Homeಮುಖಪುಟಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

- Advertisement -
- Advertisement -

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ ಪಡೆಯುವ ಪ್ರಯತ್ನದಂತೆ ಕಂಡುಬರುತ್ತಿದೆ ಎಂದು ಅಭಿಪ್ರಾಯಪಟ್ಟಿದೆ.

ಬೌದ್ಧ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆ ಎಂದು ಘೋಷಿಸಲಾದ ಉತ್ತರ ಪ್ರದೇಶದ ಸುಭಾರ್ತಿ ವೈದ್ಯಕೀಯ ಕಾಲೇಜಿನಲ್ಲಿ ಬೌದ್ಧ ಅಲ್ಪಸಂಖ್ಯಾತ ಕೋಟಾದಡಿಯಲ್ಲಿ ವೈದ್ಯಕೀಯ ಸ್ನಾತಕೋತ್ತರ ಕೋರ್ಸ್‌ಗೆ ಪ್ರವೇಶ ಪಡೆಯಲು ನಿರ್ದೇಶನಗಳನ್ನು ಕೋರಿ ಹರಿಯಾಣದ ಇಬ್ಬರು ವ್ಯಕ್ತಿಗಳು ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠವು ವಿಚಾರಣೆ ನಡೆಸಿದೆ.

ಅರ್ಜಿದಾರರು ತಾವು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿದ್ದೇವೆಂದು ಹೇಳಿಕೊಂಡು, ಬೌದ್ಧ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದವರು ಎಂದು ಉಪವಿಭಾಗಾಧಿಕಾರಿ ನೀಡಿದ ಪ್ರಮಾಣಪತ್ರಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

ಅರ್ಜಿದಾರರು ‘ಪುನಿಯಾ’ ಜಾತಿಗೆ ಸೇರಿದವರು ಎಂಬುವುದನ್ನು ಗಮನಿಸಿದ ಸಿಜೆಐ ಸೂರ್ಯ ಕಾಂತ್, “ಪುನಿಯಾಗಳು ಪರಿಶಿಷ್ಟ ಜಾತಿ ವರ್ಗದಲ್ಲಿ ಇರಬಹುದು, ಪುನಿಯಾಗಳು ಜಾಟ್ ಕೂಡ ಆಗಿರಬಹುದು, ಅದು ಸಾಮಾನ್ಯ ವರ್ಗ. ನೀವು ಯಾವ ಪುನಿಯಾ?” ಎಂದು ಪ್ರಶ್ನಿಸಿದ್ದಾರೆ.

ಇದಕ್ಕೆ ಅರ್ಜಿದಾರರು “ನಾವು ಜಾಟ್” ಎಂದು ಉತ್ತರಿಸಿದ್ದಾರೆ. “ಹಾಗಾದರೆ ನೀವು (ಅಲ್ಪಸಂಖ್ಯಾತರು) ಹೇಗೆ ಆಗುತ್ತೀರಿ?” ಎಂದು ಸಿಜೆಐ ಕೇಳಿದ್ದಾರೆ.

ಈ ವೇಳೆ ಅರ್ಜಿದಾರರು “ನಾವು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿದ್ದೇವೆ. ಯಾರಾದರೂ ಬೌದ್ಧ ಧರ್ಮಕ್ಕೆ ಮತಾಂತರಗೊಳ್ಳಬಹುದು” ಎಂದು ಉತ್ತರಿಸಿದ್ದಾರೆ.

