Homeಮುಖಪುಟಒಳಜಗಳ, ಒತ್ತಡ ತಂತ್ರ, ಲಾಬಿ ರಾಜಕಾರಣದಿಂದ ಹೈರಾಣಾಗಿರುವ ಕಾಂಗ್ರೆಸ್‌ಗೆ ಡಿಕೆಶಿ ನೂತನ ಅಧ್ಯಕ್ಷ?

ಒಳಜಗಳ, ಒತ್ತಡ ತಂತ್ರ, ಲಾಬಿ ರಾಜಕಾರಣದಿಂದ ಹೈರಾಣಾಗಿರುವ ಕಾಂಗ್ರೆಸ್‌ಗೆ ಡಿಕೆಶಿ ನೂತನ ಅಧ್ಯಕ್ಷ?

- Advertisement -
- Advertisement -

ಅದೊಂದು ಕಾಲವಿತ್ತು. ಕಾಂಗ್ರೆಸ್ ಪಕ್ಷದಿಂದ ಚುನಾವಣೆಗೆ ಒಂದು ಕತ್ತೆ ನಿಂತರೂ ಗೆಲುವು ಸಾಧಿಸುತ್ತದೆ ಎಂದು. ಆದರೆ, ಪ್ರಸ್ತುತ ಪರಿಸ್ಥಿತಿ ಹಾಗಿಲ್ಲ. ಕಾಂಗ್ರೆಸ್‌ನಿಂದ ಕತ್ತೆ ಅಲ್ಲ ಸ್ವತಃ ಪಕ್ಷದ ರಾಷ್ಟ್ರಾಧ್ಯಕ್ಷರಾಗಿದ್ದ ರಾಹುಲ್ ಗಾಂಧಿಯೂ ಗೆಲುವು ಸಾಧಿಸಲು ಸಾಧ್ಯವಾಗುತ್ತಿಲ್ಲ. 2014ಕ್ಕೂ ಮುಂಚೆ ದೇಶದ 14 ಕ್ಕೂ ಹೆಚ್ಚು ರಾಜ್ಯಗಳಲ್ಲಿ ಆಡಳಿತ ಚುಕ್ಕಾಣಿ ಹಿಡಿದಿದ್ದ ಕಾಂಗ್ರೆಸ್ ಇಂದು ಕೇವಲ ರಾಜಸ್ಥಾನ, ಮಧ್ಯಪ್ರದೇಶ, ಪಂಜಾಬ್ ಸೇರಿದಂತೆ ಮೂರು-ನಾಲ್ಕು ರಾಜ್ಯಗಳಲ್ಲಿ ಮಾತ್ರ ತನ್ನ ಅಸ್ತಿತ್ವವನ್ನು ಕಾಪಾಡಿಕೊಂಡಿದೆ.

ಆದರೆ, ಕರ್ನಾಟಕ ಮಾತ್ರ ಎಲ್ಲಾ ಕಾಲದಲ್ಲೂ ಕಾಂಗ್ರೆಸ್ ಪಾಲಿಗೆ ಅಕ್ಷರಶಃ ಕಾಮಧೇನುವಾಗಿತ್ತು. ಆದರೆ, ಕಳೆದ ವಿಧಾನಸಭಾ ಚುನಾವಣಾ ಫಲಿತಾಂಶ ಕಾಂಗ್ರೆಸ್ ಪಕ್ಷದ ಪಾಲಿಗೆ ಇದ್ದ ಆ ಒಂದು ಆಶಾವಾದವನ್ನು ಕಿತ್ತುಕೊಂಡಿದೆ.

ಹೀಗಾಗಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಕಳೆದುಕೊಂಡ ವರ್ಚಸ್ಸನ್ನು ಪುನಃ ಗಳಿಸಿಕೊಳ್ಳಲು ಏಕೈಕ ಮಾರ್ಗ ತಳ ಮಟ್ಟದಿಂದ ಮತ್ತೆ ಪಕ್ಷವನ್ನು ಸಂಘಟಿಸುವುದು. ಆದರೆ, ಸೋಲಿನ ನಡುವೆಯೂ ಪಾಠ ಕಲಿಯದ ಕಾಂಗ್ರೆಸ್ ನಾಯಕರ ಒಳ ಜಗಳ, ಅಧಿಕಾರದ ದಾಹ ಹಾಗೂ ಲಾಬಿ ಅಕ್ಷರಶಃ ಹೈಕಮಾಂಡ್ ನಾಯಕರನ್ನೂ ಆತಂಕಕ್ಕೆ ದೂಡಿದೆ. ಪರಿಣಾಮ ಪಕ್ಷದ ಪ್ರಮುಖ ಹುದ್ದೆಯಾದ ಕೆಪಿಸಿಸಿ ಅಧ್ಯಕ್ಷ ಹುದ್ದೆ ಕಳೆದ ಎರಡು ತಿಂಗಳಿನಿಂದ ಖಾಲಿಯಾಗಿಯೇ ಇದೆ.

ಈ ಹುದ್ದೆಗೆ ಎಂ.ಬಿ. ಪಾಟೀಲ್‌ಗೆ ದಕ್ಕಬೇಕೆಂದು ಒಂದೆಡೆ ಸಿದ್ದರಾಮಯ್ಯ ದೊಡ್ಡ ಮಟ್ಟದ ಲಾಬಿ ನಡೆಸಿದ್ದರೆ, ಮತ್ತೊಂದೆಡೆ ಡಿ.ಕೆ. ಶಿವಕುಮಾರ್ ಕುಂತಲ್ಲೇ ರಣತಂತ್ರ ಹೆಣೆಯುತ್ತಿದ್ದಾರೆ. ಈ ನಡುವೆ ರಾಜ್ಯದಲ್ಲಿ ಪಕ್ಷದ ವರ್ಚಸ್ಸನ್ನು ಮತ್ತೆ ವೃದ್ಧಿಸಲು ಟ್ರಬಲ್ ಶೂಟರ್ ಖ್ಯಾತಿಯ ಡಿ.ಕೆ. ಶಿವಕುಮಾರ್ ಸೂಕ್ತ ಆಯ್ಕೆ ಎಂಬ ನಿರ್ಣಯಕ್ಕೆ ಹೈಕಮಾಂಡ್ ಬಂದಿದೆ ಎನ್ನುತ್ತಿವೆ ಕೈ ಮೂಲಗಳು.

ಕೆಪಿಸಿಸಿ ಅಧ್ಯಕ್ಷ ಗಾದಿಗೆ ಡಿಕೆಶಿ ಬಹುತೇಕ ಖಚಿತ?

2018 ರಾಜ್ಯ ವಿಧಾನಸಭೆ ಚುನಾವಣೆ 2019ರ ಲೋಕಸಭಾ ಚುನಾವಣೆ ಸೋಲಿನಿಂದ ಹೈರಾಣಾಗಿದ್ದ ಕಾಂಗ್ರೆಸ್ ಮಹತ್ವದ ಉಪ ಚುನಾವಣೆಯಲ್ಲೂ ಹೀನಾಯ ಸೋಲನುಭವಿಸಿತ್ತು. ಅನರ್ಹ ಶಾಸಕರಿಗೆ ಸೋಲುಣಿಸಬೇಕು ಎಂಬ ತಮ್ಮ ಉದ್ದೇಶದಲ್ಲಿ ಎಡವಿತ್ತು. ಪರಿಣಾಮ ಸೋಲಿನ ನೈತಿಕ ಹೊಣೆ ಹೊತ್ತು ಸಿಎಲ್ಪಿ ಹಾಗೂ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ರಾಜೀನಾಮೆ ನೀಡಿದ್ದರು.

ಸಿದ್ದರಾಮಯ್ಯ ಅವರ ರಾಜೀನಾಮೆಯನ್ನು ಹೈಕಮಾಂಡ್ ಯಾವುದೇ ಕಾರಣಕ್ಕೂ ಅಂಗೀಕರಿಸುವುದಿಲ್ಲ ಎಂಬುದು ಎಲ್ಲರಿಗೂ ತಿಳಿದಿತ್ತು. ಹೀಗಾಗಿ ಇದೊಂದು ಒತ್ತಡ ಹೇರುವ ನಾಟಕ ಎಂದು ಅನೇಕರು ಟೀಕಿಸಿದ್ದರು.

