Homeಕರ್ನಾಟಕನೂತನ ಬಿಜೆಪಿ ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ (55) ಕೊರೊನಾದಿಂದ ನಿಧನ

ನೂತನ ಬಿಜೆಪಿ ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ (55) ಕೊರೊನಾದಿಂದ ನಿಧನ

ರಾಜ್ಯಸಭೆಯಲ್ಲಿ ಕನ್ನಡ ಭಾಷೆಯಲ್ಲೇ ಪ್ರಮಾಣ ವಚನ ಸ್ವೀಕರಿಸಿ ಗಮನ ಸೆಳೆದಿದ್ದರು

- Advertisement -
- Advertisement -

ಜುಲೈ ತಿಂಗಳಲ್ಲಿ ರಾಜ್ಯಸಭೆಗೆ ಆಯ್ಕೆಯಾಗಿದ್ದ ಬಿಜೆಪಿ ಸಂಸದ ಅಶೋಕ್ ಗಸ್ತಿ (55) ಕೊರೊನಾದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಕಳೆದ 15 ದಿನಗಳಿಂದ ಕೊರೊನಾ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದ ಅಶೋಕ್‌ ಗಸ್ತಿ ರಾಯಚೂರು ಜಿಲ್ಲೆಯವರಾಗಿದ್ದು, ಈ ಹಿಂದೆ ಬಳ್ಳಾರಿ ಜಿಲ್ಲೆಯ ಪಕ್ಷದ ಉಸ್ತುವಾರಿಯಾಗಿಯೂ ಕಾರ್ಯನಿರ್ವಹಿಸಿದ್ದರು. ಬಿಜೆಪಿ ಪಕ್ಷದಲ್ಲಿ ಸರಿ ಸುಮಾರು ಮೂವತ್ತು ವರ್ಷದಿಂದ ದುಡಿಯುತ್ತಿದ್ದರು ಎನ್ನಲಾಗಿದೆ.

ಇದನ್ನೂ ಓದಿ: ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ಸ್ಥಿತಿ ಗಂಭೀರ: ಕರ್ನಾಟಕ ಬಿಜೆಪಿ ಸ್ಪಷ್ಟನೆ

ರಾಜ್ಯಸಭಾ ಸದಸ್ಯ ಪ್ರಭಾಕರ್ ಕೋರೆ, ಲೋಕಸಭಾ ಮಾಜಿ ಸದಸ್ಯ ರಮೇಶ್ ಕತ್ತಿ ಮತ್ತು ಹೋಟೆಲ್ ಉದ್ಯಮಿ ಪ್ರಕಾಶ್ ಶೆಟ್ಟಿ ಒಟ್ಟು ಮೂರು ಹೆಸರುಗಳನ್ನು ರಾಜ್ಯ ಬಿಜೆಪಿ ಘಟಕವು ರಾಜ್ಯಸಭಾ ಚುನಾವಣೆಯ ಅಭ್ಯರ್ಥಿಗಳಾಗಿ ಆಯ್ಕೆ ಮಾಡಿ ಪಕ್ಷದ ಉನ್ನತ ನಾಯಕರಿಗೆ ಶಿಫಾರಸು ಮಾಡಿತ್ತು. ಆದರೆ ಬಿಜೆಪಿ ಹೈಕಮಾಂಡ್ ಈ ಎಲ್ಲಾ ಮೂರು ಹೆಸರುಗಳನ್ನು ತಿರಸ್ಕರಿಸಿ ಅಶೋಕ್‌ ಗಸ್ತಿ ಮತ್ತು ರಣ್ಣಾ ಕಡಾಡಿ ಅವರನ್ನು ಆಯ್ಕೆ ಮಾಡಿ ಅಚ್ಚರಿ ಮೂಡಿಸಿತ್ತು.

ಅವರ ನಿಧನಕ್ಕೆ ಆರೋಗ್ಯ  ಸಚಿವ ಬಿ. ಶ್ರೀರಾಮುಲು ಟ್ವೀಟ್ ಮಾಡಿದ್ದು, “ಅಶೋಕ್ ಗಸ್ತಿ ಅವರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದು ತೀವ್ರ ದುಃಖ ನೀಡಿದೆ. ಅವರು ಕಳೆದ 15 ದಿನಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬ ಹಾಗೂ ಅಭಿಮಾನಿಗಳಿಗೆ ನೋವು ಭರಿಸುವ ಶಕ್ತಿ ಭಗವಂತ ನೀಡಲಿ.” ಎಂದು ಟ್ವೀಟ್ ಮಾಡಿದ್ದಾರೆ.

