Homeಮುಖಪುಟದೆಹಲಿ: ಇಂದಿನಿಂದ ನ. 30ರವರೆಗೆ ಪಟಾಕಿ ಸಂಪೂರ್ಣ ನಿಷೇಧ ಹೇರಿದ ಎನ್‌ಜಿಟಿ

ದೆಹಲಿ: ಇಂದಿನಿಂದ ನ. 30ರವರೆಗೆ ಪಟಾಕಿ ಸಂಪೂರ್ಣ ನಿಷೇಧ ಹೇರಿದ ಎನ್‌ಜಿಟಿ

ಹರಿಯಾಣ ಸರ್ಕಾರ, ದೀಪಾವಳಿ ಮತ್ತು ಗುರುಪುರಬ್‌ನಲ್ಲಿ ಪಟಾಕಿ ಸಿಡಿಸಲು ಮತ್ತು ಮಾರಾಟ ಮಾಡಲು ರಾತ್ರಿ 8 ಗಂಟೆಯಿಂದ 10 ಗಂಟೆಯವರೆಗೆ 2 ಗಂಟೆ ಅನುಮತಿ ನೀಡಿದೆ.

- Advertisement -
- Advertisement -

ದೆಹಲಿ-ಎನ್‌ಸಿಆರ್ ಪ್ರದೇಶಗಳಲ್ಲಿ ಇಂದಿನಿಂದ ನವೆಂಬರ್ 30ರ ವರೆಗೆ ಎಲ್ಲಾ ಪಟಾಕಿಗಳ ಮಾರಾಟ ಮತ್ತು ಬಳಕೆಗೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ) ಸೋಮವಾರ ಸಂಪೂರ್ಣ ನಿಷೇಧ ಹೇರಿದೆ.

ಆಯಾ ರಾಜ್ಯಗಳು, ಗಾಳಿಯ ಗುಣಮಟ್ಟ ‘ಮಧ್ಯಮ’ ಅಥವಾ ಅದಕ್ಕಿಂತ ಕಡಿಮೆ ಇರುವ ನಗರಗಳಲ್ಲಿ ಅಥವಾ ಪಟ್ಟಣಗಳಲ್ಲಿ, ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡಬಹುದು. ದೀಪಾವಳಿ, ಹೊಸ ವ‌ರ್ಷಾಚರಣೆ, ಕ್ರಿಸ್‌ಮಸ್ ನಂತಹ ಹಬ್ಬಗಳಲ್ಲಿ ಅವುಗಳನ್ನು ಸಿಡಿಸುವ ಸಮಯವನ್ನು ಎರಡು ಗಂಟೆಗಳವರೆಗೆ ನಿರ್ಬಂಧಿಸಬಹುದು ಎಂದು ಎನ್‌ಜಿಟಿ ತಿಳಿಸಿದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ಉಲ್ಲೇಖಿಸಿದೆ.

ಪ್ರಸ್ತುತ, ದೀಪಾವಳಿ ಹಬ್ಬದ ಸಮಯದಲ್ಲಿ ಪಟಾಕಿಗಳ ಮಾರಾಟ ಮತ್ತು ಬಳಕೆಯನ್ನು ಅನುಮತಿಸುವ ಅಥವಾ ನಿಷೇಧಿಸುವ ಬಗ್ಗೆ ರಾಜ್ಯ ಸರ್ಕಾರಗಳು ತಮ್ಮದೇ ಆದ ಮಾರ್ಗಸೂಚಿಗಳನ್ನು ಹೊಂದಿವೆ.

ಅರವಿಂದ್ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರವು ಕಳೆದ ಗುರುವಾರ ನಡೆಸಿದ ಕೊರೊನಾ ವೈರಸ್ ಪರಿಶೀಲನಾ ಸಭೆಯಲ್ಲಿ ಪಟಾಕಿಗಳ ಬಳಕೆಯನ್ನು ನಿಷೇಧಿಸಲು ನಿರ್ಧರಿಸಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೊನ ಆಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದ್ದು, ಮೂರನೇ ಅಲೆ ಶುರುವಾಗಿದೆ ಎಂದು ಸಿಎಂ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದರು.

ಇದನ್ನೂ ಓದಿ: ವಾಯುಮಾಲಿನ್ಯ ತಡೆಗೆ ಸುಗ್ರೀವಾಜ್ಞೆ: 5 ವರ್ಷ ಜೈಲು; 1 ಕೋಟಿ ದಂಡ

ದೆಹಲಿಯಲ್ಲಿ ಏಕಾಏಕಿ ಕೊರೊನಾ ಮೂರನೇ ಅಲೆ ಈಗಾಗಲೇ ಆರಂಭವಾಗಿರುವ ಕಾರಣ, ರಾಜ್ಯ ಸರ್ಕಾರವು ಕೊರೊನಾ ಪರೀಕ್ಷೆಯನ್ನು ಹೆಚ್ಚಿಸಬೇಕು ಎಂದು ತಜ್ಞರು ಸೂಚಿಸಿದ್ದಾರೆ. ಮುಖ್ಯಮಂತ್ರಿ ಕೇಜ್ರಿವಾಲ್, ಆತಂಕ ಪಡುವುದು ಬೇಡ, ತಾವು ಎಲ್ಲಾ ರೀತಿಯ ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ಸಭೆಯಲ್ಲಿ ತಿಳಿಸಿದ್ದರು.

