Homeಮುಖಪುಟಹೊಸ ವರ್ಷ: ಪ್ರಧಾನಿ ಮೋದಿ ಸರ್ಕಾರ ಅದಾನಿ‌ ಗ್ರೂಪ್ಸ್‌ಗೆ ನೀಡಿದ ಗಿಫ್ಟ್‌ ಏನು ಗೊತ್ತಾ?

ಹೊಸ ವರ್ಷ: ಪ್ರಧಾನಿ ಮೋದಿ ಸರ್ಕಾರ ಅದಾನಿ‌ ಗ್ರೂಪ್ಸ್‌ಗೆ ನೀಡಿದ ಗಿಫ್ಟ್‌ ಏನು ಗೊತ್ತಾ?

ಆರು ವಿಮಾನ ನಿಲ್ದಾಣಗಳನ್ನು 50 ವರ್ಷಗಳ ಕಾಲ Purchasing Power Parity (PPP) ಆಧಾರದ ಮೇಲೆ ಮುನ್ನಡೆಸಲು ಅದಾನಿ ಗ್ರೂಪ್ಸ್‌ ಬಿಡ್ ಪಡೆದುಕೊಂಡಿದೆ

- Advertisement -

ಹೊಸ ವರ್ಷದ ಪ್ರಯುಕ್ತ ಅದಾನಿ ಗ್ರೂಪ್ಸ್‌ಗೆ ಭಾರತದ ಪ್ರಧಾನಿ ಮೋದಿ ಸರ್ಕಾರ ಭರ್ಜರಿ ಗಿಫ್ಟ್‌ ನೀಡಿದ್ದು, ಒಪ್ಪಂದದಂತೆ ಭಾರತದ ವಿಮಾನ ನಿಲ್ದಾಣಗಳನ್ನು ಐವತ್ತು ವರ್ಷಗಳ ಕಾಲ ಅದಾನಿ ಗ್ರೂಪ್ಸ್‌ಗೆ ವಹಿಸಲಾಗುತ್ತಿದೆ. ಜೈಪುರ, ಗುವಾಹಟಿ ಮತ್ತು ತಿರುವನಂತಪುರಂ ವಿಮಾನ ನಿಲ್ದಾಣಗಳನ್ನು ಮುಂದಿನ ತಿಂಗಳು ಅದಾನಿ ಗ್ರೂಪ್‌ಗೆ ಹಸ್ತಾಂತರಿಸುವ ಒಪ್ಪಂದಕ್ಕೆ ಭಾರತ ವಿಮಾನ ನಿಲ್ದಾಣ ಪ್ರಾಧಿಕಾರ (AAI) ಸಹಿ ಹಾಕಲಿದೆ. ಈ ಹಿಂದೆ ಮಂಗಳೂರು, ಲಕ್ನೋ ಮತ್ತು ಅಹಮದಾಬಾದ್ ವಿಮಾನ ನಿಲ್ದಾಣಗಳನ್ನು ಅದಾನಿಗೆ ಹಸ್ತಾಂತರಿಸಲಾಗಿತ್ತು.

ಆರು ವಿಮಾನ ನಿಲ್ದಾಣಗಳನ್ನು 50 ವರ್ಷಗಳ ಕಾಲ Purchasing Power Parity (PPP) ಆಧಾರದ ಮೇಲೆ ಮುನ್ನಡೆಸಲು ಅದಾನಿ ಗ್ರೂಪ್ಸ್‌ ಬಿಡ್ ಪಡೆದುಕೊಂಡಿದೆ.

2021 ಜನವರಿ 25 ರೊಳಗೆ ಈ ಒಪ್ಪಂದಕ್ಕೆ ಸಹಿ ಹಾಕುವ ಮೂಲಕ ಉಳಿದ ಮೂರೂ ವಿಮಾನ ನಿಲ್ದಾಣಗಳನ್ನೂ ಹಸ್ತಾಂತರಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಲಿದೆ ಎಂದು AAI ಅಧ್ಯಕ್ಷ ಅರವಿಂದ್ ಸಿಂಗ್ ಖಚಿತಪಡಿಸಿದ್ದಾರೆ.

