Homeಮುಖಪುಟನವ ವಿವಾಹಿತೆ ಆತ್ಮಹತ್ಯೆ: 800 ಗ್ರಾಂ. ಚಿನ್ನ, ವೋಲ್ವೋ ಕಾರು ಕೊಟ್ಟರೂ ಗಂಡನ ಮನೆಯವರಿಂದ ವರದಕ್ಷಿಣೆ...

ನವ ವಿವಾಹಿತೆ ಆತ್ಮಹತ್ಯೆ: 800 ಗ್ರಾಂ. ಚಿನ್ನ, ವೋಲ್ವೋ ಕಾರು ಕೊಟ್ಟರೂ ಗಂಡನ ಮನೆಯವರಿಂದ ವರದಕ್ಷಿಣೆ ಕಿರುಕುಳ ಆರೋಪ

- Advertisement -
- Advertisement -

ತಮಿಳುನಾಡಿನ ತಿರುಪ್ಪೂರಿನಲ್ಲಿ 27 ವರ್ಷದ ನವವಿವಾಹಿತೆ ವರದಕ್ಷಿಣೆ ಕಿರುಕುಳ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಗಾರ್ಮೆಂಟ್ಸ್ ಕಂಪನಿ ನಡೆಸುತ್ತಿರುವ ಅಣ್ಣಾದೊರೈ ಎಂಬವರ ಮಗಳು ರಿಧನ್ಯಾ ಸಾವಿಗೆ ಶರಣಾದ ಯುವತಿ ಎಂದು ತಿಳಿದು ಬಂದಿದೆ. ರಿಧನ್ಯಾ ಅವರ ಮದುವೆ ಈ ವರ್ಷದ ಏಪ್ರಿಲ್‌ನಲ್ಲಿ 28 ವರ್ಷದ ಕವಿನ್ ಕುಮಾರ್ ಎಂಬಾತನ ಜೊತೆ ನಡೆದಿತ್ತು. ವರದಿಗಳ ಪ್ರಕಾರ, ಮದುವೆ ಸಮಯದಲ್ಲಿ 100 ಸವರನ್ (800 ಗ್ರಾಂ.) ಚಿನ್ನಾಭರಣ ಮತ್ತು 70 ಲಕ್ಷ ರೂಪಾಯಿ ಮೌಲ್ಯದ ವೋಲ್ವೋ ಕಾರು ವರದಕ್ಷಿಣೆಯಾಗಿ ನೀಡಲಾಗಿತ್ತು.

ಭಾನುವಾರ, ಮೊಂಡಿಪಾಳ್ಯಂನಲ್ಲಿರುವ ದೇವಸ್ಥಾನಕ್ಕೆ ಹೋಗುತ್ತಿರುವುದಾಗಿ ಹೇಳಿ ಮನೆಯಿಂದ ಹೊರಟಿದ್ದ ರಿಧನ್ಯಾ, ಮಾರ್ಗ ಮಧ್ಯೆ ತನ್ನ ಕಾರನ್ನು ನಿಲ್ಲಿಸಿ ಕೀಟನಾಶಕದ ಮಾತ್ರೆಗಳನ್ನು ಸೇವಿಸಿದ್ದಾರೆ ಎಂದು ವರದಿಯಾಗಿದೆ. ತುಂಬಾ ಹೊತ್ತು ರಸ್ತೆ ಬದಿ ಕಾರು ನಿಂತಿರುವುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಬಂದು ಪರಿಶೀಲಿಸಿದಾಗ ರಿಧನ್ಯಾ ಶವ ಕಂಡು ಬಂದಿದೆ. ಆಕೆಯ ಬಾಯಲ್ಲಿ ನೊರೆ ಬಂದಿತ್ತು ಎಂದು ವರದಿ ವಿವರಿಸಿದೆ.

ಮೂಲಗಳ ಪ್ರಕಾರ, ರಿಧನ್ಯಾ ಸಾಯುವ ಮೊದಲು ತಮ್ಮ ತಂದೆಗೆ ವಾಟ್ಸಾಪ್‌ನಲ್ಲಿ ಏಳು ಆಡಿಯೋ ಸಂದೇಶಗಳನ್ನು ಕಳುಹಿಸಿದ್ದರು. ಅದರಲ್ಲಿ ಅವರು ತಮ್ಮ ನಿರ್ಧಾರಕ್ಕೆ ಕ್ಷಮೆಯಾಚಿಸಿದ್ದು, ಆಪಾದಿತ ವರದಕ್ಷಿಣೆ ಕಿರುಕುಳ ಸಹಿಸಲಾಗದ ಬಗ್ಗೆ ಮಾತನಾಡಿದ್ದಾರೆ ಎನ್ನಲಾಗಿದೆ.

ಒಂದು ಆಡಿಯೋ ಮೆಸೇಜ್‌ನಲ್ಲಿ ಆಕೆ, ಕವಿನ್ ಜೊತೆಗಿನ ತನ್ನ ಮದುವೆಯು ಆತ ಮತ್ತು ಆತನ ಪೋಷಕರು ರೂಪಿಸಿದ ಯೋಜನೆಯ ಭಾಗವಾಗಿದೆ ಎಂದು ಹೇಳಿದ್ದಾರೆ ಎಂದು ವರದಿಯಾಗಿದೆ.

“ನಾನು ಪ್ರತಿದಿನ ಅವರ ಮಾನಸಿಕ ಹಿಂಸೆಯನ್ನು ಸಹಿಸಲು ಸಾಧ್ಯವಾಗುತ್ತಿಲ್ಲ. ಇದರ ಬಗ್ಗೆ ಯಾರಿಗೆ ಹೇಳಬೇಕೆಂದು ನನಗೆ ತಿಳಿದಿಲ್ಲ. ಹೇಳಿದರೆ ಜೀವನ ಅಂದ್ರೆ ಹೀಗೆ ಸುಧಾರಿಸುಕೊಂಡು ಹೋಗು ಎಂದು ಹೇಳುತ್ತಾರೆ. ನನ್ನ ನೋವನ್ನು ಅರ್ಥಮಾಡಿಕೊಳ್ಳಲು ಯಾರಿಗೂ ಸಾಧ್ಯವಾಗುತ್ತಿಲ್ಲ” ಎಂದು ರಿಧನ್ಯಾ ಮೆಸೇಜ್‌ನಲ್ಲಿ ಅಳಲು ತೋಡಿಕೊಂಡಿದ್ದಾರೆ.

ಪೋಷಕರು ತನ್ನನ್ನು ಅನುಮಾನಿಸಬಹುದು. ಆದರೆ ತಾನು ಸುಳ್ಳು ಹೇಳುತ್ತಿಲ್ಲ. ನನ್ನ ಸುತ್ತಲಿನ ಎಲ್ಲರೂ ನಟಿಸುತ್ತಿದ್ದಾರೆ. ನಾನು ಯಾಕೆ ಮೌನವಾಗಿದ್ದೇನೆ ಅಥವಾ ಹೀಗೆ ಆಗಿದ್ದೇನೆ ಎಂದು ನನಗೆ ಅರ್ಥವಾಗುತ್ತಿಲ್ಲ. ಈ ರೀತಿ ಮುಂದುವರಿಯಲು ಸಾಧ್ಯವಿಲ್ಲ ಎಂದು ಮತ್ತೊಂದು ಮಸೇಜ್‌ನಲ್ಲಿ ರಿಧನ್ಯಾ ಹೇಳಿದ್ದಾರೆ.

“ನನ್ನ ಜೀವನದುದ್ದಕ್ಕೂ ನಾನು ನಿಮಗೆ ಹೊರೆಯಾಗಿರಲು ಬಯಸುವುದಿಲ್ಲ. ಈ ಬಾರಿ ನಾನು ಯಾವುದೇ ತಪ್ಪು ಮಾಡಿಲ್ಲ. ನನಗೆ ಈ ಜೀವನ ಇಷ್ಟವಿಲ್ಲ. ಅವರು ನನ್ನ ಮೇಲೆ ಮಾನಸಿಕವಾಗಿ ಹಲ್ಲೆ ಮಾಡುತ್ತಿದ್ದಾರೆ. ಅವನು ನನ್ನನ್ನು ದೈಹಿಕವಾಗಿ ಹಿಂಸಿಸುತ್ತಿದ್ದಾನೆ. ನನಗೆ ಜೀವನ ಮುಂದುವರಿಸಲು ಸಾಧ್ಯವಾಗುತ್ತಿಲ್ಲ” ಎಂದಿದ್ದಾರೆ.

“ನೀನು ಮತ್ತು ಅಮ್ಮ ನನ್ನ ಪ್ರಪಂಚ. ನನ್ನ ಕೊನೆಯ ಉಸಿರಿನವರೆಗೂ ನೀನು ನನ್ನ ಭರವಸೆಯಾಗಿದ್ದೆ. ಆದರೆ, ನಾನು ನಿನ್ನನ್ನು ತುಂಬಾ ನೋಯಿಸಿದೆ. ನೀನು ಇದನ್ನು ಬಹಿರಂಗವಾಗಿ ಹೇಳಲು ಸಾಧ್ಯವಾಗುತ್ತಿಲ್ಲ, ಆದರೂ, ನೀನು ನನ್ನನ್ನು ಹೀಗೆ ನೋಡಲು ಸಾಧ್ಯವಾಗುತ್ತಿಲ್ಲ. ನಿನ್ನ ನೋವನ್ನು ನಾನು ಅರ್ಥಮಾಡಿಕೊಳ್ಳಬಲ್ಲೆ. ಕ್ಷಮಿಸಿ ಅಪ್ಪಾ, ಎಲ್ಲವೂ ಮುಗಿದುಹೋಗಿದೆ. ನಾನು ಹೊರಡುತ್ತಿದ್ದೇನೆ” ರಿಧನ್ಯಾ ಆಡಿಯೋ ಮೆಸೇಜ್‌ನಲ್ಲಿ ಹೇಳಿದ್ದಾಗಿ ವರದಿಗಳು ವಿವರಿಸಿದೆ.

ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆಕೆಯ ಪತಿ ಕವಿನ್ ಕುಮಾರ್, ಮಾವ ಈಶ್ವರಮೂರ್ತಿ ಮತ್ತು ಅತ್ತೆ ಚಿತ್ರಾದೇವಿಯನ್ನು ಬಂಧಿಸಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ.

ನೆನಪಿಡಿ : ಯಾವುದೇ ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ. ದುಡುಕಿನ ನಿರ್ಧಾರ ತೆಗೆದುಕೊಳ್ಳಬೇಡಿ. ತುರ್ತು ಪರಿಸ್ಥಿತಿಯಿದ್ದರೆ ಕರೆ ಮಾಡಿ ವೈದ್ಯರೊಂದಿಗೆ ಮಾತನಾಡಿ. ಬೆಂಗಳೂರು ಸಹಾಯವಾಣಿ 080-25497777, ಬೆಳಗ್ಗೆ 10ರಿಂದ ಸಂಜೆ 8ರವರೆಗೆ, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104

ಅತ್ಯಾಚಾರ ಸಂತ್ರಸ್ತೆ ಕುರಿತು ವಿವಾದಾತ್ಮಕ ಹೇಳಿಕೆ: ಶಾಸಕನಿಗೆ ಶೋಕಾಸ್ ನೋಟಿಸ್ ಕೊಟ್ಟ ಟಿಎಂಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...