Homeಕರೋನಾ ತಲ್ಲಣಮಹಾರಾಷ್ಟ್ರದಿಂದ ಬರುವವರಿಗೆ ನೆಗೆಟಿವ್ ಆರ್‌ಟಿ-ಪಿಸಿಆರ್‌ ಪ್ರಮಾಣಪತ್ರ ಕಡ್ಡಾಯ

ಮಹಾರಾಷ್ಟ್ರದಿಂದ ಬರುವವರಿಗೆ ನೆಗೆಟಿವ್ ಆರ್‌ಟಿ-ಪಿಸಿಆರ್‌ ಪ್ರಮಾಣಪತ್ರ ಕಡ್ಡಾಯ

ವಿಮಾನಗಳು, ಬಸ್ಸುಗಳು, ರೈಲುಗಳು ಮತ್ತು ವೈಯಕ್ತಿಕ ಸಾರಿಗೆಯಿಂದ ಬರುವವರು 72 ಗಂಟೆಗಳ ನೆಗೆಟಿವ್ ಆರ್‌ಟಿ-ಪಿಸಿಆರ್ ಪ್ರಮಾಣಪತ್ರ ಹೊಂದಿರಬೇಕೆಂಬುದು ಕಡ್ಡಾಯ

- Advertisement -
- Advertisement -

ನೆರೆಯ ಮಹಾರಾಷ್ಟ್ರದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕ ಸರ್ಕಾರ ಹೊಸ ಮಾರ್ಗಸೂಚಿ ಹೊರಡಿಸಿದ್ದು, ಮಹಾರಾಷ್ಟ್ರದಿಂದ ಬರುವವರಿಗೆ ನೆಗೆಟಿವ್ ಆರ್‌ಟಿ-ಪಿಸಿಆರ್‌ ಪ್ರಮಾಣಪತ್ರ ಕಡ್ಡಾಯ ಮಾಡಲಾಗಿದೆ.

“ವಿಮಾನಗಳು, ಬಸ್ಸುಗಳು, ರೈಲುಗಳು ಮತ್ತು ವೈಯಕ್ತಿಕ ಸಾರಿಗೆಯಿಂದ ಬರುವವರು 72 ಗಂಟೆಗಳ ನೆಗೆಟಿವ್ ಆರ್‌ಟಿ-ಪಿಸಿಆರ್ ಪ್ರಮಾಣಪತ್ರ ಹೊಂದಿರಬೇಕೆಂಬುದು ಕಡ್ಡಾಯವಾಗಿರುತ್ತದೆ” ಎಂದು ಆರೋಗ್ಯ ಇಲಾಖೆ ಹೊರಡಿಸಿರುವ ಹೊಸ ಮಾರ್ಗಸೂಚಿ  ತಿಳಿಸುತ್ತದೆ.

ಕೇರಳದಲ್ಲಿ ಸರಾಸರಿ 4,000-5,000 ಪ್ರಕರಣಗಳು ಮತ್ತು ಮಹಾರಾಷ್ಟ್ರದಲ್ಲಿ 5,000-6,000 ಪ್ರಕರಣಗಳು ವರದಿಯಾಗುತ್ತಿವೆ. ನಾವು ಅವರೊಂದಿಗೆ ರಾಜ್ಯದ ಗಡಿಗಳನ್ನು ಹಂಚಿಕೊಳ್ಳುತ್ತೇವೆ. ಆದ್ದರಿಂದ, ಈ ಸುತ್ತೋಲೆಗಳನ್ನು ಹೊರಡಿಸಿದ್ದೇವೆ. ಇಲ್ಲಿಂದ ಬರುವವರು ಆರ್‌ಟಿ-ಪಿಸಿಆರ್ ನೆಗೆಟಿವ್ ಪ್ರಮಾಣಪತ್ರಗಳನ್ನು ತರಬೇಕು. ಇಲ್ಲದಿದ್ದರೆ ಅವರಿಗೆ ಕರ್ನಾಟಕಕ್ಕೆ ಪ್ರವೇಶಿಸಲು ಅನುಮತಿ ಇರುವುದಿಲ್ಲ’ ಎಂದು ಆರೋಗ್ಯ ಸಚಿವ ಸುಧಾಕರ್ ತಿಳಿಸಿದ್ದಾರೆ.

ಇದನ್ನೂ ಓದಿ: ಮತ್ತೆ ಮುಖಭಂಗ – ಆಂಧ್ರದ 3,221 ಪಂಚಾಯತ್‌ಗಳಲ್ಲಿ‌ BJP ಗೆ‌‌‌ ಕೇವಲ 13 ಸ್ಥಾನ!

 

Image

Image

ನೆರೆಯ ಮಹಾರಾಷ್ಟ್ರ ಮತ್ತು ಕೇರಳ ರಾಜ್ಯಗಳಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸೋಂಕು ಹರಡುವಿಕೆಯನ್ನು ತಡೆಗಟ್ಟಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಲು ಇಂದು (ಫೆ.20) ತಾಂತ್ರಿಕ ಸಲಹಾ ಸಮಿತಿಯೊಂದಿಗೆ ಸಭೆ ನಡೆಸಲಾಗಿತ್ತು.


ಇದನ್ನೂ ಓದಿ: ಹೆಚ್ಚು ವಿದ್ಯಾವಂತ ಜನರು ಭಯೋತ್ಪಾದನೆ ಮತ್ತು ಹಿಂಸಾಚಾರವನ್ನು ಹರಡುತ್ತಿದ್ದಾರೆ- ಪ್ರಧಾನಿ ಮೋದಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಸಿದ್ದರಾಮಯ್ಯ ಸರ್ಕಾರ ಮುಸ್ಲಿಮರನ್ನು ಒಬಿಸಿ ಪಟ್ಟಿಗೆ ಸೇರಿಸಿದ್ದು ನಿಜಾನಾ?

0
ಕರ್ನಾಟಕದಲ್ಲಿ ಮುಸ್ಲಿಮರನ್ನು ಹಿಂದುಳಿದ ವರ್ಗಕ್ಕೆ ಸೇರಿಸುವ ಮೂಲಕ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂದುಳಿದ ವರ್ಗಗಳ 36 ಜಾತಿಗಳಿಗೆ ಅನ್ಯಾಯ ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ. ಸಿದ್ದರಾಮಯ್ಯ ಸರ್ಕಾರ ಹಿಂದುಳಿದ ವರ್ಗಗಳಿಗೆ...