ಇದನ್ನೂ ಓದಿ: ರೈಲ್ವೇ ಖಾಸಗೀಕರಣಕ್ಕೆ ಚಾಲನೆ: ಮುಂದಿನ ಕರಾಳ ದಿನಗಳಿಗೆ ಹಸಿರು ನಿಶಾನೆ

ಈ ಆರು ವಿಮಾನ ನಿಲ್ದಾಣಗಳನ್ನು ಹೊರತುಪಡಿಸಿ, ವಾರಣಾಸಿ, ಅಮೃತಸರ, ಭುವನೇಶ್ವರ, ರಾಯ್‌ಪುರ, ಇಂದೋರ್ ಮತ್ತು ತಿರುಚ್ಚಿ ಸೇರಿದಂತೆ ಇನ್ನೂ ವಿಮಾನ ನಿಲ್ದಾಣಗಳನ್ನು PPP ಅಡಿಯಲ್ಲಿ ಲೀಸ್‌ಗೆ ಕೊಡಲು ಸರ್ಕಾರ ನಿರ್ಧರಿಸಿದೆ ಎಂದು ಟೈಮ್ಸ್‌ ಆಫ್ ಇಂಡಿಯಾ ವರದಿ ಮಾಡಿದೆ.

“ತಿರುವನಂತಪುರಂ ವಿಮಾನ ನಿಲ್ದಾಣವನ್ನು ಪಿಪಿಪಿ ಆಧಾರದ ಮೇಲೆ ನಡೆಸುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಕೇರಳ ಸರ್ಕಾರ ಕಾನೂನುಬದ್ಧವಾಗಿ ಪ್ರಶ್ನಿಸಿತ್ತು. ಈ ಪ್ರಕ್ರಿಯೆಯನ್ನು ಅತ್ಯಂತ ಮುಕ್ತ ಮತ್ತು ಪಾರದರ್ಶಕ ರೀತಿಯಲ್ಲಿ ನಡೆಸಲಾಗಿದ್ದರಿಂದ ಆ ನ್ಯಾಯಾಲಯದ ತೀರ್ಪು ನಮ್ಮ ಪರವಾಗಿದೆ. ಉಳಿದ ಮೂರು ವಿಮಾನ ನಿಲ್ದಾಣಗಳನ್ನು ಅದಾನಿ ಗ್ರೂಪ್‌ಗೆ ಹಸ್ತಾಂತರಿಸುವುದು” ಎಂದು ವಿಮಾನಯಾನ ಕಾರ್ಯದರ್ಶಿ ಪಿ ಎಸ್ ಖರೋಲಾ ತಿಳಿಸಿದ್ದಾರೆ.

ಇದನ್ನೂ ಓದಿ: ಬ್ಯಾಂಕುಗಳ ಖಾಸಗೀಕರಣಕ್ಕೆ ಮುಂದಾದ ಕೇಂದ್ರ ಸರ್ಕಾರ

ಲಕ್ನೋ, ಅಹಮದಾಬಾದ್, ಜೈಪುರ, ಮಂಗಳೂರು, ತಿರುವನಂತಪುರ ಮತ್ತು ಗುವಾಹಟಿ ವಿಮಾನ ನಿಲ್ದಾಣಗಳನ್ನು ಲೀಸ್ ಮೇಲೆ ನಿರ್ವಹಿಸುವ ಹಕ್ಕನ್ನು ಅದಾನಿ ಎಂಟರ್ ಪ್ರೈಸಸ್ ಪಡೆದುಕೊಂಡಿದೆ ಎಂದು ಕೇಂದ್ರ ಪರಿಸರ ಸಚಿವ ಪ್ರಕಾಶ ಜಾವಾಡೇಕರ್ ಈ ಹಿಂದೆ ದೆಹಲಿಯ ಸುದ್ಧಿಗೋಷ್ಠಿಯಲ್ಲಿ ಘೋಷಿಸಿದ್ದರು.

ಕೇಂದ್ರ ಸರ್ಕಾರ ಈ ಹಿಂದೆ 12 ವಿಮಾನ ನಿಲ್ದಾಣಗಳನ್ನು ಖಾಸಗಿಯವರಿಗೆ ವಹಿಸಿಕೊಡಲು ನಿರ್ಧರಿಸಿತ್ತು. ಇದರ ಬಗ್ಗೆ ಅದಾನಿ ಸಂಸ್ಥೆಯೊಂದಿಗೆ 2020 ರ ಫೆಬ್ರವರಿಯಲ್ಲಿ ಒಪ್ಪಂದ ನಡೆದಿತ್ತು. ಈ ಪ್ರಕಾರ ಮೊದಲ ಹಂತದಲ್ಲಿ 6 ವಿಮಾನ ನಿಲ್ದಾಣಗಳ ಖಾಸಗೀಕರಣಕ್ಕೆ ನಡೆದ ಟೆಂಡರ್ ಪ್ರಕ್ರಿಯೆಯಲ್ಲಿ ಅದಾನಿ ಸಮೂಹ ಸಂಸ್ಥೆ ಅತ್ಯಧಿಕ ಮೊತ್ತ ನಮೂದಿಸುವ ಮೂಲಕ ಗೆದ್ದುಕೊಂಡಿದೆ ಎಂದು ಸರ್ಕಾರ ಹೇಳಿತ್ತು.

