Homeಸಿನಿಮಾಕ್ರೀಡೆಒಂದೇ ಇನ್ನಿಂಗ್ಸ್‌ನಲ್ಲಿ ಎಲ್ಲಾ 10 ವಿಕೆಟ್ ಪಡೆದ ನ್ಯೂಜಿಲೆಂಡ್‌ನ ಏಜಾಜ್ ಪಟೇಲ್: ಈ ಸಾಧನೆಗೈದ ವಿಶ್ವದ...

ಒಂದೇ ಇನ್ನಿಂಗ್ಸ್‌ನಲ್ಲಿ ಎಲ್ಲಾ 10 ವಿಕೆಟ್ ಪಡೆದ ನ್ಯೂಜಿಲೆಂಡ್‌ನ ಏಜಾಜ್ ಪಟೇಲ್: ಈ ಸಾಧನೆಗೈದ ವಿಶ್ವದ 3ನೇ ಆಟಗಾರ

- Advertisement -
- Advertisement -

ಮುಂಬೈನಲ್ಲಿ ನಡೆಯುತ್ತಿರುವ ಭಾರತ-ನ್ಯೂಜಿಲೆಂಡ್ ಎರಡನೆ ಟೆಸ್ಟ್ ಪಂದ್ಯದಲ್ಲಿ ನ್ಯೂಜಿಲೆಂಡ್‌ನ ಎಡಗೈ ಸ್ಪಿನ್ನರ್ ಏಜಾಜ್ ಪಟೇಲ್ ಒಬ್ಬರೆ ಭಾರತದ 10 ಆಟಗಾರರ ವಿಕೆಟ್ ಕಬಳಿಸುವ ಮೂಲಕ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಆ ಮೂಲಕ ಈ ಸಾಧನೆಗೈದ ವಿಶ್ವದ ಮೂರನೇ ಬೌಲರ್ ಎನಿಸಿದ್ದಾರೆ.

1999 ರಲ್ಲಿ ಪಾಕಿಸ್ತಾನದ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಭಾರತದ ಲೆಗ್ ಸ್ಪಿನ್ ಲೆಜೆಂಡ್ ಎಂದು ಕರೆಸಿಕೊಳ್ಳುವ ಅನಿಲ್ ಕುಂಬ್ಳೆ 10 ವಿಕೆಟ್ ಪಡೆಯುವ ಮೂಲಕ ಒಂದೇ ಇನ್ನಿಂಗ್ಸ್‌ನಲ್ಲಿ 10 ವಿಕೆಟ್ ಪಡೆದಿದ್ದ ಇಂಗ್ಲೆಂಡ್‌ನ ಸ್ಪಿನ್ನರ್ ಜಿಮ್ ಲೇಕರ್ ಅವರ ದಾಖಲೆಯನ್ನು ಸರಿಗಟ್ಟಿದ್ದರು. ಇಂದು ಆ ಪಟ್ಟಿಗೆ ನ್ಯೂಜಿಲೆಂಡ್‌ನ ಏಜಾಜ್ ಪಟೇಲ್ ಸಹ ಸೇರಿಕೊಂಡಿದ್ದಾರೆ.

ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡುವ ನಿರ್ಧಾರ ತೆಗೆದುಕೊಂಡಿದ್ದ ಭಾರತ ಉತ್ತಮ ಆರಂಭವನ್ನೇ ಪಡೆದಿತ್ತು. ಮಯಾಂಕ್ ಅಗರ್ವಾಲ್ ಶತಕ ಬಾರಿಸಿದರೆ, ಶುಭಮನ್ ಗಿಲ್ ಮತ್ತು ಅಕ್ಷರ್ ಪಟೇಲ್ ಅರ್ಧಶತಕ ಬಾರಿಗೆ ಭಾರತ 325 ರನ್‌ಗಳ ಉತ್ತಮ ಮೊತ್ತ ಕಲೆ ಹಾಕಲು ನೆರವಾದರು. ಆದರೆ ನ್ಯೂಜಿಲೆಂಡ್‌ನ ಏಜಾಜ್ ಪಟೇಲ್ ಮಾತ್ರ ತಮ್ಮ ಮೊನಚಾದ ಬೌಲಿಂಗ್ ದಾಳಿಯಿಂದ 10 ವಿಕೆಟ್ ಪಡೆದು ಮಿಂಚಿದರು.

ಒಟ್ಟು 47.5 ಓವರ್ ಬೌಲ್ ಮಾಡಿದ ಅವರು, 119 ರನ್ ನೀಡಿ 10 ವಿಕೆಟ್ ಗಳಿಸಿದರು. ಕೊನೆಯದಾಗಿ ಭಾರತದ ಆಟಗಾರ ಸಿರಾಜ್ ಮೊಹಮ್ಮದ್ ಪಟೇಲ್ ಬೌಲಿಂಗ್‌ನಲ್ಲಿ ಮಿಡ್‌ಆನ್ ನಲ್ಲಿ ಕ್ಯಾಚ್ ನೀಡಿದರು.

ಮೊದಲ ದಿನ 4 ವಿಕೆಟ್ ಪಡೆದಿದ್ದ ಅವರು ಇಂದು ಉಳಿದ 6 ವಿಕೆಟ್ ಗಳಿಸಿ ಭಾರತವನ್ನು ಆಲೌಟ್ ಮಾಡಿದರು. ಭಾರತ 325ರನ್‌ ಗಳಿಸಿದೆ. ಇದಕ್ಕೆ ಉತ್ತರವಾಗಿ ಬ್ಯಾಟ್ ಮಾಡುತ್ತಿರುವ ನ್ಯೂಜಿಲೆಂಡ್ ಊಟದ ವಿರಾಮದ ವೇಳೆಗಾಗಲೇ ಕೇವಲ 16 ರನ್‌ಗೆ ಮೂರು ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ.


ಇದನ್ನೂ ಓದಿ: ಟಿ20 ಕ್ರಿಕೆಟ್‌ನಲ್ಲಿ ದಾಖಲೆ: 4 ಓವರ್‌ನಲ್ಲಿ ಒಂದೂ ರನ್ ಕೊಡದ ಮೊದಲ ಬೌಲರ್ ಅಕ್ಷಯ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...