂಬರಿ : ರೈತನೊಬ್ಬನ ಡೈರಿ, ಮೊದಲೆರಡು ಅಧ್ಯಾಯಗಳು

12. ಗೋವುಗಳು ಹೇಗೆ ನಮಗೆ ಪೂಜನೀಯವೋ, ರೈತನೂ ಪೂಜನೀಯವೇ. ಗೋ ಹತ್ಯೆಯನ್ನು ತಡೆಯುವ ನಮ್ಮ ಪ್ರಯತ್ನದಲ್ಲಿ ರೈತನನ್ನು ಶೋಷಿಸುವ ವ್ಯವಸ್ಥೆಗೆ ದೂಡುವುದು ಯಾವ ನ್ಯಾಯ? ಕಾಯ್ದೆಯು ರೈತನ್ನು ಸಂಕಷ್ಟಕ್ಕೆ ದೂಡಬಾರದು ಎಂಬುದಷ್ಟೇ ನನ್ನ ಆಶಯ. ಜೆಡಿಎಸ್‌ಗೆ ಈ ವಿಚಾರದಲ್ಲಿ ಯಾವ ಮತಬ್ಯಾಂಕ್‌ನ ಓಲೈಕೆಯೂ ಬೇಕಿಲ್ಲ. ರೈತನ ಹಿತ ರಕ್ಷಣೆಯಾದರೆ ಸಾಕು.

13. ರೈತ ತಾನು ಪೋಷಿಸಿದ ಗೋವನ್ನು ಅಥವಾ ಯಾವುದೇ ಪ್ರಾಣಿಯನ್ನು ವಧೆಗಾಗಿ ಕೊಡಲು ಮನಃಪೂರ್ವಕವಾಗಿ ಒಪ್ಪಲಾರ. ಆದರೆ, ಅದು ಅವನಿಗೆ ಅನಿವಾರ್ಯ. ಗೋಹತ್ಯೆಯನ್ನು ನಿಷೇಧಿಸಬೇಕಿದ್ದರೆ, ಆತನ ಅನಿವಾರ್ಯತೆಯನ್ನು ನಾವು ಹೋಗಲಾಡಿಸಬೇಕು. ರೈತನಿಗೆ ಹೊರೆ ಸೃಷ್ಟಿಸುವ ಜಾನುವಾರುಗಳ ರಕ್ಷಣೆಯನ್ನು ಸರ್ಕಾರವೇ ಮಾಡಲಿ. ಗೋವಿನ ಜೊತೆಗೆ ರೈತನನ್ನೂ ರಕ್ಷಿಸಲಿ.


ಇದನ್ನೂ ಓದಿ: ಈಶ್ವರಪ್ಪನವರಿಗೆ ನನ್ನ ಮೇಲೆ ಸಿಟ್ಟು ಏಕೆಂದರೆ… : ಎಚ್.ಎಸ್ ದೊರೆಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...