ಆದರೆ, ದಿನೇಶ್ ಗುಂಡೂರಾವ್ ವಿರುದ್ಧ ಆರಂಭದಿಂದಲೂ ಪಕ್ಷದಲ್ಲಿ ಸಾಕಷ್ಟು ಅಸಮಾಧಾನವಿತ್ತು. ರೋಷನ್ ಬೇಗ್ ಸೇರಿದಂತೆ ಅನೇಕರು ದಿನೇಶ್ ಗುಂಡೂರಾವ್ ಕಾರ್ಯವೈಖರಿಯನ್ನು ಬಹಿರಂಗವಾಗಿ ಟೀಕಿಸಿದ್ದರು. ಹೀಗಾಗಿ ಕೆಪಿಸಿಸಿ ಅಧ್ಯಕ್ಷ ಗಾದಿಗೆ ದಿನೇಶ್ ಗುಂಡೂರಾವ್ ರಾಜೀನಾಮೆ ನೀಡುತ್ತಿದ್ದಂತೆ ಈ ಸ್ಥಾನದ ಮೇಲೆ ಮಧುಗಿರಿ ಕ್ಷೇತ್ರದ ಮಾಜಿ ಶಾಸಕ ಕೆ.ಎನ್. ರಾಜಣ್ಣ, ಕೋಲಾರ ಮಾಜಿ ಸಂಸದ ಕೆ.ಹೆಚ್. ಮುನಿಯಪ್ಪ ಆದಿಯಾಗಿ ಅನೇಕರು ಕಣ್ಣಿಟ್ಟಿದ್ದರು.

ಆದರೆ, ಪ್ರಬಲ ಪೈಪೋಟಿ ಇದ್ದದ್ದು ಮಾತ್ರ ಲಿಂಗಾಯತ ಸಮುದಾಯದ ನಾಯಕ ಎಂ.ಬಿ. ಪಾಟೀಲ್ ಹಾಗೂ ಒಕ್ಕಲಿಗ ಸಮುದಾಯದ ಪ್ರಬಲ ನಾಯಕ ಟ್ರಬಲ್ ಶೂಟರ್ ಖ್ಯಾತಿಯ ಡಿ.ಕೆ. ಶಿವಕುಮಾರ್ ಅವರ ಮಧ್ಯೆ ಮಾತ್ರ.

ಎಂ.ಬಿ. ಪಾಟೀಲ್ ಪರ ಲಾಬಿ ಮಾಡುವ ಸಲುವಾಗಿ ಸ್ವತಃ ಮಾಜಿ ಸಿಎಂ ಸಿದ್ದರಾಮಯ್ಯ ದೆಹಲಿ ತಲುಪಿದ್ದರು. ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಈ ಕುರಿತು ಸಾಕಷ್ಟು ಚರ್ಚೆ ನಡೆಸಿದ್ದರು. ಆದರೆ, ಡಿ.ಕೆ. ಶಿವಕುಮಾರ್ ಮಾತ್ರ ಬೆಂಗಳೂರು ಬಿಟ್ಟು ಕದಲಿರಲಿಲ್ಲ. ತನಗೆ ಅಧ್ಯಕ್ಷ ಗಾದಿ ನೀಡುವಂತೆ ಯಾರ ಮೇಲೂ ಒತ್ತಡ ಹೇರುವ ಹಾಗೂ ಲಾಬಿ ಮಾಡುವ ಕೆಲಸಕ್ಕೆ ಮುಂದಾಗಿರಲಿಲ್ಲ. ತನಗೆ ಆ ಸ್ಥಾನ ಸಿಗುತ್ತದೆ ಎಂಬ ಅಪಾರ ನಂಬಿಕೆ ಅವರಲ್ಲಿತ್ತು.

