Homeಮುಖಪುಟಬಿಲ್ಕಿಸ್ ಬಾನೋ ಅತ್ಯಾಚಾರಿಗಳ ಬಿಡುಗಡೆ ಪ್ರಶ್ನಿಸಿ ಹೊಸ ಅರ್ಜಿ; ವಿಚಾರಣೆಗೆ ಸುಪ್ರೀಂಕೋರ್ಟ್ ಒಪ್ಪಿಗೆ

ಬಿಲ್ಕಿಸ್ ಬಾನೋ ಅತ್ಯಾಚಾರಿಗಳ ಬಿಡುಗಡೆ ಪ್ರಶ್ನಿಸಿ ಹೊಸ ಅರ್ಜಿ; ವಿಚಾರಣೆಗೆ ಸುಪ್ರೀಂಕೋರ್ಟ್ ಒಪ್ಪಿಗೆ

- Advertisement -
- Advertisement -

2002ರಲ್ಲಿ ಬಿಲ್ಕಿಸ್ ಬಾನೊ ಅವರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ, ಬಿಲ್ಕಿಸ್‌ ಕುಟುಂಬ ಸದಸ್ಯರನ್ನು ಕೊಂದ ಅಪರಾಧಿ ಬಿಡುಗಡೆ ಮಾಡಿರುವುದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಮತ್ತೊಂದು ಅರ್ಜಿ ಸಲ್ಲಿಕೆಯಾಗಿದೆ. ಮಹಿಳಾ ಸಂಘಟನೆಯೊಂದು ಸಲ್ಲಿಸಿದ ಹೊಸ ಮನವಿಯನ್ನು ಆಲಿಸುವುದಾಗಿ ಸುಪ್ರೀಂ ಕೋರ್ಟ್ ಶುಕ್ರವಾರ ಒಪ್ಪಿಕೊಂಡಿದೆ.

ನ್ಯಾಯಮೂರ್ತಿಗಳಾದ ಅಜಯ್ ರಸ್ತೋಗಿ ಮತ್ತು ಸಿ.ಟಿ.ರವಿಕುಮಾರ್ ಅವರ ಪೀಠವು ಈ ವಿಷಯವನ್ನು ಮುಖ್ಯ ಅರ್ಜಿಯೊಂದಿಗೆ ಸೇರಿಸಿಕೊಂಡಿದೆ. ಮೊದಲೆರಡು ಅರ್ಜಿಗಳೊಂದಿಗೆ ಇದನ್ನೂ ವಿಚಾರಣೆ ನಡೆಸುವುದಾಗಿ ಕೋರ್ಟ್ ತಿಳಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಪ್ರಕರಣದಲ್ಲಿ ಅಪರಾಧಿಗಳ ಬಿಡುಗಡೆಯನ್ನು ಪ್ರಶ್ನಿಸಿ ನ್ಯಾಷನಲ್ ಫೆಡರೇಶನ್ ಆಫ್ ಇಂಡಿಯನ್ ವುಮೆನ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಲಿದೆ.

ಅಕ್ಟೋಬರ್ 18ರಂದು ನ್ಯಾಯಾಲಯವು, “ಬಿಡುಗಡೆಯನ್ನು ಪ್ರಶ್ನಿಸುವ ಅರ್ಜಿಗಳಿಗೆ ಗುಜರಾತ್ ಸರ್ಕಾರದ ಉತ್ತರವು ತುಂಬಾ ದೊಡ್ಡದಾಗಿದೆ. ಇದರಲ್ಲಿ ಸರಣಿ ತೀರ್ಪುಗಳನ್ನು ಉಲ್ಲೇಖಿಸಲಾಗಿದೆ. ಆದರೆ ವಾಸ್ತವಿಕ ಹೇಳಿಕೆಗಳು ಕಾಣೆಯಾಗಿವೆ” ಎಂದಿದೆ.

ಗುಜರಾತ್ ಸರ್ಕಾರದ ಅಫಿಡವಿಟ್‌ಗೆ ತಮ್ಮ ಪ್ರತಿಕ್ರಿಯೆಯನ್ನು ಸಲ್ಲಿಸಲು ಅರ್ಜಿದಾರರಿಗೆ ಸಮಯ ನೀಡಿದೆ. ನವೆಂಬರ್ 29ರಂದು ಈ ವಿಷಯವನ್ನು ಆಲಿಸುವುದಾಗಿ ಹೇಳಿದೆ.

ಸಿಪಿಐ(ಎಂ) ನಾಯಕಿ ಸುಭಾಷಿಣಿ ಅಲಿ, ಪತ್ರಕರ್ತೆ ರೇವತಿ ಲಾಲ್ ಮತ್ತು ಶಿಕ್ಷಣತಜ್ಞೆ ರೂಪ್ ರೇಖಾ ವರ್ಮಾ, ಟಿಎಂಸಿ ಸಂಸದ ಮಹುವಾ ಮೊಯಿತ್ರಾ ಅವರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.

ಬಿಲ್ಕಿಸ್ ಬಾನೋ ಪ್ರಕರಣದ ಆರೋಪಿಗಳ ಬಿಡುಗಡೆಯನ್ನು ಪ್ರಶ್ನಿಸಿ ಸಲ್ಲಿಸಿದ ಎರಡು ಅರ್ಜಿಗಳ ಆಧಾರದಲ್ಲಿ ಸುಪ್ರೀಂಕೋರ್ಟ್ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿತ್ತು. ಕೇಂದ್ರ ಸರ್ಕಾರದ ಅನುಮತಿ ಇಲ್ಲದೆಯೇ ಕ್ರಮ ಜರುಗಿಸಲಾಗಿದೆ ಎಂದು ಅರ್ಜಿದಾರರು ವಾದಿಸಿದ್ದರು. ಈಗ ಮತ್ತೊಂದು ಅರ್ಜಿ ಸೇರ್ಪಡೆಯಾಗಿದೆ.

