Homeಮುಖಪುಟದೇಶದ ಅರ್ಧದಷ್ಟು ಜನ ಹಸಿವಿನಲ್ಲಿರುವಾಗ ಹೊಸ ಸಂಸತ್ತು ಬೇಕೆ? ಮೋದಿಗೆ ಕಮಲ್ ಹಾಸನ್ ಪ್ರಶ್ನೆ

ದೇಶದ ಅರ್ಧದಷ್ಟು ಜನ ಹಸಿವಿನಲ್ಲಿರುವಾಗ ಹೊಸ ಸಂಸತ್ತು ಬೇಕೆ? ಮೋದಿಗೆ ಕಮಲ್ ಹಾಸನ್ ಪ್ರಶ್ನೆ

ಈಗ ಕೊರೊನಾದಿಂದಾಗಿ ಜೀವನೋಪಾಯ ಕಳೆದುಕೊಂಡ ನಂತರ ಭಾರತದ ಅರ್ಧದಷ್ಟು ಜನರು ಹಸಿವಿನಿಂದ ಬಳಲುತ್ತಿರುವಾಗ, 1,000 ಕೋಟಿ ರೂ.ಗಳ ಸಂಸತ್ತನ್ನು ಯಾರಿಗಾಗಿ ನಿರ್ಮಿಸುತ್ತಿದ್ದಿರಿ..?

- Advertisement -
- Advertisement -

ನಟ, ನಿರ್ದೇಶಕ, ರಾಜಕಾರಣಿ ಕಮಲ್ ಹಾಸನ್ 2021ರ ತಮಿಳುನಾಡು ವಿಧಾನಸಭಾ ಚುನಾವಣೆಗೆ ಇಂದಿನಿಂದ ಪ್ರಚಾರ ಕಾರ್ಯ ಆರಂಭಿಸಿದ್ದಾರೆ. ಪ್ರಚಾರ ಆರಂಭಿಸುವ ಮೊದಲು ಹೊಸ ಸಂಸತ್ತಿಗೆ ಅಡಿಗಲ್ಲು ಹಾಕಿರುವ ಪ್ರಧಾನಿ ಮೋದಿಯವರ ಮೇಲೆ ವಾಗ್ದಾಳಿ ನಡೆಸಿದ್ದಾರೆ.

ದೇಶದ ಆರ್ಥಿಕತೆ ತೀವ್ರ ಕುಸಿತ ಕಂಡಿರುವ ಈ ಸಮಯದಲ್ಲಿ ಇಂತಹ ಬೃಹತ್ ಮೊತ್ತದ ಹೊಸ ಸಂಸತ್ತು ನಿರ್ಮಾಣದ ಅರ್ಥವೇನು ಎಂದು ಮಕ್ಕಳ್​ ನೀದಿ ಮಯ್ಯಂ ಪಕ್ಷದ ಸಂಸ್ಥಾಪಕರಾದ ನಟ ಕಮಲ್​​ ಹಾಸನ್ ಪ್ರಧಾನಿಯವರನ್ನು ಪ್ರಶ್ನಿಸಿದ್ದಾರೆ.

ತಮ್ಮ ಟ್ವಿಟರ್‌ ಖಾತೆಯಲ್ಲಿ ಕಮಲ್ ಹಾಸನ್, “ಭಾರತದ ಅರ್ಧದಷ್ಟು ಜನರು ಹಸಿವಿನಿಂದ ಬಳಲುತ್ತಿರುವಾಗ, ಕೊರೊನಾ ವೈರಸ್‌ನಿಂದಾಗಿ ಜೀವನೋಪಾಯವನ್ನು ಕಳೆದುಕೊಂಡಿರುವಾಗ 1,000 ಕೋಟಿ ವೆಚ್ಚದ ಹೊಸ ಸಂಸತ್ತು ಏಕೆ..?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ನಾಸ್ತಿಕತೆಯೇ ನನ್ನ ಆಯುಧ, ಮಾನವೀಯತೆ ನನ್ನ ಸಿದ್ಧಾಂತ: ಕಮಲ್ ಹಾಸನ್ ಹೇಳಿಕೆ ವೈರಲ್