ಈ ಉತ್ತರಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಸಿಜೆಐ, “ಇದು ವಂಚನೆಯ ಮತ್ತೊಂದು ಹಾದಿ, ನಿಜವಾದ ಅಲ್ಪಸಂಖ್ಯಾತರಿಗೆ ಸಿಗಬೇಕಾದ ಹಕ್ಕುಗಳನ್ನು ನೀವು ಕಿತ್ತುಕೊಳ್ಳಲು ಪ್ರಯತ್ನಿಸುತ್ತಿದ್ದೀರಿ. ನೀವು ಆರ್ಥಿಕವಾಗಿ ಸದೃಢರಾಗಿದ್ದೀರಿ, ಉತ್ತಮ ಪ್ರದೇಶಗಳಲ್ಲಿ ವಾಸಿಸುತ್ತಿದ್ದೀರಿ ಮತ್ತು ಪ್ರಬಲ ಸಮುದಾಯಕ್ಕೆ ಸೇರಿದವರಾಗಿದ್ದೀರಿ. ನಿಮ್ಮ ಬಳಿ ಕೃಷಿ ಭೂಮಿ ಮತ್ತು ಎಲ್ಲಾ ಅಗತ್ಯ ಸೌಲಭ್ಯಗಳಿವೆ. ನಿಮ್ಮ ಸ್ವಂತ ಅರ್ಹತೆ ಮತ್ತು ಸಾಮರ್ಥ್ಯದ ಬಗ್ಗೆ ನೀವು ಹೆಮ್ಮೆ ಪಡಬೇಕು. ಅದನ್ನು ಬಿಟ್ಟು, ನಿಜವಾಗಿಯೂ ವಂಚಿತರಾದವರ (ಬಡವರ ಅಥವಾ ಶೋಷಿತರ) ಹಕ್ಕುಗಳನ್ನು ಕಸಿದುಕೊಳ್ಳಲು ಮುಂದಾಗಬಾರದು” ಎಂದು ಹೇಳಿದ್ದಾರೆ.

ಇದಕ್ಕೆ ಅರ್ಜಿದಾರರು “ನಾವು ನಿಜವಾಗಿಯೂ ಬೌದ್ಧಧರ್ಮವನ್ನು ಅನುಸರಿಸುತ್ತಿದ್ದೇವೆ ಅಥವಾ ಮತಾಂತಗೊಂಡಿದ್ದೇವೆ” ಎಂದು ತಿಳಿಸಿದ್ದಾರೆ.

ಈ ವಾದವನ್ನು ಒಪ್ಪಿಕೊಳ್ಳದ ಸಿಜೆಐ, “ಇದೇ ರೀತಿ ಮುಂದುವರಿದರೆ, ಪ್ರತಿಯೊಬ್ಬರೂ ಈ ಹಾದಿಯನ್ನು ಹಿಡಿಯುತ್ತಾರೆ. ಮೇಲ್ವರ್ಗದವರು ಸಹ ಅಲ್ಪಸಂಖ್ಯಾತ ಸ್ಥಾನಮಾನವನ್ನು ಪಡೆಯಲು ಅಥವಾ ಅಳವಡಿಸಿಕೊಳ್ಳಲು ಪ್ರಾರಂಭಿಸುತ್ತಾರೆ” ಎಂದಿದ್ದಾರೆ. “ನಮ್ಮಿಂದ ಇನ್ನೂ ಹೆಚ್ಚಿನ ಕಠಿಣ ಕಾಮೆಂಟ್‌ಗಳನ್ನು (ಟೀಕೆಗಳನ್ನು) ಮಾಡಿಸಲು ನಮಗೆ ಒತ್ತಾಯ ಮಾಡಬೇಡಿ” ಎಂದು ವಕೀಲರಿಗೆ ಅಥವಾ ಅರ್ಜಿದಾರರಿಗೆ ಎಚ್ಚರಿಕೆ ನೀಡಿದ್ದಾರೆ.

