Homeರಾಷ್ಟ್ರೀಯದೆಹಲಿ: ಹನುಮ ಜಯಂತಿ ಮೆರವಣಿಗೆ ವೇಳೆ ಹಿಂಸಾಚಾರ, 9 ಮಂದಿಯ ಬಂಧನ

ದೆಹಲಿ: ಹನುಮ ಜಯಂತಿ ಮೆರವಣಿಗೆ ವೇಳೆ ಹಿಂಸಾಚಾರ, 9 ಮಂದಿಯ ಬಂಧನ

ಕೇಸರಿ ಧ್ವಜ ಹಿಡಿದುಕೊಂಡು ಕೆಲವರು ಮಸೀದಿಗೆ ನುಗ್ಗಲು ಯತ್ನಿಸಿದ್ದಾರೆ, ಪ್ರದೇಶದಲ್ಲಿ ಹೆಚ್ಚಿನ ಪೊಲೀಸ್ ಉಪಸ್ಥಿತಿ ಇಲ್ಲದ ಕಾರಣ ಹಿಂಸಾಚಾರ ಉಲ್ಬಣಗೊಂಡಿದೆ ಎಂದು ಸ್ಥಳೀಯರೊಬ್ಬರು ಆರೋಪಿಸಿದ್ದಾರೆ.

- Advertisement -
- Advertisement -

ಶನಿವಾರ ದೆಹಲಿಯ ಜಹಾಂಗೀರ್‌‌ಪುರಿಯಲ್ಲಿ ಹನುಮ ಜಯಂತಿ ಮೆರವಣಿಗೆಯಲ್ಲಿ ಹಿಂದೂ ಮತ್ತು ಮುಸ್ಲಿಂ ಸಮುದಾಯಗಳ ನಡುವೆ ಘರ್ಷಣೆ ಸಂಭವಿಸಿದ್ದು ಹಿಂಸಾಚಾರ ನಡೆದಿದೆ. ಇದರ ನಂತರ ಒಂಬತ್ತು ಜನರನ್ನು ಬಂಧಿಸಲಾಗಿದೆ ಎಂದು ANI ವರದಿ ಮಾಡಿದೆ. ಕೆಲವು ಕಡೆ ಬೆಂಕಿ ಹಚ್ಚಿದ ಘಟನೆಗಳೂ ವರದಿಯಾಗಿವೆ ಎಂದು ದೆಹಲಿ ಪೊಲೀಸ್ ಸಾರ್ವಜನಿಕ ಸಂಪರ್ಕ ಅಧಿಕಾರಿ ಅನ್ಯೇಶ್  ಹೇಳಿದ್ದಾರೆ.

ಡೆಪ್ಯುಟಿ ಕಮಿಷನರ್ ಆಫ್ ಪೊಲೀಸ್ (ಈಶಾನ್ಯ) ಉಷಾ ರಂಗ್ನಾನಿ ಒಂಬತ್ತು ಜನರನ್ನು ಬಂಧಿಸಲಾಗಿದೆ ಎಂದು ದೃಢಪಡಿಸಿದ್ದಾರೆ. ಘಟನೆಯಲ್ಲಿ ಎಂಟು ಪೊಲೀಸ್ ಅಧಿಕಾರಿಗಳು ಮತ್ತು ಒಬ್ಬ ನಾಗರಿಕ ಗಾಯಗೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ. “ಒಬ್ಬ ಸಬ್ ಇನ್ಸ್‌ಪೆಕ್ಟರ್‌ಗೆ ಬುಲೆಟ್ ಗಾಯವಾಗಿದ್ದು, ಅವರ ಸ್ಥಿತಿ ಸ್ಥಿರವಾಗಿದೆ” ಎಂದು ರಂಗ್ನಾನಿ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಪೊಲೀಸರು ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ. ಜಹಾಂಗೀರ್‌ಪುರಿ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಕ್ಷಿಪ್ರ ಕಾರ್ಯಾಚರಣೆ ಎರಡು ತುಕಡಿ ಪಡೆಯನ್ನು ನಿಯೋಜಿಸಲಾಗಿದೆ” ಎಂದು ಪೊಲೀಸ್ ಕಮಿಷನರ್ ರಾಕೇಶ್ ಅಸ್ತಾನಾ ಎನ್‌ಡಿಟಿವಿಗೆ ತಿಳಿಸಿದ್ದಾರೆ. ಹಿರಿಯ ಅಧಿಕಾರಿಗಳು ಈ ಪ್ರದೇಶದಲ್ಲಿ ಗಸ್ತು ತಿರುಗುತ್ತಿದ್ದಾರೆ ಎಂದು ಪೊಲೀಸ್ ಕಮಿಷನರ್ ಹೇಳಿದ್ದಾರೆ.

