Homeಮುಖಪುಟಹೊಸ ಶಿಕ್ಷಣ ನೀತಿ NEP ’ಹೇಗೆ ಯೋಚಿಸಬೇಕು’ ಎಂಬುದಕ್ಕೆ ಹೆಚ್ಚು ಒತ್ತು ನೀಡುತ್ತದೆ: ಪ್ರಧಾನಿ ಮೋದಿ

ಹೊಸ ಶಿಕ್ಷಣ ನೀತಿ NEP ’ಹೇಗೆ ಯೋಚಿಸಬೇಕು’ ಎಂಬುದಕ್ಕೆ ಹೆಚ್ಚು ಒತ್ತು ನೀಡುತ್ತದೆ: ಪ್ರಧಾನಿ ಮೋದಿ

ಈ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಅನುಷ್ಠಾನಕ್ಕೆ ಎಲ್ಲರು ಕೆಲಸ ಮಾಡಬೇಕೆಂದು ಅವರು ಆಗ್ರಹಿಸಿದರು.

- Advertisement -
- Advertisement -

ಹೊಸ ಶಿಕ್ಷಣ ನೀತಿಯಾದ NEP ಯು ‘ಏನು ಯೋಚಿಸಬೇಕು’ ಎಂಬುದರಿಂದ ‘ಹೇಗೆ ಯೋಚಿಸಬೇಕು’ ಎಂಬುದರ ಕಡೆಗೆ ಹೆಚ್ಚು ಒತ್ತು ನೀಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಇಂದು ಹೇಳಿದ್ದಾರೆ.

ಅವರು ರಾಷ್ಟ್ರೀಯ ಶಿಕ್ಷಣ ನೀತಿಯಡಿ ಉನ್ನತ ಶಿಕ್ಷಣದಲ್ಲಿನ ಪರಿವರ್ತನಾ ಸುಧಾರಣೆಗಳ ಕುರಿತ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಉದ್ಘಾಟನಾ ಭಾಷಣ ಮಾಡಿದರು. ವಿಶ್ವವಿದ್ಯಾನಿಲಯ ಧನಸಹಾಯ ಆಯೋಗ (ಯುಜಿಸಿ) ಹಾಗೂ ಶಿಕ್ಷಣ ಸಚಿವಾಲಯವು ಈ ಸಮಾವೇಶವನ್ನು ಆಯೋಜಿಸಿದ್ದು, ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಪ್ರಧಾನಿ ಸಮಾವೇಶಕ್ಕೆ ಸೇರಿದರು.

ಹೊಸ ಶಿಕ್ಷಣ ನೀತಿಯ ವಿವಿಧ ಅಂಶಗಳ ಬಗ್ಗೆ ಬೆಳಕು ಚೆಲ್ಲಿದ ಪ್ರಧಾನಿ, ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಅನುಷ್ಠಾನಕ್ಕೆ ಎಲ್ಲರು ಕೆಲಸ ಮಾಡಬೇಕೆಂದು ಆಗ್ರಹಿಸಿದರು.


ಓದಿ: ಹೊಸ ಶಿಕ್ಷಣ ನೀತಿ: ದುರ್ಬಲ ವರ್ಗಗಳ ವಿದ್ಯಾರ್ಥಿಗಳಿಗೆ ಮಾಡಿದ ವ್ಯವಸ್ಥಿತ ವಂಚನೆ!


ಪ್ರಧಾನಿ ಮೋದಿ ತಮ್ಮ ಉದ್ಘಾಟನಾ ಭಾಷಣದಲ್ಲಿ, “ಇಂದು ಹೊಸ ಶಿಕ್ಷಣ ನೀತಿಯನ್ನು ದೇಶಾದ್ಯಂತ ವ್ಯಾಪಕವಾಗಿ ಚರ್ಚಿಸಲಾಗಿದೆ. ವಿವಿಧ ಕ್ಷೇತ್ರಗಳ ಜನರು, ಸಿದ್ಧಾಂತಗಳು ತಮ್ಮ ಅಭಿಪ್ರಾಯಗಳನ್ನು ನೀಡುತ್ತಿವೆ ಮತ್ತು ನೀತಿಯನ್ನು ಪರಿಶೀಲಿಸುತ್ತಿವೆ. ಇದು ಆರೋಗ್ಯಕರ ಚರ್ಚೆಯಾಗಿದ್ದು ಅದು ದೇಶದ ಶಿಕ್ಷಣ ವ್ಯವಸ್ಥೆಗೆ ಪ್ರಯೋಜನವನ್ನು ನೀಡುತ್ತದೆ. ಲಕ್ಷಾಂತರ ಸಲಹೆಗಳೊಂದಿಗೆ ದೀರ್ಘವಾದ ಬುದ್ದಿಮತ್ತೆ ಅಧಿವೇಶನದ ನಂತರ ಮತ್ತು 3-4 ವರ್ಷಗಳ ವ್ಯಾಪಕ ಚರ್ಚೆಗಳ ನಂತರ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಅನುಮೋದಿಸಲಾಗಿದೆ” ಎಂದು ಹೇಳಿದರು.