ಅಭ್ಯರ್ಥಿಗಳು ನೀಟ್‌-ಪಿಜಿ ಪರೀಕ್ಷೆಗೆ ಅರ್ಜಿ ಸಲ್ಲಿಸುವಾಗ ತಾವು ‘ಸಾಮಾನ್ಯ ವರ್ಗಕ್ಕೆ’ (General Category) ಸೇರಿದವರೆಂದು ನಮೂದಿಸಿದ್ದಾರೆ ಮತ್ತು ತಮಗೆ ‘ಆರ್ಥಿಕವಾಗಿ ಹಿಂದುಳಿದ ವರ್ಗದ’ (EWS) ಸೌಲಭ್ಯ ಬೇಡವೆಂದು ಸ್ಪಷ್ಟಪಡಿಸಿದ್ದಾರೆ” ಎಂಬುವುದನ್ನು ನ್ಯಾಯಾಲಯ ಗಮನಿಸಿದೆ. ಹೀಗಿರುವಾಗ, ಅವರಿಗೆ ಅಲ್ಪಸಂಖ್ಯಾತ ಪ್ರಮಾಣಪತ್ರಗಳನ್ನು ನೀಡಿರುವುದು ಹೇಗೆ? ಎಂದು ನ್ಯಾಯಪೀಠ ಪ್ರಶ್ನಿಸಿದೆ. ಈ ಕುರಿತು ಸೂಕ್ತ ತನಿಖೆ ಅಗತ್ಯವಿದೆ ಎಂದು ಹೇಳಿದೆ.

“ಅರ್ಜಿದಾರರು ಮೂಲತಃ ಸಾಮಾನ್ಯ ವರ್ಗದವರಾಗಿ (ಜನರಲ್ ಕ್ಯಾಟಗರಿ) ಜನಿಸಿದ್ದಾರೆ ಎಂಬುವುದನ್ನು ನಾವು ವಕೀಲರಿಂದ ಖಚಿತಪಡಿಸಿಕೊಂಡಿದ್ದೇವೆ. 2025ರ ನೀಟ್-ಪಿಜಿ ಪರೀಕ್ಷೆಯಲ್ಲಿ ಅವರು ಸಾಮಾನ್ಯ ವರ್ಗದ ಅಭ್ಯರ್ಥಿಗಳಾಗಿ ಗುರುತಿಸಿಕೊಂಡಿದ್ದಾರೆ. ಅವರು ಸಮಾಜದ ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ ಸೇರಿದವರಲ್ಲ ಎಂದು ಸ್ಪಷ್ಟವಾಗಿ ಉಲ್ಲೇಖಿಸಿದ್ದಾರೆ. ಹೀಗಿರುವಾಗ ಉಪ-ವಿಭಾಗಾಧಿಕಾರಿ (ಎಸ್‌ಡಿಒ) ನೀಡಿರುವ ಅಲ್ಪಸಂಖ್ಯಾತ ಪ್ರಮಾಣಪತ್ರಗಳನ್ನು ನೀಡುವ ವಿಷಯದಲ್ಲಿ ಇನ್ನಷ್ಟು ಆಳವಾದ ತನಿಖೆ ಅಗತ್ಯವಿದೆ ಎಂದು ತೋರುತ್ತದೆ” ಎಂದು ನ್ಯಾಯಪೀಠ ತಿಳಿಸಿದೆ.

ಹರಿಯಾಣ ಸರ್ಕಾರದ ಮುಖ್ಯ ಕಾರ್ಯದರ್ಶಿ ಈ ಕೆಳಗಿನ ಮಾಹಿತಿಯನ್ನು ತಿಳಿಸಲು ಪೀಠ ಸೂಚಿಸಿದೆ.

1 ಅಲ್ಪಸಂಖ್ಯಾತ ಪ್ರಮಾಣಪತ್ರವನ್ನು ನೀಡಲು ಮಾರ್ಗಸೂಚಿಗಳು ಯಾವುವು?

