Homeಮುಖಪುಟಹೊಸ ನಿಯಮ: ಇಂಜಿನಿಯರಿಂಗ್ ಪ್ರವೇಶ ಪರೀಕ್ಷೆಗೆ ಭೌತಶಾಸ್ತ್ರ ಮತ್ತು ಗಣಿತ ಕಡ್ಡಾಯವಲ್ಲ

ಹೊಸ ನಿಯಮ: ಇಂಜಿನಿಯರಿಂಗ್ ಪ್ರವೇಶ ಪರೀಕ್ಷೆಗೆ ಭೌತಶಾಸ್ತ್ರ ಮತ್ತು ಗಣಿತ ಕಡ್ಡಾಯವಲ್ಲ

- Advertisement -
- Advertisement -

ಇಂಜಿನಿಯರಿಂಗ್ ಪ್ರವೇಶ ಪರೀಕ್ಷೆಗೆ ದ್ವಿತೀಯ ಪಿಯುಸಿಯಲ್ಲಿ ಭೌತಶಾಸ್ತ್ರ ಮತ್ತು ಗಣಿತ ಕಡ್ಡಾಯವಲ್ಲ ಎಂದು ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (ಎಐಸಿಟಿಇ)  ಹೇಳಿದ್ದು, 2021-22 ರ ಹ್ಯಾಂಡ್‌ಬುಕ್‌ನಲ್ಲಿ ಎರಡೂ ವಿಷಯವನ್ನು ಐಚ್ಚಿಕ ವಿಷಯವಾಗಿ ಸೇರಿಸಲಾಗಿದೆ. ಇದರೊಂದಿಗೆ, ವಿದ್ಯಾರ್ಥಿಗಳು ಎಂಜಿನಿಯರಿಂಗ್ ಪ್ರವೇಶಕ್ಕಾಗಿ ದ್ವಿತೀಯ ಹಂತದಲ್ಲಿ ಹೆಚ್ಚಿನ ಐಚ್ಚಿಕ ವಿಷಗಳನ್ನು ಆರಿಸಿಕೊಳ್ಳಬಹುದಾಗಿದೆ.

ಹೊಸ ಎಐಸಿಟಿಇ ನೀತಿಗಳ ಪ್ರಕಾರ, ಎಂಜಿನಿಯರಿಂಗ್ ವಿದ್ಯಾರ್ಥಿಗಳು ದ್ವಿತಿಯ ಪಿಯುಸಿಯ ಪರೀಕ್ಷೆಯಲ್ಲಿ ಈ ಕೆಳಗಿನ ಮೂರು ವಿಷಯಗಳನ್ನು ತೆಗೆದುಕೊಳ್ಳಬೇಕಾಗುತ್ತದೆ.

ವಿಷಯಗಳು: ಭೌತಶಾಸ್ತ್ರ, ಗಣಿತ, ರಸಾಯನಶಾಸ್ತ್ರ, ಕಂಪ್ಯೂಟರ್ ವಿಜ್ಞಾನ, ಎಲೆಕ್ಟ್ರಾನಿಕ್ಸ್, ಮಾಹಿತಿ ತಂತ್ರಜ್ಞಾನ, ಜೀವಶಾಸ್ತ್ರ, ಇರ್ನ್ಪಾಮೇಟಿಕ್ಸ್‌ ಪ್ರಾಕ್ಟೀಸಸ್‌, ಜೈವಿಕ ತಂತ್ರಜ್ಞಾನ, ತಾಂತ್ರಿಕ ವೃತ್ತಿಪರ ವಿಷಯ, ಕೃಷಿ, ಎಂಜಿನಿಯರಿಂಗ್ ಗ್ರಾಫಿಕ್ಸ್, ವ್ಯವಹಾರ ಅಧ್ಯಯನ ಮತ್ತು ಉದ್ಯಮಶೀಲತೆ.

(Subjects: Physics, Mathematics, Chemistry, Computer Science, Electronics, Information Technology, Biology, Informatics Practices, Biotechnology, Technical Vocational Subject, Agriculture, Engineering Graphics, Business Studies and Entrepreneurship)

ಇದನ್ನೂ ಓದಿ: ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯಿಲಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಘೋಷಣೆ

ಈ ವಿಷಯಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 45% (40% ಮೀಸಲಾತಿ ವಿಭಾಗ) ಅಂಕಗಳನ್ನು ಪಡೆದ ಅಭ್ಯರ್ಥಿಗಳು ಎಂಜಿನಿಯರಿಂಗ್ ಕೋರ್ಸ್‌ಗಳಿಗೆ ಸೇರಬಹುದಾಗಿದೆ.

ಕನಿಷ್ಠ 45% ಅಂಕಗಳನ್ನು (ಕಾಯ್ದಿರಿಸಿದ ವಿಭಾಗಕ್ಕೆ 40%) ಪಡೆದ ಮತ್ತು ಮೂರು ವರ್ಷದ ಡಿಪ್ಲೊಮಾ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು ಎಂಜಿನಿಯರಿಂಗ್ ಕೋರ್ಸ್‌ಗಳಿಗೂ ಅರ್ಜಿ ಸಲ್ಲಿಸಬಹುದು. ಹೊಸ ಕಾನೂನಿನ ಪ್ರಕಾರ, ಔಷಧ ಮತ್ತು ವಾಣಿಜ್ಯ ವಿದ್ಯಾರ್ಥಿಗಳು ಎಂಜಿನಿಯರಿಂಗ್ ಪ್ರವೇಶ ಪರೀಕ್ಷೆಯನ್ನು ಬರೆಯಲು ಸಹ ಸಾಧ್ಯವಾಗುತ್ತದೆ.

ಇದನ್ನೂ ಓದಿ: ಪಕ್ಷದ ಅಧೀಕೃತ ಟಿಕೆಟ್ ಘೋಷಣೆಗೂ ಮುನ್ನ ನಾಮಪತ್ರ ಸಲ್ಲಿಸಿದ ತಮಿಳುನಾಡು ಬಿಜೆಪಿ ಉಪಾಧ್ಯಕ್ಷ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪಶ್ಚಿಮ ಬಂಗಾಳದ ಹೂಗ್ಲಿಯಲ್ಲಿ ಬಾಂಬ್ ಸ್ಫೋಟ: ಬಾಲಕ ಮೃತ್ಯು, ಇಬ್ಬರಿಗೆ ಗಂಭೀರ ಗಾಯ

0
ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯಲ್ಲಿ ಕಚ್ಚಾ ಬಾಂಬ್ ಸ್ಫೋಟ ಸಂಭವಿಸಿ ಏಳು ವರ್ಷದ ಬಾಲಕ ಸಾವನ್ನಪ್ಪಿದ್ದು, ಇತರ ಇಬ್ಬರು ಅಪ್ರಾಪ್ತ ಬಾಲಕರಿಗೂ ತೀವ್ರ ಗಾಯಗಳಾಗಿದೆ. ಮೃತ ಬಾಲಕನನ್ನು ರಾಜ್ ಬಿಸ್ವಾಸ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ...