Homeಮುಖಪುಟಆಂಧ್ರ ಸಿಎಂ ಜಗನ್ ಸಹೋದರಿ ವೈ.ಎಸ್ ಶರ್ಮಿಳಾರಿಂದ ಇಂದು ಹೊಸ ಪಕ್ಷ ಸ್ಥಾಪನೆ

ಆಂಧ್ರ ಸಿಎಂ ಜಗನ್ ಸಹೋದರಿ ವೈ.ಎಸ್ ಶರ್ಮಿಳಾರಿಂದ ಇಂದು ಹೊಸ ಪಕ್ಷ ಸ್ಥಾಪನೆ

- Advertisement -
- Advertisement -

ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿಯವರ ಸಹೋದರಿ ವೈ.ಎಸ್ ಶರ್ಮಿಳಾರವರು ಇಂದು ಹೈದರಾಬಾದ್‌ನಲ್ಲಿ ಹೊಸ ಪಕ್ಷ ಘೋಷಿಸಲಿದ್ದಾರೆ. ಕಳೆದ ಏಪ್ರಿಲ್‌ನಲ್ಲಿಯೇ ಪಕ್ಷ ಸ್ಥಾಪನೆಗೆ ಪ್ರಯತ್ನ ನಡೆಸಿದ್ದ ಅವರು ಇಂದು ತಮ್ಮ ತಂದೆಯ ಜನ್ಮದಿನದ ಅಂಗವಾಗಿ ಹೊಸ ಪಕ್ಷಕ್ಕೆ ಚಾಲನೆ ನೀಡಲಿದ್ದಾರೆ.

ಸಾಂಕ್ರಾಮಿಕ ಕಾರಣದಿಂದ ಕೆಲವೇ ಜನ ಭಾಗವಹಿಸುವ ಇಂದಿನ ಕಾರ್ಯಕ್ರದಲ್ಲಿ ಪಕ್ಷದ ಪ್ರಣಾಳಿಕೆ ಮತ್ತು ಧ್ವಜ ಬಿಡುಗಡೆ ಮಾಡಲಾಗುವುದು ಎಂದು ವರದಿಗಳು ತಿಳಿಸಿವೆ. ಶರ್ಮಿಳಾರವರ ತಾಯಿ ವೈ.ಎಸ್ ವಿಜಯಮ್ಮ ಮತ್ತು ಪಕ್ಷದ ನಿಷ್ಠಾವಂತ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎನ್ನಲಾಗಿದೆ.

ಹೈದರಾಬಾದ್‌ನಲ್ಲಿ ಕಾರ್ಯಕ್ರಮ ನಡೆಯುತ್ತಿದ್ದು, ತಮ್ಮ ಪಕ್ಷದ ಚಟುವಟಿಕೆಗಳನ್ನು ತೆಲಂಗಾಣ ರಾಜ್ಯಕ್ಕೆ ಸೀಮಿತಗೊಳಿಸಲಿದ್ದಾರೆಯೇ ಅಥವಾ ಆಂಧ್ರ ಪ್ರದೇಶಕ್ಕೂ ವಿಸ್ತರಿಸಲಿದ್ದಾರೆಯೇ ಎಂಬುದರ ಬಗ್ಗೆ ಹೆಚ್ಚಿನ ಮಾಹಿತಿಗಳು ಲಭ್ಯವಾಗಿಲ್ಲ. “ನಾನು ಇಲ್ಲಿಯೇ ಹುಟ್ಟಿದ್ದೇನೆ, ಇಲ್ಲಿಯೇ ಬೆಳಿದಿದ್ದೇನೆ, ನನ್ನ ಮಕ್ಕಳಿಗೆ ಇಲ್ಲಿಯೇ ಜನ್ಮ ನೀಡಿದ್ದೇನೆ. ಇಲ್ಲಿನ ಸಮಸ್ಯೆಗಳು ನನಗೆ ಚೆನ್ನಾಗಿ ಅರಿವಿವೆ” ಎಂದು ಶರ್ಮಿಳಾ ತಿಳಿಸಿದ್ದಾರೆ. ತಮ್ಮ ಸಹೋದರಿಯ ಈ ನಡೆ ಕುರಿತು ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ ಅಂತರ ಕಾಯ್ದುಕೊಂಡಿದ್ದಾರೆ.

ತಮ್ಮ ತಂದೆ ವೈ.ಎಸ್ ರಾಜಶೇಖರ್‌ ರೆಡ್ಡಿಯವರ ಆಡಳಿತವನ್ನು ಮರುಸ್ಥಾಪಿಸುವುದು ನನ್ನ ಗುರಿ ಎಂದು ಶರ್ಮಿಳಾ ಹೇಳಿದ್ದಾರೆ. ತೆಲಂಗಾಣದಲ್ಲಿ ಪ್ರಬಲ ವಿರೋಧ ಪಕ್ಷವಿಲ್ಲ. ಖಾಲಿ ಇರುವ ಉದ್ಯೋಗಗಳನ್ನು ತುಂಬಿಲ್ಲ ಎಂದು ಕೆ.ಸಿ.ಆರ್ ಸರ್ಕಾರವನ್ನು ಟೀಕಿಸಿದ್ದಾರೆ. ಅಲ್ಲದೇ ತಾನು ಸ್ವತಂತ್ರವಾಗಿ ಜನರಿಗಾಗಿ ಕೆಲಸ ಮಾಡುತ್ತೇನೆಯೇ ಹೊರತು ಟಿಆರ್‌ಎಸ್, ಬಿಜೆಪಿಗಾಗಿ ಅಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.


ಇದನ್ನೂ ಓದಿ: ಕರ್ನಾಟಕದ ನಾಲ್ವರಿಗೆ ಮೋದಿ ಸಂಪುಟದಲ್ಲಿ ಸ್ಥಾನ: ಡೀಟೈಲ್ಸ್ ಇಲ್ಲಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...