 

ಇದನ್ನೂ ಓದಿ: ರಾಜ್ಯಸಭಾ ಚುನಾವಣೆ: ಕರ್ನಾಟಕದಿಂದ ಖರ್ಗೆ, ದೇವೇಗೌಡರು ಸೇರಿ ನಾಲ್ವರ ಅವಿರೋಧ ಆಯ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

KPSC ಅಕ್ರಮ: ಅಲೋಕ್ ಕುಮಾರ್ ನೇತೃತ್ವದಲ್ಲಿ SIT ತನಿಖೆಗೆ ಹೈಕೋರ್ಟ್ ಆದೇಶ

ಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್‌ಸಿ) ಇತ್ತೀಚೆಗೆ ನಡೆಸಿದ್ದ ಪಶುವೈದ್ಯಾಧಿಕಾರಿಗಳ ನೇಮಕಾತಿ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಅಕ್ರಮಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಸೋಮವಾರ ಅತ್ಯಂತ ಮಹತ್ವದ ಆದೇಶ ಹೊರಡಿಸಿದೆ. ಈ ಬಹುಕೋಟಿ ನೇಮಕಾತಿ...

ಲಕ್ನೋದಲ್ಲಿ ಮುಸ್ಲಿಂ ವ್ಯಾಪಾರಿ ಮೇಲೆ ಹಲ್ಲೆ, ಮಾಂಸದ ಅಂಗಡಿಗಳ ವಿರುದ್ಧ ಪ್ರತಿಭಟನೆ: ತೀವ್ರಗೊಂಡ ಬಜರಂಗದಳದ ‘ಆಹಾರ ಭಯೋತ್ಪಾದನೆ’

ಲಕ್ನೋ: ಉತ್ತರ ಪ್ರದೇಶದ ಲಕ್ನೋದಲ್ಲಿ ಮಾಂಸ ಸಾಗಿಸುತ್ತಿದ್ದ ಬಿರಿಯಾನಿ ಅಂಗಡಿ ಮಾಲೀಕರೊಬ್ಬರ ಮೇಲೆ ಮೂವರು ಯುವಕರು ಹಲ್ಲೆ ನಡೆಸಿ, ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ....

ಟಿಎಂಸಿ ಹೆಸರು – ಚಿಹ್ನೆ ‘ಫ್ರೀಜ್‌’ ಪ್ರಶ್ನಿಸಿ ಮಮತಾ ಬ್ಯಾನರ್ಜಿ ಅರ್ಜಿ; ತುರ್ತು ವಿಚಾರಣೆಗೆ ಒಪ್ಪಿಗೆ ಸುಪ್ರೀಂ ಕೋರ್ಟ್‌

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಎರಡು ಬಣಗಳ ನಡುವಿನ ವಿವಾದದ ನಡುವೆ ಪಕ್ಷದ ಹೆಸರು ಮತ್ತು ಚಿಹ್ನೆಯನ್ನು ಫ್ರೀಜ್ ಮಾಡಿರುವ ಚುನಾವಣಾ ಆಯೋಗದ ನಿರ್ಧಾರವನ್ನು ಪ್ರಶ್ನಿಸಿ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ...

ಸೌಜನ್ಯ ಪ್ರಕರಣ: ಸುಪ್ರೀಂ ಆದೇಶದ ಪ್ರತಿ ಸಿಕ್ಕ ತಕ್ಷಣ SIT ರಚನೆ, ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಅವರ ಭೀಕರ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮರುತನಿಖೆಗೆ ಆದೇಶ ನೀಡಿರುವ ಹಿನ್ನೆಲೆಯಲ್ಲಿ, ನ್ಯಾಯಾಲಯದ ಅಧಿಕೃತ ಆದೇಶದ ಪ್ರತಿ ಕೈ ಸೇರಿದ ತಕ್ಷಣ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ...

ದೆಹಲಿ| ಸಾಮೂಹಿಕ ಮತಾಂತರ ಆರೋಪ; ಕ್ರಿಶ್ಚಿಯನ್ನರ ವಾರಾಂತ್ಯದ ಪ್ರಾರ್ಥನೆಗೆ ಅಡ್ಡಿಪಡಿಸಿದ ಹಿಂದುತ್ವ ಗುಂಪು

ದೆಹಲಿಯ ಜನಕಪುರಿಯಲ್ಲಿರುವ ಹಯಾತ್ ಸೆಂಟ್ರಿಕ್ ಹೋಟೆಲ್‌ನಲ್ಲಿ ನಡೆಯುತ್ತಿದ್ದ (ಸೆಪ್ಟೆಂಬರ್ 20 ರಂದು) ಕ್ರಿಶ್ಚಿಯನ್ನರ ಭಾನುವಾರದ ವಾಡಿಕೆಯ ಪ್ರಾರ್ಥನಾ ಸಭೆಗೆ ನುಗ್ಗಿದ ಹಿಂದುತ್ವ ಗುಂಪು ಪ್ರಾರ್ಥನೆಗೆ ಅಡ್ಡಪಿಡಿಸಿದೆ. ಹಿಂದೂಗಳ ಸಾಮೂಹಿಕ ಮತಾಂತರ ನಡೆಯುತ್ತಿದೆ...

