Homeಮುಖಪುಟನೈಜ ಸಮಸ್ಯೆಗಳ ಗಮನ ಬೇರೆಡೆ ಸೆಳೆಯಲು ಮೋದಿಯಿಂದ ಹೊಸ ತಂತ್ರ: ಕಾಂಗ್ರೆಸ್

ನೈಜ ಸಮಸ್ಯೆಗಳ ಗಮನ ಬೇರೆಡೆ ಸೆಳೆಯಲು ಮೋದಿಯಿಂದ ಹೊಸ ತಂತ್ರ: ಕಾಂಗ್ರೆಸ್

- Advertisement -
- Advertisement -

‘ಪ್ರಧಾನಿ ನರೇಂದ್ರ ಮೋದಿ ಅವರು ವಿಷಕಾರಿ ಭಾಷೆಯಲ್ಲಿ ಮಾತನಾಡುತ್ತಿದ್ದು, ಅವರು ನೈಜ ಸಮಸ್ಯೆಗಳಿಂದ ಗಮನವನ್ನು ಬೇರೆಡೆಗೆ ಸೆಳೆಯಲು ಹಲವಾರು ಹೊಸ ತಂತ್ರಗಳನ್ನು ಹೊಂದಿದ್ದಾರೆ. ಆದರೆ, ಸುಳ್ಳಿನ ವ್ಯವಹಾರದ ಅಂತ್ಯವು ಹತ್ತಿರದಲ್ಲಿದೆ’ ಎಂದು ಕಾಂಗ್ರೆಸ್ ಹೇಳಿದೆ.

ಕಾಂಗ್ರೆಸ್ ಭರವಸೆಗಳಲ್ಲಿ ಒಂದಾಗಿರುವ ‘ಸಂಪತ್ತಿನ ಮರುಹಂಚಿಕೆ’ ಘೋಷಣೆ ಬಗ್ಗೆ ಪ್ರಧಾನಿ ಮೋದಿ ಟೀಕೆಯ ವಿರುದ್ಧ ಕಾಂಗ್ರೆಸ್ ಭಾನುವಾರ ರಾತ್ರಿ ತಿರುಗೇಟು ನೀಡಿದೆ. “ಲೋಕಸಭೆ ಚುನಾವಣೆಯ ಮೊದಲ ಹಂತದಲ್ಲಿ “ನಿರಾಶೆ” ಎದುರಿಸಿದ ನಂತರ, ಪ್ರಧಾನಿ ಈಗ ಸುಳ್ಳನ್ನು ಆಶ್ರಯಿಸಿದ್ದಾರೆ; ನಿಜವಾದ ಸಮಸ್ಯೆಗಳಿಂದ ಜನರನ್ನು ಬೇರೆಡೆಗೆ ತಿರುಗಿಸಲು “ದ್ವೇಷ ಭಾಷಣ” ಮಾಡುತ್ತಿದ್ದಾರೆ ಎಂದು ಆರೋಪಿಸಿದೆ.

ಏರುತ್ತಿರುವ ಬೆಲೆಗಳು ಮತ್ತು ನಿರುದ್ಯೋಗದ ಮೇಲೆ ಕೇಂದ್ರೀಕರಿಸುವ ಕಾಂಗ್ರೆಸ್‌ನ ಇತ್ತೀಚಿನ ಜಾಹೀರಾತನ್ನು ಹಂಚಿಕೊಂಡಿರುವ ರಾಹುಲ್ ಗಾಂಧಿ, “ದೇಶದಲ್ಲಿ ನಿರುದ್ಯೋಗ ಮತ್ತು ಹಣದುಬ್ಬರವು ಉತ್ತುಂಗದಲ್ಲಿದೆ. ನರೇಂದ್ರ ಮೋದಿ ಅವರು ‘ಎಲ್ಲವೂ ಚೆನ್ನಾಗಿದೆ’ ಎಂದು ಹೇಳುತ್ತಾರೆ. ಅವರು (ಮೋದಿ) ಸಮಸ್ಯೆಗಳಿಂದ ಗಮನವನ್ನು ಬೇರೆಡೆಗೆ ತಿರುಗಿಸಲು ಹಲವಾರು ಹೊಸ ತಂತ್ರಗಳನ್ನು ಹೊಂದಿದ್ದಾರೆ. ಆದರೆ, ಸುಳ್ಳಿನ ವ್ಯವಹಾರದ ಅಂತ್ಯವು ಹತ್ತಿರದಲ್ಲಿದೆ” ಎಂದು ರಾಹುಲ್ ಗಾಂಧಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

