Homeಮುಖಪುಟಹೊಸ ಉಪರಾಷ್ಟ್ರಪತಿ ಆಯ್ಕೆ: ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಮಾತುಗಳನ್ನು ನೆನಪಿಸಿದ ಕಾಂಗ್ರೆಸ್

ಹೊಸ ಉಪರಾಷ್ಟ್ರಪತಿ ಆಯ್ಕೆ: ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಮಾತುಗಳನ್ನು ನೆನಪಿಸಿದ ಕಾಂಗ್ರೆಸ್

- Advertisement -
- Advertisement -

ಭಾರತದ ಹೊಸ ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿರುವ ಸಿ.ಪಿ ರಾಧಾಕೃಷ್ಣನ್ ಅವರಿಗೆ ಬುಧವಾರ (ಸೆ.10) ಅಭಿನಂದನೆ ಹೇಳಿರುವ ಕಾಂಗ್ರೆಸ್, ‘ನ್ಯಾಯಯುತತೆ ಮತ್ತು ನಿಷ್ಪಕ್ಷಪಾತದ ಮೌಲ್ಯ’ಗಳನ್ನು ಎತ್ತಿಹಿಡಿಯುವಂತೆ ಮನವಿ ಮಾಡಿದೆ.

ಭಾರತದ ಮೊದಲ ಉಪರಾಷ್ಟ್ರಪತಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರು 1952ರಲ್ಲಿ ರಾಜ್ಯಸಭೆಯಲ್ಲಿ ಆಡಿದ ಮಾತುಗಳನ್ನು ಇದೇ ವೇಳೆ ಕಾಂಗ್ರೆಸ್ ನೆನಪಿಸಿದೆ.

ನಾನು ಯಾವುದೇ ಪಕ್ಷಕ್ಕೆ ಸೇರಿದವನಲ್ಲ, ಅಂದರೆ ಈ ಸದನದ ಪ್ರತಿಯೊಂದು ಪಕ್ಷಕ್ಕೂ ಸೇರಿದವನು. ಸಂಸದೀಯ ಪ್ರಜಾಪ್ರಭುತ್ವದ ಅತ್ಯುನ್ನತ ಸಂಪ್ರದಾಯಗಳನ್ನು ಎತ್ತಿಹಿಡಿಯುವುದು, ಪ್ರತಿಯೊಂದು ಪಕ್ಷದ ಬಗ್ಗೆ ನ್ಯಾಯ ಹಾಗೂ ನಿಷ್ಪಕ್ಷಪಾತದಿಂದ ವರ್ತಿಸುವುದು ಮತ್ತು ಯಾರನ್ನು ದ್ವೇಷಿಸದೆ ಎಲ್ಲರನ್ನೂ ಸದ್ಭಾವನೆಯೊಂದಿಗೆ ಕಾಣುವುದು ನನ್ನ ಕರ್ತವ್ಯ” ಎಂದು ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಹೇಳಿದ್ದರು.

“ಪ್ರತಿಪಕ್ಷ ಗುಂಪುಗಳು ಸರ್ಕಾರದ ನೀತಿಗಳನ್ನು ನ್ಯಾಯಯುತವಾಗಿ, ಮುಕ್ತವಾಗಿ ಮತ್ತು ಸ್ಪಷ್ಟವಾಗಿ ಟೀಕಿಸಲು ಅವಕಾಶ ನೀಡದಿದ್ದರೆ ಪ್ರಜಾಪ್ರಭುತ್ವವು ದಬ್ಬಾಳಿಕೆಗೆ ಒಳಗಾಗುವ ಸಾಧ್ಯತೆಯಿದೆ” ಎಂದು ಡಾ. ರಾಧಾಕೃಷ್ಣನ್ ಅವರು ಮೇ 16, 1952 ರಂದು ರಾಜ್ಯಸಭೆಯ ಆರಂಭಿಕ ದಿನದಂದು ತಿಳಿಸಿದ್ದರು.

“ಡಾ. ರಾಧಾಕೃಷ್ಣನ್ ಅವರು ತಾವು ಬೋಧಿಸಿದ್ದನ್ನೇ ಅಕ್ಷರಶಃ ಮತ್ತು ಆತ್ಮದಲ್ಲಿ ಆಚರಣೆಗೆ ತಂದರು” ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ತನ್ನ ಎಕ್ಸ್‌ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

ಮಂಗಳವಾರ (ಸೆ.9) ನಡೆದ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ ರಾಧಾಕೃಷ್ಣನ್ ಅವರು 452 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದು, ವಿರೋಧ ಪಕ್ಷಗಳ ಒಕ್ಕೂಟ ಇಂಡಿಯಾದ ಅಭ್ಯರ್ಥಿ ನ್ಯಾಯಮೂರ್ತಿ (ನಿವೃತ್ತ) ಬಿ. ಸುದರ್ಶನ್ ರೆಡ್ಡಿ ಅವರು 300 ಮತಗಳನ್ನು ಪಡೆದಿದ್ದಾರೆ.

ಸಂಖ್ಯಾಬಲದ ಹೊರತಾಗಿಯೂ, ಫಲಿತಾಂಶವು ಬಿಜೆಪಿಯ ‘ನೈತಿಕ ಮತ್ತು ರಾಜಕೀಯ ಸೋಲು’ ಎಂದು ಕಾಂಗ್ರೆಸ್ ಬಣ್ಣಿಸಿದೆ.

ವಿರೋಧ ಪಕ್ಷಗಳ ಒಗ್ಗಟ್ಟು ಮತ್ತು ಕಾರ್ಯಕ್ಷಮತೆಯನ್ನು ಕಾಂಗ್ರೆಸ್ ಶ್ಲಾಘಿಸಿದ್ದು, ಸುದರ್ಶನ್ ರೆಡ್ಡಿ ಅವರು ಶೇಕಡ 40ರಷ್ಟು ಮತಗಳನ್ನು ಗಳಿಸಿದ್ದಾರೆ ಎಂದು ಎತ್ತಿ ತೋರಿಸಿದೆ. 2022ರ ಉಪರಾಷ್ಟ್ರಪತಿ ಚುನಾವಣೆಯಲ್ಲಿ ವಿರೋಧ ಪಕ್ಷಗಳ ಅಭ್ಯರ್ಥಿ ಶೇಕಡ 26ರಷ್ಟು ಮತಗಳನ್ನು ಪಡೆದಿದ್ದರು. ಅದಕ್ಕೆ ಹೋಲಿಸಿದೆ ಈ ಬಾರಿ ಗಮನಾರ್ಹ ಸುಧಾರಣೆಯಾಗಿದೆ ಎಂದು ಕಾಂಗ್ರೆಸ್ ಹೇಳಿದೆ.

ಬಿಹಾರ ಎಸ್‌ಐಆರ್‌: ಗುರುತಿನ ಪುರಾವೆಯಾಗಿ ಆಧಾರ್ ಕಾರ್ಡ್‌ ಪರಿಗಣಿಸಲು ಚು. ಆಯೋಗ ನಿರ್ದೇಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...