“ರಾಷ್ಟ್ರೀಯ ಶಿಕ್ಷಣ ನೀತಿ ಬಿಡುಗಡೆಯಾದ ನಂತರ, ದೇಶದ ಯಾವುದೇ ವಿಭಾಗವು ನೀತಿಯನ್ನು ಪಕ್ಷಪಾತ ಎಂದು ಹೇಳಲಿಲ್ಲ. ಇದು ಸಂತೋಷದ ವಿಷಯವಾಗಿದೆ. ಶಿಕ್ಷಣ ಕ್ಷೇತ್ರದಲ್ಲಿ ಇಷ್ಟು ದೊಡ್ಡ ಸುಧಾರಣೆಯ ಅನುಷ್ಠಾನಕ್ಕೆ ಈಗ ಎಲ್ಲರ ದೃಷ್ಟಿ ಇದೆ” ಎಂದು ಪ್ರಧಾನಿ ಹೇಳಿದರು. ಈ ನೀತಿಯ ಉದ್ದೇಶವು ಪ್ರಸ್ತುತ ಮತ್ತು ಮುಂದಿನ ಪೀಳಿಗೆಗಳನ್ನು ಭವಿಷ್ಯದಲ್ಲಿ ಸಿದ್ಧವಾಗಿಡುವುದು ಎಂದರು.

“ವಿದ್ಯಾರ್ಥಿಗಳಿಗೆ ಅವರ ಮಾತೃಭಾಷೆ ಅಥವಾ ಸ್ಥಳೀಯ ಭಾಷೆಯಲ್ಲಿ ಕಲಿಸಿದಾಗ ವಿಷಯವನ್ನು ಹೆಚ್ಚು ಅರ್ಥ ಮಾಡಿಕೊಳ್ಳುತ್ತಾರೆ. ಆದುದರಿಂದ ಐದನೇ ತರಗತಿ ತನಕ ಮಾತೃಭಾಷೆಯ ಶಿಕ್ಷಣ ಬಹಳಷ್ಟು ಸಹಕಾರಿಯಾಗಲಿದೆ. ಒಮ್ಮೆ ಒಂದು ವಿಷಯ ವಿದ್ಯಾರ್ಥಿಗಳಿಗೆ ಮನದಟ್ಟು ಆದರೆ ನಂತರ ಅವರ ಭವಿಷ್ಯ ಭದ್ರವಾಗುತ್ತದೆ,” ಎಂದು ಪ್ರಧಾನಿ ವಿವರಿಸಿದರು.

ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ್ ಪೋಖ್ರಿಯಾಲ್, ಕೇಂದ್ರ ಸಂವಹನ ರಾಜ್ಯ ಸಚಿವ ಸಂಜಯ್ ಧೋತ್ರೆ, ಎನ್‌ಇಪಿ ಕರಡು ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರು, ಪ್ರಖ್ಯಾತ ಶಿಕ್ಷಣ ತಜ್ಞರು ಹಾಗೂ ವಿಜ್ಞಾನಿಗಳು ಸೇರಿದಂತೆ ಹಲವಾರು ಗಣ್ಯರು ಸಭೆಯಲ್ಲಿ ಭಾಗವಹಿಸಿದ್ದರು.


ಓದಿ: ನೂತನ ಶಿಕ್ಷಣ ನೀತಿಗೆ ಭಾರೀ ವಿರೋಧ : TNRejectsNEP ಹ್ಯಾಷ್‌ಟ್ಯಾಗ್ ಟ್ರೆಂಡ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...