ಇದನ್ನೂ ಓದಿ: ಬಾಹ್ಯಾಕಾಶ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಲು ಖಾಸಗಿ ವಲಯಕ್ಕೆ ಮುಕ್ತ ಅವಕಾಶ: ಪ್ರಧಾನಿ ಮೋದಿ

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಅಂಬಾನಿ-ಅದಾನಿಗಳಿಗಾಗಿ ಕೆಲಸ ಮಾಡುತ್ತಿದೆ ಎಂದು ಹಲವರು ಆರೋಪಿಸಿದ್ದರು. ಇದಕ್ಕೆ ಒಂದೊಂದೇ ಸಾಕ್ಷಿಗಳು ಸಿಗುತ್ತಲೇ ಇದೆ. “ಸರ್ಕಾರದ ಒಡೆತನದಲ್ಲಿರುವ ಪ್ರತಿಯೊಂದು ಸಂಸ್ಥೆಗಳನ್ನೂ ಖಾಸಗಿಯವರಿಗೆ ಮಾರುವ ಮೂಲಕ ಇಡೀ ದೇಶವನ್ನೇ ಮಾರಲು ಹೊರಟಿದ್ದಾರೆ ನಮ್ಮ ಪ್ರಧಾನಿ” ಎಂದು ಹಲವರು ಟೀಕಿಸುತ್ತಿದ್ದಾರೆ.

ಆದರೆ ಇದಾವುದಕ್ಕೂ ತಲೆಕೆಡಿಸಿಕೊಳ್ಳದ ಪ್ರಧಾನಿ ಮೋದಿ, ಈ ಹಿಂದೆ ರೈಲು ನಿಲ್ದಾಣಗಳನ್ನು ಖಾಸಗೀಕರಣಗೊಳಿಸಲು ಅನುಮೋದನೆ ನೀಡಿದ್ದರು


ಇದನ್ನೂ ಓದಿ: ಮಂಗಳೂರು ವಿಮಾನ ನಿಲ್ದಾಣ ಇನ್ನು ಮುಂದೆ ಅದಾನಿ ಏರ್‌ಪೋರ್ಟ್ಸ್!: ನೆಟ್ಟಿಗರ ಕಿಡಿ

ಪ್ರತಾಪ ಹುಣಸೂರು
+ posts

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

  1. ದಯಮಾಡಿ ಜಾಹೀರಾತುಗಳನ್ನು ಕಡಿಮೆ ಮಾಡಿ.ತುಂಬಾ ತೊಂದರೆಯಾಗುತ್ತಿದೆ.

LEAVE A REPLY

Please enter your comment!
Please enter your name here

- Advertisment -

Must Read

ಬೆಂಗಳೂರು: ಗಣರಾಜ್ಯೋತ್ಸವಕ್ಕೆ ಮಾಣಿಕ್ ಷಾ ಪರೇಡ್‌ ಮೈದಾನ ಸಜ್ಜು, ಸಾರ್ವಜನಿಕರಿಗಿಲ್ಲ ಪ್ರವೇಶ

0
ಕೋವಿಡ್ ಸಾಂಕ್ರಾಮಿಕ ರೋಗದಿಂದಾಗಿ ಬೆಂಗಳೂರಿನ  ಮಹಾತ್ಮ ಗಾಂಧಿ ರಸ್ತೆಯ ಮಾಣಿಕ್ ಷಾ ಪರೇಡ್‌ ಮೈದಾನದಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪರೇಡ್‌ಗೆ ಸಾರ್ವಜನಿಕರಿಗೆ ಅವಕಾಶ ನೀಡಿಲ್ಲ. ಆಹ್ವಾನ ಪತ್ರಗಳು ಮತ್ತು ಪಾಸ್ ಹೊಂದಿರುವವರಿಗೆ ಮಾತ್ರ ಪರೇಡ್‌ನಲ್ಲಿ...
Wordpress Social Share Plugin powered by Ultimatelysocial
Shares