ಕಸ್ತೂರಿ ರಂಗನ್ ವರದಿ ತಿರಸ್ಕಾರ, ಮಲೆನಾಡಿನ ಜನರ ಬದುಕಿಗೆ ಶಾಶ್ವತ ಪರಿಹಾರ : ಡಾ. ಜಿ. ಪರಮೇಶ್ವರ್

ಪಶ್ಚಿಮ ಘಟ್ಟದ ಜೀವ ವೈವಿಧ್ಯ ಮತ್ತು ಪರಿಸರ ಸಂರಕ್ಷಣೆಯ ಹೆಸರಿನಲ್ಲಿ ಕೇಂದ್ರ ಸರ್ಕಾರವು ಕಸ್ತೂರಿ ರಂಗನ್ ವರದಿಯ ಕರಡು ಅಧಿಸೂಚನೆಗಳನ್ನು ಪದೇ ಪದೇ ಹೊರಡಿಸುತ್ತಿರುವುದು ಮಲೆನಾಡಿನ ಜನರ ನೆಮ್ಮದಿ ಕೆಡಿಸಿದೆ. ರಾಜ್ಯ ಸರ್ಕಾರವು...

‘ಇದು ಸಂಸ್ಕೃತಿಯಲ್ಲ, ಪಿತೃಪ್ರಭುತ್ವ’: ಜಮುಯಿ ಅಪ್ರಾಪ್ತ ಬಾಲಕಿ ಮೇಲಿನ ಕಿರುಕುಳದ ವಿಡಿಯೋಗೆ ರಾಹುಲ್ ಗಾಂಧಿ ಆಕ್ರೋಶ 

ಪಾಟ್ನಾ: ಬಿಹಾರದ ಜಮುಯಿ ಜಿಲ್ಲೆಯಲ್ಲಿ 10ನೇ ತರಗತಿಯ ಅಪ್ರಾಪ್ತ ಬಾಲಕ ಮತ್ತು ಬಾಲಕಿಯನ್ನು ರಸ್ತೆಯಲ್ಲಿ ತಡೆದು ಪುರುಷರ ಗುಂಪೊಂದು ಕಿರುಕುಳ ನೀಡಿದೆ ಎಂದು ಆರೋಪಿಸಲಾದ ವೈರಲ್ ವಿಡಿಯೋ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಈ...

ನಕಲಿ ಔಷಧಗಳ ವಿತರಣೆ ಜಾಲದೊಂದಿಗೆ ನಂಟು; 16 ಫಾರ್ಮಸಿಗಳ ಪರವಾನಗಿ ರದ್ದು

ಬಿಡದಿಯ ಫಾರ್ಮ್‌ಹೌಸ್ (ತೋಟದ ಮನೆ) ಒಂದರಲ್ಲಿ ಪತ್ತೆಯಾದ ನಕಲಿ ಔಷಧಗಳ ವಿತರಣೆಯ ಜಾಲದೊಂದಿಗೆ ನಂಟು ಹೊಂದಿರುವ ಆರೋಪದ ಮೇಲೆ ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ (ಎಫ್‌ಡಿಎ) ಸಂಸ್ಥೆಯು 16 ಫಾರ್ಮಸಿಗಳ...

ಚಾಮರಾಜನಗರ: ಬಂಡಿ ಪೂಜೆ ಹಬ್ಬದಲ್ಲಿ ದಲಿತ ಮಕ್ಕಳಿಗೆ ಅಸ್ಪೃಶ್ಯತೆ ಆಚರಣೆ – ಊಟ ನೀಡದೆ ಅಪಮಾನಿಸಿದ ಆರೋಪ

ಸಮಾಜದಲ್ಲಿ ಜಾತಿಪದ್ದತಿ ಇಂದಿಗೂ ಜೀವಂತವಾಗಿದೆಯೇ ಎಂದು ಪ್ರಶ್ನಿಸುವವರಿಗೇನು ಕಡಿಮೆ ಇಲ್ಲ.ಆದರೆ ಜಾತಿ ಕಾರಣಕ್ಕೆ ಪುಟಾಣಿ ಮಕ್ಕಳಿಗೆ ಊಟವನ್ನು ನಿರಾಕರಿಸಿ ಅಸ್ಪೃಶ್ಯತೆ ಆಚರಣೆ ಮಾಡಿರುವುದು ನಾಗರಿಕ ಸಮಾಜ ನಿಜಕ್ಕೂ ತಲೆತಗ್ಗಿಸುವಂತೆ ಮಾಡಿದೆ. ಹೌದು ಚಾಮರಾಜನಗರ ಜಿಲ್ಲೆಯ...

ಥಾಣೆ ಗಣೇಶೋತ್ಸವ 2026: ತಿಟ್ವಾಲಾದಲ್ಲಿ ಗಣಪತಿ ವಿಸರ್ಜನೆ ವೇಳೆ 2 ಗುಂಪುಗಳ ಘರ್ಷಣೆ, ಬಿಜೆಪಿ ಮಾಜಿ ಉಪಮೇಯರ್ ಸೇರಿ 70-80 ಜನರ ವಿರುದ್ಧ ಪ್ರಕರಣ

ಮಹಾರಾಷ್ಟ್ರದ ಥಾಣೆ ಜಿಲ್ಲೆಯ ತಿಟ್ವಾಲಾದಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ ಬಿಜೆಪಿಯ ಮಾಜಿ ಉಪಮೇಯರ್ ಹಾಗೂ ಹಾಲಿ ಕಾರ್ಪೊರೇಟರ್ ಉಪೇಕ್ಷಾ ಭೋಯಿರ್...