Homeಮುಖಪುಟನ್ಯೂಯಾರ್ಕ್ ಟೈಮ್ಸ್‌ ಭಾರತದ ಬಗ್ಗೆ ಅಪಪ್ರಚಾರ ಮಾಡುತ್ತಿದೆ: ಕೇಂದ್ರ ಸಚಿವ ಅನುರಾಗ್ ಠಾಕೂರ್‌

ನ್ಯೂಯಾರ್ಕ್ ಟೈಮ್ಸ್‌ ಭಾರತದ ಬಗ್ಗೆ ಅಪಪ್ರಚಾರ ಮಾಡುತ್ತಿದೆ: ಕೇಂದ್ರ ಸಚಿವ ಅನುರಾಗ್ ಠಾಕೂರ್‌

- Advertisement -
- Advertisement -

ಭಾರತದ ಬಗ್ಗೆ ಅಪಪ್ರಚಾರ ಮಾಡುವುದೇ ‘ದಿ ನ್ಯೂಯಾರ್ಕ್ ಟೈಮ್ಸ್‌’ ಪತ್ರಿಕೆಯ ಏಕೈಕ ಉದ್ದೇಶವಾಗಿದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಆರೋಪಿಸಿದ್ದಾರೆ.

ನರೇಂದ್ರ ಮೋದಿ ಸರ್ಕಾರದ ಅವಧಿಯಲ್ಲಿ ಭಾರತದಲ್ಲಿ ಮಾಧ್ಯಮ ಸ್ವಾತಂತ್ರ್ಯ ಕುಗ್ಗಿದೆ ಎಂದು ‘ನ್ಯೂಯಾರ್ಕ್ ಟೈಮ್ಸ್’ ಪ್ರಕಟಿಸಿರುವ ಲೇಖನಕ್ಕೆ ಸಂಬಂಧಿಸಿದಂತೆ ಅನುರಾಗ್ ಪ್ರತಿಕ್ರಿಯಿಸಿದ್ದಾರೆ.

“ಭಾರತದ ಪತ್ರಿಕಾ ಸ್ವಾತಂತ್ರ್ಯದ ಮೇಲೆ ಮೋದಿಯವರಿಂದ ಅಂತಿಮ ದಾಳಿ ಆರಂಭವಾಗಿದೆ” ಎಂಬ ಶೀರ್ಷಿಕೆಯಲ್ಲಿ ‘ದಿ ಕಾಶ್ಮೀರ್ ಟೈಮ್ಸ್‌’ನ ಕಾರ್ಯನಿರ್ವಾಹಕ ಸಂಪಾದಕರಾದ ಅನುರಾಧಾ ಭಾಸಿನ್ ಅವರು ಲೇಖನ ಬರೆದಿದ್ದು, ಬುಧವಾರ ಅದು ಪ್ರಕಟವಾಗಿದೆ.

ಪ್ರಧಾನಿ ನರೇಂದ್ರ ಮೋದಿಯವರ ದಮನಕಾರಿ ಮಾಧ್ಯಮ ನೀತಿಗಳು ಕಾಶ್ಮೀರಿ ಪತ್ರಿಕೋದ್ಯಮವನ್ನು ನಾಶಪಡಿಸುತ್ತಿವೆ, ಸರ್ಕಾರದ ಮುಖವಾಣಿಗಳಾಗಿ ಕಾರ್ಯನಿರ್ವಹಿಸುವಂತೆ ಮಾಧ್ಯಮಗಳನ್ನು ಬೆದರಿಸಲಾಗುತ್ತಿದೆ. ಸುಮಾರು 13 ಮಿಲಿಯನ್ ಜನರಿರುವ ನಮ್ಮ ಪ್ರದೇಶದಲ್ಲಿ ಮಾಹಿತಿ ಹರಿವಿನ ಮೇಲೆ ತಡೆ ನೀಡಲಾಗುತ್ತಿದೆ ಎಂದು ಭಾಸಿನ್ ಬರೆದಿದ್ದಾರೆ.

ಭಾರತದಾದ್ಯಂತ ಈ ‘ಗೊಂದಲಕಾರಿ ಮಾದರಿ’ಯನ್ನು ಅನ್ವಯಿಸಲು ಮೋದಿ ಮುಂದಾಗಿದ್ದಾರೆ ಎಂದು ಅವರು ಟೀಕಿಸಿದ್ದಾರೆ.