ಇತ್ತ ಹರಿಯಾಣ ಸರ್ಕಾರ, ದೀಪಾವಳಿ ಮತ್ತು ಗುರುಪುರಬ್‌ನಲ್ಲಿ ಪಟಾಕಿ ಸಿಡಿಸಲು ಮತ್ತು ಮಾರಾಟ ಮಾಡಲು ರಾತ್ರಿ 8 ಗಂಟೆಯಿಂದ 10 ಗಂಟೆಯವರೆಗೆ 2 ಗಂಟೆ ಅನುಮತಿ ನೀಡಿದೆ.  ಕ್ರಿಸ್‌ಮಸ್ ಮತ್ತು ಹೊಸ ವರ್ಷದ ಮುನ್ನಾ ದಿನದಂದು ರಾತ್ರಿ 11.55 ರಿಂದ ಮುಂಜಾನೆ 12.30 ರ ನಡುವೆ ಪಟಾಕಿ ಸಿಡಿಸಲು ಅನುಮತಿ ನೀಡಿದೆ.

ದೆಹಲಿಯ ವಾಯು ಗುಣಮಟ್ಟದ ಸೂಚ್ಯಂಕ (AQI) ಸತತ ಐದನೇ ದಿನವೂ ತೀವ್ರವಾಗಿ ಮುಂದುವರೆದಿದೆ. ಸೋಮವಾರ ಬೆಳಿಗ್ಗೆ 6 ಗಂಟೆಗೆ AQI 459 ಮತ್ತು ಬೆಳಿಗ್ಗೆ 8.30 ಕ್ಕೆ ದಾಖಲಾದ ಕನಿಷ್ಠ ತಾಪಮಾನ 10 ಡಿಗ್ರಿ ಸೆಲ್ಸಿಯಸ್ (ಸಿ) ಆಗಿತ್ತು.

ಪಟಾಕಿಗಳ ಹೊರತಾಗಿಯೂ ದೆಹಲಿ-ಎನ್‌ಸಿಆರ್‌ನಲ್ಲಿ ಹೆಚ್ಚುತ್ತಿರುವ ಅತಿಯಾದ ಮಾಲಿನ್ಯಕ್ಕೆ ಕೃಷಿತ್ಯಾಜ್ಯ ಸುಡುವಿಕೆಗೆ ಕಾರಣವಾಗಿದೆ. ವರದಿಗಳ ಪ್ರಕಾರ, ಪಂಜಾಬ್‌ನಲ್ಲಿ ಅತಿ ಹೆಚ್ಚಾಗಿ ಸುಡಲಾಗುವ ಕೃಷಿ ತ್ಯಾಜ್ಯವು  ಗಾಳಿಯ ಗುಣಮಟ್ಟ ಕುಸಿಯಲು ಪ್ರಾಥಮಿಕ ಕಾರಣವಾಗಿದೆ ಎನ್ನಲಾಗಿದೆ. ಹೀಗಾಗಿ ಈ ಪ್ರದೇಶಗಳಲ್ಲಿ ನವೆಂಬರ್ 30ರ ವರೆಗೆ ಪಟಾಕಿಯನ್ನು ಸಂಪೂರ್ಣ ನಿಷೇಧ ಮಾಡಲಾಗಿದೆ.

301, 400, 401 ರಿಂದ 500 ರ ನಡುವಿನ ವಾಯು ಗುಣಮಟ್ಟದ ಸೂಚ್ಯಂಕವನ್ನು ಕ್ರಮವಾಗಿ “ಅತ್ಯಂತ ಕಳಪೆ” ಮತ್ತು “ತೀವ್ರ” ಎಂದು ಪರಿಗಣಿಸಲಾಗುತ್ತದೆ. ಎನ್‌ಸಿಆರ್‌ಯಲ್ಲಿನ AQI, 475 ಇದ್ದು ಇನ್ನಷ್ಟು ತೀವ್ರವಾಗುವ ಸಂಭವವಿದೆ.


ಇದನ್ನೂ ಓದಿ: ಪಟಾಕಿ ನಿಷೇಧ: ಬಿಜೆಪಿ ಆಳ್ವಿಕೆಯ ಹರಿಯಾಣ, ಕರ್ನಾಟಕ ರಾಜ್ಯಗಳು ಉಲ್ಟಾ ಹೊಡೆಯುತ್ತಿರುವುದೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...