Homeಕರೋನಾ ತಲ್ಲಣಬ್ರಿಟನ್‌ನಲ್ಲಿ ಹೊಸ ಕೊರೊನಾ ವೈರಸ್ ಪತ್ತೆ: ಯುಕೆ ವಿಮಾನಗಳನ್ನು ನಿರ್ಬಂಧಿಸಿದ ಭಾರತ

ಬ್ರಿಟನ್‌ನಲ್ಲಿ ಹೊಸ ಕೊರೊನಾ ವೈರಸ್ ಪತ್ತೆ: ಯುಕೆ ವಿಮಾನಗಳನ್ನು ನಿರ್ಬಂಧಿಸಿದ ಭಾರತ

ಯುಕೆಯಿಂದ ಭಾರತಕ್ಕೆ ಬರುವ ಎಲ್ಲಾ ವಿಮಾನಗಳನ್ನು ಡಿ. 31ರ ವರೆಗೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಭಾರತೀಯ ಸರ್ಕಾರ ನಿರ್ಧರಿಸಿದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯ ತಿಳಿಸಿದೆ. 

- Advertisement -

ಬ್ರಿಟನ್‌ನಲ್ಲಿ ಹೊಸ ಸ್ವರೂಪದ ಕೊರೊನಾ ವೈರಸ್ ಪತ್ತೆಯಾಗಿದ್ದು, ಇಡೀ ವಿಶ್ವದಾದ್ಯಂತ ತೀವ್ರ ಆತಂಕಕ್ಕೆ ಕಾರಣವಾಗಿದೆ. ಪರಿಣಾಮ ಮುಂಜಾಗ್ರತಾ ಕ್ರಮವಾಗಿ ಭಾರತದ ವಿಮಾನಯಾನ ಸಚಿವಾಲಯ ಯುಕೆಯಿಂದ ಭಾರತಕ್ಕೆ ಬರುವ ಎಲ್ಲಾ ವಿಮಾನಗಳನ್ನು ಡಿಸೆಂಬರ್ 31 ರ ವರೆಗೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸುವಂತೆ ಆದೇಶಿಸಿದೆ.

ತೀವ್ರವಾಗಿ ಹಬ್ಬುತ್ತಿರುವ ಹೊಸ ಕೊರೊನಾ ವೈರಸ್ ಹಿನ್ನೆಲೆ, ಯುಕೆಯಿಂದ ಭಾರತಕ್ಕೆ ಬರುವ ಎಲ್ಲಾ ವಿಮಾನಗಳನ್ನು ಡಿಸೆಂಬರ್ 31 ರ ವರೆಗೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಭಾರತೀಯ ಸರ್ಕಾರ ನಿರ್ಧರಿಸಿದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯ ತಿಳಿಸಿದೆ.

ಹೊಸ ಸ್ವರೂಪದ ವೈರಸ್, ಮೂಲ ವೈರಸ್‌ಗಿಂತ 70 ರಷ್ಟು ಹೆಚ್ಚು ವೇಗವಾಗಿ ಹರಡುತ್ತಿರುವ ಕಾರಣ ಹಲವು ದೇಶಗಳು ಕೂಡ ಬ್ರಿಟನ್‌ಗೆ ವಿಮಾನಯಾನವನ್ನು ನಿರ್ಬಂಧಿಸಿವೆ.

ಇದನ್ನೂ ಓದಿ: 1 ಕೋಟಿ ದಾಟಿದ ಕೊರೊನಾ ಪ್ರಕರಣಗಳು! – ಪ್ರಧಾನಿ ಹೇಳಿಕೆ ಸುಳ್ಳಾಗಿದೆ ಎಂದ ರಾಹುಲ್ ಗಾಂಧಿ

ಇಂದು ಬೆಳಗ್ಗೆ ಈ ವೈರಸ್ ಕುರಿತು ಚರ್ಚೆ ನಡೆಸಲು ಕೇಂದ್ರ ಆರೋಗ್ಯ ಸಚಿವಾಲಯ ತುರ್ತು ಸಭೆ ನಡೆಸಿತ್ತು. ನಂತರ ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್, ಆತಂಕ ಪಡುವ ಅಗತ್ಯವಿಲ್ಲ ಸರ್ಕಾರ ಎಲ್ಲಾ ರೀತಿಯ ಮುನ್ನೆಚ್ಚರಿಕೆ ವಹಿಸಿದೆ ಎಂದು ತಿಳಿಸಿದ್ದಾರೆ.

ಕೊರೊನಾ ನಿಯಂತ್ರಣಕ್ಕಾಗಿ ಇಂಗ್ಲೆಂಡ್‌ ಸರ್ಕಾರ ಈಗಾಗಲೇ ನಾಲ್ಕನೇ ಹಂತದ ಲಾಕ್‌ಡೌನ್ ಘೋಷಿಸಿ, ಜನರನ್ನು ಮನೆಯಲ್ಲಿಯೇ ಇರುವಂತೆ ಮನವಿ ಮಾಡಿದೆ. ಈ ಹಿನ್ನೆಲೆಯಲ್ಲಿ ಕೊರೊನಾ ಮತ್ತೊಂದು ಅಲೆ ಆರಂಭವಾಗಿರುವ ಬ್ರಿಟೀಷ್​ ಸರ್ಕಾರಕ್ಕೂ ತಲೆನೋವಾಗಿ ಪರಿಣಮಿಸಲಿದೆ ಎನ್ನಲಾಗುತ್ತಿದೆ.