ಈ ಸಂಬಂಧ ಶುಕ್ರವಾರ ಸರಣಿ ಟ್ವೀಟ್‌ ಮಾಡಿರುವ ಠಾಕೂರ್‌, “ಭಾರತದಲ್ಲಿ ಪತ್ರಿಕಾ ಸ್ವಾತಂತ್ರ್ಯವು ಇತರ ಮೂಲಭೂತ ಹಕ್ಕುಗಳಂತೆ ಪರಮಪೂಜ್ಯವಾಗಿದೆ” ಎಂದು ಪ್ರತಿಪಾದಿಸಿದ್ದಾರೆ.

ಆದರೆ ಠಾಕೂರ್ ಅವರ ಪ್ರತಿಪಾದನೆಗೆ ವ್ಯತಿರಿಕ್ತವಾಗಿ ಅಂಕಿಅಂಶಗಳಿವೆ. 2014 ರಲ್ಲಿ ಮೋದಿ ಅಧಿಕಾರಕ್ಕೆ ಬಂದ ನಂತರ ವಿಶ್ವ ಪತ್ರಿಕಾ ಸ್ವಾತಂತ್ರ್ಯ ಸೂಚ್ಯಂಕದಲ್ಲಿ ಭಾರತವು 140ನೇ ಸ್ಥಾನದಿಂದ ಕಳೆದ ವರ್ಷ 150ನೇ ಸ್ಥಾನಕ್ಕೆ ಕುಸಿದಿದೆ.

“ಕಾಶ್ಮೀರದಲ್ಲಿ ಮಾಹಿತಿ ಹರಿವಿನ ಮೇಲೆ ನಿರ್ಬಂಧ ಹೇರಲಾಗಿದೆ ಎಂಬುದು ಕಾಲ್ಪನಿಕ” ಎಂದು ವಾದಿಸಿರುವ ಠಾಕೂರ್‌, “ನ್ಯೂಯಾರ್ಕ್ ಟೈಮ್ಸ್ ಬಹಳ ಹಿಂದೆಯೇ ಭಾರತದ ಬಗ್ಗೆ ಏನನ್ನಾದರೂ ಪ್ರಕಟಿಸುವಾಗ ತಟಸ್ಥತೆಯ ಎಲ್ಲಾ ಸೋಗುಗಳನ್ನು ಕೈಬಿಟ್ಟಿದೆ” ಎಂದು ದೂರಿದ್ದಾರೆ.

“ಇದೇ ರೀತಿಯ ಮನಸ್ಥಿತಿಯನ್ನು ಹೊಂದಿರುವ ಇತರ ಕೆಲವು ವಿದೇಶಿ ಮಾಧ್ಯಮ ಸಂಸ್ಥೆಗಳು ಭಾರತ ಮತ್ತು ಮೋದಿಯವರ ಬಗ್ಗೆ ಸುಳ್ಳುಗಳನ್ನು ಹರಡುತ್ತಿವೆ. ಈ ಸಂಸ್ಥೆಗಳು ಭಾರತ ಮತ್ತು ಪ್ರಧಾನಿ ವಿರುದ್ಧ ದ್ವೇಷ ಕಾರುತ್ತಿವೆ” ಎಂದಿದ್ದಾರೆ.

ಇದನ್ನೂ ಓದಿರಿ: ಕೇಸರಿ ಪಾಳಯಕ್ಕೆ ಸುಮಲತಾ ಬೆಂಬಲ; ಮಂಡ್ಯದಲ್ಲಿ ಬಿಜೆಪಿ ಕಥೆ ಏನಾಗಲಿದೆ?

“ಇಂತಹ ಸುಳ್ಳುಗಳು ಹೆಚ್ಚು ಕಾಲ ಉಳಿಯುವುದಿಲ್ಲ. ಭಾರತದಲ್ಲಿ ಪ್ರಜಾಪ್ರಭುತ್ವ ಮತ್ತು ಜನರು ಬಹಳ ಪ್ರಬುದ್ಧರಾಗಿದ್ದೇವೆ. ಇಂತಹ ಅಜೆಂಡಾ ಚಾಲಿತ ಮಾಧ್ಯಮಗಳಿಂದ ನಾವು ಪ್ರಜಾಪ್ರಭುತ್ವದ ಪಾಠವನ್ನು ಕಲಿಯಬೇಕಾಗಿಲ್ಲ. ಕಾಶ್ಮೀರದಲ್ಲಿ ಪತ್ರಿಕಾ ಸ್ವಾತಂತ್ರ್ಯದ ಬಗ್ಗೆ ನ್ಯೂಯಾರ್ಕ್ ಟೈಮ್ಸ್‌ ಹರಡಿದ ಸುಳ್ಳುಗಳು ಖಂಡನೀಯ” ಎಂದು ತಿಳಿಸಿದ್ದಾರೆ.