ಅವರ ನಂಬಿಕೆಗೆ ಪೂರಕವಾಗಿ ಹೈಕಮಾಂಡ್ ಇದೀಗ ಕೆಪಿಸಿಸಿ ಅಧ್ಯಕ್ಷ ಹುದ್ದೆಯನ್ನು ಡಿ.ಕೆ. ಶಿವಕುಮಾರ್ ಅವರಿಗೆ ನೀಡಲಿದೆ ಎನ್ನಲಾಗುತ್ತಿದೆ. ಕಾಂಗ್ರೆಸ್ ಮೂಲಗಳ ಮಾಹಿತಿಯ ಪ್ರಕಾರ ರಾಜ್ಯದಲ್ಲಿ ಕುಗ್ಗಿರುವ ಕಾಂಗ್ರೆಸ್ ವರ್ಚಸ್ಸನ್ನು ಮತ್ತೆ ಮುನ್ನೆಲೆಗೆ ತರಲು ಪಕ್ಷವನ್ನು ತಳ ಮಟ್ಟದಿಂದ ಸಧೃಡಗೊಳಿಸಲು ಡಿಕೆಶಿ ಉತ್ತಮ ಆಯ್ಕೆ ಎಂಬುದು ಹೈಕಮಾಂಡ್ ನಿಲುವು ಎನ್ನಲಾಗುತ್ತಿದೆ. ಅಲ್ಲಿಗೆ ಒಂದು ಹಂತದಲ್ಲಿ ಸಿದ್ದರಾಮಯ್ಯನವರಿಗೆ ಸೋಲಾಗಿರುವುದು ಖಚಿತ.

ಕಾಂಗ್ರೆಸ್ ಪಕ್ಷಕ್ಕೆ ನಾಲ್ವರು ಕಾರ್ಯಾಧ್ಯಕ್ಷರು

ಕೆಪಿಸಿಸಿ ಆಧ್ಯಕ್ಷ ಹುದ್ದೆ ತಮ್ಮ ಕೈ ತಪ್ಪುತ್ತಿದ್ದಂತೆ ಡಿ.ಕೆ. ಶಿವಕುಮಾರ್ ಅವರ ಕೈ ಕಟ್ಟಿಹಾಕಲು ನಾಲ್ಕು ಕಾರ್ಯಾಧ್ಯಕ್ಷ ಹುದ್ದೆಗಳನ್ನು ಸೃಷ್ಟಿಸಲು ಸಿದ್ದರಾಮಯ್ಯ ಹೊಸ ಯೋಜನೆಯೊಂದನ್ನು ಸೃಷ್ಟಿಸಿದ್ದಾರೆ.

ಅಸಲಿಗೆ ಕಳೆದ ನಾಲ್ಕು ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಕಾರ್ಯಾಧ್ಯಕ್ಷರಾಗಿ ಈಶ್ವರ ಖಂಡ್ರೆ ಕೆಲಸ ನಿರ್ವಹಿಸುತ್ತಿದ್ದರು. ಆದರೆ, ಉಪ ಚುನಾವಣೆ ಸೋಲಿನ ಹೊಣೆ ಹೊತ್ತು ಅವರೂ ಸಹ ರಾಜೀನಾಮೆ ನೀಡಿದ್ದಾರೆ.

ಹೀಗಾಗಿ ತೆರವಾಗಿರುವ ಕಾರ್ಯಾಧ್ಯಕ್ಷರ ಹುದ್ದೆಗೆ ನಾಲ್ಕು ಜನ ಪ್ರಬಲ ಸಮುದಾಯದವರನ್ನು ನೇಮಕ ಮಾಡಬೇಕು. ಹೆಚ್.ಸಿ. ಮಹದೇವಪ್ಪ, ಜಮೀರ್ ಅಹಮದ್, ಸತೀಶ್ ಜಾರಕಿಹೊಳಿ ಹಾಗೂ ಈಶ್ವರ ಖಂಡ್ರೆ ಅವರನ್ನು ಈ ಹುದ್ದೆಗೆ ನೇಮಕ ಮಾಡುವ ಮೂಲಕ ನಾಲ್ಕೂ ಪ್ರಬಲ ಸಮುದಾಯಗಳ ಮತಗಳನ್ನು ಸೆಳೆಯಬಹುದು ಎಂದು ಹೈಕಮಾಂಡ್ ನಾಯಕರಿಗೆ ಸಿದ್ದರಾಮಯ್ಯ ಸಲಹೆ ನೀಡಿದ್ದರು.