ಇದನ್ನೂ ಓದಿ: ಎಎಪಿ ದಿಗ್ವಿಜಯಕ್ಕೆ ಹೆದರಿ, ದೆಹಲಿ ಮುನ್ಸಿಪಾಲ್‌ ಚುನಾವಣೆ ಮುಂದೂಡಲು ಬಯಸುತ್ತಿದೆಯೇ ಬಿಜೆಪಿ?

ಗಲಭೆಕೋರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಟ್ವೀಟ್ ಮಾಡಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ವದಂತಿಗಳು ಮತ್ತು ಸುಳ್ಳು ಸುದ್ದಿಗಳಿಗೆ ಗಮನ ಕೊಡಬೇಡಿ ಎಂದು ನಾಗರಿಕರಿಗೆ ವಿನಂತಿಸಿದ್ದಾರೆ.

ಎರಡು ಸಮುದಾಯಗಳ ನಡುವೆ ವಾಗ್ವಾದ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. “ಪರಿಸ್ಥಿತಿ ಉಲ್ಬಣಗೊಂಡು ಎರಡೂ ಕಡೆಯವರು ಪರಸ್ಪರ ಕಲ್ಲು ತೂರಾಟ ಆರಂಭಿಸಿದರು” ಎಂದು ಪೊಲೀಸ್ ಅಧಿಕಾರಿಯೊಬ್ಬರು ಪತ್ರಿಕೆಗೆ ತಿಳಿಸಿದ್ದಾರೆ.

ಮೆರವಣಿಗೆಯಲ್ಲಿ ಭಾಗವಹಿಸಿದವರು “ಭಾರತ್ ಮೇ ರೆಹನಾ ಹೋಗಾ ತೋ ಜೈ ಶ್ರೀ ರಾಮ್ ಕೆಹನಾ ಹೋಗಾ” [ಭಾರತದಲ್ಲಿ ವಾಸಿಸಲು ಬಯಸಿದರೆ, ಜೈಶ್ರೀರಾಂ ಹೇಳಬೇಕು] ಎಂದು ಘೋಷಣೆಗಳನ್ನು ಕೂಗಿದ್ದಾರೆ ಎಂದು ಸ್ಥಳೀಯ ನಿವಾಸಿ ಮಸ್ತಾನ್‌  ಹೇಳಿದ್ದಾರೆ.

ಕೇಸರಿ ಧ್ವಜ ಹಿಡಿದುಕೊಂಡು ಕೆಲವರು ಮಸೀದಿಗೆ ನುಗ್ಗಲು ಯತ್ನಿಸಿದರು. ಈ ಪ್ರದೇಶದಲ್ಲಿ ಹೆಚ್ಚಿನ ಪೊಲೀಸ್ ಉಪಸ್ಥಿತಿ ಇಲ್ಲದ ಕಾರಣ ಹಿಂಸಾಚಾರ ಉಲ್ಬಣಗೊಂಡಿದೆ ಎಂದು ಮಸ್ತಾನ್ ಆರೋಪಿಸಿದ್ದಾರೆ.

ಈ ಮಧ್ಯೆ, ಒಕ್ಕೂಟ ಸರ್ಕಾರದ ಗೃಹ ಸಚಿವ ಅಮಿತ್ ಶಾ ಅವರು ಅಸ್ಥಾನಾ ಮತ್ತು ದೆಹಲಿ ಪೊಲೀಸ್‌ನ ವಿಶೇಷ ಪೊಲೀಸ್ ಆಯುಕ್ತ (ಕಾನೂನು ಮತ್ತು ಸುವ್ಯವಸ್ಥೆ) ದೇವೇಂದ್ರ ಪಾಠಕ್ ಅವರಿಗೆ ಅಗತ್ಯ ಕ್ರಮ ಕೈಗೊಳ್ಳಲು ಮತ್ತು ವಿಷಯವನ್ನು ಸೂಕ್ಷ್ಮವಾಗಿ ನಿಭಾಯಿಸಲು ಸೂಚಿಸಿದ್ದಾರೆ.