2002ರ ಗುಜರಾತ್ ಗಲಭೆಯಲ್ಲಿ ಮೋದಿಯವರ ನಿಷ್ಕ್ರಿಯತೆಯನ್ನು ಎತ್ತಿಹಿಡಿದು ಬಿಬಿಸಿ ಬಿಡುಗಡೆ ಮಾಡಿದ ಎರಡು ಭಾಗಗಳ ಸಾಕ್ಷ್ಯಚಿತ್ರವನ್ನು ಕೇಂದ್ರ ವಿದೇಶಾಂಗ ಸಚಿವ ಎಸ್ ಜೈಶಂಕರ್ ಮತ್ತು ಬಿಜೆಪಿ ಸರ್ಕಾರ ವಿರೋಧಿಸಿದ ವಾರಗಳ ನಂತರ ಅನುರಾಗ್ ಹೇಳಿಕೆಗಳು ಹೊರಬಿದ್ದಿವೆ.

ಸಾಕ್ಷ್ಯಚಿತ್ರ ಬಿಡುಗಡೆಯಾದ ಬಳಿಕ, ಕಳೆದ ಫೆಬ್ರವರಿಯಲ್ಲಿ ಭಾರತೀಯ ತೆರಿಗೆ ಅಧಿಕಾರಿಗಳು ಬಿಬಿಸಿ ಮಾಧ್ಯಮದ ಕಚೇರಿಗಳ ಮೇಲೆ ನವದೆಹಲಿ ಮತ್ತು ಮುಂಬೈನಲ್ಲಿ ದಾಳಿ ಮಾಡಿದ್ದರು. ಭಾರತದಲ್ಲಿ ಬಿಬಿಸಿಯ ಆದಾಯವು ದೇಶದಲ್ಲಿನ ಕಾರ್ಯಾಚರಣೆಗಳ ಪ್ರಮಾಣಕ್ಕೆ ಅನುಗುಣವಾಗಿಲ್ಲ ಎಂದು ನೇರ ತೆರಿಗೆಗಳ ಕೇಂದ್ರೀಯ ಮಂಡಳಿಯು ಹೇಳಿಕೊಂಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...

ಹೈದರಾಬಾದ್| ವಿಡಿಯೋ ಗೇಮ್ ಆಡಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ 12 ವರ್ಷದ ಬಾಲಕ

ವಿಡಿಯೋ ಗೇಮ್ ಆಡಿದ್ದಕ್ಕಾಗಿ ತಂದೆ ನಿರಂತರವಾಗಿ ಬೈಯುತ್ತಿದ್ದ ಕಾರಣ 12 ವರ್ಷದ ಬಾಲಕ (ಫೆ.26) ಗುರುವಾರ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ ಎಂದು 'ಸಿಯಾಸತ್' ವರದಿ ಮಾಡಿದೆ. ಬಂಜಾರಾ ಹಿಲ್ಸ್‌ನ...

‘ಕೋಮು ಸಾಮರಸ್ಯ ಕದಡುವ ಸಾಧ್ಯತೆ’: ‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

'ಕೇರಳ ಸ್ಟೋರಿ 2 : ಗೋಸ್ ಬಿಯಾಂಡ್' ಸಿನಿಮಾದ ಸೆನ್ಸಾರ್ ಪ್ರಮಾಣೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಗುರುವಾರ (ಫೆ.26) ಸಿನಿಮಾದ ಬಿಡುಗಡೆಗೆ ತಡೆ ನೀಡಿದೆ. ಸಿನಿಮಾ ನಾಳೆ...