“ಬಿಲ್ಕಿಸ್ ಬಾನೋ ಪ್ರಕರಣದ 11 ಅಪರಾಧಿಗಳು 14 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ಜೈಲು ಶಿಕ್ಷೆಯನ್ನು ಪೂರ್ಣಗೊಳಿಸಿದ್ದಾರೆ. ಅವರ ನಡವಳಿಕೆ ಉತ್ತಮವಾಗಿದೆ ಎಂದು ಕಂಡುಬಂದಿದೆ ಮತ್ತು ಕೇಂದ್ರ ಸರ್ಕಾರವು ಅಪರಾಧಿಗಳ ಬಿಡುಗಡೆಗೆ ಅನುಮೋದನೆ ನೀಡಿದೆ” ಎಂದು ಗುಜರಾತ್ ಸರ್ಕಾರ ಸೋಮವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

ಬಿಲ್ಕಿಸ್ ಬಾನೋ ಪ್ರಕರಣದ 11 ಅಪರಾಧಿಗಳಲ್ಲಿ ಒಬ್ಬರಾಗಿದ್ದ ಸದ್ಯ ಕ್ಷಮಾಧಾನದ ಆಧಾರದಲ್ಲಿ ಬಿಡುಗಡೆಯಾಗಿರುವ ಮಿತೇಶ್ ಚಿಮನ್‌ಲಾಲ್ ಭಟ್ ಎಂಬಾತ ಜೂನ್ 19, 2020ರಂದು ಪೆರೋಲ್‌ನಲ್ಲಿ ಹೊರಗಿರುವಾಗ ಮಹಿಳೆಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿದ್ದಾನೆ ಎಂಬ ವಿಷಯ ತಡವಾಗಿ ಬೆಳಕಿಗೆ ಬಂದಿದೆ.

ಇದನ್ನೂ ಓದಿರಿ: ಬಿಲ್ಕಿಸ್‌ ಬಾನೋ ಅತ್ಯಾಚಾರಿಗಳ ಬಿಡುಗಡೆಗೆ ಒಪ್ಪಿದ ಮೋದಿ ಸರ್ಕಾರ; ಏನೇನಾಯ್ತು ಈ ವರೆಗೆ? | ಸಂಕ್ಷಿಪ್ತ ವರದಿ

ಗುಜರಾತ್ ಸರ್ಕಾರದಿಂದ ಬಿಲ್ಕಿಸ್ ಪ್ರಕರಣದ ಅಪರಾಧಿಗಳನ್ನು ಕ್ಷಮಾಧಾನದ ಆಧಾರದಲ್ಲಿ ಬಿಡುಗಡೆ ಮಾಡುವ ಪ್ರಸ್ತಾಪ ಬಂದಾಗ ದಾಹೋದ್ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಈ ಮಾಹಿತಿ ನೀಡಿದ್ದಾರೆ. ಆದರೂ ಸಹ ಗುಜರಾತ್ ಸರ್ಕಾರ ಅಪರಾಧಿಯನ್ನು ಬಿಡುಗಡೆ ಮಾಡಿದೆ.

ಚಿಮನ್ ಲಾಲ್ ಭಟ್ ಮೇಲೆ IPC ಸೆಕ್ಷನ್ 354ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಈ ವಿಚಾರಣೆಯು ಬಾಕಿ ಉಳಿದಿದೆ ಎಂದು ಗುಜರಾತ್ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ಅಫಿಡವಿಟ್‌ನಲ್ಲಿನ ಅನುಬಂಧದಲ್ಲಿದೆ ಎಂದು ಲೈವ್ ಲಾ ವರದಿ ಮಾಡಿದೆ.

11 ಅಪರಾಧಿಗಳ ಬಿಡುಗಡೆಯನ್ನು ಒಕ್ಕೂಟ ಸರ್ಕಾರದ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಸಮರ್ಥಿಸಿಕೊಂಡಿದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ ಚುನಾವಣಾ ಪ್ರಚಾರದ ವೇಳೆ ಅತ್ಯಾಚಾರಿಗಳ ಬಿಡುಗಡೆಯನ್ನು ಸಮರ್ಥಿಸಿಕೊಂಡ ಧಾರವಾಡ ಸಂಸದರೂ ಆಗಿರುವ ಪ್ರಹ್ಲಾದ್ ಜೋಶಿ,“ಇದು ಸರ್ಕಾರ ಮತ್ತು ಸಂಬಂಧಪಟ್ಟವರು ತೆಗೆದುಕೊಂಡ ನಿರ್ಧಾರ. ಇದು ಕಾನೂನಿನ ಪ್ರಕ್ರಿಯೆಯಾಗಿರುವುದರಿಂದ ನನಗೆ ಅದರಲ್ಲಿ ಯಾವುದೇ ತಪ್ಪು ಕಂಡುಬಂದಿಲ್ಲ” ಎಂದು ಎನ್‌ಡಿಟಿವಿ ಜೊತೆಗೆ ಮಾತನಾಡುತ್ತಾ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...