rahu

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಕೂಡ ಪ್ರಧಾನಿ ವಿರುದ್ಧ ವಾಗ್ದಾಳಿ ನಡೆಸಿದ್ದು, “ಪ್ರಧಾನಿ ಅವರು ಬಹಳಷ್ಟು ವಿಷಯಗಳ ಬಗ್ಗೆ ವಿಷಕಾರಿ ಭಾಷೆಯಲ್ಲಿ ಮಾತನಾಡುತ್ತಾರೆ. ಅವರು ಸರಳವಾದ ಪ್ರಶ್ನೆಗೂ ಉತ್ತರಿಸಬೇಕು. 1951 ರಿಂದ ಪ್ರತಿ ಹತ್ತು ವರ್ಷಗಳಿಗೊಮ್ಮೆ ಜನಗಣತಿ ನಡೆಸಲಾಗುತ್ತಿದೆ. ಇದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನಸಂಖ್ಯೆಯ ನೈಜ ಡೇಟಾವನ್ನು ಬಹಿರಂಗಪಡಿಸುತ್ತದೆ. 2021 ರಲ್ಲಿ ಮಾಡಲಾಗಿತ್ತು. ಆದರೆ ಇಲ್ಲಿಯವರೆಗೆ ಮಾಡಿಲ್ಲ ಈ ಬಗ್ಗೆ ಪ್ರಧಾನಿ ಏಕೆ ಮೌನವಾಗಿದ್ದಾರೆ” ಅವರು ಪ್ರಶ್ನಿಸಿದ್ದಾರೆ.

ಇದು ಬಾಬಾಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನವನ್ನು ನಾಶ ಮಾಡುವ ಷಡ್ಯಂತ್ರ ಎಂದು ರಮೇಶ್ ಆರೋಪಿಸಿದರು.

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಮುಸ್ಲಿಮರಿಗೆ ಜನರ ಸಂಪತ್ತನ್ನು ಮರುಹಂಚಿಕೆ ಮಾಡುವುದಾಗಿ ಅವರು ಸಲಹೆ ನೀಡಿದ ನಂತರ ಕಾಂಗ್ರೆಸ್ ತನ್ನ ದಾಳಿಯನ್ನು ಹೆಚ್ಚಿಸಿದೆ. ಅಲ್ಪಸಂಖ್ಯಾತ ಸಮುದಾಯಕ್ಕೆ ದೇಶದ ಸಂಪನ್ಮೂಲಗಳ ಮೇಲೆ ಮೊದಲ ಹಕ್ಕು ಇದೆ ಎಂಬ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಹೇಳಿಕೆಯನ್ನು ಉಲ್ಲೇಖಿಸಿದೆ.

ರಾಜಸ್ಥಾನದ ಬನ್ಸ್ವಾರಾದಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಮೋದಿ, “ಜನರು ಕಷ್ಟಪಟ್ಟು ಸಂಪಾದಿಸಿದ ಹಣ ಮತ್ತು ಬೆಲೆಬಾಳುವ ವಸ್ತುಗಳನ್ನು “ನುಸುಳುಕೋರರು” ಮತ್ತು “ಹೆಚ್ಚು ಮಕ್ಕಳನ್ನು ಹೊಂದಿರುವವರಿಗೆ” ನೀಡಲು ಕಾಂಗ್ರೆಸ್ ಯೋಜಿಸಿದೆ” ಎಂದು ಹೇಳಿಕೆ ನೀಡಿದ್ದರು.

ಇದನ್ನೂ ಓದಿ; FACT CHECK: ‘ದೇಶದ ಸಂಪತ್ತಿನಲ್ಲಿ ಮೊದಲ ಅಧಿಕಾರ ಮುಸ್ಲಿಮರಿಗೆ’ ಎಂದು ಮನಮೋಹನ್ ಸಿಂಗ್ ಹೇಳಿಲ್ಲ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...