ಸಿದ್ದರಾಮಯ್ಯ ಮುಂದಿಟ್ಟಿರುವ ಈ ಸಲಹೆ ಇದೀಗ ಕಾಂಗ್ರೆಸ್ ಪಕ್ಷದಲ್ಲಿ ಮತ್ತೊಂದು ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಏಕೆಂದರೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಡಾ. ಪರಮೇಶ್ವರ್ ಅವರಿಗೆ ಡಿಸಿಎಂ ಹುದ್ದೆ ನೀಡಬೇಕು ಎಂಬ ದೊಡ್ಡ ಕೂಗು ಎದ್ದಿತ್ತು. ಆದರೆ, ಪರಮೇಶ್ವರ್ ಈ ಹುದ್ದೆಗೆ ಏರಲು ಅಡ್ಡಗಾಲು ಹಾಕಿದ್ದ ಸಿದ್ದರಾಮಯ್ಯ ಕೊನೆಯವರೆಗೂ ಡಿಸಿಎಂ ಹುದ್ದೆ ಸೃಷ್ಟಿಯಾಗದಂತೆ ನೋಡಿಕೊಂಡಿದ್ದರು.

ಹೀಗಿದ್ದ ಮೇಲೆ ಇದೀಗ ಪಕ್ಷದ ಅಧ್ಯಕ್ಷರ ಅಧಿಕಾರವನ್ನು ಮೊಟಕುಗೊಳಿಸುವ ರೀತಿಯಲ್ಲಿ ನಾಲ್ಕು ಜನ ಕಾರ್ಯಾಧ್ಯಕ್ಷರನ್ನು ನೇಮಕ ಮಾಡುವುದೇಕೆ? ಈ ಮೂಲಕ ಸಿದ್ದರಾಮಯ್ಯ ಪಕ್ಷದ ಅಧ್ಯಕ್ಷರ ಅಧಿಕಾರದ ಮೇಲೆ ಹಿಡಿತ ಸಾಧಿಸಲು ಹೊರಟಿದ್ದಾರೆಯೇ ಎಂಬ ಆರೋಪಗಳೂ ಕೇಳಿ ಬರುತ್ತಿದೆ.

ಈ ನಡುವೆ ಸಿದ್ದರಾಮಯ್ಯ ವಿರುದ್ಧವೂ ಒಂದು ಬಣ ಕಳೆದ ಹಲವು ವರ್ಷಗಳಿಂದ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿರುವುದು ಸುಳ್ಳಲ್ಲ. ವಿರೋಧ ಪಕ್ಷದ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದರೂ ಹೈಕಮಾಂಡ್ ಅದನ್ನು ಅಂಗೀಕರಿಸಿಲ್ಲ. ಹೀಗಾಗಿ ಮತ್ತೆ ಆ ಸ್ಥಾನಕ್ಕೆ ಸಿದ್ದರಾಮಯ್ಯನವರನ್ನು ನೇಮಕ ಮಾಡುವುದು ಈಗಾಗಲೇ ಖಚಿತವಾಗಿದೆ.

ಆದರೆ, ಸಿದ್ದರಾಮಯ್ಯ ವಿರೋಧಿ ಬಣ ಈಗಾಗಲೇ ಸಿಎಲ್‌ಪಿ ಹಾಗೂ ಪ್ರತಿಪಕ್ಷ ನಾಯಕನ ಸ್ಥಾನ ಎರಡಕ್ಕೂ ಬೇರೆ ಬೇರೆ ನಾಯಕರನ್ನು ನೇಮಕ ಮಾಡಬೇಕು, ಸಿಎಲ್‌ಪಿ ನಾಯಕ ಸ್ಥಾನಕ್ಕೆ ಪರಮೇಶ್ವರ್ ಅವರನ್ನು ನೇಮಕ ಮಾಡಬೇಕು ಎಂಬ ವಾದವನ್ನು ಹೈಕಮಾಂಡ್ ಮುಂದಿಟ್ಟಿದೆ.