    2. 2025ರ ಪರೀಕ್ಷೆಯಲ್ಲಿ ಸಾಮಾನ್ಯ ವರ್ಗ ಎಂದು ಗುರುತನ್ನು ಬಹಿರಂಗಪಡಿಸಿದ ಇಡಬ್ಲ್ಯುಎಸ್‌ಗಿಂತ ಮೇಲ್ಪಟ್ಟ ಮೇಲ್ವರ್ಗದ ಅಭ್ಯರ್ಥಿಯನ್ನು ಬೌದ್ಧ ಅಲ್ಪಸಂಖ್ಯಾತ ಸಮುದಾಯವಾಗಲು ಅನುಮತಿಸಬಹುದೇ? ಇಲ್ಲದಿದ್ದರೆ, ಯಾವ ಆಧಾರದಲ್ಲಿ ಉಪ ವಿಭಾಗದಿಕಾರಿ ಅರ್ಜಿದಾರರಿಗೆ ಅಲ್ಪಸಂಖ್ಯಾತ ಪ್ರಮಾಣಪತ್ರ ನೀಡಿದ್ದಾರೆ?

    ಈ ಬಗ್ಗೆ ಎರಡು ವಾರಗಳಲ್ಲಿ ವರದಿ ಸಲ್ಲಿಸುವಂತೆ ನ್ಯಾಯಾಲಯವು ರಾಜ್ಯ ಸರ್ಕಾರಕ್ಕೆ ಸೂಚಿಸಿದೆ. ಅಲ್ಪಸಂಖ್ಯಾತ ಅಭ್ಯರ್ಥಿಗಳಾಗಿ ಪ್ರವೇಶ ಕೋರಿ ಅರ್ಜಿದಾರರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.

    ನಿಖಿಲ್ ಕುಮಾರ್ ಪುನಿಯಾ ಮತ್ತು ಏಕ್ತಾ ಸಲ್ಲಿಸಿದ ಅರ್ಜಿಯಲ್ಲಿ ಮೀರತ್‌ನ ಸುಭಾರ್ತಿ ವೈದ್ಯಕೀಯ ಕಾಲೇಜಿನಲ್ಲಿ 50% ಸೀಟುಗಳನ್ನು ಬೌದ್ಧ ಅಲ್ಪಸಂಖ್ಯಾತ ಸಮುದಾಯಕ್ಕೆ ಹಂಚಿಕೆ ಮಾಡಲು ನಿರ್ದೇಶನಗಳನ್ನು ಕೋರಲಾಗಿತ್ತು. ಸುಪ್ರೀಂ ಕೋರ್ಟ್ ಅಕ್ಟೋಬರ್ 20,2022 ರಂದು ಎಸ್‌ಎಲ್‌ಪಿ (ಸಿ) ಸಂಖ್ಯೆ 17003/2022 ರಲ್ಲಿ ನೀಡಿದ ಮಧ್ಯಂತರ ಆದೇಶದ ಪ್ರಕಾರ. ಸದರಿ ಕಾಲೇಜಿಗೆ 2018ರಲ್ಲಿ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳ ರಾಷ್ಟ್ರೀಯ ಆಯೋಗವು ಅಲ್ಪಸಂಖ್ಯಾತ ಸ್ಥಾನಮಾನವನ್ನು ನೀಡಿದೆ ಎಂದು ಹೇಳಲಾಗಿದೆ.

    ಅರ್ಜಿದಾರರು ಬೌದ್ಧ ಅಲ್ಪಸಂಖ್ಯಾತ ಅಭ್ಯರ್ಥಿಗಳಾಗಿ ನೀಟ್-ಪಿಜಿ ಕೋರ್ಸ್‌ಗಳಿಗೆ ಸೀಟುಗಳನ್ನು ಹಂಚಿಕೆ ಮಾಡಲು ನಿರ್ದೇಶನಗಳನ್ನು ಕೋರಿದ್ದರು.

    ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

    LEAVE A REPLY

    Please enter your comment!
    Please enter your name here

    - Advertisment -

    SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

    ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

    ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

    ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

    ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

    ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

    9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

    ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

    ‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

    ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

    ‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

    ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

    ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

    ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

    ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

    ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

    SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

    ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

    ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

    ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...