Homeಕರ್ನಾಟಕNEP ಜಾರಿ ಹಿಂದೆ, ಹಿಂದಿ ಹೇರಿಕೆ ಉದ್ದೇಶವಿದೆ, ಕನ್ನಡ ಭಾಷೆಗೆ ಧಕ್ಕೆಯಾಗುತ್ತದೆ: ಸಚಿವ ಮಧು ಬಂಗಾರಪ್ಪ

NEP ಜಾರಿ ಹಿಂದೆ, ಹಿಂದಿ ಹೇರಿಕೆ ಉದ್ದೇಶವಿದೆ, ಕನ್ನಡ ಭಾಷೆಗೆ ಧಕ್ಕೆಯಾಗುತ್ತದೆ: ಸಚಿವ ಮಧು ಬಂಗಾರಪ್ಪ

- Advertisement -
- Advertisement -

ಹೊಸ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ಜಾರಿಯ ಹಿಂದೆ, ಹಿಂದಿ ಭಾಷೆ ಹೇರುವ ಉದ್ದೇಶವಿದೆ, ಇದರಿಂದ ಕನ್ನಡ ಭಾಷೆಗೂ ಧಕ್ಕೆಯಾಗುತ್ತದೆ. ಒಂದುವೇಳೆ ಜಾರಿ ಮಾಡಿದರೆ ಹಿಂದಿ ಹೇರಿಕೆಯಿಂದ ಕನ್ನಡ ಭಾಷೆಯನ್ನೇ ಮರೆತುಬಿಡುವ ಸ್ಥಿತಿ ಬರಬಹುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಶುಕ್ರವಾರ ಹೇಳಿದ್ದಾರೆ.

ಈ ಬಗ್ಗೆ ಮಂಡ್ಯದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ”ಪ್ರತಿ ರಾಜ್ಯದಲ್ಲೂ ತನ್ನದೇ ಸಂಸ್ಕೃತಿ, ಭಾಷೆ, ಶಿಕ್ಷಣ ವ್ಯವಸ್ಥೆ ಇರುತ್ತದೆ. ಕೇಂದ್ರ ಸರ್ಕಾರ ಒಂದು ರಾಜ್ಯದ ಸಂಸ್ಕೃತಿಯನ್ನು ಇನ್ನೊಂದು ರಾಜ್ಯದ ಮೇಲೆ ಹೇರುವ ಕಟ್ಟ ಕೆಲಸ ಮಾಡುತ್ತಿದೆ. ನಾವು ಒಕ್ಕೂಟ ವ್ಯವಸ್ಥೆಯಲ್ಲಿದ್ದು ಎಲ್ಲಾ ರಾಜ್ಯಗಳ ಸಂಸ್ಕೃತಿ ಭಾಷೆ ಹಾಗೂ ಶಿಕ್ಷಣಕ್ಕೆ ಗೌರವ ನೀಡಬೇಕು” ಎಂದು ಹೇಳಿದರು.

”ನಾವು ಅಧಿಕಾರಕ್ಕೆ ಬಂದರೆ ಎನ್‌ಇಪಿ ತಗೆದುಹಾಕುತ್ತೇವೆ ಮತ್ತು ಪಠ್ಯ ಪರಿಷ್ಕರಣೆ ಮಾಡುತ್ತೇವೆ ಎಂದು ಪ್ರಣಾಳಿಕೆಯಲ್ಲಿ ಹೇಳಿದ್ದೇವು. ಹಾಗಾಗಿಯೇ ನಾವು ಈಗ ಅಧಿಕಾರದಲ್ಲಿ ಇದ್ದೇವೆ. ಮಕ್ಕಳ ಶಿಕ್ಷಣ ರಾಜಕೀಯ ಪಕ್ಷಗಳ ಸಿದ್ಧಾಂತದ ಮೇಲೆ ನಡೆಯಬಾರದು, ನಮ್ಮ ಸರ್ಕಾರ ಶಿಕ್ಷಣದಲ್ಲಿ ಉತ್ತಮ ವಾತಾವರಣ ರೂಪಿಸಲು ಬದ್ಧವಾಗಿದೆ” ಎಂದರು.

”ಸರ್ಕಾರಿ ಶಾಲೆಗಳ ಖಾಸಗೀಕರಣ ಕುರಿತ ಪುಶ್ನೆಗೆ ಉತ್ತರಿಸಿದ ಅವರು, ”ಸರ್ಕಾರಿ ಶಾಲೆಗಳನ್ನು ಖಾಸರ್ಗೀಕರಣ ಮಾಡುವುದು, ಖಾಸಗಿಯವರೆಗೆ ಗುತ್ತಿಗೆ ನೀಡುವುದು ಅಸಾಧ್ಯ. ಖಾಸಗಿ ಸಹಭಾಗಿತ್ವದಲ್ಲಿ ಸರ್ಕಾರಿ ಶಾಲೆಗಳನ್ನು ಮೇಲ್ಮರ್ಜೆಗೇರಿಸಬಹುದು ಖಾಸಗಿಯವರಿಗೆ ಗುತ್ತಿದೆ ಕೊಡುವ ಯಾವುದೇ ಪ್ರಸ್ತಾವ ಇಲಾಖೆಯ ಮುಂದಿಲ್ಲ” ಎಂದು ಉತ್ತರಿಸಿದರು.

ಇದೇ ವೇಳೆ ಶಿಕ್ಷಕರ ನೇಮಕಾತಿ ವಿಚಾರವಾಗಿ ಮಾತನಾಡಿ, ”ನೇಮಕಾತಿ ವಿಚಾರ ಹೈಕೋರ್ಟ್‌ನಲ್ಲಿದ್ದು ಆ.21 ಅಥವಾ ಆ.27ರಂದು ವರದಿ ಸಲ್ಲಿಸುವಂತೆ ಸೂಚಿಸಿದೆ. ಆ.28ರಂದು ಪ್ರಕರಣ ವಿಚಾರಣೆಗೆ ಬರಲಿದೆ. ತೀರ್ಪು ಬರುವವರೆಗೂ ನೇಮಕಾತಿ ಪತ್ರ ನೀಡದಂತೆ ಕೋರ್ಟ್‌ ಸೂಚಿಸಿದೆ. ತ್ವರಿತಗತಿಯಲ್ಲಿ 13,500 ಶಿಕ್ಷಕರ ನೇಮಕಾತಿಗೆ ಕ್ರಮ ವಹಿಸಲಾಗುವುದು” ಎಂದು ತಿಳಿಸಿದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...