Homeಅಂತರಾಷ್ಟ್ರೀಯನ್ಯೂಜಿಲೆಂಡ್: ಕೊರೊನಾ ವಿರುದ್ದದ ಸಮರದಲ್ಲಿ ಗೆಲುವಿನತ್ತ ದಾಪುಗಾಲು

ನ್ಯೂಜಿಲೆಂಡ್: ಕೊರೊನಾ ವಿರುದ್ದದ ಸಮರದಲ್ಲಿ ಗೆಲುವಿನತ್ತ ದಾಪುಗಾಲು

ಅಲ್ಲಿ ಕಳೆದ ಐದು ದಿನದಿಂದ ಯಾವುದೇ ಕೊರೊನಾ ಪ್ರಕರಣಗಳು ವರದಿಯಾಗಿಲ್ಲ ಹಾಗೂ ಪ್ರಸ್ತುತ ದೇಶದಲ್ಲಿ ಕೇವಲ 21 ಸೋಂಕಿತರಿದ್ದಾರೆ.

- Advertisement -
- Advertisement -

ನ್ಯೂಜಿಲೆಂಡ್‌ ದೇಶದಲ್ಲಿ ಸತತವಾಗಿ ಐದನೇ ದಿನ  ಶೂನ್ಯ ಕೊರೊನಾ ಪ್ರಕರಣಗಳು ದಾಖಲಾಗಿವೆ. ಈ ಮೂಲಕ ನ್ಯೂಜಿಲೆಂಡ್ ದೇಶ ಕೊರೊನಾ ವಿರುದ್ದದ ಹೋರಾಟದಲ್ಲಿ ವಿಜಯದತ್ತ ಸಾಗುತ್ತಿದೆ.

ನ್ಯೂಜಿಲೆಂಡ್ ಆರೋಗ್ಯ ಮಹಾನಿರ್ದೇಶಕ ಆಶ್ಲೇ ಬ್ಲೂಮ್‌ಫೀಲ್ಡ್ ಇಂದು ದೇಶದಲ್ಲಿ ಯಾವುದೆ ಹೊಸ ಕೋವಿಡ್ -19 ಪ್ರಕರಣಗಳಿಲ್ಲ ಎಂದು ಬಹಿರಂಗ ಪಡಿಸಿದರು. ಕಳೆದ ಐದು ದಿನದಿಂದ ಶೂನ್ಯ ಪ್ರಕರಣಗಳನ್ನು ದಾಖಲಿಸುತ್ತಿದೆ ಹಾಗೂ ಪ್ರಸ್ತುತ ಕೇವಲ 21 ಸಕ್ರಿಯ ಕೊರೊನಾ ವೈರಸ್ ಪ್ರಕರಣಗಳು ಇವೆ ಎಂದು ಅವರು ಹೇಳಿದರು.

ಅಲ್ಲಿ ಇದುವರೆಗೂ ಸಂಭವನೀಯ ಹಾಗೂ ದೃಡೀಕೃತ ಕೊರೊನಾ ಪ್ರಕರಣಗಳು ಸೇರಿ ಒಟ್ಟು 1,504 ಪ್ರಕರಣಗಳು ವರದಿಯಾಗಿದ್ದವು. ಅವುಗಳಲ್ಲಿ 1,462 ಜನರು ಸೋಂಕಿನಿಂದ ಗುಣಮುಖರಾಗಿದ್ದರು. 21 ಜನರು ಸೋಂಕಿನಿಂದ ಮೃತಪಟ್ಟಿದ್ದರೆ ಇನ್ನು ಕೇವಲ 21 ಜನರು ಮಾತ್ರ ಸೋಂಕಿನಿಂದ ಬಳಲುತ್ತಿದ್ದಾರೆ.

ನ್ಯೂಜಿಲೆಂಡ್ ಕೊರೊನಾವನ್ನು ಗೆಲ್ಲುತ್ತಿರುವುದಕ್ಕೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಲ್ಲಿನ ಪ್ರಧಾನಿ ಜಸಿಂಡಾ ಅರ್ಡೆರ್ನ್ ಅವರಿಗೆ ಶುಭಾಶಯಗಳ ಮಳೆಗೆರೆದಿದ್ದಾರೆ.

ಸಾಮಾಜಿಕ ಕಾರ್ಯಕರ್ತೆ ತಾರಾ ಕೃಷ್ಣಸ್ವಾಮಿ ಅವರು “ಪ್ರತಿ ದೇಶದಲ್ಲಿ ಅನೇಕ ಜಸಿಂಡಾ ಅರ್ಡೆರ್ನ್‌ಗಳಿದ್ದಾರೆ. ನಾವು ಅವರಿಗೆ ಮತ ಚಲಾಯಿಸಬೇಕಾಗಿದೆ.” ಸಂತಸ ವ್ಯಕ್ತ ಪಡಿಸಿದ್ದಾರೆ.

She did it!You know how often you see a picture like this?Seated female head of state!The win is a governance…

Posted by Tara Krishnaswamy on Tuesday, May 26, 2020

ಅಲ್ಲಿ ಇದುವರೆಗೂ 2.67 ಲಕ್ಷಕ್ಕಿಂತಲೂ ಹೆಚ್ಚು ಜನರನ್ನು ಪರೀಕ್ಷಿಸಲಾಗಿತ್ತು. ಮಾರ್ಚ್ 23 ರಂದು ಮೊದಲ ಬಾರಿಗೆ ಅಲ್ಲಿ ಕೊರೊನಾ ಪ್ರಕರಣ ವರದಿಯಾಗಿತ್ತು. ಎಪ್ರಿಲ್‌ 27 ರಂದು ನ್ಯೂಜಿಲೆಂಡ್ ಕೊರೊನಾ ವೈರಸ್ ಸಮುದಾಯದ ಹರಡುವಿಕೆಯ ವಿರುದ್ದ ಯುದ್ಧವನ್ನು ಗೆದ್ದಿದೆ ಎಂದು ಪ್ರಧಾನಿ ಜಸಿಂಡಾ ಅರ್ಡೆರ್ನ್ ಹೇಳಿದ್ದರು.


ಓದಿ: ಕೊರೊನಾ ವಿರುದ್ದ ಹೋರಾಡಲು ಮಹಾರಾಷ್ಟ್ರಕ್ಕೆ ವೈದ್ಯರ ತಂಡ ಕಳುಹಿಸಲಿರುವ ಕೇರಳ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...