ಕಮಲ್ ಹಾಸನ್ ಚೀನಾದ ಮಹಾಗೋಡೆ ನಿರ್ಮಾಣದ ಉದಾಹರಣೆ ನೀಡಿದ್ದಾರೆ. “ಚೀನಾದ ಮಹಾಗೋಡೆಯ ನಿರ್ಮಾಣದಲ್ಲಿ ಸಾವಿರಾರು ಜನರು ಸಾವನ್ನಪ್ಪಿದಾಗ, ಈ ಗೋಡೆ ಜನರನ್ನು ರಕ್ಷಿಸಲು ಎಂದು ರಾಜರು ಹೇಳಿದರು. ಈಗ ಕೊರೊನಾದಿಂದಾಗಿ ಜೀವನೋಪಾಯ ಕಳೆದುಕೊಂಡ ನಂತರ ಭಾರತದ ಅರ್ಧದಷ್ಟು ಜನರು ಹಸಿವಿನಿಂದ ಬಳಲುತ್ತಿರುವಾಗ, 1,000 ಕೋಟಿ ರೂ.ಗಳ ಸಂಸತ್ತನ್ನು ಯಾರಿಗಾಗಿ ನಿರ್ಮಿಸುತ್ತಿದ್ದಿರಿ..? ದಯವಿಟ್ಟು, ನನ್ನ ಗೌರವಾನ್ವಿತ ಚುನಾಯಿತ ಪ್ರಧಾನಿಗಳೇ ಉತ್ತರಿಸಿ ಎಂದು ಪ್ರಶ್ನಿಸಿದ್ದಾರೆ.

 

ರಾಷ್ಟ್ರ ರಾಜಧಾನಿಯಲ್ಲಿ ಸೆಂಟ್ರಲ್ ವಿಸ್ತಾದ 20,000 ಕೋಟಿ ಯೋಜನೆಯ ಕೇಂದ್ರಬಿಂದುವಾಗಿರುವ ಹೊಸ ಸಂಸತ್ ಕಟ್ಟಡಕ್ಕೆ ಡಿಸೆಂಬರ್ 10 ರಂದು ಪ್ರಧಾನಿ ನರೇಂದ್ರ ಮೋದಿ ಅಡಿಗಲ್ಲು ಹಾಕಿದ್ದಾರೆ. ಆದರೆ, ಸಂಸತ್ ಭವನದ ನಿರ್ಮಾಣವನ್ನು ತಕ್ಷಣ ಪ್ರಾರಂಭಿಸಲು ಸಾಧ್ಯವಿಲ್ಲ. ಏಕೆಂದರೆ, ಈ ಯೋಜನೆಯನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ವಿಚಾರಣೆ ಇನ್ನು ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಉಳಿದಿದೆ.

ಇದನ್ನೂ ಓದಿ: ನೂತನ ಸಂಸತ್ ಭವನಕ್ಕೆ ಮೋದಿ ಭೂಮಿಪೂಜೆ: ಮುಂದುವರಿದ ಅನ್ನದಾತರ ಪ್ರತಿಭಟನೆ

ತಮಿಳುನಾಡು ಚುನಾವಣೆ ಹಿನ್ನೆಲೆ, ಇಂದಿನಿಂದ 16ನೇ ತಾರೀಖಿನವರೆಗೆ ಸುದೀರ್ಘ ಪ್ರಚಾರದಲ್ಲಿ ಕಮಲ್ ಹಾಸನ್ ತೊಡಗಲಿದ್ದು, ಮಧುರೈ, ಥೇಣಿ, ದಿಂಡಿಗಲ್, ವಿರುಧುನಗರ್​, ತಿರುಣಲ್​ವೇಲಿ, ಟುಟುಕೊರಿನ್ ಹಾಗೂ ಕನ್ಯಾಕುಮಾರಿ ಜಿಲ್ಲೆಗಳಲ್ಲಿ ಪ್ರಚಾರ ಮಾಡಲಿದ್ದಾರೆ.