ಅಲ್ಲದೆ, ಬ್ರಿಟನ್‌ನಲ್ಲಿ ಹೊಸ ಸ್ವರೂಪದ ಕೊರೊನಾ ವೈರಸ್ ನಿಯಂತ್ರಣದಲ್ಲಿಲ್ಲ. ಅದರ ಹರಡುವಿಕೆಯ ವೇಗ ತೀವ್ರವಾಗಿದೆ. ಈ ಹಿನ್ನೆಲೆ ಈಗ ದೇಶದಲ್ಲಿ ಹೇರಲಾಗಿರುವ ಲಾಕ್‌ಡೌನ್ ತಿಂಗಳುಗಳವರೆಗೆ ಉಳಿಯಬಹುದು ಎಂದು ಬ್ರಿಟನ್ ಆರೋಗ್ಯ ಸಚಿವರು ಎಚ್ಚರಿಸಿದ್ದಾರೆ.

“ಲಕ್ಷಾಂತರ ಜನರು ಕ್ರಿಸ್ಮಸ್ ಯೋಜನೆಗಳನ್ನು ರದ್ದುಗೊಳಿಸಬೇಕು ಮತ್ತು ಭಾನುವಾರದಿಂದ ಮನೆಯಲ್ಲಿಯೇ ಇರಬೇಕು” ಎಂದು ಪ್ರಧಾನಿ ಬೋರಿಸ್ ಜಾನ್ಸನ್ ಕೂಡ ಪ್ರಕಟಣೆ ಹೊರಡಿಸಿದ್ದರು.

ಇದನ್ನೂ ಓದಿ: 60 ಕೋಟಿ ಜನರಿಗೆ ಕೊರೊನಾ ಲಸಿಕೆ ನೀಡಲು ಸಿದ್ದವಾಗಿರುವ ಭಾರತ

ಈಗಾಗಲೇ ಬೆಲ್ಜಿಯಂ, ಡೆನ್ಮಾರ್ಕ್, ಸ್ಪೇನ್ ಸೇರಿದಂತೆ ಹಲವು ದೇಶಗಳು ಯುಕೆಗೆ ವಿಮಾನಯಾನವನ್ನು ಬಂದ್ ಮಾಡಿದೆ. ಅಲ್ಲಿಗೆ ಹೋಗುವ ಮತ್ತು ಅಲ್ಲಿಂದ ವಾಪಸ್ ಬರುವ ವಿಮಾನಗಳ ಮೇಲೆ ನಿರ್ಬಂಧ ಹೇರಿವೆ. ಕೆನಡಾವು ಪ್ರಯಾಣಿಕರ ವಿಮಾನಯಾನವನ್ನು 72 ಗಂಟೆಗಳ ಕಾಲ ಸ್ಥಗಿತಗೊಳಿಸುತ್ತಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕೂಡ ಯುಕೆಯಿಂದ ಬರುವ ಎಲ್ಲಾ ವಿಮಾನಗಳನ್ನು ತಕ್ಷಣ ನಿಷೇಧಿಸುವಂತೆ ಸರ್ಕಾರವನ್ನು ಕೋರಿದ್ದರು.

ಇಂಗ್ಲೆಂಡ್‌ನ ವಿಜ್ಞಾನಿಗಳು, ಕಳೆದ ಸೆಪ್ಟೆಂಬರ್‌ನಲ್ಲಿ ರೋಗಿಯೊಬ್ಬರಲ್ಲಿ ಹೊಸ ರೂಪದ ಕೊರೊನಾ ವೈರಸ್ ಅನ್ನು ಕಂಡು ಹಿಡಿದಿದ್ದರು. ಬ್ರಿಟನ್‌ನಲ್ಲಿ ನವೆಂಬರ್‌ ತಿಂಗಳಲ್ಲಿ ಹೆಚ್ಚಾದ ಕೊರೊನಾ ಪ್ರಕರಣಗಳಲ್ಲಿ ಈ ವೈರಸ್ ಹೆಚ್ಚಾಗಿದ್ದರಿಂದ ಡಿಸೆಂಬರ್ 11 ರಂದು ಸರ್ಕಾರಕ್ಕೆ ವಿಜ್ಞಾನಿಗಳು ಮಾಹಿತಿ ನೀಡಿದ್ದಾರೆ.


ಇದನ್ನೂ ಓದಿ: ದೆಹಲಿ V/s ಉತ್ತರ ಪ್ರದೇಶ: ಸರ್ಕಾರಿ ಶಾಲೆಗಳ ವಾಸ್ತವತೆ ಬಿಚ್ಚಿಡಲು ಆಪ್ ಅಭಿಯಾನ

ನಾನು ಗೌರಿ ಡೆಸ್ಕ್
+ posts

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಎಸ್‌‌ಪಿ ನಾಯಕ ಮುಲಾಯಂ ಸೊಸೆ ಬಿಜೆಪಿಗೆ ಸೇರ್ಪಡೆ: ಮಾಧ್ಯಮಗಳಲ್ಲಿ ಮರೆಯಾದ ಒಂದು ಅಂಶ!

ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ, ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್‌ ಯಾದವ್ ಅವರ ಸೊಸೆ ಅಪರ್ಣಾ ಯಾದವ್‌ ಅವರು ಬಿಜೆಪಿ ಸೇರಿರುವುದನ್ನು ಮಾಧ್ಯಮಗಳು ವರದಿ ಮಾಡಿವೆ. ಎಸ್‌ಪಿಗೆ ಹಿನ್ನೆಡೆಯಾಗುವ ಸಾಧ್ಯತೆ ಎಂದು ಕೆಲವು...
Wordpress Social Share Plugin powered by Ultimatelysocial