ಇದನ್ನೂ ಓದಿ: ಕಡ್ಡಾಯ ಮಾಸ್ಕ್‌ ನಿಯಮ ರದ್ದು ಪಡಿಸಿದ ದೆಹಲಿ ಮತ್ತು ಮಹಾರಾಷ್ಟ್ರ!

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಿಂಸಾಚಾರವನ್ನು ಖಂಡಿಸಿ, ಹಿಂಸಾಚಾರದಲ್ಲಿ ಭಾಗಿಯಾಗಿರುವವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದು, ಜನರೊಂದಿಗೆ ಶಾಂತಿಯನ್ನು ಕಾಪಾಡಿಕೊಳ್ಳಲು ಮನವಿ ಮಾಡಿ ಟ್ವೀಟ್ ಮಾಡಿದ್ದಾರೆ.

ಮತ್ತೊಂದು ಟ್ವೀಟ್‌ನಲ್ಲಿ, ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಅವರೊಂದಿಗೆ ಮಾತನಾಡಿದ್ದೇನೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ. “ಶಾಂತಿಯನ್ನು ಖಚಿತಪಡಿಸಿಕೊಳ್ಳಲು ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಮತ್ತು ತಪ್ಪಿತಸ್ಥರನ್ನು ಬಿಡಲಾಗುವುದಿಲ್ಲ ಎಂದು ಬೈಜಾಲ್‌ ಭರವಸೆ ನೀಡಿದರು” ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.

ಏಪ್ರಿಲ್ 10 ರಂದು ರಾಮನವಮಿ ಮೆರವಣಿಗೆಯ ಸಮಯದಲ್ಲಿ ದೇಶಾದ್ಯಂತ ಇದೇ ರೀತಿಯ ಘರ್ಷಣೆ ನಡೆದಿತ್ತು. ಗುಜರಾತ್, ಮಧ್ಯಪ್ರದೇಶ, ಜಾರ್ಖಂಡ್, ಪಶ್ಚಿಮ ಬಂಗಾಳ, ಕರ್ನಾಟಕ ಮತ್ತು ಗೋವಾದಲ್ಲಿ ನಡೆದ ಹಿಂಸಾಚಾರದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ.

ಇದನ್ನೂ ಓದಿ: ಕೇಜ್ರಿವಾಲ್‌ ಅವರ ನಕಲಿ ವಿಡಿಯೋ ಪ್ರಸಾರ: ದೆಹಲಿ ಬಿಜೆಪಿ ನಾಯಕನ ಮನೆಯಲ್ಲಿ ಪಂಜಾಬ್ ಪೊಲೀಸರು!

ಅದೇ ದಿನ, ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ರಾಮನವಮಿಯಂದು ಹಾಸ್ಟೆಲ್ ಮೆಸ್‌ನಲ್ಲಿ ಮಾಂಸವನ್ನು ನೀಡಲಾಗುತ್ತದೆ ಎಂದು ಆರೋಪಿಸಿ ಘರ್ಷಣೆಗಳು ನಡೆದವು.

ಏಪ್ರಿಲ್ 2 ರಂದು, ಹಿಂದೂ ಹೊಸ ವರ್ಷದ ಮೊದಲ ದಿನವಾದ ನವ ಸಂವತ್ಸರದಂದು ಬೈಕ್‌‌ ರ್‍ಯಾಲಿಯಲ್ಲಿ ಕೋಮು ದ್ವೇಷದ ಹಾಡುಗಳನ್ನು ನುಡಿಸುವ ಮೂಲಕ ನಗರದ ಮುಸ್ಲಿಂ ಪ್ರಾಬಲ್ಯದ ಪ್ರದೇಶದಲ್ಲಿ ಕೋಮು ಘರ್ಷಣೆಗಳು ಸಂಭವಿಸಿದ್ದವು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...