ಕೈದಿಗಳಿಗೆ ನಿಯತಕಾಲಿಕ ವೈದ್ಯಕೀಯ ತಪಾಸಣೆಯ ಹಕ್ಕಿದೆ: ಮದ್ರಾಸ್ ಹೈಕೋರ್ಟ್ 

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು, ಪ್ರತಿಯೊಬ್ಬ ಕೈದಿಯೂ ನಿಯತಕಾಲಿಕ ವೈದ್ಯಕೀಯ ತಪಾಸಣೆಗೆ ಅರ್ಹನಾಗಿದ್ದು, ಅಂತಹ ಆರೋಗ್ಯ ರಕ್ಷಣೆ ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಜೀವಿಸುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ವ್ಯಾಪ್ತಿಗೆ...

ಡಿಜೆ ಮ್ಯೂಸಿಕ್ ವಿವಾದ: ಅಲಿಗಢದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ

ಉತ್ತರ ಪ್ರದೇಶ ರಾಜ್ಯದ ಅಲಿಗಢ ಸಮೀಪದ ಸುನಾನಾ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದ ಬಾರಾತ್ ಸಮಯದಲ್ಲಿ ಹಾಕಿದ್ದ ಡಿಜೆ ಮ್ಯೂಸಿಕ್‌ನಿಂದ ವಿವಾದ ಉಂಟಾಗಿದ್ದು, ದಲಿತ ಕುಟುಂಬದ ಮದುವೆ ಮೆರವಣಿಗೆಯ ಮೇಲೆ ದಾಳಿ ಮಾಡಲಾಗಿದೆ...

‘ನೆತನ್ಯಾಹು ಅವರ ನಿರ್ಲಜ್ಜ ಸಮರ್ಥನೆ’ : ಪ್ರಧಾನಿ ಮೋದಿಯ ನೆಸೆಟ್ ಭಾಷಣ ಟೀಕಿಸಿದ ಕಾಂಗ್ರೆಸ್

ಇಸ್ರೇಲ್ ಸಂಸತ್ ನೆಸೆಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣವನ್ನು ಕಾಂಗ್ರೆಸ್ ಗುರುವಾರ (ಫೆ.26) ತೀವ್ರವಾಗಿ ಟೀಕಿಸಿದ್ದು, ಇದು ಅವರ ಆತಿಥೇಯರಾದ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ 'ನಿರ್ಲಜ್ಜ ಸಮರ್ಥನೆ' ಎಂದಿದೆ. ಇಸ್ರೇಲ್ ರಾಷ್ಟ್ರದ...

ವಿವಾದಿತ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ನಿಷೇಧಿಸಿದ ಸುಪ್ರೀಂ ಕೋರ್ಟ್

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಸಿದ್ದಪಡಿಸಿದ 8 ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿರುವ 'ನ್ಯಾಯಾಂಗದಲ್ಲಿನ ಭ್ರಷ್ಟಾಚಾರ' ಎಂಬ ಅಧ್ಯಾಯದ ಕುರಿತು ಸುಪ್ರೀಂ ಕೋರ್ಟ್ ಗುರುವಾರ (ಫೆ.26) ತೀವ್ರ ಅಸಮಾಧಾನ...

ಕ್ಯೂಬಾ ಜಲಪ್ರದೇಶ ಪ್ರವೇಶಿಸಿದ ಅಮೆರಿಕಾ ಮೂಲದ ಸ್ಪೀಡ್‌ಬೋಟ್ ಮೇಲೆ ಕ್ಯೂಬಾ ಪಡೆಗಳಿಂದ ಗುಂಡಿನದಾಳಿ, ನಾಲ್ವರು ಸಾವು 

ಕ್ಯೂಬಾ: ಬುಧವಾರ ಕ್ಯೂಬಾದ ಪ್ರಾದೇಶಿಕ ಜಲಪ್ರದೇಶವನ್ನು ಪ್ರವೇಶಿಸಿದ ಫ್ಲೋರಿಡಾ-ನೋಂದಾಯಿತ ಸ್ಪೀಡ್‌ಬೋಟ್‌ನ ಮೇಲೆ ಕ್ಯೂಬಾ ಭದ್ರತಾ ಪಡೆಗಳು ಗುಂಡು ಹಾರಿಸಿವೆ. ಈ ವೇಳೆ ಬೋಟ್ ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದು, ಆರು ಜನರು ಗಾಯಗೊಂಡರುವುದಾಗಿ ವರದಿಯಾಗಿದೆ....

ಬಾಲಕಿಯೊಂದಿಗೆ ಅನುಚಿತ ವರ್ತನೆ : ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲು

ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ ಮೇಲೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮಹಲ್ ರೋಝಾದ ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಶಹಾಪುರ...