Homeಮುಖಪುಟಬೆಂಗಳೂರಿನಲ್ಲಿ ಹುಟ್ಟಿದ INDIA ಒಕ್ಕೂಟದ 'ಸಾಮೂಹಿಕ ಸಂಕಲ್ಪ' ಹೀಗಿದೆ...

ಬೆಂಗಳೂರಿನಲ್ಲಿ ಹುಟ್ಟಿದ INDIA ಒಕ್ಕೂಟದ ‘ಸಾಮೂಹಿಕ ಸಂಕಲ್ಪ’ ಹೀಗಿದೆ…

- Advertisement -
- Advertisement -

ಇಂದು ಬೆಂಗಳೂರಿನಲ್ಲಿ ಹೊಸದಾಗಿ ರೂಪುಗೊಂಡ INDIA ಮೈತ್ರಿಕೂಟವು ಜಾತಿ ಗಣತಿ, ಮಣಿಪುರ ಹಿಂಸಾಚಾರದಿಂದ ಹಿಡಿದು ರಾಜ್ಯಪಾಲರು ಮತ್ತು ಲೆಫ್ಟಿನೆಂಟ್‌ ಗೌರ್ವರ್‌ಗಳ ಪಾತ್ರ ಮತ್ತು ನೋಟು ಅಮಾನ್ಯೀಕರಣದವರೆಗಿನ ವಿವಿಧ ವಿಷಯಗಳ ಕುರಿತು ಪ್ರಸ್ತಾಪಿಸುವ ‘ಸಾಮೂಹಿಕ ಸಂಕಲ್ಪ’ ಘೋಷಣೆಯನ್ನು ಸಹ ಬಿಡುಗಡೆ ಮಾಡಿದೆ. ಅದರ ಕನ್ನಡ ಅನುವಾದ ಇಲ್ಲಿದೆ.

ನಾವು, ಭಾರತದ 26 ಪ್ರಗತಿಪರ ಪಕ್ಷಗಳ ನಾಯಕರು, ಸಂವಿಧಾನದಲ್ಲಿ ಪ್ರತಿಪಾದಿಸಿರುವ ಭಾರತದ ಪರಿಕಲ್ಪನೆಯನ್ನು ರಕ್ಷಿಸಲು ನಮ್ಮ ದೃಢ ಸಂಕಲ್ಪ ಮಾಡುತ್ತೇವೆ. ನಮ್ಮ ರಾಷ್ಟ್ರದ ಇತಿಹಾಸದಲ್ಲಿ ನಿರ್ಣಾಯಕ ಘಟ್ಟದಲ್ಲಿದ್ದೇವೆ. ಏಕೆಂದರೆ ನಮ್ಮ ಗಣರಾಜ್ಯದ ಸ್ವರೂಪದ ಮೇಲೆ ಬಿಜೆಪಿಯು ವ್ಯವಸ್ಥಿತ ರೀತಿಯಲ್ಲಿ ತೀವ್ರವಾಗಿ ಆಕ್ರಮಣ ಮಾಡುತ್ತಿದೆ. ಭಾರತೀಯ ಸಂವಿಧಾನದ ಮೂಲ ಸ್ತಂಭಗಳಾದ ಜಾತ್ಯತೀತ ಪ್ರಜಾಪ್ರಭುತ್ವ, ಆರ್ಥಿಕ ಸಾರ್ವಭೌಮತ್ವ, ಸಾಮಾಜಿಕ ನ್ಯಾಯ ಮತ್ತು ಫೆಡರಲಿಸಂ ತತ್ವಗಳನ್ನು ಒಂದೊಂದ ಮೇಲೆ ಒಂದರಂತೆ ಭಯಂಕರವಾಗಿ ದುರ್ಬಲಗೊಳಿಸಲಾಗುತ್ತಿದೆ.

ಮಣಿಪುರವನ್ನು ನಾಶಪಡಿಸಿದ ಮಾನವೀಯ ದುರಂತದ ಬಗ್ಗೆ ನಾವು ನಮ್ಮ ತೀವ್ರ ಕಳವಳವನ್ನು ವ್ಯಕ್ತಪಡಿಸುತ್ತೇವೆ. ಪ್ರಧಾನಿಯವರ ಮೌನ ಆಘಾತಕಾರಿಯಾಗಿದೆ. ಮಣಿಪುರವನ್ನು ಶಾಂತಿ ಮತ್ತು ಸೌಹಾರ್ದತೆಯ ಹಾದಿಗೆ ಮರಳಿ ತರುವ ತುರ್ತು ಅಗತ್ಯವಿದೆ.

ಸಂವಿಧಾನದ ಮೇಲೆ ಮತ್ತು ಪ್ರಜಾಸತ್ತಾತ್ಮಕವಾಗಿ ಚುನಾಯಿತ ರಾಜ್ಯ ಸರ್ಕಾರಗಳ ಸಾಂವಿಧಾನಿಕ ಹಕ್ಕುಗಳ ಮೇಲಿನ ನಿರಂತರ ದಾಳಿಯನ್ನು ಎದುರಿಸಲು ನಾವು ನಿರ್ಧರಿಸಿದ್ದೇವೆ. ಏಕೆಂದರೆ ನಮ್ಮ ರಾಜಕೀಯದ ಫೆಡರಲ್ ರಚನೆಯನ್ನು ದುರ್ಬಲಗೊಳಿಸುವ ಉದ್ದೇಶಪೂರ್ವಕ ಪ್ರಯತ್ನ ನಡೆಯುತ್ತಿದೆ. ಬಿಜೆಪಿಯೇತರ ಆಡಳಿತವಿರುವ ರಾಜ್ಯಗಳಲ್ಲಿ ರಾಜ್ಯಪಾಲರು ಮತ್ತು ಲೆಫ್ಟಿನೆಂಟ್ ಗವರ್ನರ್‌ಗಳ ಪಾತ್ರವು ಎಲ್ಲಾ ಸಾಂವಿಧಾನಿಕ ಮಾನದಂಡಗಳನ್ನು ಮೀರಿದೆ. ರಾಜಕೀಯ ಪ್ರತಿಸ್ಪರ್ಧಿಗಳ ವಿರುದ್ಧ ಬಿಜೆಪಿ ಸರ್ಕಾರವು ಸಾಂವಿಧಾನಿಕ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡು ನಮ್ಮ ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುತ್ತಿದೆ. ಬಿಜೆಪಿಯೇತರ ರಾಜ್ಯಗಳ ಕಾನೂನುಬದ್ಧ ಅಗತ್ಯಗಳು, ಅವಶ್ಯಕತೆಗಳು ಮತ್ತು ಅರ್ಹತೆಗಳನ್ನು ಕೇಂದ್ರವು ಸಕ್ರಿಯವಾಗಿ ನಿರಾಕರಿಸುತ್ತಿದೆ.

ನಿರಂತರವಾಗಿ ಏರುತ್ತಿರುವ ಅಗತ್ಯ ವಸ್ತುಗಳ ಬೆಲೆಗಳು ಮತ್ತು ದಾಖಲೆಯ ನಿರುದ್ಯೋಗದ ಗಂಭೀರ ಆರ್ಥಿಕ ಬಿಕ್ಕಟ್ಟನ್ನು ಎದುರಿಸಲು ನಾವು ನಮ್ಮ ಸಂಕಲ್ಪವನ್ನು ಬಲಪಡಿಸುತ್ತೇವೆ. ಏಕೆಂದರೆ ನೋಟು ಅಮಾನ್ಯೀಕರಣವು MSME ಮತ್ತು ಅಸಂಘಟಿತ ವಲಯಗಳಿಗೆ ಹೇಳಲಾಗದ ನಷ್ಟ ಉಂಟುಮಾಡಿದೆ. ಇದರ ಪರಿಣಾಮವಾಗಿ ನಮ್ಮ ಯುವಕರಲ್ಲಿ ದೊಡ್ಡ ಪ್ರಮಾಣದ ನಿರುದ್ಯೋಗ ಉಂಟಾಗಿದೆ. ರಾಷ್ಟ್ರದ ಸಂಪತ್ತನ್ನು ಕೇವಲ ಪ್ರಧಾನಿಯರವರ  ಸ್ನೇಹಿತರಿಗೆ ಅಜಾಗರೂಕತೆಯಿಂದ ಮಾರಾಟ ಮಾಡುವುದನ್ನು ನಾವು ವಿರೋಧಿಸುತ್ತೇವೆ. ನಾವು ಬಲವಾದ ಮತ್ತು ಸೂಕ್ತ ಕಾರ್ಯತಂತ್ರದ ಮೂಲಕ ಸಾರ್ವಜನಿಕ ವಲಯವನ್ನು ಅಭಿವೃದ್ದಿಪಡಿಸಿ ಪ್ರವರ್ಧಮಾನಕ್ಕೆ ಬರುತ್ತಿರುವ ಖಾಸಗಿ ವಲಯದೊಂದಿಗೆ ನ್ಯಾಯಯುತ ಆರ್ಥಿಕತೆಯನ್ನು ನಿರ್ಮಿಸುತ್ತೇವೆ. ಇದರಲ್ಲಿ ಉದ್ಯಮದ ಮನೋಭಾವವನ್ನು ಬೆಳೆಸಲಾಗುತ್ತದೆ ಮತ್ತು ವಿಸ್ತರಿಸಲು ಪ್ರತಿ ಅವಕಾಶವನ್ನು ನೀಡಲಾಗುತ್ತದೆ. ಕೃಷಿಕ ರೈತರ ಪರವಾಗಿ ಹೋರಾಡುತ್ತೇವೆ.

ಅಲ್ಪಸಂಖ್ಯಾತರ ವಿರುದ್ಧ ನಿರ್ಮಾಣವಾಗುತ್ತಿರುವ ದ್ವೇಷ ಮತ್ತು ಹಿಂಸೆಯನ್ನು ಸೋಲಿಸಲು ನಾವು ಒಟ್ಟಾಗಿದ್ದೇವೆ. ಮಹಿಳೆಯರು, ದಲಿತರು, ಆದಿವಾಸಿಗಳು ಮತ್ತು ಕಾಶ್ಮೀರಿ ಪಂಡಿತರ ಮೇಲೆ ಹೆಚ್ಚುತ್ತಿರುವ ಅಪರಾಧಗಳನ್ನು ನಿಲ್ಲಿಸಿ; ಎಲ್ಲಾ ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಮತ್ತು ಆರ್ಥಿಕವಾಗಿ ಹಿಂದುಳಿದ ಸಮುದಾಯಗಳಿಗೆ ನ್ಯಾಯಯುತ ಪಾಲು ನೀಡಲು ಮೊದಲ ಹಂತವಾಗಿ, ಜಾತಿ ಗಣತಿಯನ್ನು ಜಾರಿಗೊಳಿಸಿ.

ನಮ್ಮ ಸಹ ಭಾರತೀಯರನ್ನು ಗುರಿಯಾಗಿಸುವ, ಕಿರುಕುಳ ನೀಡುವ ಮತ್ತು ನಿಗ್ರಹಿಸುವ ಬಿಜೆಪಿಯ ವ್ಯವಸ್ಥಿತ ಪಿತೂರಿಯ ವಿರುದ್ಧ ಹೋರಾಡಲು ನಾವು ನಿರ್ಧರಿಸುತ್ತೇವೆ. ಏಕೆಂದರೆ ಅವರ ದ್ವೇಷ ವಿಷಪೂರಿತ ಪ್ರಚಾರವು ಆಡಳಿತ ಪಕ್ಷ ಮತ್ತು ಅದರ ವಿಭಜಕ ಸಿದ್ಧಾಂತವನ್ನು ವಿರೋಧಿಸುವ ಎಲ್ಲರ ವಿರುದ್ಧ ಕೆಟ್ಟ ಹಿಂಸೆಗೆ ಕಾರಣವಾಗಿದೆ. ಈ ದಾಳಿಗಳು ಸಾಂವಿಧಾನಿಕ ಹಕ್ಕುಗಳು ಮತ್ತು ಸ್ವಾತಂತ್ರ್ಯಗಳನ್ನು ಉಲ್ಲಂಘಿಸುವುದು ಮಾತ್ರವಲ್ಲದೆ ಭಾರತ ಗಣರಾಜ್ಯವನ್ನು ಸ್ಥಾಪಿಸಿದ ಮೂಲಭೂತ ಮೌಲ್ಯಗಳಾದ ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವ ಮತ್ತು ರಾಜಕೀಯ, ಆರ್ಥಿಕ ಮತ್ತು ಸಾಮಾಜಿಕ ನ್ಯಾಯವನ್ನು ನಾಶಪಡಿಸುತ್ತಿವೆ. ಭಾರತೀಯ ಇತಿಹಾಸವನ್ನು ಮರುಶೋಧಿಸುವ ಮತ್ತು ತಿರುಚುವ ಮೂಲಕ ಸಾರ್ವಜನಿಕ ಸಂವಾದವನ್ನು ಹಾಳುಮಾಡಲು ಬಿಜೆಪಿಯ ಪುನರಾವರ್ತಿತ ಪ್ರಯತ್ನಗಳು ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆಯಾಗಿವೆ.

ಪರ್ಯಾಯ ರಾಜಕೀಯ, ಸಾಮಾಜಿಕ ಮತ್ತು ಆರ್ಥಿಕ ಕಾರ್ಯಸೂಚಿಯನ್ನು ರಾಷ್ಟ್ರಕ್ಕೆ ಪ್ರಸ್ತುತಪಡಿಸಲು ನಾವು ಪ್ರತಿಜ್ಞೆ ಮಾಡುತ್ತೇವೆ. ಹೆಚ್ಚು ಸಮಾಲೋಚನೆ, ಪ್ರಜಾಪ್ರಭುತ್ವ ಮತ್ತು ಭಾಗವಹಿಸುವಿಕೆ ಇರುವ ಆಡಳಿತದ ಸಾರ ಮತ್ತು ಶೈಲಿ ಎರಡನ್ನೂ ಪರಿವರ್ತಿಸಲು ನಾವು ಭರವಸೆ ನೀಡುತ್ತೇವೆ.

ಇದನ್ನೂ ಓದಿ; INDIA ಗೆಲ್ಲುತ್ತದೆ, ನಮ್ಮ ದೇಶ ಗೆಲ್ಲುತ್ತದೆ ಮತ್ತು ಬಿಜೆಪಿ ಸೋಲುತ್ತದೆ: ವಿಪಕ್ಷಗಳ ಸಭೆ ಬಳಿಕೆ ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...