HomeUncategorized'ಡೀಪ್ ಫೇಕ್‌' ತಡೆಗೆ ಶೀಘ್ರ ಹೊಸ ಕಾನೂನು: ಅಶ್ವಿನಿ ವೈಷ್ಣವ್

‘ಡೀಪ್ ಫೇಕ್‌’ ತಡೆಗೆ ಶೀಘ್ರ ಹೊಸ ಕಾನೂನು: ಅಶ್ವಿನಿ ವೈಷ್ಣವ್

- Advertisement -
- Advertisement -

ಇತ್ತೀಚೆಗೆ ಭಾರೀ ಸುದ್ದಿಯಲ್ಲಿರುವ ‘ಡೀಪ್ ಫೇಕ್‌’ ತಡೆಗೆ ಶೀಘ್ರದಲ್ಲಿ ಕಾನೂನು ರೂಪಿಸಲಾಗುವುದು ಎಂದು ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ, ನಟಿ ರಶ್ಮಿಕಾ ಮಂದಣ್ಣ ಸೇರಿದಂತೆ ಪ್ರಮುಖರ ಡೀಪ್ ಫೇಕ್‌ ವಿಡಿಯೋಗಳು ಸಾಮಾಜಿಕ ಮಾಧ್ಯಗಳಲ್ಲಿ ಸದ್ದು ಮಾಡಿದ ಹಿನ್ನೆಲೆ, ಇಂದು ಸಾಮಾಜಿಕ ಮಾಧ್ಯಮಗಳ ಮುಖ್ಯಸ್ಥರು ಮತ್ತು ಕಂಪನಿಗಳ ಜೊತೆ ಸಚಿವ ಅಶ್ವಿನ್ ವೈಷ್ಣವ್ ಸಭೆ ನಡೆಸಿದರು.

ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಡೀಪ್ ಫೇಕ್ ಪ್ರಜಾಪ್ರಭುತ್ವಕ್ಕೆ ಹೊಸ ಬೆದರಿಕೆಯಾಗಿದೆ. ಡೀಪ್‌ ಫೇಕ್‌ನ ಹೊಣೆಗಾರಿಗೆ ಅದನ್ನು ರಚಿಸಿದವರು ಮತ್ತು ಪಸರಿಸಿದ ವೇದಿಕೆ ಮೇಲೆ ಇರುತ್ತದೆ. ಡೀಪ್ ಫೇಕ್‌ ಮಾಡುವವರ ಮೇಲೆ ದಂಡ ವಿಧಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದರು.

ಸಾಮಾಜಿಕ ಮಾಧ್ಯಮ ಮುಖ್ಯಸ್ಥರೊಂದಿಗಿನ ಸಭೆಯಲ್ಲಿ, ಡೀಪ್‌ಫೇಕ್‌ಗಳನ್ನು ಹೇಗೆ ಕಂಡುಹಿಡಿಯಬಹುದು? ಡೀಪ್‌ಫೇಕ್‌ಗಳನ್ನು ಪೋಸ್ಟ್ ಮಾಡುವುದರಿಂದ ಜನರನ್ನು ಹೇಗೆ ತಡೆಯಬಹುದು ಮತ್ತು ಅಂತಹ ವಿಷಯವನ್ನು ವೈರಲ್ ಆಗದಂತೆ ತಡೆಯಬಹುದೇ? ರಿಪೋರ್ಟ್‌ ಮಾಡುವ ಕಾರ್ಯ ವಿಧಾನವನ್ನು ಹೇಗೆ ಕಾರ್ಯಗತಗೊಳಿಸಬಹುದು? ಎಂಬ ನಾಲ್ಕು ವಿಷಯಗಳನ್ನು ಪ್ರಮುಖವಾಗಿ ಚರ್ಚಿಸಲಾಗಿದೆ ಎಂದು ಸಚಿವರು ತಿಳಿಸಿದರು.

ಸಾಮಾಜಿಕ ಮಾಧ್ಯಮ ಅಪ್ಲಿಕೇಶನ್ ಅಥವಾ ವೆಬ್‌ಸೈಟ್‌ನಲ್ಲಿ ಬಳಕೆದಾರರು ಪ್ಲಾಟ್‌ಫಾರ್ಮ್ ಮತ್ತು ಅಧಿಕಾರಿಗಳಿಗೆ ಡೀಪ್‌ಫೇಕ್ ಬಗ್ಗೆ ಎಚ್ಚರಿಕೆ ನೀಡಬಹುದು. ಇದರಿಂದ ಸಂಬಂಧಪಟ್ಟವರು ಕ್ರಮ ತೆಗೆದುಕೊಳ್ಳಲು ಸಾಧ್ಯವಿದೆ. ಸಾರ್ವಜನಿಕರಲ್ಲಿ ಡೀಫ್ ಫೇಕ್ ಬಗ್ಗೆ ಜಾಗೃತಿ ಮೂಡಿಸಲು ಸರ್ಕಾರ, ಉದ್ಯಮಗಳು ಮತ್ತು ಮಾಧ್ಯಮಗಳು ಒಟ್ಟಾಗಿ ಕೆಲಸ ಮಾಡಬೇಕಾಗಿದೆ ಇತ್ಯಾದಿ ವಿಷಯಗಳನ್ನು ಸಭೆಯಲ್ಲಿ ಚರ್ಚೆ ಮಾಡಲಾಗಿದೆ ಎಂದು ಸಚಿವ ಅಶ್ವಿನಿ ವೈಷ್ಣವ್ ಮಾಹಿತಿ ನೀಡಿದರು.

ಡೀಪ್ ಫೇಕ್ ತಡೆಗೆ ಕಾನೂನು ರೂಪಿಸುವ ಅಗತ್ಯವಿದೆ ಎಂಬುವುದು ಸಭೆಯಿಂದ ತಿಳಿದು ಬಂದಿದೆ. ಸರ್ಕಾರ ಅತೀ ಶೀಘ್ರದಲ್ಲಿ ಈ ಸಂಬಂಧ ಕರಡು ಸಿದ್ದಪಡಿಸಲಿದೆ. ಪ್ರಸ್ತುತ ಇರುವ ಐಟಿ ನಿಯಮಗಳಿಗೆ ತಿದ್ದುಪಡಿ ತರಬಹುದು ಅಥವಾ ಹೊಸ ಕಾನೂನು ರೂಪಿಸಬಹುದು ಎಂದು ಅಶ್ವಿನಿ ವೈಷ್ಣವ್ ಹೇಳಿದರು.

ಇದನ್ನೂ ಓದಿ: ಮಹುವಾ ವಿರುದ್ಧದ ಪ್ರಶ್ನೆಗಾಗಿ ನಗದು ಆರೋಪ: ಮೌನ ಮುರಿದ ಮಮತಾ ಬ್ಯಾನರ್ಜಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...