ಈ ಮೂಲಕ ಸಿದ್ದರಾಮಯ್ಯ ಅವರ ಅಧಿಕಾರಕ್ಕೆ ಕೈ ಹಾಕುವುದು ಈ ಬಣದ ಉದ್ದೇಶ. ಆದರೆ, ಸಿಎಲ್ಪಿ ಹಾಗೂ ಪ್ರತಿಪಕ್ಷದ ನಾಯಕ ಸ್ಥಾನವನ್ನು ಇಬ್ಬರು ನಾಯಕರಿಗೆ ಹಂಚುವುದಾದರೆ ತಮಗೆ ಯಾವುದೇ ಸ್ಥಾನಮಾನ ಬೇಡ ಎಂದು ಸಿದ್ದರಾಮಯ್ಯ ಸಾರಾಸಗಟಾಗಿ ತಿಳಿಸಿದ್ದಾರೆ. ಆದರೆ, ಪ್ರತಿಪಕ್ಷ ನಾಯಕನ ಸ್ಥಾನಕ್ಕೆ ಸಿದ್ದರಾಮಯ್ಯ ಅವರನ್ನು ಬಿಟ್ಟರೆ ಕಾಂಗ್ರೆಸ್ ಪಕ್ಷಕ್ಕೂ ಸೂಕ್ತ ಆಯ್ಕೆಗಳಿಲ್ಲ. ಇದೇ ಕಾರಣಕ್ಕೆ ಸಿದ್ದರಾಮಯ್ಯ ಸಹ ಒತ್ತಡದ ತಂತ್ರ ಅನುಸರಿಸುತ್ತಿದ್ದಾರೆ.

ಒಟ್ಟಿನಲ್ಲಿ ಸೋಲಿನ ನಡುವೆಯೂ ಪಾಠ ಕಲಿಯದ ಕಾಂಗ್ರೆಸ್ ಪಕ್ಷದ ಒಳ ಜಗಳ ಇದೀಗ ಬೀದಿಗೆ ಬಿದ್ದಿದೆ. ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಓರ್ವ ಸೂಕ್ತ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಕಾಂಗ್ರೆಸ್ ಹೈಕಮಾಂಡ್‌ಗೆ ಎರಡು ತಿಂಗಳಾದರೂ ಸಾಧ್ಯವಾಗುತ್ತಿಲ್ಲ ಎಂದರೆ ಪಕ್ಷದ ಒಳಗೆ ಯಾವ ಮಟ್ಟದ ಲಾಬಿ ನಡೆಯುತ್ತಿದೆ ಎಂಬುದನ್ನು ಊಹಿಸಬಹುದು.

ಕಳೆದ ದಶಕದ ಹಿಂದಿನವರೆಗೆ ರಾಷ್ಟ್ರದ ಬಹುತೇಕ ರಾಜ್ಯಗಳಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಕಾಂಗ್ರೆಸ್ ಇಂದು ಮೂಲೆ ಗುಂಪಾಗಲು ಈ ರೀತಿಯ ಲಾಬಿ, ಒತ್ತಡ ತಂತ್ರ ಮತ್ತು ಓಲೈಕೆ ರಾಜಕಾರಣವೇ ಕಾರಣ ಎಂಬುದು ಇಂದು ಗುಟ್ಟಾಗೇನೂ ಉಳಿದಿಲ್ಲ. ಈ ಪರಿಸ್ಥಿತಿ ಹೀಗೆ ಮುಂದುವರೆದರೆ ಮೂರು ಮತ್ತೊಂದು ರಾಜ್ಯಗಳಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸಾಧನೆ ಶೂನ್ಯಕ್ಕೆ ಇಳಿದರೂ ಅಚ್ಚರಿ ಇಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...