ಕಮಲ್ ಹಾಸನ್ ಈ ಬಾರಿ ಸ್ಪರ್ಧಿಸುವ ಸಾಧ್ಯತೆಯಿದ್ದು, ಭ್ರಷ್ಟಾಚಾರ ನಿರ್ಮೂಲನೆ, ಉದ್ಯೋಗಗಳು, ಗ್ರಾಮ ಅಭಿವೃದ್ಧಿ ಮತ್ತು ಕುಡಿಯುವ ನೀರು ತಮ್ಮ ಪಕ್ಷದ  ಪ್ರಮುಖ ಯೋಜನೆಗಳನ್ನಾಗಿ ಮಾಡಿದ್ದಾರೆ. 2019 ರ ಲೋಕಸಭಾ ಚುನಾವಣೆಯಲ್ಲಿ ಕಮಲ್ ಪಕ್ಷವು ಸುಮಾರು 4 ಶೇಕಡಾ ಮತಗಳನ್ನು ಗಳಿಸಿದೆ.

ಮೊದಲಿನಿಂದಲೂ ಬಿಜೆಪಿ ವಿರುದ್ಧ ಟೀಕೆಗಳನ್ನು ಮಾಡುತ್ತ ಬಂದಿರುವ ನಟ ಕಮಲ್, ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷವಾದ ”ಮಕ್ಕಳ್ ನೀದಿ ಮಯ್ಯಂ” ಉತ್ತಮ ಜನರೊಂದಿಗೆ ಮೈತ್ರಿ ಮಾಡಿಕೊಳ್ಳಲಿದೆ, ಮುಂಬರುವ ಚುನಾವಣೆಯಲ್ಲಿ ನಟ ರಜನಿಕಾಂತ್ ಬೆಂಬಲವನ್ನು ಕೇಳುತ್ತೇನೆ ಎಂದು ಎಂದು ಈ ಹಿಂದೆ ಹೇಳಿದ್ದಾರೆ.

ಈಗಾಗಲೇ ತಮಿಳುನಾಡು ರಾಜಕೀಯದಲ್ಲಿ ಚಿತ್ರರಂಗದ ಜೊತೆಗೆ ಐಎಎಸ್ ಅಧಿಕಾರಿಗಳು ಸೇರಿಕೊಂಡಿದ್ದಾರೆ. ಐಎಎಸ್ ಮಾಜಿ ಅಧಿಕಾರಿ ಸಸಿಕಾಂತ್ ಸೆಂಥಿಲ್, ಅಣ್ಣಾಮಲೈ ಸೇರಿಕೊಂಡರೇ, ಡಿಸೆಂಬರ್‌ 31 ರಂದು ಪಕ್ಷವನ್ನು ಅಧಿಕೃತ ಘೋಷಣೆ ಮಾಡುವುದಾಗಿ ರಜನಿಕಾಂತ್ ಹೇಳಿದ್ದಾರೆ. ಒಟ್ಟಾರೆ, ಈ ಬಾರಿಯ ತಮಿಳುನಾಡಿನ ವಿಧಾನಸಭಾ ಚುನಾವಣೆ ದೇಶದ ಗಮನ ಸೆಳೆಯಲಿದೆ.


ಇದನ್ನೂ ಓದಿ: ವಿಧಾನಸಭಾ ಚುನಾವಣೆಯಲ್ಲಿ ರಜನಿಕಾಂತ್ ಬೆಂಬಲ ಕೇಳುತ್ತೇನೆ: ಕಮಲ್ ಹಾಸನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...